ಪ್ರಪಂಚದಲ್ಲಿನ ಸಂಘರ್ಷಗಳಿಗೆ ಧರ್ಮವೇ ಕಾರಣ: ಆರ್‌ಎಸ್‌ಎಸ್‌ ಮುಖ್ಯಸ್ಥ ಭಾಗವತ್

Date:

“ಅನೇಕರು ತಮ್ಮ ಧರ್ಮ ಮತ್ತು ನಂಬಿಕೆಗಳೇ ಸರ್ವೋಚ್ಚ ಎಂದು ಭಾವಿಸುವುದರಿಂದ, ಪ್ರಪಂಚದಾದ್ಯಂತ ಸಂಘರ್ಷಗಳಿಗೆ ಧರ್ಮವೇ ಕಾರಣ. ಏಕತೆಗೆ ಕರೆ ನೀಡುವ ಸನಾತನ ಧರ್ಮವನ್ನು ಅನುಸರಿಸುವುದರಿಂದ ಹಿಂದು ಧರ್ಮವು ವಿಭಿನ್ನವಾಗಿ ಕಾಣುತ್ತದೆ” ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.

- Advertisement -

ಕೇರಳದ ಪತ್ತನಂತಿಟ್ಟ ಜಿಲ್ಲೆಯ ಪಂಪಾ ನದಿಯ ದಡದಲ್ಲಿ ನಡೆದ ‘ಹಿಂದು ಏಕತಾ ಸಮ್ಮೇಳನ’ದಲ್ಲಿ ಮಾತನಾಡಿದ ಭಾಗವತ್, “ಧರ್ಮವನ್ನು ನಿಯಮಗಳಿಗೆ ಬದ್ಧವಾಗಿ ಆಚರಿಸಬೇಕು. ಯಾವುದೇ ಆಚರಣೆಗಳು ನಿಯಮಗಳ ವ್ಯಾಪ್ತಿಯಿಂದ ಹೊರಗಿದ್ದರೆ, ಅವುಗಳನ್ನು ರದ್ದುಗೊಳಿಸಬೇಕು. ನಾರಾಯಣ ಗುರು ಹೇಳುವಂತೆ, ಜಾತಿವಾದ ಮತ್ತು ಅಸ್ಪೃಶ್ಯತೆಯು ಧರ್ಮವಲ್ಲ. ಅವುಗಳನ್ನು ರದ್ದುಗೊಳಿಸಬೇಕು” ಎಂದು ಭಾಗವತ್ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಹಿಂದುಗಳು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವಾಗ ಸಾಂಪ್ರದಾಯಿಕ ಉಡುಗೆ ತೊಡಬೇಕು. ಯಾವಾಗಲೂ ಸ್ಥಳೀಯ ಆಹಾರಗಳನ್ನೇ ತಿನ್ನಬೇಕು. ಇಂಗ್ಲಿಷ್ ಭಾಷೆಯಲ್ಲಿ ಮಾತನಾಡಬಾರದು” ಎಂದು ಭಾಗವತ್ ಹೇಳಿದ್ದಾರೆ.

”ಹಿಂದು ಧರ್ಮದ ಆತ್ಮವೇ ‘ಧರ್ಮ’. ಪ್ರತಿಯೊಬ್ಬರೂ ಧರ್ಮವನ್ನು ಪಾಲಿಸಬೇಕು. ತಮ್ಮ ಜೀವನಶೈಲಿ ಹಿಂದು ಸಂಪ್ರದಾಯಕ್ಕೆ ಅನುಗುಣವಾಗಿ ಇದೆಯೇ ಎಂಬುದನ್ನು ಪ್ರತಿ ಕುಟುಂಬವೂ ನೋಡಬೇಕು. ಪ್ರಾರ್ಥಿಸಲು ಅಥವಾ ಚರ್ಚಿಸಲು ವಾರಕ್ಕೊಮ್ಮೆಯಾದರೂ ಎಲ್ಲರೂ ಒಟ್ಟುಗೂಡಬೇಕು” ಎಂದು ಹೇಳಿದ್ದಾರೆ.

ಈ ವರದಿ ಓದಿದ್ದೀರಾ?; ಬಜೆಟ್‌ ವಿಶ್ಲೇಷಣೆ | ಬೇಟಿ ಬಚಾವೊ-ಬೇಟಿ ಪಢಾವೊ; ಹೇಳಿದ್ದೊಂದು ಮಾಡಿದ್ದೊಂದು

”ನಾವು ಮಾತನಾಡುವ ಭಾಷೆ, ನಾವು ಪ್ರಯಾಣಿಸುವ ಸ್ಥಳಗಳು ಮತ್ತು ನಮ್ಮ ಬಟ್ಟೆಗಳು ಸಂಪ್ರದಾಯಕ್ಕೆ ಹೊಂದಿಕೆಯಾಗುತ್ತವೆಯೇ ಎಂದು ನಾವು ಯೋಚಿಸಬೇಕು. ಸಹಾಯದ ಅಗತ್ಯವಿರುವ ನಮ್ಮ ಸ್ವಂತ ಸಹೋದರರನ್ನು ಭೇಟಿ ಮಾಡಬೇಕು. ನಾವು ಇಂಗ್ಲಿಷ್ ಮಾತನಾಡಬಾರದು ಮತ್ತು ನಮ್ಮ ಸ್ಥಳೀಯ ಆಹಾರ ಪದ್ದತಿಯನ್ನು ಅನುಸರಿಸಬೇಕು” ಎಂದಿದ್ದಾರೆ.

“ಹಿಂದು ಸಮಾಜವು ತನ್ನ ಉಳಿವಿಗಾಗಿ ಒಂದಾಗಬೇಕು. ಸಮುದಾಯವಾಗಿ ತನ್ನನ್ನು ತಾನು ಬಲಪಡಿಸಿಕೊಳ್ಳಬೇಕು. ಆದರೆ, ಬಲಪಡಿಸುವಿಕೆಯು ತನ್ನದೇ ಆದ ಭಯವನ್ನು ಹೊಂದಿದೆ. ಶಕ್ತಿಯನ್ನು ಹೇಗೆ ಬಳಸಬೇಕು ಎಂಬುದು ಮುಖ್ಯ. ಶಕ್ತಿಯ ಬಳಕೆಯು ಬೇರೆಯವರಿಗೆ ಹಾನಿ ಮಾಡಬಾರದು” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...