ಬಾಲಕಿ ಮೇಲೆ ಅತ್ಯಾಚಾರ: ಶಾಲಾ ಶಿಕ್ಷಕ, BJP ನಾಯಕನಿಗೆ ಸಾಯೋವರೆಗೂ ಜೈಲು

Date:

9 ವರ್ಷದ ಬಾಲಕಿಯ ಮೇಲೆ ಶಾಲೆಯಲ್ಲಿ ಅತ್ಯಾಚಾರ ಎಸಗಿದ್ದ ಶಾಲೆಯ ಶಿಕ್ಷಕ, ಬಿಜೆಪಿ ನಾಯಕನೊಬ್ಬನಿಗೆ ಸಾಯುವವರೆಗೂ ಜೈಲು ಶಿಕ್ಷೆ ವಿಧಿಸಿ ಕೇರಳ ನ್ಯಾಯಾಲಯ ಆದೇಶಿಸಿದೆ.

- Advertisement -

ಕೇಳದ ಕಣ್ಣೂರಿನ ಪಾಲಥೈನಲ್ಲಿ ಖಾಸಗಿ ಶಾಲೆಯಲ್ಲಿ ಶಿಕ್ಷಕನಾಗಿದ್ದ ಬಿಜೆಪಿ ನಾಯಕ ಕೆ. ಪದ್ಮರಾಜನ್ ಎಂಬ ಶಿಕ್ಷಗೆ ಗುರಿಯಾಗಿರುವ ಕಾಮುಕ ಅಪರಾಧಿ. ಈತ 4ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯ ಮೇಲೆ ಅತ್ಯಾಚಾರ ಎಸಗಿದ್ದ ಪ್ರಕರಣದಲ್ಲಿ ಪೋಕ್ಸೋ ವಿಶೇಷ ನ್ಯಾಯಾಲಯ ಆತನಿಗೆ ಜಿವನ ಪರ್ಯಂತ ಜೈಲು ಶಿಕ್ಷೆ ವಿಧಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಅಪರಾಧಿ ಪದ್ಮರಾಜ್ ಎಂಬಾತ 2020ರ ಜನವರಿ ಮತ್ತು ಫೆಬ್ರವರಿಯಲ್ಲಿ ಬಾಲಕಿ ಮೇಲೆ ಮೂರು ಬಾರಿ ಅತ್ಯಾಚಾರ ಎಸಗಿದ್ದನೆಂದು ಆರೋಪಿಸಲಾಗಿತ್ತು. ಆತನ ವಿರುದ್ಧ ಬಾಲಕಿಯ ಪೋಷಕರು ದೂರು ನೀಡಿದ್ದರು. 2020ರ ಏಪ್ರಿಲ್ 15ರಂದು ಪದ್ಮರಾಜ್‌ನನ್ನು ಬಂಧಿಸಲಾಗಿತ್ತು.

ಆದಾಗ್ಯೂ, ತನಿಖೆಯು ಸರಿಯಾಗಿ ನಡೆಯದ ಕಾರಣ ಐದು ಬಾರಿ ತನಿಖಾ ತಂಡವನ್ನು ಬದಲಿಸಲಾಗಿತ್ತು. ಮಾತ್ರವಲ್ಲದೆ, ಪೊಲೀಸರು ಸಲ್ಲಿಸಿದ್ದ ಮಧ್ಯಂತರ ಚಾರ್ಜ್‌ಶೀಟ್‌ನಲ್ಲಿ ಪೋಕ್ಸೋ ಕಾಯ್ದೆಯ ಸೆಕ್ಷನ್‌ಗಳನ್ನೇ ಸೇರಿಸಲಾಗಿರಲಿಲ್ಲ. ಇದು, ರಾಜಕೀಯ ವಿವಾದಕ್ಕೆ ಗುರಿಯಾಗಿತ್ತು.

ಅಂತಿಮವಾಗಿ ಪ್ರಕರಣವನ್ನು ಅಪರಾಧ ವಿಭಾಗಕ್ಕೆ ವರ್ಗಾಯಿಸಲಾಗಿತ್ತು. ಅಪರಾಧ ವಿಭಾಗವು ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯ ಸೆಕ್ಷನ್ 376AB (ಅತ್ಯಾಚಾರ) ಸೇರಿದಂತೆ ವಿವಿಧ ಸೆಕ್ಷನ್‌ಗಳನ್ನು ಸೇರಿತ್ತು. ತನಿಖೆ ನಡೆಸಿ, ಅಂತಿಮ ಜಾರ್ಜ್‌ಶೀಟ್‌ಅನ್ನು ನ್ಯಾಯಾಲಯಕ್ಕೆ ಸಲ್ಲಿಸಿತ್ತು.

ಪ್ರಕರಣದ ವಿಚಾರಣೆ ನಡೆಸಿರುದ ನ್ಯಾಯಾಲಯವು ಆರೋಪಿ ಪದ್ಮರಾಜ್‌ನನ್ನು ಅಪರಾಧಿ ಎಂದು ಘೋಷಿಸಿದೆ. ಜೀವನ ಪರ್ಯಂತ ಜೈಲು ವಾಸದ ಶಿಕ್ಷೆ ವಿಧಿಸಿದೆ.

ಅಪರಾಧ ಶಾಖೆಯು ತನ್ನ ಆರೋಪ ಪಟ್ಟಿಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಿಲ್ಲ. ಐದು ಪ್ರತ್ಯೇಕ ತನಿಖಾ ತಂಡಗಳು ತನಿಖೆ ನಡೆಸಿ, ಮೇ 2021ರಲ್ಲಿ ಅಂತಿಮ ಆರೋಪ ಪಟ್ಟಿಯನ್ನು ಸಲ್ಲಿಸಿದವು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆತ್ಮಹತ್ಯೆ ಪ್ರಕರಣ: ರಾಖಿ ಸಾವಂತ್ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ

ಬಾಲಿವುಡ್ ನಟಿ ರಾಖಿ ಸಾವಂತ್‌ಗೆ ಮತ್ತೊಮ್ಮೆ ಕಾನೂನು ಸಂಕಷ್ಟ ಎದುರಾಗಿದೆ. 2010ರ...

ರಷ್ಯಾದ ಇಂಧನದಿಂದ ಭಾರತ ದೂರ ಸರಿಯುವುದು ಅಸಾಧ್ಯ: ಅಮೆರಿಕ

ರಷ್ಯಾದ ತೈಲ ಖರೀದಿಸುವ ರಾಷ್ಟ್ರಗಳ ಮೇಲಿನ ದಿಗ್ಬಂಧನ ಮತ್ತು ಆಮದು ಸುಂಕದ...

ಫುಟ್‌ಪಾತ್ ನಿರ್ಮಿಸದಿದ್ರೆ, ನಾವೇ ಧರಣಿ‌ ಕೂರ್ತೀವಿ; BJP ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ವಾರ್ನಿಂಗ್!

ದೆಹಲಿ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಸಮೀಪದ ಮಥುರಾ ರಸ್ತೆಯಲ್ಲಿ ಪಾದಚಾರಿಗಳು...