₹2 ಸಾವಿರ ನೋಟುಗಳನ್ನು ಹಿಂಪಡೆಯಲು ನಿರ್ಧರಿಸಿದ ಆರ್‌ಬಿಐ; ಸೆ.30 ಕೊನೆ ದಿನ!

Date:

Advertisements

ಭಾರತೀಯ ರಿಸರ್ವ್‌ ಬ್ಯಾಂಕ್‌ 2,000 ರೂಪಾಯಿ ಮುಖಬೆಲೆಯ ನೋಟನ್ನು ಹಿಂತೆಗೆದುಕೊಳ್ಳುವ ಮಹತ್ವದ ನಿರ್ಧಾರ ಕೈಗೊಂಡಿದೆ.

ಸಾರ್ವಜನಿಕರಿಗೆ ಸಾಕಷ್ಟು ಸಮಯವನ್ನು ಒದಗಿಸಲು, ಎಲ್ಲ ಸೆಪ್ಟೆಂಬರ್ 30, 2023ರವರೆಗೆ ₹ 2000 ಬ್ಯಾಂಕ್‌ ನೋಟುಗಳಿಗೆ ಠೇವಣಿ ಅಥವಾ ವಿನಿಮಯ ಸೌಲಭ್ಯವನ್ನು ಒದಗಿಸುವಂತೆ ಸೂಚನೆ ನೀಡಲಾಗಿದೆ. ಅಕ್ಟೋಬರ್ 1 ರಿಂದ 2,000 ರೂಪಾಯಿ ನೋಟುಗಳ ಚಲಾವಣೆ ಸ್ಥಗಿತಗೊಳ್ಳಲಿದೆ. ಮೇ 23ರಿಂದ ವಿನಿಮಯ ಆರಂಭಗೊಳ್ಳಲಿದ್ದು,ಸೆ.30 ಕೊನೆದಿನವಾಗಿದೆ.

“₹2000 ಮುಖಬೆಲೆಯ ಬ್ಯಾಂಕ್‌ ನೋಟುಗಳಲ್ಲಿ ಸುಮಾರು ಶೇ 89 ಅನ್ನು ಮಾರ್ಚ್ 2017ಕ್ಕಿಂತ ಮೊದಲು ಚಲಾವಣೆಗೆ ತರಲಾಯಿತು ಮತ್ತು ಅವುಗಳ ಅಂದಾಜು ಜೀವಿತಾವಧಿ 4 ರಿಂದ 5 ವರ್ಷಗಳು. ಚಲಾವಣೆಯಲ್ಲಿರುವ ಈ ಬ್ಯಾಂಕ್‌ ನೋಟುಗಳ ಒಟ್ಟು ಮೌಲ್ಯವು ಮಾರ್ಚ್ 31, 2018ಕ್ಕೆ (ಚಲಾವಣೆಯಲ್ಲಿರುವ ನೋಟುಗಳ ಶೇ 37.3) ಗರಿಷ್ಠ ₹ 6.73 ಲಕ್ಷ ಕೋಟಿಗಳಿಂದ ₹ 3.62 ಲಕ್ಷ ಕೋಟಿಗೆ ಇಳಿದಿದೆ. ಮಾರ್ಚ್ 31, 2023 ರಂದು ಚಲಾವಣೆಯಲ್ಲಿರುವ ನೋಟುಗಳು ಕೇವಲ 10.8% ರಷ್ಟಿದೆ ಎಂದು ಆರ್‌ಬಿಐ ತಿಳಿಸಿದೆ.

Advertisements

ಈ ವಿಚಾರವಾಗಿ ಬ್ಯಾಂಕ್‌ಗಳಿಗೆ ಪ್ರತ್ಯೇಕ ಮಾರ್ಗಸೂಚಿಗಳನ್ನು ನೀಡಲಾಗಿದೆ ಎಂದು ಹೇಳಿದೆ. ತಕ್ಷಣವೇ ಜಾರಿಗೆ ಬರುವಂತೆ 2000 ರೂಪಾಯಿ ಮುಖಬೆಲೆಯ ನೋಟುಗಳನ್ನು ನೀಡುವುದನ್ನು ನಿಲ್ಲಿಸುವಂತೆ ಆರ್‌ಬಿಐ ಬ್ಯಾಂಕ್‌ಗಳಿಗೆ ಸೂಚಿಸಿದೆ.

500 ಮತ್ತು 1000 ರೂಪಾಯಿಗಳ ನೋಟುಗಳ ಅಮಾನ್ಯೀಕರಣದ ನಂತರ 8 ನವೆಂಬರ್ 2016 ರಂದು 2000-ರೂಪಾಯಿ ನೋಟುಗಳನ್ನು ಆರ್‌ಬಿಐ ಬಿಡುಗಡೆ ಮಾಡಿತು. ಇದು 10 ನವೆಂಬರ್ 2016 ರಿಂದ ಚಲಾವಣೆಯಲ್ಲಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X