ʼಸಾವಿರ ಬಾರಿ ಕ್ಷಮೆ ಕೇಳಲೂ ಸಿದ್ಧ’; ಪಹಲ್ಗಾಮ್‌ ಹೇಳಿಕೆ ವಿವಾದದ ಬಳಿಕ ಕನ್ನಡಿಗರಲ್ಲಿ ಕ್ಷಮೆ ಯಾಚಿಸಿದ ಸೋನು ನಿಗಮ್‌!

Date:

ಪಹಲ್ಗಾಮ್‌ ಉಗ್ರರ ದಾಳಿ ಕುರಿತು ನೀಡಿದ್ದ ವಿವಾದಾತ್ಮಕ ಹೇಳಿಕೆಯ ಹಿನ್ನೆಲೆಯಲ್ಲಿ ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿದ್ದ ಖ್ಯಾತ ಗಾಯಕ ಸೋನು ನಿಗಮ್‌ ಇದೀಗ ಕ್ಷಮೆಯಾಚಿಸಿದ್ದಾರೆ. ಅಕ್ಟೋಬರ್‌ 24ರಂದು ಬೆಂಗಳೂರಿನಲ್ಲಿ ನಡೆಯಲಿರುವ ತಮ್ಮ ಸಂಗೀತ ಕಾರ್ಯಕ್ರಮಕ್ಕೂ ಮುನ್ನ ವಿಡಿಯೊ ಸಂದೇಶ ಬಿಡುಗಡೆ ಮಾಡಿರುವ ಅವರು, ಕನ್ನಡಿಗರೊಂದಿಗಿನ ಸಂಬಂಧ ಉಳಿಸಿಕೊಳ್ಳಲು ಸಾವಿರ ಬಾರಿ ಕ್ಷಮೆ ಕೇಳಲೂ ಸಿದ್ಧ ಎಂದು ಹೇಳಿದ್ದಾರೆ.

- Advertisement -

ಈ ಕುರಿತ ವಿಡಿಯೋ ಪೋಸ್ಟ್‌ ಒಂದರಲ್ಲಿ ಅವರು, “ನೀವು ಯಾರನ್ನಾದರೂ ಪ್ರೀತಿಸುತ್ತಿದ್ದರೆ ಮತ್ತು ಆ ಸಂಬಂಧ ಶಾಶ್ವತವಾಗಿ ಉಳಿಯಬೇಕೆಂದು ಬಯಸಿದರೆ, ಸಾವಿರ ಬಾರಿ ಕ್ಷಮೆ ಕೇಳಲೂ ನಿಮಗೆ ಹಿಂಜರಿಕೆಯಿರುವುದಿಲ್ಲ” ಎಂದು ಸೋನು ನಿಗಮ್‌ ಕನ್ನಡದಲ್ಲೇ ತಮ್ಮ ಮಾತು ಆರಂಭಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸ್ಟಿಂಗ್ ಆರೋಪದ ಸುತ್ತ ರಾಜಕೀಯ ಲೆಕ್ಕಾಚಾರ; ಸತ್ಯಾಸತ್ಯತೆ ಹೊಣೆಗಾರಿಕೆಯ...

ಸಿದ್ದರಾಮಯ್ಯ ಅವರ ನಿರಾಕರಣೆ, ಕುಮಾರಸ್ವಾಮಿ ಅವರ ಆರೋಪಗಳು, ಆರ್. ಅಶೋಕ್ ಅವರ ಹಣಕಾಸಿನ ಕುರಿತ ಹೇಳಿಕೆಗಳು ಮತ್ತು ಸರ್ಕಾರದ ತನಿಖೆಯ ಭರವಸೆ—ಇವೆಲ್ಲವೂ ಪ್ರಕರಣದ ವಿವಿಧ ಆಯಾಮಗಳನ್ನು ಪ್ರತಿನಿಧಿಸುತ್ತವೆ. ಆದರೆ ಇವುಗಳಲ್ಲಿ ಯಾವುದೂ ಸ್ವತಃ...

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ...

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ ಪ್ರಭಾವ ಬೀರುತ್ತಿದ್ದ ಭೂಗತ ಲೋಕ, ಈಗ ಗುಂಡಿನ ದಾಳಿ ಮತ್ತು ಜೀವಬೆದರಿಕೆಗಳ ಮೂಲಕ ಮತ್ತೊಮ್ಮೆ ತನ್ನ ಅಸ್ತಿತ್ವ ಪ್ರದರ್ಶಿಸುತ್ತಿದೆ. ದಾವೂದ್...

ಲೋಕಸಭೆಯ ಬಲ 850ಕ್ಕೆ ಏರಿಕೆ: ಕಲಾಪದ ಸಮಯ ಹೆಚ್ಚಳವಿಲ್ಲದಿದ್ದರೆ...

