ಗುಪ್ತ ಶುಲ್ಕಗಳಿಗೆ ಕೇಂದ್ರದ ತಡೆ: ವಿಮಾನದಲ್ಲಿ ಶೇ.60ರಷ್ಟು ಸೀಟುಗಳ ಆಯ್ಕೆ ಸಂಪೂರ್ಣ ಉಚಿತ

Date:

ಭಾರತದಲ್ಲಿ ವಿಮಾನ ಪ್ರಯಾಣಿಕರಿಗೆ ಹೆಚ್ಚುವರಿ ಶುಲ್ಕಗಳ ಹೊರೆಯಿಂದ ಶೀಘ್ರದಲ್ಲೇ ದೊಡ್ಡ ರಿಲೀಫ್ ಸಿಗುವ ನಿರೀಕ್ಷೆಯಿದೆ. ಟಿಕೆಟ್ ಬುಕಿಂಗ್ ಅಥವಾ ವೆಬ್ ಚೆಕ್-ಇನ್ ಸಮಯದಲ್ಲಿ ಸೀಟು ಆಯ್ಕೆಯ ಮೇಲೆ ವಿಮಾನಯಾನ ಸಂಸ್ಥೆಗಳು ವಿಧಿಸುತ್ತಿದ್ದ ಗುಪ್ತ ಶುಲ್ಕಗಳಿಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.

- Advertisement -

ಪ್ರಯಾಣಿಕರ ಹಕ್ಕುಗಳನ್ನು ಬಲಪಡಿಸುವ ಮತ್ತು ವಿಮಾನಯಾನವನ್ನು ಹೆಚ್ಚು ಪಾರದರ್ಶಕವಾಗಿಸುವ ನಿಟ್ಟಿನಲ್ಲಿ ಕನಿಷ್ಠ ಶೇ. 60ರಷ್ಟು ಸೀಟುಗಳನ್ನು ಯಾವುದೇ ಹೆಚ್ಚುವರಿ ಶುಲ್ಕವಿಲ್ಲದೆ, ಸಂಪೂರ್ಣ ಉಚಿತವಾಗಿ ಆಯ್ಕೆ ಮಾಡಲು ಅವಕಾಶ ನೀಡಬೇಕು ಎಂದು ನಾಗರಿಕ ವಿಮಾನಯಾನ ಸಚಿವಾಲಯವು ಮಹತ್ವದ ನಿರ್ದೇಶನ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೂಕ್ತ ಸಮಯಕ್ಕಾಗಿ ಕಾಯುತ್ತಲೇ ಇರುವ ಕುಮಾರಸ್ವಾಮಿ!

“ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರದ ಬಗ್ಗೆ ಜನರ ಮುಂದೆ ಇಡುವುದರಲ್ಲಿ ಯಾವುದೇ ರಾಜಿಯಿಲ್ಲ. ರಾಜ್ಯದಲ್ಲಿನ ಘಟನೆ ಬಗ್ಗೆ ಬಾಯಿ ಮುಚ್ಚಿಕೊಂಡಿರಲು ಆಗಲ್ಲ" ಎಂದಿದ್ದಾರೆ ಕುಮಾರಸ್ವಾಮಿ. ಈ ಬಾರಿಯಾದರೂ ಅಲ್ಲೋಲ ಕಲ್ಲೋಲ ಸೃಷ್ಟಿಸುತ್ತಾರೆಯೇ? ‘ಸ್ಪೋಟಕ ಹೇಳಿಕೆ’,...

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

ನಾಗರಿಕ ವಿಮಾನಯಾನ ನಿರ್ದೇಶನಾಲಯದ ಮೂಲಕ ಹೊರಡಿಸಲಾಗಿರುವ ಈ ಹೊಸ ಆದೇಶವು, ಪ್ರಯಾಣಿಕರಿಗೆ ನ್ಯಾಯಯುತ ಪ್ರವೇಶವನ್ನು ಒದಗಿಸುವ ಗುರಿಯನ್ನು ಹೊಂದಿದೆ. ಇದಲ್ಲದೆ, ಒಂದೇ ಪಿಎನ್‌ಆರ್ ಅಡಿಯಲ್ಲಿ ಟಿಕೆಟ್ ಕಾಯ್ದಿರಿಸಿದ ಕುಟುಂಬಸ್ಥರು ಅಥವಾ ಗುಂಪಾಗಿ ಪ್ರಯಾಣಿಸುವ ಪ್ರಯಾಣಿಕರಿಗೆ ಒಟ್ಟಿಗೆ, ಅಕ್ಕಪಕ್ಕದ ಸೀಟುಗಳನ್ನು ಒದಗಿಸುವುದನ್ನು ಸಂಸ್ಥೆಗಳು ಖಚಿತಪಡಿಸಿಕೊಳ್ಳಬೇಕು ಎಂದು ಸೂಚಿಸಲಾಗಿದೆ. ಇದರಿಂದಾಗಿ, ತಮ್ಮವರ ಜೊತೆ ಕುಳಿತುಕೊಳ್ಳಲು ಹೆಚ್ಚುವರಿ ಹಣ ಪಾವತಿಸುತ್ತಿದ್ದ ಪ್ರಯಾಣಿಕರಿಗೆ ದೊಡ್ಡ ನೆಮ್ಮದಿ ಸಿಕ್ಕಂತಾಗಿದೆ.

