ರಿಯಾಸಿ ದಾಳಿ| ಉಗ್ರರು 20 ನಿಮಿಷಗಳ ಕಾಲ ಗುಂಡು ಹಾರಿಸಿದ್ದರು: ಮಾಜಿ ಸರಪಂಚ್

Date:

ರಿಯಾಸಿ ಉಗ್ರರ ದಾಳಿಯ ವೇಳೆ ಭಯೋತ್ಪಾದಕರು ಸುಮಾರು 20 ನಿಮಿಷಗಳ ಕಾಲ ಬಸ್‌ನತ್ತ ಗುಂಡು ಹಾರಿಸಿದ್ದಾರೆ ಎಂದು ಎಂದು ಮಾಜಿ ರಿಯಾಸಿ ಸರಪಂಚ ಭೂಷಣ್ ಉಪ್ಪಲ್ ಸೋಮವಾರ ಹೇಳಿದ್ದಾರೆ. ದಾಳಿಯ ನಂತರ ಚಾಲಕನ ನಿಯಂತ್ರಣ ತಪ್ಪಿದಾಗ ವಾಹನವು ಕಂದಕಕ್ಕೆ ಬಿದ್ದ ನಂತರವೂ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ.

- Advertisement -

ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್‌ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು ಬಸ್ ಆಳವಾದ ಕಮರಿಗೆ ಉರುಳಿದ್ದು ಕನಿಷ್ಠ ಹತ್ತು ಜನರು ಸಾವನ್ನಪ್ಪಿದ್ದಾರೆ ಮತ್ತು 33 ಮಂದಿ ಗಾಯಗೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದನ್ನು ಓದಿದ್ದೀರಾ? ಜಮ್ಮು-ಕಾಶ್ಮೀರ | ಉಗ್ರರ ದಾಳಿಯ ಬಳಿಕ ಕಮರಿಗೆ ಉರುಳಿದ ಬಸ್; 10 ಮಂದಿ ಮೃತ್ಯು; ಹಲವರಿಗೆ ಗಾಯ

ಈ ಘಟನೆ ಬಗ್ಗೆ ಎಎನ್‌ಐಗೆ ಮಾಹಿತಿ ನೀಡಿದ ಮಾಜಿ ರಿಯಾಸಿ ಸರಪಂಚ ಭೂಷಣ್ ಉಪ್ಪಲ್, “ಭಯೋತ್ಪಾದಕರು ವಾಹನದ ಮೇಲೆ ದಾಳಿ ಮಾಡಿದ್ದಾರೆ ಎಂದು ನಮಗೆ ತಿಳಿದ ತಕ್ಷಣ, ನಾವು ಇಲ್ಲಿಗೆ ತಲುಪಿ ಜನರನ್ನು ರಕ್ಷಿಸಿದ್ದೇವೆ. ಭಯೋತ್ಪಾದಕರಲ್ಲಿ ಒಬ್ಬರು ಚಾಲಕನ ಮೇಲೆ ದಾಳಿ ಮಾಡಿ, ಚಾಲಕನ ತಲೆಗೆ ಗುಂಡು ಹಾರಿಸಿದ್ದಾರೆ ಎಂದು ಗಾಯಾಳುಗಳು ನಮಗೆ ತಿಳಿಸಿದ್ದಾರೆ” ಎಂದು ಹೇಳಿದರು.

“ಚಾಲಕನ ನಿಯಂತ್ರಣ ತಪ್ಪಿ ವಾಹನವು ಕಂದಕಕ್ಕೆ ಬಿದ್ದಿತ್ತು. ಆದರೆ ಉಗ್ರರು ಗುಂಡು ಹಾರಿಸುವುದನ್ನು ನಿಲ್ಲಿಸಿರಲಿಲ್ಲ. 15 ರಿಂದ 20 ನಿಮಿಷಗಳ ಕಾಲ ಗುಂಡು ಹಾರಿಸುತ್ತಲೇ ಇದ್ದರು. ಅದರಿಂದಾಗಿ ಕೆಲವರು ಗುಂಡು ತಗುಲಿ ಗಾಯಗೊಂಡಿದ್ದಾರೆ” ಎಂದು ತಿಳಿಸಿದರು.

ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತಂಡವು ಜಮ್ಮು ಕಾಶ್ಮೀರದ ರಿಯಾಸಿಯಲ್ಲಿನ ಪರಿಸ್ಥಿತಿಯನ್ನು ನಿರ್ಣಯಿಸಲು ಪೊಲೀಸರಿಗೆ ಸಹಾಯ ಮಾಡಲು ತಲುಪಿದೆ. ಎನ್‌ಐಎಯ ಫೊರೆನ್ಸಿಕ್ ತಂಡವು ನೆಲದಿಂದ ಸಾಕ್ಷ್ಯ ಸಂಗ್ರಹಕ್ಕೆ ಸಹಾಯ ಮಾಡಲು ಪ್ರಯತ್ನಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನು ಓದಿದ್ದೀರಾ?  ಭಾರತ-ಪಾಕಿಸ್ತಾನ ಟಿ20 ವಿಶ್ವಕಪ್ ಪಂದ್ಯ: ಉಗ್ರರಿಂದ ದಾಳಿ ಬೆದರಿಕೆ, ನ್ಯೂಯಾರ್ಕ್‌ನಲ್ಲಿ ಭದ್ರತೆ ಹೆಚ್ಚಳ

ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಪ್ರಯಾಣಿಕರ ಬಸ್ ಮೇಲೆ ದಾಳಿ ನಡೆಸಿದ ಭಯೋತ್ಪಾದಕರನ್ನು ಪತ್ತೆಹಚ್ಚಲು ಭದ್ರತಾ ಪಡೆಗಳು ಸೋಮವಾರ ಬೃಹತ್ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ.

ಈ ನಡುವೆ ರಿಯಾಸಿ ಭಯೋತ್ಪಾದನಾ ದಾಳಿಯ ಹಿಂದೆ ಪಾಕಿಸ್ತಾನದ ಎಲ್ಇಟಿ ಇರುವ ಸಾಧ್ಯತೆಯಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ರಿಯಾಸಿ ಭಯೋತ್ಪಾದಕ ದಾಳಿಗೆ ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪು ಲಷ್ಕರ್-ಎ-ತಯ್ಯಿಬಾ (ಎಲ್ಇಟಿ) ಕಾರಣವಾಗಿದೆ. ಭಾನುವಾರ ಸಂಜೆ, ಎಲ್‌ಇಟಿಯ ಟಿಆರ್‌ಎಫ್ ಭಯೋತ್ಪಾದಕ ದಾಳಿಯ ಹೊಣೆ ಹೊತ್ತಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...