ಅತ್ಯಾಚಾರ ಪ್ರಕರಣ: ಆಸಾರಾಮ್‌ಗೆ 20 ದಿನಗಳ ಪರೋಲ್ ಮಂಜೂರು ಮಾಡಿದ ರಾಜಸ್ಥಾನ ಹೈಕೋರ್ಟ್

Date:

ಅಪ್ರಾಪ್ತೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಸ್ವಯಂಘೋಷಿತ ದೇವಮಾನವ ಆಸಾರಾಮ್‌ಗೆ ರಾಜಸ್ಥಾನ ಹೈಕೋರ್ಟ್ 20 ದಿನಗಳ ನಿಯಮಿತ ಪರೋಲ್ ಮಂಜೂರು ಮಾಡಿದೆ. ಪರೋಲ್ ಅರ್ಜಿಯನ್ನು ತಿರಸ್ಕರಿಸಲು ರಾಜ್ಯ ಸರ್ಕಾರ ನೀಡಿದ್ದ ಕಾರಣಗಳು ಸಮರ್ಥನೀಯವಾಗಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

- Advertisement -

ರಾಜಸ್ಥಾನ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸಂಜೀವ್ ಪ್ರಕಾಶ್ ಶರ್ಮಾ ಮತ್ತು ನ್ಯಾಯಮೂರ್ತಿ ಸಂಜೀತ್ ಪುರೋಹಿತ್ ಅವರಿದ್ದ ವಿಭಾಗೀಯ ಪೀಠವು ಸೋಮವಾರ ಈ ಆದೇಶವನ್ನು ಹೊರಡಿಸಿದೆ. ಆಸಾರಾಮ್‌ಗೆ ₹50,000 ಮೌಲ್ಯದ ವೈಯಕ್ತಿಕ ಬಾಂಡ್ ಹಾಗೂ ತಲಾ ₹25,000 ಮೊತ್ತದ ಇಬ್ಬರು ಶ್ಯೂರಿಟಿಗಳನ್ನು (ಜಾಮೀನುದಾರರು) ಒದಗಿಸುವ ಷರತ್ತಿನ ಮೇಲೆ ನ್ಯಾಯಾಲಯವು ಈ ಮೊದಲ ನಿಯಮಿತ ಪರೋಲ್ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

“ಜೋಧ್‌ಪುರ ಕೇಂದ್ರ ಕಾರಾಗೃಹದಲ್ಲಿರುವ ಅಪರಾಧಿಯು ಈಗಾಗಲೇ 13 ವರ್ಷ, ಒಂದು ತಿಂಗಳು ಮತ್ತು 24 ದಿನಗಳ ಕಾಲ ಜೈಲುವಾಸ ಅನುಭವಿಸಿದ್ದಾನೆ. ಈ ಹಿಂದೆ ಹಲವು ಬಾರಿ ಆತ ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರೂ ಯಾವುದೇ ಷರತ್ತುಗಳನ್ನು ಉಲ್ಲಂಘಿಸಿಲ್ಲ. ಪರಾರಿಯಾಗಲು ಯತ್ನಿಸಿದ, ಸಾಕ್ಷಿಗಳ ಮೇಲೆ ಪ್ರಭಾವ ಬೀರಿದ ಅಥವಾ ಆ ಅವಧಿಯಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದಿರುವ ಯಾವುದೇ ದಾಖಲೆಗಳಿಲ್ಲ” ಎಂದು ನ್ಯಾಯಾಲಯವು ತನ್ನ ಆದೇಶದಲ್ಲಿ ಆತನ ಸನ್ನಡತೆಯನ್ನು ಉಲ್ಲೇಖಿಸಿದೆ.

ಆಸಾರಾಮ್ ಬಿಡುಗಡೆಯಾದರೆ ಪರಾರಿಯಾಗಬಹುದು, ರಾಜಸ್ಥಾನದ ಹೊರಗಡೆ ಆತನ ವಿರುದ್ಧ ಕ್ರಿಮಿನಲ್ ಪ್ರಕರಣಗಳು ಬಾಕಿ ಇವೆ ಮತ್ತು ಗುಜರಾತ್‌ನಲ್ಲೂ ಶಿಕ್ಷೆಗೆ ಗುರಿಯಾಗಿದ್ದಾನೆ ಎಂದು ರಾಜ್ಯ ಸರ್ಕಾರವು ಪರೋಲ್ ನೀಡುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಆತನಿಗೆ ವೈದ್ಯಕೀಯ ಚಿಕಿತ್ಸೆಯ ಅಗತ್ಯವಿದೆ, ಪರೋಲ್ ಪಡೆಯಲು ಆತ ವೈದ್ಯಕೀಯವಾಗಿ ಫಿಟ್ ಇಲ್ಲ. ಆತ ಹೊರಬಂದರೆ ಸಂತ್ರಸ್ತೆಯ ಕುಟುಂಬಕ್ಕೆ ಬೆದರಿಕೆ ಇದೆ ಎಂದೂ ಸರ್ಕಾರ ವಾದಿಸಿತ್ತು.

