ಭಾರತ-ಪಾಕ್ ಸಂಘರ್ಷ | ಡ್ರೋನ್ ಪತ್ತೆ, ಬ್ಲ್ಯಾಕ್‌ಔಟ್‌ ಬಳಿಕ ರಾಜಸ್ಥಾನದ ಕೆಲವೆಡೆ ರೆಡ್ ಅಲರ್ಟ್

Date:

ರಾತ್ರಿ ವೇಳೆ ಡ್ರೋನ್ ಪತ್ತೆಯಾದ ಬಳಿಕ ಮತ್ತು ಬ್ಲ್ಯಾಕೌಟ್‌ಗಳ ನಂತರ, ಶನಿವಾರ ಬೆಳಿಗ್ಗೆ ರಾಜಸ್ಥಾನದ ಗಡಿ ಜಿಲ್ಲೆ ಬಾರ್ಮರ್‌ನಲ್ಲಿ ಮತ್ತೆ ಸೈರನ್‌ಗಳು ಕೇಳಿಬಂದಿದೆ. ರೆಡ್ ಅಲರ್ಟ್ ಘೋಷಿಸಲಾಗಿದೆ. ಗಂಗಾನಗರ ಜಿಲ್ಲೆಯಲ್ಲಿಯೂ ರೆಡ್ ಅಲರ್ಟ್ ನೀಡಲಾಗಿದೆ.

- Advertisement -

ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಬುಧವಾರ ಮುಂಜಾನೆ ಪಾಕಿಸ್ತಾನ ಮತ್ತು ಪಿಒಕೆಯಲ್ಲಿನ ಒಂಬತ್ತು ಭಯೋತ್ಪಾದಕ ನೆಲೆಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇದಾದ ಬಳಿಕ ಭಾರತ ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಹೆಚ್ಚಾಗಿದೆ. ಪರಸ್ಪರ ದಾಳಿಗಳು ನಡೆಯುತ್ತಿವೆ. ಗಡಿ ರಾಜ್ಯಗಳಲ್ಲಿ ಎಚ್ಚರಿಕೆ ನೀಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದನ್ನು ಓದಿದ್ದೀರಾ? ಆಪರೇಷನ್ ಸಿಂಧೂರ | ಕಾರ್ಯಾಚರಣೆ ಮಾಹಿತಿ ವಿವರಿಸಿದ ಸೋಫಿಯಾ ಖುರೇಶಿ ಬೆಳಗಾವಿಯ ಸೊಸೆ

ರಾಜಸ್ಥಾನದ ಕೆಲವೆಡೆ ರೆಡ್ ಅಲರ್ಟ್ ಘೋಷಿಸಿರುವ ಬಗ್ಗೆ ಪ್ರಕಟಣೆ ಮೂಲಕ ಮಾಹಿತಿ ನೀಡಿದ ಬಾರ್ಮರ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಟೀನಾ ದಾಬಿ, “ಹೈ ರೆಡ್ ಅಲರ್ಟ್. ಪ್ರತಿಯೊಬ್ಬರೂ ತಕ್ಷಣ ತಮ್ಮ ಮನೆಗಳಿಗೆ ಹೋಗಬೇಕೆಂದು ಆದೇಶಿಸಲಾಗಿದೆ. ಮಾರುಕಟ್ಟೆಗಳನ್ನು ಮುಚ್ಚಬೇಕು ಮತ್ತು ಎಲ್ಲಾ ಚಲನೆಯನ್ನು ನಿಲ್ಲಿಸಬೇಕು. ತುರ್ತು, ತಕ್ಷಣ ಜಾರಿಗೊಳಿಸಬೇಕು” ಎಂದು ತಿಳಿಸಿದ್ದಾರೆ. ಧ್ವನಿ ಸಂದೇಶವನ್ನು ಸಹ ಬಿಡುಗಡೆ ಮಾಡಿದ್ದಾರೆ.

ಬಾರ್ಮರ್ ನಗರದ ಮಾರುಕಟ್ಟೆಯಲ್ಲಿ ಬೆಳಿಗ್ಗೆ ಅಂಗಡಿಗಳು ತೆರೆದಿದ್ದರೂ, ಪೊಲೀಸರು ಅಂಗಡಿಯಿಂದ ಅಂಗಡಿಗೆ ಹೋಗಿ ಅವುಗಳನ್ನು ಮುಚ್ಚುವಂತೆ ಹೇಳಿದ್ದಾರೆ. ಸೈರನ್‌ಗಳು ಮೊಳಗುತ್ತಿದ್ದಂತೆ ಮಾರುಕಟ್ಟೆಗಳಿಂದ ಜನರು ಮನೆಗೆ ಧಾವಿಸಿದ್ದಾರೆ ಎಂದು ವರದಿಯಾಗಿದೆ.

ಡ್ರೋನ್ ಪತ್ತೆಯಾಗಿರುವುದರಿಂದ ಪಾಕಿಸ್ತಾನ ರಾತ್ರಿ ದಾಳಿ ನಡೆಸಲು ಯತ್ನಿಸಿದೆ ಎಂದು ಶಂಕಿಸಲಾಗಿದೆ. ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಜೈಸಲ್ಮೇರ್‌ನ ಶಂಕರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ರಾನ್ ಸಿಂಗ್, “ದಾಳಿ ನಡೆಸಲು ಯತ್ನಿಸಿದ ಸುಳಿವು ಕಂಡುಬಂದಿದೆ. ಹತ್ತಿರದ ಹಳ್ಳಿಗಳಿಂದ ಜನರನ್ನು ಸ್ಥಳಾಂತರಿಸಲಾಗಿದೆ” ಎಂದು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...