ಅತ್ಯಾಚಾರ ಪ್ರಕರಣ: ಜಾನಿ ಮಾಸ್ಟರ್‌ಗೆ ಘೋಷಿಸಲಾಗಿದ್ದ ರಾಷ್ಟ್ರೀಯ ಪ್ರಶಸ್ತಿ ಅಮಾನತು

Date:

ತೆಲುಗು ಸಿನಿರಂಗದ ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ಅವರನ್ನು ಪೊಲೀಸರು ಬಂಧಿಸಿದ್ದಾರೆ. ಜಾನಿ ಮಾಸ್ಟರ್ ವಿರುದ್ಧ ಪ್ರಕರಣ ದಾಖಲಾದ ಹಿನ್ನಲೆ, ಅವರಿಗೆ ಘೋಷಿಸಲಾಗಿದ್ದ ರಾಷ್ಟ್ರೀಯ ಪ್ರಶಸ್ತಿಯನ್ನು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಹಿಂಪಡೆದಿರುವುದಾಗಿ ವರದಿಯಾಗಿದೆ.

- Advertisement -

ಜಾನಿ ಮಾಸ್ಟರ್ ವಿರುದ್ಧ ಅವರ ಮಾಜಿ ಸಹೋದ್ಯೋಗಿಯೊಬ್ಬರು ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದಾರೆ. ತಮಗೆ ಜಾನಿ ಮಾಸ್ಟರ್‌ ಹಲವಾರು ವರ್ಷಗಳಿಂದ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಆರೋಪಿಸಿದ್ದಾರೆ. ಅವರ ದೂರಿದ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಜಾನಿ ಅವರನ್ನು ಬಂಧಿಸಿದ್ದಾರೆ. ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಆದಾಗ್ಯೂ, ತಮಗೆ ರಾಷ್ಟ್ರೀಯ ಪ್ರಶಸ್ತಿ ಘೋಷಣೆಯಾಗಿದ್ದರಿಂದ, ಅದನ್ನು ಪಡೆಯಲು ಕಾರ್ಯಕ್ರಮಕ್ಕೆ ತೆರಳುವುದಕ್ಕಾಗಿ ಮಧ್ಯಂತರ ಜಾಮೀನು ಪಡೆದುಕೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಜಾನಿ ಮಾಸ್ಟರ್, ‘ತಿರುಚಿತ್ರಂಬಲಂ’ನ ಚಿತ್ರದ ‘ಮೇಘಮ್ ಕರುಕ್ಕಥಾ’ಹಾಡಿಗೆ ಅತ್ಯುತ್ತಮ ನೃತ್ಯ ಸಂಯೋಜನೆಗಾಗಿ ರಾಷ್ಟ್ರೀಯ ಪ್ರಶಸ್ತಿಯನ್ನು ಗೆದ್ದಿದ್ದರು. ಆದರೆ, ಇದೀಗ, ಪ್ರಶಸ್ತಿಯನ್ನು ಅಮಾನತುಗೊಳಿಸಲಾಗಿದೆ ಎಂಧು ಕೇಂದ್ರದ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಕೋಶ ತಿಳಿಸಿದೆ.

ಜಾನಿ ಮಾಸ್ಟರ್ ವಿರುದ್ಧ ದೂರು ದಾಖಲಿಸಿರುವ ಯುವತಿ, “ತಾನು ಅಪ್ರಾಪ್ತೆಯಾಗಿದ್ದಾಗಲೇ ತನಗೆ ಲೈಂಗಿಕ ಕಿರುಕುಳ ನೀಡಲು ಜಾನಿ ಮಾಸ್ಟರ್ ಆರಂಭಿಸಿದ್ದರು. ಹಲವು ಸಂದರ್ಭಗಳಲ್ಲಿ ನನ್ನ ಮೇಲೆ ದೌರ್ಜನ್ಯ ನಡೆಸಿದ್ದಾರೆ” ಎಂದು ಆರೋಪಿಸಿದ್ದಾರೆ.

“ನಾನು ಜಾನಿ ಮಾಸ್ಟರ್‌ಗೆ ಸಹಾಯಕಿಯಾಗಿ ಕೆಲಸ ಮಾಡುತ್ತಿದೆ. ಆಗ, ವಿವಿಧ ನಗರಗಳಲ್ಲಿ ತಮ್ಮ ಚಿತ್ರೀಕರಣಕ್ಕೆ ತೆರಳಿದ್ದಾಗ ಅನೇಕ ಬಾರಿ ತನ್ನ ಮೇಲೆ ಜಾನಿ ಮಾಸ್ಟರ್‌ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಜೀವ ಬೆದರಿಕೆಯನ್ನೂ ಹಾಕಿದ್ದಾರೆ. ಮಾತ್ರವಲ್ಲದೆ, ಬೇರೆಲ್ಲಿಯೂ ಉದ್ಯೋಗಾವಕಾಶ ಸಿಗದಂತೆ ಮಾಡುತ್ತೇನೆಂದು ಬ್ಲಾಕ್‌ಮೇಲ್ ಮಾಡುತ್ತಿದ್ದಾರೆ” ಎಂದೂ ಮಹಿಳೆ ದೂರಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಉತ್ತರ ಪ್ರದೇಶ: ಪ್ರಜಾಪ್ರಭುತ್ವ ಹೋರಾಟಗಾರರಿಗೆ ಅಖಿಲೇಶ್ ಮಾಸಿಕ ₹51,000 ಪಿಂಚಣಿ ಭರವಸೆ

ಉತ್ತರ ಪ್ರದೇಶದಲ್ಲಿ 2027ರಲ್ಲಿ ಸಮಾಜವಾದಿ ಪಕ್ಷ (ಎಸ್‌ಪಿ) ಸರ್ಕಾರ ರಚಿಸಿದರೆ, 1975ರ...

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರು, ಗೋವಾ, ಕೋಲ್ಕತ್ತದಲ್ಲಿ ಸಿಜೆಪಿ ‘ಮೋರ್ಚಾ’

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...