ಆದರೆ, ಸರ್ಕಾರದ ಈ ವಾದಗಳು ಕೇವಲ ಊಹಾಪೋಹಗಳಿಂದ ಕೂಡಿವೆ ಮತ್ತು ಸೂಕ್ತ ಸಾಕ್ಷ್ಯಾಧಾರಗಳಿಲ್ಲ ಎಂದು ನ್ಯಾಯಾಲಯ ತಳ್ಳಿಹಾಕಿದೆ. ಬೇರೆ ರಾಜ್ಯಗಳಲ್ಲಿರುವ ಪ್ರಕರಣಗಳನ್ನು ಅಥವಾ ಶಿಕ್ಷೆಯನ್ನು ಮುಂದಿಟ್ಟುಕೊಂಡು ‘ರಾಜಸ್ಥಾನ ಕೈದಿಗಳ ಪರೋಲ್ ಬಿಡುಗಡೆ ನಿಯಮಗಳ’ ಅಡಿ ಪರೋಲ್ ನಿರಾಕರಿಸುವಂತಿಲ್ಲ ಎಂದು ಸ್ಪಷ್ಟಪಡಿಸಿದೆ.

ಇನ್ನೊಂದೆಡೆ, ವೈದ್ಯಕೀಯ ಕಾರಣಗಳಿಗಾಗಿ ಮಧ್ಯಂತರ ಜಾಮೀನು ಕೋರಿ ಆಸಾರಾಮ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ನಡೆಸಿದೆ. ಆಸಾರಾಮ್‌ಗೆ ಆಸ್ಪತ್ರೆಗೆ ದಾಖಲಾಗುವ ಅಗತ್ಯವಿಲ್ಲ, ಆದರೆ ದಿನದ 24 ಗಂಟೆಯೂ ವೈದ್ಯಕೀಯ ನೆರವಿನ ಅಗತ್ಯವಿದೆ ಎಂದು ದೆಹಲಿಯ ಏಮ್ಸ್ (AIIMS) ವೈದ್ಯಕೀಯ ಸಮಿತಿಯು ನ್ಯಾಯಾಲಯಕ್ಕೆ ವರದಿ ನೀಡಿದೆ. ಪ್ರಕರಣದ ಮುಂದಿನ ವಿಚಾರಣೆಯನ್ನು ಆಗಸ್ಟ್ 6ಕ್ಕೆ ಮುಂದೂಡಿದೆ.

2013ರಲ್ಲಿ ರಾಜಸ್ಥಾನದ ಜೋಧ್‌ಪುರದ ಆಶ್ರಮದಲ್ಲಿ ಕೆಟ್ಟ ಶಕ್ತಿಗಳನ್ನು ಓಡಿಸುವ ಪೂಜೆಯ ನೆಪದಲ್ಲಿ ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ಸೆಪ್ಟೆಂಬರ್ 2013ರಲ್ಲಿ ಆಸಾರಾಮ್‌ನನ್ನು ಬಂಧಿಸಲಾಗಿತ್ತು. ಏಪ್ರಿಲ್ 2018ರಲ್ಲಿ ಜೋಧ್‌ಪುರದ ವಿಶೇಷ ನ್ಯಾಯಾಲಯವು ಪೋಕ್ಸೊ (POCSO) ಕಾಯ್ದೆಯಡಿ ಆತನನ್ನು ದೋಷಿ ಎಂದು ತೀರ್ಮಾನಿಸಿ ಜೀವಾವಧಿ ಶಿಕ್ಷೆ ವಿಧಿಸಿತ್ತು. ಈ ವರ್ಷದ ಮೇ 27ರಂದು ರಾಜಸ್ಥಾನ ಹೈಕೋರ್ಟ್ ಈ ಶಿಕ್ಷೆಯನ್ನು ಎತ್ತಿಹಿಡಿದಿತ್ತು. ಅಲ್ಲದೆ, ಗುಜರಾತ್‌ನ ಗಾಂಧಿನಗರ ನ್ಯಾಯಾಲಯವು ಜನವರಿ 2023ರಲ್ಲಿ ಮತ್ತೋರ್ವ ಮಹಿಳಾ ಭಕ್ತೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿಯೂ ಆಸಾರಾಮ್‌ಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‌ಮೈಸೂರು ವಿವಿ ಸಂಜೆ ಕಾಲೇಜು: ಸಾಂಸ್ಕೃತಿಕ ಹಾಗೂ NSS ಚಟುವಟಿಕೆಗಳಿಗೆ ಚಾಲನೆ

ಮೈಸೂರು ವಿವಿ ಸಂಜೆ ಕಾಲೇಜಿನ ಪಠ್ಯೇತರ ಚಟುವಟಿಕೆಗಳ ಸಮಿತಿಯಿಂದ 2026-27ನೇ ಶೈಕ್ಷಣಿಕ...

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10 ದಿನಗಳಲ್ಲಿ ಘೋಷಣೆ – ಶಾಸಕ ಅಶೋಕ ಪಟ್ಟಣ

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ ಭವಿಷ್ಯ!

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ,...

ಮಂಗಳೂರಿನಲ್ಲಿ ಕಿದ್ವಾಯಿ, ಜಯದೇವ ಆಸ್ಪತ್ರೆಗಳ ಶಾಖೆ ನಿರ್ಮಾಣಕ್ಕೆ ಸರ್ಕಾರ ಅಸ್ತು

"ಮಂಗಳೂರಿನಲ್ಲಿ ಕಿದ್ವಾಯಿ, ಜಯದೇವ ಆಸ್ಪತ್ರೆಗಳ ಶಾಖೆಗಳ ನಿರ್ಮಾಣಕ್ಕೆ ರಾಜ್ಯ ಸಚಿವ ಸಂಪುಟ...