ಬಡ್ಡಿದರ ಯಥಾಸ್ಥಿತಿ ಕಾಯ್ದುಕೊಂಡ ಆರ್‌ಬಿಐ: ಶೇ.6.5 ಮುಂದುವರಿಕೆ

Date:

Advertisements

ಭಾರತೀಯ ರಿಸರ್ವ್ ಬ್ಯಾಂಕ್(ಆರ್‌ಬಿಐ) ಇಂದು ರೆಪೋ ದರವನ್ನು(ಬಡ್ಡಿದರ) ಶೇ. 6.5ರಲ್ಲಿ ಮುಂದುವರಿಸಲು ನಿರ್ಧರಿಸಿದೆ. ಬುಧವಾರದಿಂದ (ಜೂನ್ 5) ನಡೆದ ಹಣಕಾಸು ನೀತಿ ಸಮಿತಿ(ಎಂಪಿಸಿ) ಸಭೆಯಲ್ಲಿ ತೆಗೆದುಕೊಂಡ ನಿರ್ಧಾರವನ್ನು ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಇಂದು ಪ್ರಕಟಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಕ್ತಿಕಾಂತ ದಾಸ್, ಹಣದುಬ್ಬರ ಇನ್ನೂ ಗುರಿಗಿಂತ ಮೇಲೆಯೇ ಇರುವುದರಿಂದ ಇನ್ನಷ್ಟು ಕಾಲ ಬಡ್ಡಿದರ ಮುಂದುವರಿಸುವುದು ಸೂಕ್ತ ಎನ್ನುವ ನಿಲುವು ತಳೆದಿದ್ದಾರೆ. ಕಳೆದ 15-16 ತಿಂಗಳಿಂದ ಆರ್‌ಬಿಐ ತನ್ನ ರೆಪೋ ಅಥವಾ ಬಡ್ಡಿದರದಲ್ಲಿ ಬದಲಾವಣೆ ಮಾಡಿಲ್ಲ. 2023ರ ಫೆಬ್ರುವರಿ 8ರಂದು ರೆಪೋ ದರವನ್ನು ಶೇ. 6.25ರಿಂದ ಶೇ. 6.50ಕ್ಕೆ ಹೆಚ್ಚಿಸಲಾಗಿತ್ತು. ಅಲ್ಲಿಂದ ಇಲ್ಲಿಯವರೆಗೂ ರೆಪೋ ದರದಲ್ಲಿ ಬದಲಾವಣೆ ಮಾಡಲಾಗಿಲ್ಲ. ಇನ್ನಷ್ಟು ತಿಂಗಳು ಇದೇ ದರ ಮುಂದುವರಿಯುವ ಸಾಧ್ಯತೆ ಇದೆ.

ಈ ಬಾರಿ ಆರ್‌ಬಿಐನಿಂದ ಬಡ್ಡಿದರದಲ್ಲಿ ಬದಲಾವಣೆ ಮಾಡುವ ಸಾಧ್ಯತೆ ಇಲ್ಲ ಎಂದೇ ಬಹಳಷ್ಟು ಆರ್ಥಿಕ ತಜ್ಞರು ಅಂದಾಜಿಸಿದ್ದರು. ನಿರೀಕ್ಷೆಯಂತೆಯೆ ಬದಲಾವಣೆಯಾಗಿಲ್ಲ. ಹಣದುಬ್ಬರ ಇನ್ನಷ್ಟು ಕಾಲ ತುಸು ಮೇಲ್ಮಟ್ಟದಲ್ಲೇ ಇರುವುದರಿಂದ, ಮತ್ತು ಹಣದುಬ್ಬರ ಹೆಚ್ಚಿದ್ದರೂ ಜಿಡಿಪಿ ನಿರೀಕ್ಷೆ ಮೀರಿ ಬೆಳೆಯುತ್ತಿರುವುದರಿಂದ ರೆಪೋ ದರದಲ್ಲಿ ಬದಲಾವಣೆ ಮಾಡುವ ಅವಶ್ಯಕತೆ ಆರ್‌ಬಿಐಗೆ ಬಂದಿಲ್ಲ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜನರೊಂದಿಗೆ ನೊಂದು ಬೆಂದು ಬಂಗಾರವಾದ ರಾಹುಲ್ ಗಾಂಧಿ

ರೆಪೋದರ, ರಿವರ್ಸ್ ರೆಪೋ, ವಿತ್ಡ್ರಾಯಲ್ ಆಫ್ ಅಕಾಮೊಡೇಶನ್, ಎಸ್ಎಲ್ಆರ್ ಹೀಗೆ ವಿವಿಧ ದರಗಳ ಯಥಾಸ್ಥಿತಿ ಮುಂದುವರಿಯಲಿದೆ. ರೆಪೋ ದರದ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ವಿಚಾರದಲ್ಲಿ ಈ ಬಾರಿಯ ಎಂಪಿಸಿ ಸಭೆಯ ವಿಶೇಷತೆ ಎಂದರೆ ಯಥಾಸ್ಥಿತಿ ಮುಂದುವರಿಸುವ ನಿರ್ಧಾರದ ಪರವಾಗಿ 4:2ರ ಬಹುಮತ ವ್ಯಕ್ತವಾಗಿದೆ. ಆರು ಸದಸ್ಯರಿರುವ ಎಂಪಿಸಿ ಸಭೆಯಲ್ಲಿ ಇಬ್ಬರು ಇದಕ್ಕೆ ವಿರೋಧ ವ್ಯಕ್ತಪಡಿಸಿರುವುದು ಗಮನಾರ್ಹ. ಹಿಂದಿನ ಕೆಲ ಎಂಪಿಸಿ ಸಭೆಗಳಲ್ಲಿ 5:1ರ ಬಹುಮತದಿಂದ ನಿರ್ಧಾರ ಪ್ರಕಟವಾಗುತ್ತಿತ್ತು.

ವಾಣಿಜ್ಯ ಬ್ಯಾಂಕುಗಳು ಆರ್‌ಬಿಐನಿಂದ ಪಡೆಯುವ ಸಾಲಕ್ಕೆ ತೆರಬೇಕಿರುವ ಬಡ್ಡಿದರವನ್ನು ರೆಪೋ ದರ ಎನ್ನಲಾಗುತ್ತದೆ. ಇದಕ್ಕೆ ಅನುಗುಣವಾಗಿ ಬ್ಯಾಂಕುಗಳು ತಮ್ಮ ಗ್ರಾಹಕರಿಗೆ ಬಡ್ಡಿ ನಿಗದಿ ಮಾಡಬಹುದು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X