ಮಹಿಳೆ ಮೇಲೆ ನಿರಂತರ ಅತ್ಯಾಚಾರ; ಬಿಸಿ ಬೇಳೆ ಸುರಿದು ಚಿತ್ರಹಿಂಸೆ ನೀಡಿದ ವಿಕೃತ ಕಾಮುಕ

Date:

ಮಹಿಳೆಯ ಮೇಲೆ ಆಕೆಯ ಸ್ನೇಹಿತನೇ ಒಂದು ವಾರ ನಿರಂತರ ಅತ್ಯಾಚಾರ ಎಸಗಿ, ಆಕೆಯ ಮೇಲೆ ಬಿಸಿ ಬೇಳೆ ಸಾರು ಸುರಿದು ಚಿತ್ರಹಿಂಸೆ ನೀಡಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ.

ಸಂತ್ರಸ್ತೆ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್‌ ಮೂಲದವರಾಗಿದ್ದು, ನವದೆಹಲಿಯಲ್ಲಿಆರೋಪಿ ಸ್ನೇಹಿತನೊಂದಿಗೆ ಕಳೆದ ಒಂದು ತಿಂಗಳಿನಿಂದ ವಾಸಿಸುತ್ತಿದ್ದರು. ಕಳೆದ ಒಂದು ವಾರದಿಂದ ಆಕೆಯ ಮೇಲೆ ನಿರಂತರ ಅತ್ಯಾಚಾರ ಎಸಗಿರುವ ಆರೋಪಿ ಕಾಮುಕ, ಆಕೆಗೆ ಚಿತ್ರಹಿಂಸೆ ನೀಡಿದ್ದಾನೆ. ಆಕೆಯ ದೇಹದ ಮೇಲೆ 20ಕ್ಕೂ ಹೆಚ್ಚು ಗಾಯಗಳಾಗಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

28 ವರ್ಷದ ಆರೋಪಿ ಪರಾಸ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆತನ ವಿರುದ್ಧ ಅತ್ಯಾಚಾರ, ಕಿರುಕುಳ, ಹಲ್ಲೆ ಆರೋಪಗಳ ಮೇಲೆ ಐಪಿಸಿ ಸೆಕ್ಷನ್ 323, 376, ಮತ್ತು 37 ಪ್ರಕರಣ ದಾಖಲಿಸಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪೊಲೀಸರ ಪ್ರಕಾರ, ಮಹಿಳೆಗೆ ಆರೋಪಿ ಪರಾಸ್‌ ನಾಲ್ಕು ತಿಂಗಳ ಹಿಂದೆ ಪರಿಚಿತನಾಗಿದ್ದ. ದಕ್ಷಿಣ ದೆಹಲಿಯ ನೆಬ್ ಸರೈ ಪ್ರದೇಶದಲ್ಲಿ ಬಾಡಿಗೆ ಮನೆಯಲ್ಲಿ ಕಳೆದ ಒಂದು ತಿಂಗಳಿನಿಂದ ಮಹಿಳೆ ಪರಾಸ್‌ನೊಂದಿಗೆ ವಾಸಿಸುತ್ತಿದ್ದರು.

ಜನವರಿ 30ರಂದು ತನ್ನ ಮೇಲೆ ದೌರ್ಜನ್ಯ ನಡೆಯುತ್ತಿದೆ ಎಂದು ಮಹಿಳೆ ನೆಬ್ ಸರೈ ಪೊಲೀಸ್ ಠಾಣೆಗೆ ಕರೆ ಮಾಡಿದ್ದಾರೆ. ಕೂಡಲೇ ಪೊಲೀಸರು ಸ್ಥಳಕ್ಕೆ ತೆರಳಿ ಮಹಿಳೆಯನ್ನು ರಕ್ಷಿಸಿದೆ. ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದೆ.

“ಜನವರಿ ಆರಂಭದಲ್ಲಿ ಮನೆಗೆಲಸದ ಕೆಲಸಕ್ಕಾಗಿ ಬೆಂಗಳೂರಿಗೆ ತೆರಳಲು ನಿರ್ಧರಿಸಿದ್ದೆ. ಉದ್ಯೋಗವನ್ನು ಹುಡುಕಲು ಪರಾಸ್‌ ನೆರವು ನೀಡಿದ್ದ. ಹೀಗಾಗಿ, ಆತನನ್ನು ಭೇಟಿಯಾಗಲು ದೆಹಲಿಗೆ ಬಂದಿದ್ದೆ. ಆತನ ದೆಹಲಿಯಲ್ಲಿಯೇ ಉಳಿಯುವಂತೆ ಒತ್ತಾಯಿಸಿದ್ದ. ಕಾಲಾನಂತರ, ನನ್ನ ಮೇಲೆ ದೈಹಿಕ ಹಲ್ಲೆ ನಡೆಸಿ, ಅತ್ಯಾಚಾರ ಎಸಗಿ ಕೂಡಿ ಹಾಕಿದ್ದ” ಎಂದು ಸಂತ್ರಸ್ತೆ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹರಿಯಾಣ ಐಎನ್‌ಎಲ್‌ಡಿ ಅಧ್ಯಕ್ಷನ ಗುಂಡಿಕ್ಕಿ ಕೊಲೆ

ಅಪರಿಚಿತ ದುಷ್ಕರ್ಮಿಗಳು ಭಾರತ ರಾಷ್ಟ್ರೀಯ ಲೋಕದಳ (ಐಎನ್‌ಎಲ್‌ಡಿ) ಹರಿಯಾಣ ಘಟಕದ ಅಧ್ಯಕ್ಷ...

ರಷ್ಯಾ | ಉಕ್ರೇನ್ ಸೇನೆ ದಾಳಿಯಿಂದ ಭಾರತೀಯ ಸಾವು; ದುರಂತ ಪ್ರತ್ಯಕ್ಷ ಕಂಡ ಕರ್ನಾಟಕದ ನಿವಾಸಿ

ರಷ್ಯಾ – ಉಕ್ರೇನ್ ಗಡಿಯಲ್ಲಿನ ದೊನೆಸ್ಟಕ್‌ನಲ್ಲಿ ಉಕ್ರೇನ್ ಕೈಗೊಂಡ ಡ್ರೋನ್ ದಾಳಿಯಲ್ಲಿ...

ನ್ಯಾಯ ಯಾತ್ರೆ | ಸೀಟು ಹಂಚಿಕೆಯಾದ ಬೆನ್ನಲ್ಲೇ ರಾಹುಲ್ ಜೊತೆ ಹೆಜ್ಜೆ ಹಾಕಿದ ಅಖಿಲೇಶ್

ಉತ್ತರ ಪ್ರದೇಶದ ಆಗ್ರಾ ಮೂಲಕ ಸಾಗುತ್ತಿರುವ ರಾಹುಲ್ ಗಾಂಧಿ ನೇತೃತ್ವದ ಭಾರತ್...

ಜೆ-ಕೆಯಲ್ಲಿ ಚುನಾವಣೆಗಳನ್ನು ಸುಪ್ರೀಂ ಕೋರ್ಟ್‌ ಘೋಷಿಸಬೇಕಿರೋದು ನಾಚಿಕೆಗೇಡಿನ ಸಂಗತಿ: ಒಮರ್ ಅಬ್ದುಲ್ಲಾ

ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆ ಕುರಿತು ಚುನಾವಣಾ ಆಯೋಗಕ್ಕಿಂತ ಹೆಚ್ಚಾಗಿ ಸುಪ್ರೀಂ...