ಸ್ನೇಹಿತನ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ; ಸರ್ಕಾರಿ ಅಧಿಕಾರಿ ವಿರುದ್ಧ ಎಫ್‌ಐಆರ್

Date:

Advertisements

ಸ್ನೇಹಿತನ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರವೆಸಗಿದ್ದ ಆರೋಪದ ಮೇಲೆ ದೆಹಲಿ ಸರ್ಕಾರಿ ಅಧಿಕಾರಿ ವಿರುದ್ಧ ಪೋಕ್ಸೋ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ದೆಹಲಿಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಯೊಬ್ಬ ತನ್ನ ಮೃತ ಸ್ನೇಹಿತನ 16 ವರ್ಷದ ಮಗಳ ಮೇಲೆ ನಿರಂತರ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಆತನ ವಿರುದ್ಧ ಐಪಿಸಿಯ ವಿವಿಧ ಸೆಕ್ಷನ್‌ಗಳು ಮತ್ತು ಪೋಕ್ಸೋ ಕಾಯ್ದೆಯಡಿ ದೆಹಲಿಯ ಬುರಾರಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ದೆಹಲಿ ಪೊಲೀಸರ ಪ್ರಕಾರಣ, ಸಂತ್ರಸ್ತ ಬಾಲಕಿಯು ಉತ್ತರ ದೆಹಲಿಯ ಶಾಲೆಯೊಂದರಲ್ಲಿ 12ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ. ಬಾಲಕಿ ಕುಟುಂಬ ಮತ್ತು ಆರೋಪಿಯು ಹಿಂದಿನಿಂದಲೂ ಪರಿಚಿತರು. 2020ರಲ್ಲಿ ಬಾಲಕಿಯ ತಂದೆ ಸಾವನ್ನಪ್ಪಿದ್ದರು. ಆಗ ಆರೋಪಿಯು ಬಾಲಕಿಯ ಪೋಷಣೆಯ ಜವಬ್ದಾರಿ ತೆಗೆದುಕೊಳ್ಳುವುದಾಗಿ ಮುಂದೆ ಬಂದಿದ್ದನು. ಪರಿಚಿತನೇ ಆಗಿದ್ದರಿಂದ ಬಾಲಕಿಯ ತಾಯಿಯೂ ತನ್ನ ಮಗಳನ್ನು ಆತನೊಂದಿಗೆ ಕಳುಹಿಸಲು ಒಪ್ಪಿಕೊಂಡಿದ್ದರು.

Advertisements

ಬಾಲಕಿ 2020ರ ಅಕ್ಟೋಬರ್‌ನಿಂದ 2021ರ ಫೆಬ್ರವರಿವರೆಗೆ ಆರೋಪಿಯೊಂದಿಗೆ ಉಳಿದುಕೊಂಡಿದ್ದಳು. ಈ ಅವಧಿಯಲ್ಲಿ ಆಕೆಯ ಮೇಲೆ ಆರೋಪಿ ಹಲವು ಬಾರಿ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದರೆ,