ಲೋಕಸಭೆಯ ಸದಸ್ಯರ ಬಲವನ್ನು 550ರಿಂದ 850ಕ್ಕೆ ಹೆಚ್ಚಿಸುವ ‘ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ–2026’ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ. ಜನಸಂಖ್ಯೆಗೆ ಅನುಗುಣವಾಗಿ ಸೀಟುಗಳ ಹೆಚ್ಚಳ ಅನಿವಾರ್ಯವಾದರೂ, ಸಂಸತ್ತಿನ ವಾರ್ಷಿಕ ಕಲಾಪದ ದಿನಗಳು ಮತ್ತು...

“ನನ್ನ ಪ್ರೀತಿಯ ಕುಟುಂಬದವರೇ, ನಾನು ತಿಳಿಯದೆ ಹೇಳಿದ ಯಾವುದಾದರೂ ಮಾತು ನಿಮಗೆ ನೋವುಂಟುಮಾಡಿದ್ದರೆ, ಅದಕ್ಕಾಗಿ ಹೃತ್ಪೂರ್ವಕವಾಗಿ ಕ್ಷಮೆ ಕೇಳುತ್ತೇನೆ. ಯಾರಿಗಾದರೂ, ಅದರಲ್ಲೂ ನನ್ನ ಕರ್ನಾಟಕದ ಕುಟುಂಬದವರಿಗೆ ನೋವುಂಟುಮಾಡುವ ವ್ಯಕ್ತಿ ನಾನಲ್ಲ ಎಂಬುದು ನಿಮಗೆ ಗೊತ್ತಿದೆ. ಕಳೆದ 30 ವರ್ಷಗಳಿಂದ ನೀವು ನನಗೆ ಅಪಾರ ಪ್ರೀತಿ ಮತ್ತು ಗೌರವ ನೀಡಿದ್ದೀರಿ. ಯಾವುದೇ ಸಣ್ಣ ತಪ್ಪು ತಿಳಿವಳಿಕೆಯಿಂದ ನಮ್ಮ ಸಂಬಂಧಕ್ಕೆ ಧಕ್ಕೆಯಾಗಬಾರದು ಅಥವಾ ನಮ್ಮ ನಡುವೆ ಕಹಿ ಉಂಟಾಗಬಾರದು ಎಂದು ನಾನು ಬಯಸುತ್ತೇನೆ” ಎಂದು ಹೇಳಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಸೋನು ನಿಗಮ್‌ ಅವರ ಈ ಕ್ಷಮೆಯಾಚನೆಗೆ ಮುನ್ನ ಕನ್ನಡಪರ ಸಂಘಟನೆ ಕರ್ನಾಟಕ ರಕ್ಷಣಾ ವೇದಿಕೆ (ಕೆಆರ್‌ವಿ) ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಅಕ್ಟೋಬರ್‌ 24ರಂದು ಬೆಂಗಳೂರಿನಲ್ಲಿ ನಡೆಯಲಿರುವ ಅವರ ಸಂಗೀತ ಕಾರ್ಯಕ್ರಮಕ್ಕೆ ಅನುಮತಿ ನೀಡಬಾರದು ಎಂದು ಬೆಂಗಳೂರು ನಗರ ಪೊಲೀಸ್‌ ಆಯುಕ್ತರನ್ನು ಸಂಘಟನೆ ಒತ್ತಾಯಿಸಿತ್ತು.

ಕಾರ್ಯಕ್ರಮಕ್ಕೆ ಅವಕಾಶ ನೀಡಿದರೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿಯೂ ಸಂಘಟನೆ ಎಚ್ಚರಿಕೆ ನೀಡಿತ್ತು. ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಅವರು, ಕನ್ನಡ ಹಾಡು ಹಾಡುವಂತೆ ಕೇಳಿಕೊಂಡಿದ್ದ ಕನ್ನಡಿಗರ ಮನವಿಯನ್ನು ಪಹಲ್ಗಾಮ್‌ ಭಯೋತ್ಪಾದಕ ದಾಳಿಗೆ ಹೋಲಿಸುವ ಮೂಲಕ ಸೋನು ನಿಗಮ್‌ ಕನ್ನಡಿಗರನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿದ್ದರು.

