ಮಮತಾರನ್ನು ಸೈಡ್‌ಲೈನ್‌ ಮಾಡಿದ ಬಂಡುಕೋರರು: TMC ಅಧ್ಯಕ್ಷ ಸ್ಥಾನದಿಂದ ದೀದಿ ಪದಚ್ಯುತಿ!

Date:

ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿರುವ ಬೆಳವಣಿಗೆಯೊಂದರಲ್ಲಿ, ತೃಣಮೂಲ ಕಾಂಗ್ರೆಸ್‌ (TMC) ನ ಬಂಡಾಯ ಶಾಸಕರು ಪಕ್ಷದ ಸಂಸ್ಥಾಪಕಿ ಮತ್ತು ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನೇ ಪಕ್ಷದ ಅಧ್ಯಕ್ಷ ಸ್ಥಾನದಿಂದ ಪದಚ್ಯುತಿಗೊಳಿಸಿದ್ದಾರೆ. ನಿನ್ನೆ (ಜೂ.22) ಸೋಮವಾರ ಕೋಲ್ಕತ್ತಾದಲ್ಲಿ ನಡೆದ ಬಂಡಾಯ ಬಣದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಮಾಜಿ ಸಚಿವ ಅರೂಪ್ ರಾಯ್ ಅವರನ್ನು ಪಕ್ಷದ ನೂತನ ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.

- Advertisement -

ಈ ಕುರಿತು ಮಾಹಿತಿ ನೀಡಿರುವ ವಿಧಾನಸಭೆಯ ವಿರೋಧ ಪಕ್ಷದ ನಾಯಕ ರಿತಬ್ರತ ಬ್ಯಾನರ್ಜಿ, ತಾವು ಚುನಾವಣಾ ಆಯೋಗದ ಎಲ್ಲಾ ನಿಯಮಗಳನ್ನು ಪಾಲಿಸಿದ್ದೇವೆ ಮತ್ತು ಶೀಘ್ರವೇ ಆಯೋಗಕ್ಕೆ ಈ ಬಗ್ಗೆ ಅಧಿಕೃತ ಮಾಹಿತಿ ನೀಡುವುದಾಗಿ ತಿಳಿಸಿದ್ದಾರೆ. ಈ ಸಭೆಯಲ್ಲಿ ಸಂದೀಪನ್ ಸಹಾ, ಜಾವೇದ್ ಖಾನ್ ಮತ್ತು ರಿತಬ್ರತ ಬ್ಯಾನರ್ಜಿ ಅವರನ್ನು ಪ್ರಧಾನ ಕಾರ್ಯದರ್ಶಿಗಳನ್ನಾಗಿಯೂ, ಫಿರ್ಹಾದ್ ಹಕೀಮ್, ಅರೂಪ್ ಬಿಸ್ವಾಸ್ ಹಾಗೂ ರಥಿನ್ ಘೋಷ್ ಅವರನ್ನು ಉಪಾಧ್ಯಕ್ಷರನ್ನಾಗಿಯೂ ಮತ್ತು ಅಖ್ರುಜ್ಜಮಾನ್ ಅವರನ್ನು ನೂತನ ಖಜಾಂಚಿಯನ್ನಾಗಿಯೂ ನೇಮಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