ಬಾಲಕಿಗೆ ಲೈಂಗಿಕ ಕಿರುಕುಳ, ದೈಹಿಕ ಕಿರುಕುಳ ಮತ್ತು ಪದೇ ಪದೇ ಅತ್ಯಾಚಾರ ಎಸಗಲಾಗಿದೆ. ಅಪ್ರಾಪ್ತ ಬಾಲಕಿ ಗರ್ಭಿಣಿಯಾದಾಗ ಆರೋಪಿ ತನ್ನ ಪತ್ನಿಗೆ ವಿಷಯ ತಿಳಿಸಿದ್ದಾನೆ. ಆತನ ಪತ್ನಿ ತಮ್ಮ ಮಗನ ಮೂಲಕ ಔಷಧಿ ತರಿಸಿ, ಮನೆಯಲ್ಲಿಯೇ ಅಪ್ರಾಪ್ತೆಗೆ ಗರ್ಭಧಾರಣೆಯನ್ನೂ ಮಾಡಿಸಿದ್ದಾಳೆ ಅಂತ್ಯಗೊಳಿಸಿದ್ದಾಳೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಅಪ್ರಾಪ್ತೆಯ ಆರೋಗ್ಯದಲ್ಲಿ ಏರುಪೇರಾದಾರ ಆಕೆಯನ್ನು ಆಸ್ಪತ್ರೆಗೆ ಕರೆತಂದಿದ್ದರು. ಆಕೆ ಆಸ್ಪತ್ರೆಯ ಸಲಹೆಗಾರರಿಗೆ ತನ್ನ ಮೇಲಾದ ದೌರ್ಜನ್ಯಗಳ ಬಗ್ಗೆ ವಿವರಿಸಿದ್ದಾಳೆ. ಆಗ ಘಟನೆ ಬೆಳಕಿಗೆ ಬಂದಿದೆ. ಬಾಲಕಿಯ ತಾಯಿಯೂ ತನ್ನ ಮಗಳ ಮೇಲೆ ಅತ್ಯಾಚಾರ ನಡೆದಿದೆ ಎಂಬುದು ನಂತರವಷ್ಠೇ ಗೊತ್ತಾಗಿದೆ” ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಕರಣದ ತನಿಖೆ ನಡೆಸಲಾಗುತ್ತಿದೆ. ಮ್ಯಾಜಿಸ್ಟ್ರೇಟ್ ಮುಂದೆ ಬಾಲಕಿಯ ಹೇಳಿಕೆಯನ್ನು ದಾಖಲಿಸಿಕೊಳ್ಳಬೇಕಿದೆ. ಶೀಘ್ರದಲ್ಲೇ ಆಕೆಯ ಹೇಳಿಕೆಯನ್ನು ನ್ಯಾಯಾಲಯದ ಮುಂದೆ ದಾಖಲಿಸಿ ನಂತರ ಆರೋಪಿ ಅಧಿಕಾರಿಯನ್ನು ವಿಚಾರಣೆಗೆ ಒಳಪಡಿಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.

ಆರೋಪಿ ಮತ್ತು ಆರೋಪಿ ಪತ್ನಿಯ ವಿರುದ್ಧ ಐಪಿಸಿ ಸೆಕ್ಷನ್ 376(2)(ಎಫ್) (ಪೋಷಕರಾಗಿ ಮಹಿಳೆಯ ಮೇಲೆ ಅತ್ಯಾಚಾರ ಎಸಗುವುದು), 506 (ಅಪರಾಧ ಬೆದರಿಕೆ), 509 (ಮಹಿಳೆಯರ ನಮ್ರತೆಯನ್ನು ಅವಮಾನಿಸುವ ಉದ್ದೇಶ), 323 (ನೋವು ಉಂಟುಮಾಡುವುದು), 313 (ಮಹಿಳೆಯ ಒಪ್ಪಿಗೆಯಿಲ್ಲದೆ ಗರ್ಭಪಾತ), ಮತ್ತು 120 ಬಿ (ಕ್ರಿಮಿನಲ್ ಪಿತೂರಿ) ಹಾಗೂ ಪೋಕ್ಸೋ ಕಾಯ್ದೆಯ ಸೆಕ್ಷನ್ 6/21ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು...

ಏನಿದು ಅನಿಲ್ ಅಂಬಾನಿ ಬ್ಯಾಂಕ್ ವಂಚನೆ? ಕ್ರಮ ಕೈಗೊಳ್ಳುತ್ತಾರ ಮೋದಿ?

ತನ್ನನ್ನು ತಾನು ದಿವಾಳಿ ಎಂದು ಘೋಷಿಸಿಕೊಂಡಿರುವ ಭಾರತದ ಭಾರೀ ಶ್ರೀಮಂತ ಉದ್ಯಮಿ...

ತೆಲಂಗಾಣ | ಅಂತರ್ಜಾತಿ ವಿವಾಹದ ಕಾರಣಕ್ಕೆ ಸಾಮಾಜಿಕ ಬಹಿಷ್ಕಾರ

ಅಂತರ್ಜಾತಿ ವಿವಾಹವಾದ ಕಾರಣಕ್ಕಾಗಿ ಕುಟುಂಬವೊಂದಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿದ ಪ್ರಕರಣ ತೆಲಂಗಾಣದ...

Download Eedina App Android / iOS

X