ಕಲ್ಕತ್ತಾ ಹೈಕೋರ್ಟ್‌ನಿಂದ ಅಭಿಷೇಕ್ ಬ್ಯಾನರ್ಜಿಗೆ ರಿಲೀಫ್: ಕಚೇರಿ ತೆರವು ಕಾರ್ಯಾಚರಣೆಗೆ ತಡೆ

Date:

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಅಭಿಷೇಕ್ ಬ್ಯಾನರ್ಜಿ ಅವರ ಲೋಕಸಭಾ ಕ್ಷೇತ್ರದ ಕಚೇರಿಯನ್ನು ತೆರವುಗೊಳಿಸುವ ಕಾರ್ಯಾಚರಣೆಗೆ ಕಲ್ಕತ್ತಾ ಹೈಕೋರ್ಟ್ ಭಾನುವಾರ ತಕ್ಷಣದ ತಡೆ ನೀಡಿದೆ. ಮುಂದಿನ ವಿಚಾರಣೆ ಅಥವಾ ಮುಂದಿನ ಆದೇಶದವರೆಗೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಎಲ್ಲಾ ಕಕ್ಷಿದಾರರಿಗೆ ನ್ಯಾಯಾಲಯವು ನಿರ್ದೇಶನ ನೀಡಿದೆ.

- Advertisement -

ದಕ್ಷಿಣ 24 ಪರಗಣ ಜಿಲ್ಲೆಯ ಆಮ್ತಲಾದಲ್ಲಿರುವ ಕಚೇರಿಯ ಮೇಲೆ ಬುಲ್ಡೋಜರ್ ಕಾರ್ಯಾಚರಣೆ ಆರಂಭವಾದ ಕೆಲವೇ ಗಂಟೆಗಳಲ್ಲಿ, ಬ್ಯಾನರ್ಜಿ ಅವರ ಒಡೆತನದ ‘ಲೀಪ್ಸ್ ಅಂಡ್ ಬೌಂಡ್ಸ್’ (Leaps and Bounds) ಕಂಪನಿಯು ಕಾರ್ಯಾಚರಣೆ ನಿಲ್ಲಿಸುವಂತೆ ಕೋರಿ ತುರ್ತು ಅರ್ಜಿಯೊಂದಿಗೆ ಹೈಕೋರ್ಟ್ ಮೆಟ್ಟಿಲೇರಿತ್ತು. ಕಚೇರಿ ಜಾಗದ ಬಗ್ಗೆ ಅಧಿಕೃತ ಹಾಗೂ ಮಾನ್ಯವಾದ ದಾಖಲೆಗಳಿದ್ದರೂ ಕಟ್ಟಡವನ್ನು ಕೆಡವಲಾಗುತ್ತಿದೆ ಎಂದು ಅರ್ಜಿದಾರರು ವಾದಿಸಿದ್ದರು. ನ್ಯಾಯಮೂರ್ತಿ ರಾಜಾ ಬಸು ಚೌಧರಿ ಅವರ ಪೀಠವು ಈ ತುರ್ತು ಅರ್ಜಿಯ ವಿಚಾರಣೆ ನಡೆಸಿ ತಡೆ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

ಈ ಕಾರ್ಯಾಚರಣೆಯು ತೀವ್ರ ರಾಜಕೀಯ ಸಂಘರ್ಷಕ್ಕೂ ಕಾರಣವಾಗಿದೆ. ನ್ಯಾಯಾಲಯದಲ್ಲಿ ಪ್ರಕರಣ ಬಾಕಿ ಇರುವಾಗಲೇ ಬಿಜೆಪಿ ನಾಯಕರ ಸಮ್ಮುಖದಲ್ಲಿ ಈ ತೆರವು ಕಾರ್ಯಾಚರಣೆ ನಡೆಸಲಾಗಿದೆ ಎಂದು ಟಿಎಂಸಿ ಆರೋಪಿಸಿದೆ. ಕಾರ್ಯಾಚರಣೆ ಕುರಿತು ಪ್ರತಿಕ್ರಿಯಿಸಿರುವ ಅಭಿಷೇಕ್ ಬ್ಯಾನರ್ಜಿ, ಪಶ್ಚಿಮ ಬಂಗಾಳ ಪೊಲೀಸರು ಕಾನೂನುಬಾಹಿರವಾಗಿ ವರ್ತಿಸಿದ್ದಾರೆ ಎಂದು ದೂರಿದ್ದಾರೆ.

