ಓಲಾ, ಉಬರ್, ರ‍್ಯಾಪಿಡೊ ಆ್ಯಪ್‌ಗಳನ್ನು ತೆಗೆದುಹಾಕಿ; ಗೂಗಲ್‌ಗೆ ಮಹಾ ಸರ್ಕಾರ ಸೂಚನೆ

Date:

ಮಹಾರಾಷ್ಟ್ರದಲ್ಲಿ ಕಾನೂನುಬಾಹಿರವಾಗಿ ಬೈಕ್ ಟ್ಯಾಕ್ಸಿ ಸೇವೆಗಳನ್ನು ನಡೆಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ, ಆ್ಯಪ್ ಸ್ಟೋರ್‌ಗಳಿಂದ ಉಬರ್, ಓಲಾ ಹಾಗೂ ರ‍್ಯಾಪಿಡೊ ರೈಡ್-ಹೇಲಿಂಗ್ ಅಪ್ಲಿಕೇಶನ್‌ಗಳನ್ನು ತೆಗೆದುಹಾಕುವಂತೆ ಆಪಲ್ ಮತ್ತು ಗೂಗಲ್ ಕಂಪನಿಗಳಿಗೆ ಮಹಾರಾಷ್ಟ್ರ ರಾಜ್ಯ ಸೈಬರ್ ಇಲಾಖೆ ನೋಟಿಸ್ ಜಾರಿ ಮಾಡಿದೆ.

- Advertisement -

ರಾಜ್ಯದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಬೈಕ್ ಟ್ಯಾಕ್ಸಿ ಪ್ಲಾಟ್‌ಫಾರ್ಮ್‌ಗಳ ವಿರುದ್ಧ ಮಧ್ಯಪ್ರವೇಶಿಸುವಂತೆ ಕೋರಿ ಮಹಾರಾಷ್ಟ್ರ ಸಾರಿಗೆ ಸಚಿವ ಪ್ರತಾಪ್ ಸರ್ನಾಯಕ್ ಅವರು ಮೇ 12ರಂದು ಸೈಬರ್ ಇಲಾಖೆಗೆ ಪತ್ರ ಬರೆದಿದ್ದರು. ಈ ಬೆನ್ನಲ್ಲೇ, ಆ್ಯಪ್ ಆಧಾರಿತ ದ್ವಿಚಕ್ರ ವಾಹನ ಟ್ಯಾಕ್ಸಿ ಸೇವೆಗಳ ವಿರುದ್ಧ ರಾಜ್ಯ ಸರ್ಕಾರ ಕೈಗೊಂಡಿರುವ ಕಟ್ಟುನಿಟ್ಟಿನ ಕ್ರಮದ ಭಾಗವಾಗಿ ಈ ಬೆಳವಣಿಗೆ ನಡೆದಿದೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

ಸ್ಮರಣೆ | ʼಗಾಂಧಿ ನೀ ನಮ್ಮೆಲ್ಲರೊಳಗೂ ಇರುವೆʼ

ನಿನ್ನ ಚಾಳೀಸಿನೊಳಗೆ ತೂರಿಕೊಂಡ ಸ್ವಚ್ಚ ಭಾರತವಿನ್ನೂ ಚರಂಡಿಯಲ್ಲಿ ಹೊರಳಾಡುತ್ತಿದೆ. ಕಪ್ಪು ಹಣದ ಕತ್ತಲೆ ಗಾಢವಾಗಿ, ಸೂತ್ರಧಾರಿಗಳು ಉಳ್ಳವರಾಗಿ ಕೈಲಾಸದಲ್ಲಿನ ಭವ್ಯ ಶಿವಾಲಯದಲ್ಲಿದ್ದಾರೆ. ಊರ ಹೊರಗಣ ಕೇರಿಯವರಿಗೆ ಕೊಳಕು ಬಳಿಯುವ ಕಾಯಕ ಮತ್ತು ಕೊಳಗೇರಿ...