2026ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು ಬಿಜೆಪಿ ವಿರುದ್ಧ ಸೋಲುಂಡ ನಂತರ ಈ ಬಿಕ್ಕಟ್ಟು ತೀವ್ರಗೊಂಡಿದ್ದು, ಪ್ರಸ್ತುತ ವಿಧಾನಸಭೆಯ ಒಟ್ಟು 80 ತೃಣಮೂಲ ಶಾಸಕರ ಪೈಕಿ 65 ಮಂದಿ ರಿತಬ್ರತ ಬ್ಯಾನರ್ಜಿ ಅವರ ಬಣದ ಬೆಂಬಲಕ್ಕೆ ನಿಂತಿದ್ದರೆ, ಮಮತಾ ಬ್ಯಾನರ್ಜಿ ಅವರೊಂದಿಗೆ ಕೇವಲ 14 ಶಾಸಕರು ಮಾತ್ರ ಉಳಿದುಕೊಂಡಿದ್ದಾರೆ. ಇದಲ್ಲದೆ ಲೋಕಸಭೆಯ ಪಕ್ಷದ 28 ಸಂಸದರ ಪೈಕಿ 20 ಮಂದಿ ಮಮತಾ ಬ್ಯಾನರ್ಜಿಯಿಂದ ದೂರ ಸರಿದಿದ್ದು, ಅವರು ‘ನ್ಯಾಷನಲಿಸ್ಟ್ ಸಿಟಿಜನ್ಸ್ ಪಾರ್ಟಿ’ ಜೊತೆ ವಿಲೀನಗೊಂಡು ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಬೆಂಬಲ ಸೂಚಿಸಲು ನಿರ್ಧರಿಸಿದ್ದಾರೆ.

ಇದನ್ನೂ ಓದಿ: ಮೊಹರಂ ಮೆರವಣಿಗೆ; ‘ಪಾಕಿಸ್ತಾನ್ ಜಿಂದಾಬಾದ್’ ಕೂಗಿ ಮುಸ್ಲಿಮರ ಮೇಲೆ ಆರೋಪ ಹೊರಿಸಿದ ಹಿಂದುತ್ವವಾದಿಗಳ ಬಂಧನ

ಈ ಬೆಳವಣಿಗೆಗಳಿಗೆ ಪ್ರತಿಕ್ರಿಯಿಸಿರುವ ಮಮತಾ ಬ್ಯಾನರ್ಜಿ ಅವರ ನಿಷ್ಠಾವಂತ ಶಾಸಕ ಕುನಾಲ್ ಘೋಷ್, ಮಮತಾ ಬ್ಯಾನರ್ಜಿ ಇಲ್ಲದೆ ತೃಣಮೂಲ ಕಾಂಗ್ರೆಸ್ ಅಸ್ತಿತ್ವದಲ್ಲಿರಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಪಕ್ಷದಿಂದ ಉಚ್ಚಾಟಿತರಾದವರು ನಡೆಸುತ್ತಿರುವ ಈ ಸಭೆಯನ್ನು ಅವರು ಕೇವಲ ಹಾಸ್ಯಮಯವಾದ ಸರ್ಕಸ್ ಎಂದು ಟೀಕಿಸಿದ್ದು, ಈ ವಿಷಯ ನ್ಯಾಯಾಲಯದಲ್ಲಿರುವುದರಿಂದ ಕಾನೂನುಬದ್ಧವಾಗಿ ಸತ್ಯ ಹೊರಬರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 1998ರಲ್ಲಿ ಮಮತಾ ಬ್ಯಾನರ್ಜಿ ಅವರಿಂದ ಸ್ಥಾಪಿಸಲ್ಪಟ್ಟ ಪಕ್ಷವು ಇಂದು ಇಬ್ಭಾಗವಾಗಿರುವುದು ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಸಮುದಾಯಗಳ ಸಮಸ್ಯೆಗಳಿಗೆ ಸಂಘಟಿತ ಹೋರಾಟ ಅಗತ್ಯ

ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿರುವ ಕರ್ನಾಟಕ ರಾಜ್ಯ ಬಲಗೈ ಸಮುದಾಯಗಳ ಒಕ್ಕೂಟದ ಮೂಲಕ...

ಬೀದರ್‌ | ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿಯಿಂದ ಅಣಕು ಶವಯಾತ್ರೆ

ರಾಜ್ಯ ಕಾಂಗ್ರೆಸ್ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಹಾಗೂ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿವೆ...

ಬೀದರ್‌ | ವಿವಿಧ ಯೋಜನೆಗಳ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ 2026–27ನೇ ಸಾಲಿನ ಧನಶ್ರೀ,...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್ ಶಾ ಏನು?

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ...