ಸರ್ಕಾರಿ ಉದ್ಯೋಗಕ್ಕೆ ನೇಮಕಾತಿ: 100 ಅಂಕದ ಪರೀಕ್ಷೆಯಲ್ಲಿ 101.66 ಮಾರ್ಕ್ಸ್ ಪಡೆದ ಅಭ್ಯರ್ಥಿ

Date:

ಸರ್ಕಾರಿ ಉದ್ಯೋಗಗಳ ನೇಮಕಾತಿಗಾಗಿ ಮಧ್ಯಪ್ರದೇಶದಲ್ಲಿ ನಡೆದ ಪರೀಕ್ಷೆಯಲ್ಲಿ ಅಭ್ಯರ್ಥಿಯೊಬ್ಬ 100 ಅಂಕಗಳಿಗೆ 101.66 ಅಂಕಗಳನ್ನು ಗಳಿಸಿರುವ ವಿಚಿತ್ರ ಘಟನೆ ನಡೆದಿದೆ. ಪರೀಕ್ಷೆಯಲ್ಲಿ ‘ಸಾಮಾನ್ಯೀಕರಣ’ ಪ್ರಕ್ರಿಯೆ ಅಳವಡಿಸಿಕೊಂಡಿರುವುದು ಈ ಯಡವಟ್ಟಿಗೆ ಕಾರಣವೆಂದು ಪರೀಕ್ಷೆ ಬರೆದಿದ್ದ ಅಭ್ಯರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.

- Advertisement -

ಇತ್ತೀಚೆಗೆ ಪ್ರಕಟವಾದ, ಅರಣ್ಯ ಮತ್ತು ಕಾರಾಗೃಹ ಇಲಾಖೆಗಳ ಜಂಟಿ ನೇಮಕಾತಿ ಪರೀಕ್ಷೆಯ ಫಲಿತಾಂಶದಲ್ಲಿ ಅಭ್ಯರ್ಥಿಯೊಬ್ಬರು ಒಟ್ಟು 100 ಅಂಕಗಳಿಗೆ 101.66 ಅಂಕಗಳನ್ನು ಪಡೆದಿದ್ದಾರೆ. ಪರೀಕ್ಷೆ ನಡೆದ ಅಂಕಗಳಿಗಿಂತಲೂ ಹೆಚ್ಚು ಅಂಕಗಳನ್ನು ಪಡೆದಿದ್ದು, ಆತನನ್ನು ಅಗ್ರ ಸ್ಥಾನದಲ್ಲಿ ಇರಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಫಲಿತಾಂಶದ ಪ್ರಕಟಣೆಯ ನಂತರ, ಪರೀಕ್ಷಾ ಮಂಡಳಿಯು ನಿಯಮಗಳ ಪ್ರಕಾರ ನೇಮಕಾತಿ ಪರೀಕ್ಷೆಯಲ್ಲಿ ‘ಸಾಮಾನ್ಯೀಕರಣ’ದ ಪ್ರಕ್ರಿಯೆಯನ್ನು ಅಳವಡಿಸಿಕೊಂಡಿದೆ ಎಂದು ಸ್ಪಷ್ಟಪಡಿಸಿದೆ.

ಈ ಗೊಂದಲದ ವಿರುದ್ಧ ಉದ್ಯೋಗಾಕಾಂಕ್ಷಿ ಅಭ್ಯರ್ಥಿಗಳು ಇಂಧೋರ್‌ನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ನೇಮಕಾತಿ ಪರೀಕ್ಷೆಯಲ್ಲಿ ವಂಚನೆ ನಡೆದಿದೆ. ಈ ಬಗ್ಗೆ ನ್ಯಾಯಯುತ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

“ನೇಮಕಾತಿ ಪರೀಕ್ಷೆಯಲ್ಲಿ ಅಳವಡಿಸಿಕೊಂಡಿರುವ ಸಾಮಾನ್ಯೀಕರಣ ಪ್ರಕ್ರಿಯೆಯಿಂದ ಅಭ್ಯರ್ಥಿಯೊಬ್ಬರು ಒಟ್ಟು ಅಂಕಗಳಿಗಿಂತ ಹೆಚ್ಚಿನ ಅಂಕ ಪಡೆದಿರುವುದು ರಾಜ್ಯದ ಇತಿಹಾಸದಲ್ಲಿ ಇದೇ ಮೊದಲು. ನಾವು ಅನ್ಯಾಯದ ಪ್ರಕ್ರಿಯೆಯ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದೇವೆ” ಎಂದು ಪ್ರತಿಭಟನಾನಿರತ ಗೋಪಾಲ್‌ ಪ್ರಜಾಪತ್ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...