2025ರ ಏಪ್ರಿಲ್‌ನಲ್ಲಿ ಬೆಂಗಳೂರಿನ ಈಸ್ಟ್‌ ಪಾಯಿಂಟ್‌ ಕಾಲೇಜಿನಲ್ಲಿ ನಡೆದ ಸಂಗೀತ ಕಾರ್ಯಕ್ರಮದ ವೇಳೆ ಈ ವಿವಾದ ಉಂಟಾಗಿತ್ತು. ಕಾರ್ಯಕ್ರಮದಲ್ಲಿ ಪ್ರೇಕ್ಷಕರೊಬ್ಬರು ಕನ್ನಡ ಹಾಡು ಹಾಡುವಂತೆ ಸೋನು ನಿಗಮ್‌ ಅವರನ್ನು ಕೇಳಿಕೊಂಡಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ್ದ ಗಾಯಕ, “ನಾನು ಹಾಡಿರುವ ಅತ್ಯುತ್ತಮ ಹಾಡುಗಳು ಕನ್ನಡದಲ್ಲಿವೆ. ಆದರೆ, ಒಬ್ಬ ಹುಡುಗ ನನ್ನನ್ನು ಕನ್ನಡದಲ್ಲಿ ಹಾಡುವಂತೆ ಕೇಳಿದ ರೀತಿ ನನಗೆ ಇಷ್ಟವಾಗಲಿಲ್ಲ. ಆತ ‘ಕನ್ನಡ, ಕನ್ನಡ’ ಎಂದು ಬೆದರಿಸುವ ರೀತಿಯಲ್ಲಿ ಮಾತನಾಡಿದ. ಇದೇ ಪಹಲ್ಗಾಮ್‌ ದಾಳಿಗೆ ಕಾರಣ” ಎಂಬರ್ಥದ ಹೇಳಿಕೆ ನೀಡಿದ್ದರು.

ಇದನ್ನೂ ಓದಿ: ಪಹಲ್ಗಾಮ್‌ ದಾಳಿಯ ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರ ಬಂಧನ

ಈ ಹೇಳಿಕೆ ಕರ್ನಾಟಕದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಹಲವು ಕನ್ನಡಪರ ಸಂಘಟನೆಗಳು ಮತ್ತು ಕನ್ನಡಿಗರು ಅವರ ಮಾತಿಗೆ ವಿರೋಧ ವ್ಯಕ್ತಪಡಿಸಿದ್ದರು. ಸೋನು ನಿಗಮ್‌ ಅವರ ಹೇಳಿಕೆಯನ್ನು ಖಂಡಿಸಿದ್ದ ಕರವೇ, ಕನ್ನಡಿಗರ ಭಾವನೆಗಳಿಗೆ ನೋವುಂಟುಮಾಡಿರುವುದನ್ನು ಗಂಭೀರವಾಗಿ ಪರಿಗಣಿಸಬೇಕೆಂದು ಆಗ್ರಹಿಸಿತ್ತು. “ಕನ್ನಡಿಗರು ಈ ನೋವನ್ನು ಮರೆತಿಲ್ಲ” ಎಂದು ಪೊಲೀಸ್‌ ಆಯುಕ್ತರಿಗೆ ಬರೆದ ಪತ್ರದಲ್ಲಿ ಸಂಘಟನೆ ಉಲ್ಲೇಖಿಸಿತ್ತು.

ಇದೀಗ ಸೋನು ನಿಗಮ್‌ ಕ್ಷಮೆಯಾಚಿಸಿರುವುದರಿಂದ ವಿವಾದಕ್ಕೆ ತೆರೆ ಬೀಳುತ್ತದೆಯೇ ಮತ್ತು ಅಕ್ಟೋಬರ್‌ 24ರ ಸಂಗೀತ ಕಾರ್ಯಕ್ರಮಕ್ಕೆ ಅನುಮತಿ ದೊರೆಯುತ್ತದೆಯೇ ಎಂಬುದು ಕುತೂಹಲ ಮೂಡಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಭಾರತ ಕಂಡ ಅತ್ಯಂತ ದೊಡ್ಡ ಹೇಡಿ, ಪ್ರಧಾನಿಯಾಗಿರುವುದು ದುರದೃಷ್ಟಕರ: ಅಭಿಜೀತ್ ದೀಪ್ಕೆ ವಾಗ್ದಾಳಿ

ದೆಹಲಿಯ ಜಂತರ್ ಮಂತರ್‌ನಲ್ಲಿ ರಾಷ್ಟ್ರಧ್ವಜ ಹಾರಿಸಲು ಯತ್ನಿಸಿದ ಯುವ ಹೋರಾಟಗಾರರಾದ ಸೌರವ್...

ಕಲಬುರಗಿ | ಕಬ್ಬಿನ ಬೆಲೆ ನಿಗದಿ ಹೋರಾಟ : ಪ್ರತಿಭಟನೆ ಹಿಂಪಡೆದ ರೈತರು

ಡಾ. ಎಂ.ಎಸ್. ಸ್ವಾಮಿನಾಥನ್ ಆಯೋಗದ ಶಿಫಾರಸಿನಂತೆ ಬೆಂಬಲ ಬೆಲೆ ನಿಗದಿಪಡಿಸುವುದು, ಕಬ್ಬಿಗೆ...

ಯಾದಗಿರಿ | ಸಮಾಜ ಪರಿವರ್ತನೆಗೆ ಸಂವಿಧಾನದ ಅರಿವು ಅಗತ್ಯ: ಭೀಮಣ್ಣ ಮೇಟಿ

ಸಂವಿಧಾನದ ಆಶಯಗಳನ್ನು ಅರಿತುಕೊಂಡು ಅವುಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳುವ ಯುವಜನರು ಸಮಾಜ ಸುಧಾರಣೆಯಲ್ಲಿ...