ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ)ನ ಗವರ್ನರ್ ಶಕ್ತಿಕಾಂತ್ ದಾಸ್ ಅವರಿಗೆ ಎದೆಯುರಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂದು (ನ.26) ಬೆಳಿಗ್ಗೆ ಚೆನ್ನೈನಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ದಾಸ್ ಅವರು ಸೋಮವಾರ ಕಾರ್ಯನಿಮಿತ್ಯ ಚೆನ್ನೈಗೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಎದೆಯುರಿ ಕಂಡುಬಂದಿದ್ದು, ಅವರನ್ನು ಸನಿಹದ ಚೆನ್ನೈನಲ್ಲಿನ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಶೀಘ್ರವೇ ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು ಆರ್‌ಬಿಐ ವಕ್ತಾರರು ತಿಳಿಸಿದ್ದಾರೆ.
ಶಕ್ತಿಕಾಂತ್ ದಾಸ್ ಅವರನ್ನು ಆರ್‌ಬಿಐ ಗವರ್ನರ್ ಆಗಿ ಮೂರು ವರ್ಷದ ಅವಧಿಗೆ ಕೇಂದ್ರ ಸರ್ಕಾರ 2021ರಲ್ಲಿ ಮರು ನೇಮಕ ಮಾಡಿತ್ತು. ಶಕ್ತಿಕಾಂತ್ ದಾಸ್‌ರವರನ್ನು ಡಿಸೆಂಬರ್ 10, 2021ರಿಂದ ಡಿಸೆಂಬರ್ 10,2024ರವರೆಗೆ ಮೂರು ವರ್ಷಗಳ ಅವಧಿಗೆ ನೇಮಿಸಲಾಗಿತ್ತು.ಶಕ್ತಿಕಾಂತ ದಾಸ್‌ರವರು 2018ರ ಡಿಸೆಂಬರ್‌ನಲ್ಲಿ ಆರ್‌ಬಿಐ ಗವರ್ನರ್ ಆಗಿ ನೇಮಕಗೊಂಡಿದ್ದರು. ಇದೇ ಡಿಸೆಂಬರ್‌ಗೆ ಅವರ ಅಧಿಕಾರವಧಿ ಮುಕ್ತಾಯವಾಗಲಿದ್ದ ಹಿನ್ನೆಲೆಯಲ್ಲಿ ಅವರನ್ನು ಮರುನೇಮಕ ಮಾಡಲಾಗಿದೆ.
ಎನ್‌ಡಿಎ ಸರ್ಕಾರದಲ್ಲಿ ಎರಡನೇ ಬಾರಿಗೆ ಆರ್‌ಬಿಐ ಗವರ್ನರ್ ಆಗಿ ನೇಮಕಗೊಂಡ ಮೊದಲ ವ್ಯಕ್ತಿ ಶಕ್ತಿಕಾಂತ ದಾಸ್ ಆಗಿದ್ದಾರೆ. ಈ ಮೊದಲಿದ್ದ ಗವರ್ನರ್ ಊರ್ಜಿತ್ ಪಟೇಲ್‌ರವರು ಸರ್ಕಾರದೊಂದಿಗಿನ ಭಿನ್ನಾಭಿಪ್ರಾಯದ ಕಾರಣಕ್ಕಾಗಿ ಈ ಹುದ್ದೆಗೆ ರಾಜೀನಾಮೆ ನೀಡಿ ಹೊರಬಂದಿದ್ದರು.