ಇದನ್ನು ಓದಿದ್ದೀರಾ? ಸುಳ್ಳೇ ಬಂಡವಾಳ, ಯುದ್ಧವೇ ವ್ಯಾಪಾರ: ಸೋತು ಸುಣ್ಣವಾದರೂ ತೀರದ ಅಮೆರಿಕದ ಅಹಂಕಾರ

ಕೇವಲ ಸೀಟುಗಳ ಆಯ್ಕೆ ಮಾತ್ರವಲ್ಲದೆ, ಪ್ರಯಾಣಿಕರ ಒಟ್ಟಾರೆ ಅನುಭವವನ್ನು ಸುಧಾರಿಸಲು ಡಿಜಿಸಿಎಗೆ ಹೆಚ್ಚಿನ ಸೂಚನೆಗಳನ್ನು ನೀಡಲಾಗಿದೆ. ಕ್ರೀಡಾ ಉಪಕರಣಗಳು ಮತ್ತು ಸಂಗೀತ ವಾದ್ಯಗಳನ್ನು ಒಯ್ಯಲು ಸುರಕ್ಷತಾ ನಿಯಮಗಳಿಗೆ ಒಳಪಟ್ಟು ಪಾರದರ್ಶಕ- ಸ್ನೇಹಿ ರೀತಿಯಲ್ಲಿ ಅನುಕೂಲ ಮಾಡಿಕೊಡಬೇಕಾಗುತ್ತದೆ. ಜೊತೆಗೆ, ಸಾಕುಪ್ರಾಣಿಗಳನ್ನು ವಿಮಾನದಲ್ಲಿ ಕೊಂಡೊಯ್ಯುವ ಕುರಿತು ಆಗಾಗ್ಗೆ ಏರ್ಪಡುತ್ತಿದ್ದ ಗೊಂದಲಗಳನ್ನು ನಿವಾರಿಸಲು ಸ್ಪಷ್ಟ ನೀತಿಗಳನ್ನು ಪ್ರಕಟಿಸುವಂತೆಯೂ ವಿಮಾನಯಾನ ಸಂಸ್ಥೆಗಳಿಗೆ ಕಟ್ಟುನಿಟ್ಟಾಗಿ ತಿಳಿಸಲಾಗಿದೆ.

ವಿಮಾನ ವಿಳಂಬ, ರದ್ದತಿ ಮತ್ತು ಬೋರ್ಡಿಂಗ್ ನಿರಾಕರಣೆಯಂತಹ ಸಂದರ್ಭಗಳಲ್ಲಿ ಪ್ರಯಾಣಿಕರ ಹಕ್ಕುಗಳ ರಕ್ಷಣೆಗೆ ಸರ್ಕಾರವು ಹೆಚ್ಚಿನ ಒತ್ತು ನೀಡಿದೆ. ವಿಮಾನಯಾನ ಸಂಸ್ಥೆಗಳು ತಮ್ಮ ವೆಬ್‌ಸೈಟ್‌ಗಳು, ಮೊಬೈಲ್ ಅಪ್ಲಿಕೇಷನ್‌ಗಳು, ಬಿಕಿಂಗ್‌ ಪ್ಲಾಟ್‌ಫಾರ್ಮ್‌ಗಳು ಮತ್ತು ವಿಮಾನ ನಿಲ್ದಾಣದ ಕೌಂಟರ್‌ಗಳಲ್ಲಿ ಈ ಹಕ್ಕುಗಳನ್ನು ಎದ್ದು ಕಾಣುವಂತೆ ಪ್ರದರ್ಶಿಸುವುದು ಕಡ್ಡಾಯವಾಗಿದೆ. ಜೊತೆಗೆ, ಹೆಚ್ಚಿನ ಜನರಿಗೆ ತಲುಪುವ ಉದ್ದೇಶದಿಂದ, ಪ್ರಯಾಣಿಕರಿಗೆ ಅವರ ಹಕ್ಕುಗಳ ಬಗ್ಗೆ ಪ್ರಾದೇಶಿಕ ಭಾಷೆಗಳಲ್ಲೂ ಮಾಹಿತಿ ಲಭ್ಯವಾಗುವಂತೆ ನೋಡಿಕೊಳ್ಳಬೇಕು ಎಂದು ಸರ್ಕಾರ ತಾಕೀತು ಮಾಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇಪಿಎಫ್‌ಒ ವೇತನ ಮಿತಿ 25,000 ರೂಪಾಯಿಗೆ ಏರಿಕೆ: ಕೇಂದ್ರ ಸಂಪುಟ ಒಪ್ಪಿಗೆ

ಸಂಘಟಿತ ವಲಯದ ಲಕ್ಷಾಂತರ ಉದ್ಯೋಗಿಗಳಿಗೆ ಕೇಂದ್ರ ಸರ್ಕಾರವು ಭಾರಿ ಸಿಹಿ ಸುದ್ದಿ...

ಸಿಜೆಪಿಯಿಂದ ‘ಆದಿವಾಸಿ ಸ್ಕೂಲ್ ಠೀಕ್ ಕರೋ’ ಅಭಿಯಾನ: ಸೆ.17ರಿಂದ ಶಾಲೆಗಳ ಪರಿಶೀಲನೆ

ದೇಶದ ಅರಣ್ಯ ಮತ್ತು ಮೂಲನಿವಾಸಿ ಪ್ರದೇಶಗಳ ಶಾಲೆಗಳಲ್ಲಿ ಸರ್ಕಾರಗಳ ನಿರ್ಲಕ್ಷ್ಯ ಮತ್ತು...

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ...

ಸೌದಿ ಅರಾಮ್ಕೋ ತೈಲ ಘಟಕ, ವಾಯುನೆಲೆ ಮೇಲೆ ಕ್ಷಿಪಣಿ ದಾಳಿ: ಹೌತಿಗಳ ಪ್ರತಿಪಾದನೆ

ಸೌದಿ ಅರೇಬಿಯಾದ ಪ್ರಮುಖ ತೈಲ ಸಂಸ್ಥೆ ಸೌದಿ ಅರಾಮ್ಕೋ (Saudi Aramco)...