1 ವರ್ಷದ ಮಗು ಮೇಲೆ ಅತ್ಯಾಚಾರ: 14 ದಿನಗಳಲ್ಲೇ ವಿಚಾರಣೆ ಪೂರ್ಣ; ಮಲತಂದೆಗೆ ಜೀವಾವಧಿ ಶಿಕ್ಷೆ

Date:

ಒಂದು ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿದ್ದ ವಿಕೃತ ಕಾಮುಕ ಮಲತಂದೆ ಜೀವಾಅವಧಿ ಶಿಕ್ಷೆ ವಿಧಿಸಿ ಉತ್ತರ ಪ್ರದೇಶ ವಿಶೇಷ ನ್ಯಾಯಾಲಯವು ಆದೇಶಿಸಿದೆ. ಕಾಮುಕ ಅಪರಾಧಿಗೆ 1 ಲಕ್ಷ ರೂ. ದಂಡವನ್ನೂ ವಿಧಿಸಿದೆ.

- Advertisement -

ಉತ್ತರ ಪ್ರದೇಶದ ಶಾದಿಯಾಬಾದ್ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. ಪ್ರಕರಣ ದಾಖಲಾಗಿ, ವಿಚಾರಣೆ ಆರಂಭವಾದ ಕೇವಲ 14 ದಿನಗಳನ್ನು ವಿಶೇಷ ನ್ಯಾಯಾಲಯವು ವಿಚಾರಣೆಯನ್ನು ಪೂರ್ಣಗೊಳಿಸಿದೆ. ಅಪರಾಧಿಗೆ ಶಿಕ್ಷೆ ಮತ್ತು ದಂಡ ವಿಧಿಸಿ ತೀರ್ಪು ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಅಪರಾಧಿ ಕಾಮುಕ ಮಲತಂದೆ ಜುಲೈ 18ರಂದು ಕೃತ್ಯ ಎಸಗಿದ್ದನೆಂದು ವರದಿಯಾಗಿದೆ. ಮಗುವಿನ ತಾಯಿ ಅಕ್ಕಿ ಸ್ವಚ್ಚಗೊಳಿಸಲು ಮನೆಯ ಹೊರಗೆ ಕೆಲಸ ಮಾಡುತ್ತಿದ್ದಾಗ, ಮಗುವಿನ ಮೇಲೆ ಅಪರಾಧಿಯು ದೌರ್ಜನ್ಯ ಎಗಸಿದ್ದಾನೆ. ಘಟನೆಯಿಂದಾಗಿ ಮಗುವಿನ ಗಂಭೀರ ಗಾಯಗಳಾಗಿದ್ದು, ರಕ್ತಸ್ರಾವವಾಗಿದೆ ಎಂದು ತಾಯಿ ತಿಳಿಸಿದ್ದಾರೆ.

ಜುಲೈ 20ರಂದು ಮಗುವಿನ ತಾಯಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು. ತನಿಖೆ ನಡೆಸಿ ಸೆಪ್ಟೆಂಬರ್ 12ರಂದು ಜಾರ್ಜ್‌ಶೀಟ್‌ಅನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಈ ಲೇಖನ ಓದಿದ್ದೀರಾ?: ಧರ್ಮಸ್ಥಳ ಪ್ರಕರಣ; ಎಸ್ ಐಟಿ ತನಿಖೆ ಮತ್ತು ರಾಜಕೀಯ ಲೆಕ್ಕಾಚಾರ…!

ಸೆಪ್ಟೆಂಬರ್ 15ರಂದು ವಿಶೇಷ ನ್ಯಾಯಾಧೀಶ ರಾಮ್ ಅವತಾರ್ ಪ್ರಸಾದ್ ಅವರು ಪ್ರಕರಣದ ವಿಚಾರಣೆಯನ್ನು ಆರಂಭಿಸಿದ್ದರು. ತ್ವರಿತವಾಗಿ ವಿಚಾರಣೆಯನ್ನು ಪೂರ್ಣಗೊಳಿಸಿರುವ ನ್ಯಾಯಾಧೀಶರು ಆರೋಪಿಯನ್ನು ಅಪರಾಧಿ ಎಂದು ಘೋಷಿಸಿದ್ದಾರೆ. ಜೀವಾವಧಿ ಶಿಕ್ಷೆ ಮತ್ತು 1 ಲಕ್ಷ ರೂ. ದಂಡ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ.

ಗಮನಿಸಿ: ಅತ್ಯಾಚಾರವು ಒಂದು ಗಂಭೀರ ಸಾಮಾಜಿಕ ದುಷ್ಕೃತ್ಯ. ಈ ಕ್ರೂರ ಕೃತ್ಯವು ಸಮಾಜದ ನೈತಿಕತೆ ಮತ್ತು ಮಾನವೀಯತೆಯನ್ನು ಕುಂದಿಸುತ್ತದೆ. ಅತ್ಯಾಚಾರವನ್ನು ತಡೆಯುವುದು ಮತ್ತು ಅತ್ಯಾಚಾರ ಮುಕ್ತ ಸಮಾಜವನ್ನು ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿ. ಮಹಿಳೆಯರು ಭಯಮುಕ್ತವಾಗಿ ಬದುಕಲು ಹೆಣ್ಣುಮಕ್ಕಳ ಸುರಕ್ಷತೆ, ಗೌರವ ಮತ್ತು ನ್ಯಾಯವನ್ನು ಕಾಪಾಡಲು ನಾವು ಒಗ್ಗೂಡಿ ಹೋರಾಡಬೇಕು.ಅತ್ಯಾಚಾರದ ವಿರುದ್ಧ ಕಠಿಣ ಕಾನೂನು ಜಾರಿಯಾಗಬೇಕು ಮತ್ತು ಸಮಾಜದಲ್ಲಿ ಜಾಗೃತಿ ಮೂಡಿಸಬೇಕು. ನಮ್ಮ ಕುಟುಂಬಗಳಲ್ಲಿ, ಶಾಲೆಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಹೆಣ್ಣುಮಕ್ಕಳ ಜೊತೆ ಗೌರವ ಮತ್ತು ಸಂವೇದನೆಯಿಂದ ನಡೆದುಕೊಳ್ಳಬೇಕು. ಮಹಿಳೆಯರ ರಕ್ಷಣೆಯ ಹೊಣೆ ನಮ್ಮೆಲ್ಲರದ್ದಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ಮೂವರ ಬಲಿ, 7 ಮನೆಗಳಿಗೆ ಬೆಂಕಿ

ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ...

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...