ಈ ಕಾರ್ಯಾಚರಣೆಯನ್ನು ‘ಸಮವಸ್ತ್ರದಲ್ಲಿರುವ ಕಳ್ಳರು’ ಮಾಡಿದ ಕೃತ್ಯ ಎಂದು ಹೇಳಿರುವ ಅವರು, “ಬಿಜೆಪಿ ಗೂಂಡಾಗಳೊಂದಿಗೆ ಸೇರಿ ಪೊಲೀಸರು ಕಚೇರಿಯಲ್ಲಿದ್ದ ಲ್ಯಾಪ್‌ಟಾಪ್, ಪ್ರಿಂಟರ್, ಪೀಠೋಪಕರಣಗಳು ಹಾಗೂ ಪ್ರಮುಖ ದಾಖಲೆಗಳನ್ನು ಹೊತ್ತೊಯ್ದಿದ್ದಾರೆ” ಎಂದು ಆರೋಪಿಸಿದ್ದಾರೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ ಬುಲ್ಡೋಜರ್ ಕಾರ್ಯಾಚರಣೆಗಳನ್ನು ಅಸಂವಿಧಾನಿಕ ಎಂದು ಹೇಳಿದ್ದರೂ ಆಮ್ತಲಾದಲ್ಲಿ ಕಚೇರಿ ಕೆಡವಲಾಗಿದೆ, ಇದು ಬಂಗಾಳದಲ್ಲಿನ ಅರಾಜಕತೆಗೆ ಸಾಕ್ಷಿಯಾಗಿದೆ ಎಂದು ಅವರು ಎಕ್ಸ್ (X) ಖಾತೆಯಲ್ಲಿ ಅಸಮಾಧಾನ ಹೊರಹಾಕಿದ್ದಾರೆ.

ವಿಧಾನಸಭಾ ಚುನಾವಣೆ ಫಲಿತಾಂಶದ ಬಳಿಕ ಇದೇ ಕಚೇರಿಯ ಮೇಲೆ ದಾಳಿ ನಡೆದಾಗ ಪೊಲೀಸರು ಯಾವುದೇ ಕ್ರಮ ಕೈಗೊಂಡಿರಲಿಲ್ಲ ಎಂದು ಆರೋಪಿಸಿ ಟಿಎಂಸಿ ಈ ಹಿಂದೆಯೂ ಹೈಕೋರ್ಟ್ ಮೊರೆ ಹೋಗಿತ್ತು. ಆ ಅರ್ಜಿಯು ನ್ಯಾಯಮೂರ್ತಿ ಸೌಗತ ಭಟ್ಟಾಚಾರ್ಯ ಅವರ ಪೀಠದ ಮುಂದಿದ್ದರೂ, ಇನ್ನೂ ವಿಚಾರಣೆಗೆ ಬಂದಿರಲಿಲ್ಲ. ಭಾನುವಾರದ ವಿಚಾರಣೆಯ ಬಳಿಕ ನ್ಯಾಯಾಲಯವು, ವಿವಾದಿತ ಸ್ಥಳದಲ್ಲಿ ಮುಂದಿನ ವಿಚಾರಣೆಯವರೆಗೆ ಯಾವುದೇ ತೆರವು ಕಾರ್ಯವನ್ನು ಮುಂದುವರಿಸದಂತೆ ಆದೇಶಿಸುವ ಮೂಲಕ ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಈ ಪ್ರಕರಣದಲ್ಲಿ ಬ್ಯಾನರ್ಜಿ ಅವರಿಗೆ ತಾತ್ಕಾಲಿಕ ರಿಲೀಫ್ ಒದಗಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾತ್ರೋರಾತ್ರಿ ತುರ್ತು ವಿಚಾರಣೆ ಕೋರಿ ದೆಹಲಿ ಹೈಕೋರ್ಟ್ ಮೊರೆಹೋದ ಸಿಜೆಪಿ ನಾಯಕರು

ತಮ್ಮ ನ್ಯಾಯಾಂಗ ಬಂಧನ ವಿಸ್ತರಣೆಯನ್ನು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ)...

ಹೊರದೇಶಗಳ ದೊಂಬಿಯನ್ನು ಭಾರತದ ಯುವ ಹೋರಾಟಕ್ಕೆ ಸಮೀಕರಿಸುತ್ತಿರುವ ʼಮಡಿಲ ಮಾಧ್ಯಮʼಗಳು; ಇದೇನಾ ಪತ್ರಿಕೋದ್ಯಮ?

ಹೊರದೇಶಗಳ ಬೀದಿಗಳಲ್ಲಿ ನಡೆಯುವ ದೊಂಬಿ, ಲೂಟಿಗೂ, ಭಾರತದ ಯುವಕರು ಸಂವಿಧಾನದತ್ತ ಹಕ್ಕಿಗಾಗಿ...

ಪ್ರಧಾನಿ ಮೋದಿ ಜೊತೆ ನಾಳೆ ಖರ್ಗೆ ಸಭೆ: ಎಸ್‌ಐಆರ್, ಕ್ಷೇತ್ರ ಪುನರ್‌ವಿಂಗಡಣೆ, ಮಹಿಳಾ ಮೀಸಲಾತಿ ಕುರಿತು ಚರ್ಚೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್), ಕ್ಷೇತ್ರ ಮರುವಿಂಗಡಣೆ ಮತ್ತು...

ಏಷ್ಯನ್ ಪ್ಯಾರಾ ಗೇಮ್ಸ್: ಮಹಿಳೆಯರ 200 ಮೀಟರ್ಸ್ ಓಟದಲ್ಲಿ ಸಿಮ್ರಾನ್‌ಗೆ ಚಿನ್ನ, ತೇಜಲ್‌ಬೆನ್‌ಗೆ ಕಂಚು

ಮಂಗಳವಾರ ಜಪಾನಿನ ನಗೋಯಾದಲ್ಲಿ ನಡೆದ ಏಷ್ಯನ್ ಪ್ಯಾರಾ ಗೇಮ್ಸ್‌ನ ಮಹಿಳೆಯರ 200...