‘ತನ್ನ ಪಾದದ ಧೂಳು ತೆಗೆದುಕೊಳ್ಳಲು ಭೋಲೆ ಬಾಬಾ ಕರೆ ಕೊಟ್ಟಿದ್ದೇ ಕಾಲ್ತುಳಿತಕ್ಕೆ ಕಾರಣ’

Date:

ಜುಲೈ 2ರಂದು ಹಾಥರಸ್‌ನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 121 ಮಂದಿ ಸಾವನ್ನಪ್ಪಿದ ಪ್ರಕರಣವನ್ನು ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿ ಬ್ರಜೇಶ್ ಕುಮಾರ್ ಶ್ರೀವಾಸ್ತವ ನೇತೃತ್ವದ ಮೂವರು ಸದಸ್ಯರ ನ್ಯಾಯಾಂಗ ಆಯೋಗವು ತನಿಖೆ ನಡೆಸುತ್ತಿದೆ. ಆಯೋಗವು ಹಾಥರಸ್‌ನ ಸಿಕಂದ್ರ ರಾವು ನಿವಾಸಿಗಳೊಂದಿಗೆ ಸಂವಾದ ನಡೆಸಿದ್ದು, ಅಂದು ನಡೆದ ‘ಸತ್ಸಂಗ’ದಲ್ಲಿ ತನ್ನ ಕಾಲಿನ ಅಡಿಯ ಮಣ್ಣನ್ನು (ಪಾದದ ಧೂಳು) ತೆಗೆದುಕೊಳ್ಳಲು ಭೋಲೆ ಬಾಬಾ ಕರೆ ಕೊಟ್ಟಿದ್ದೇ ಕಾಲ್ತುಳಿತಕ್ಕೆ ಕಾರಣವೆಂದು ಹಲವರು ಹೇಳಿದ್ದಾರೆ ಎಂದು ವರದಿಯಾಗಿದೆ.

- Advertisement -

ಆಯೋಗವು ಸಿಕಂದ್ರ ರಾವುನಲ್ಲಿ ಸುಮಾರು 34 ಹೇಳಿಕೆಗಳನ್ನು ದಾಖಲಿಸಿದೆ. ಭಾನುವಾರ, ಆಯೋಗದ ಎದುರು ತಮ್ಮ ಅಳಲನ್ನು ತೋಡಿಕೊಂಡ ಹೆಚ್ಚಿನ ಸಾಕ್ಷಿಗಳು ಮತ್ತು ನಿವಾಸಿಗಳು, “ಭಕ್ತರು ತಮ್ಮ ಎಲ್ಲ ಕಾಯಿಲೆಗಳಿಂದ ಗುಣಮುಖರಾಗಲು ಮತ್ತು ಎಲ್ಲ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ತಮ್ಮ ಪಾದದ ಕೆಳಗಿನ ಮಣ್ಣನ್ನು ತೆಗೆದುಕೊಳ್ಳಲು ಭೋಲೆ ಬಾಬಾ ಹೇಳಿದ್ದರಿಂದಾಗಿ ಕಾಲ್ತುಳಿತ ಉಂಟಾಗಿದೆ. ಅವರು ಕರೆಯಿಂದಾಗಿ ಹಲವಾರು ಮಹಿಳೆಯರನ್ನೂ ಒಳಗೊಂಡಂತೆ ಜನರು ಅವರ ಕಡೆಗೆ ಧಾವಿಸಿದರು, ನೂಕಾಟ ಸಂಭವಿಸಿ, ಹಲವರು ಕಾಲ್ತುಳಿತದಲ್ಲಿ ಜೀವತೆತ್ತರು” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಮೂಲಗಳ ಪ್ರಕಾರ, ಜನಸಂದಣಿಯನ್ನು ನಿಭಾಯಿಸುವಾಗ ಭೋಲೆ ಬಾಬನ ಖಾಸಗಿ ರಕ್ಷಣಾ ತಂಡವು ಜನರೊಂದಿಗೆ ತುಂಬಾ ಒರಟಾಗಿ ನಡೆದುಕೊಂಡಿದ್ದಾರೆ. ಬಾಬಾ ಹೋಗುತ್ತಿದ್ದ ದಾರಿಯಲ್ಲಿ ತೆರವುಗೊಳಿಸಲು ಜನರನ್ನು ಬಿರುಸಾಗಿ ದಬ್ಬುತ್ತಿದ್ದರು ಎಂದು ಹೇಳಲಾಗಿದೆ.

ಲಕ್ಷಾಂತರ ಮಂದಿ ಸೇರಿದ್ದ ಕಾರ್ಯಕ್ರಮದಲ್ಲಿ ಕಾನೂನು-ಸುವ್ಯವಸ್ಥೆ ನಿರ್ವಹಣೆಗೆ ಕೇಲವೇ ಮಂದಿ ಪೊಲೀಸರನ್ನು ನಿಯೋಜಿಸಿದ್ದದ್ದು ದುರಂತಕ್ಕೆ ಮತ್ತೊಂದು ಕಾರಣ ಎಂದು ಹೇಳಲಾಗಿದೆ.

ನಿವೃತ್ತ ನ್ಯಾಯಮೂರ್ತಿ ಶ್ರೀವಾಸ್ತವ, ನಿವೃತ್ತ ಐಎಎಸ್ ಅಧಿಕಾರಿ ಹೇಮಂತ್ ರಾವ್ ಮತ್ತು ನಿವೃತ್ತ ಐಪಿಎಸ್ ಭವೇಶ್ ಕುಮಾರ್ ಅವರಿರುವ ಆಯೋಗವು ಎರಡು ತಿಂಗಳಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ.

ಏತನ್ಮಧ್ಯೆ, ಅಖಿಲ ಭಾರತೀಯ ಅಖಾರ ಪರಿಷತ್ (ABAP) ಮೂಲಗಳ ಪ್ರಕಾರ, ಮುಂಬರುವ ಮಹಾಕ್ಲುಂಭ-2025ರ ಸಿದ್ಧತೆಗಳ ಕುರಿತು ಚರ್ಚಿಸಲು ಮತ್ತು ನಕಲಿ ಸಂತರ ಪಟ್ಟಿಯನ್ನು ಸಿದ್ದಪಡಿಸಿ, ಆಯೋಗಕ್ಕೆ ನೀಡಲು ಜುಲೈ 18ರಂದು ಪ್ರಯಾಗ್‌ರಾಜ್‌ನಲ್ಲಿ ಕರೆಯಲಾಗಿದೆ.

“ಪ್ರಯಾಗ್‌ರಾಜ್‌ನಲ್ಲಿ 12 ವರ್ಷಗಳಿಗೊಮ್ಮೆ ನಡೆಯುವ ಪೂರ್ಣ ಮಹಾಕುಂಭ ಜಾತ್ರೆಯಲ್ಲಿ ತಮ್ಮ ಶಿಬಿರಗಳನ್ನು ಸ್ಥಾಪಿಸಲು ನಕಲಿ ಮತ್ತು ಸ್ವಯಂ ಘೋಷಿತ ಬಾಬಾಗಳಿಗೆ ಅವಕಾಶ ನೀಡಬಾರದೆಂದು ಕರೆ ನೀಡಲಾಗುವುದು” ಎಂದು ಎಬಿಎಪಿ ಅಧ್ಯಕ್ಷ ಮಹಂತ್ ರವೀಂದ್ರ ಪುರಿ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...