ಮಹಾರಾಷ್ಟ್ರ ಸೈಬರ್‌ನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರ ಕಚೇರಿಯು ಮೇ 15 ರಂದು ಹೊರಡಿಸಿರುವ ನೋಟಿಸ್‌ನಲ್ಲಿ, ಮಾಹಿತಿ ತಂತ್ರಜ್ಞಾನ ಕಾಯ್ದೆ-2000ರ ಸೆಕ್ಷನ್ 79(3)(ಬಿ) ಅನ್ನು ಉಲ್ಲೇಖಿಸಲಾಗಿದೆ. ಇದರ ಅಡಿಯಲ್ಲಿ ಆಪಲ್ ಆ್ಯಪ್ ಸ್ಟೋರ್ ಮತ್ತು ಗೂಗಲ್ ಪ್ಲೇ ಸ್ಟೋರ್‌ನಿಂದ ಈ ಅಪ್ಲಿಕೇಶನ್‌ಗಳನ್ನು ತೆಗೆದುಹಾಕಲು ಮತ್ತು ಅವುಗಳ ಬಳಕೆಯನ್ನು ನಿಷ್ಕ್ರಿಯಗೊಳಿಸಲು ಕಂಪನಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ವರದಿಯಾಗಿದೆ.

“ಈ ಅಪ್ಲಿಕೇಶನ್‌ಗಳ ಮೂಲಕ ನಡೆಸಲಾಗುತ್ತಿರುವ ಬೈಕ್ ಟ್ಯಾಕ್ಸಿ ಸೇವೆಗಳು ಕಾನೂನುಬಾಹಿರವಾಗಿದ್ದು ಪ್ರಸ್ತುತ ಇರುವ ನಿಯಂತ್ರಕ ಚೌಕಟ್ಟನ್ನು ಉಲ್ಲಂಘಿಸಿವೆ. ಸಾರಿಗೆ ಇಲಾಖೆ ಸೂಚಿಸಿರುವ ನಿಯಮಗಳು ಮತ್ತು ಮೋಟಾರು ವಾಹನ ಕಾಯ್ದೆಯ ನಿಬಂಧನೆಗಳ ಪ್ರಕಾರ ಮಾನ್ಯ ಅನುಮತಿಗಳು ಅಥವಾ ಸರ್ಕಾರದ ಅನುಮೋದನೆಗಳನ್ನು ಪಡೆಯದೆಯೇ ಈ ಪ್ಲಾಟ್‌ಫಾರ್ಮ್‌ಗಳು ಪ್ರಯಾಣಿಕರ ಸಾರಿಗೆ ಸೇವೆಗಳನ್ನು ನಡೆಸುತ್ತಿವೆ” ಎಂದು ನೋಟಿಸ್‌ನಲ್ಲಿ ಆರೋಪಿಸಲಾಗಿದೆ.

ನೋಟಿಸ್‌ನಲ್ಲಿ ಪ್ರಯಾಣಿಕರ ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತಪಡಿಸಿಲಾಗಿದೆ. “ಚಾಲಕರ ಪರಿಶೀಲನಾ ವ್ಯವಸ್ಥೆ, ವಿಮಾ ರಕ್ಷಣೆ, ಮಹಿಳಾ ಸುರಕ್ಷತಾ ಕ್ರಮಗಳು ಹಾಗೂ ತುರ್ತು ಸ್ಪಂದನಾ ವ್ಯವಸ್ಥೆಗಳು ಈ ಆ್ಯಪ್‌ಗಳಲ್ಲಿ ತೀರಾ ಅಪೂರ್ಣವಾಗಿವೆ. ಇತ್ತೀಚೆಗೆ, ಈ ಅಪ್ಲಿಕೇಶನ್‌ವೊಂದರ ಮೂಲಕ ನಡೆಸಲಾದ ಬೈಕ್ ಟ್ಯಾಕ್ಸಿ ಸೇವೆಯಿಂದಾಗಿ ಮಹಿಳೆಯೊಬ್ಬರು ದುರಂತವಾಗಿ ಸಾವನ್ನಪ್ಪಿದ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಕ್ರಿಮಿನಲ್ ಪ್ರಕರಣ ದಾಖಲಾಗಿದೆ. ಮಹಾರಾಷ್ಟ್ರದಾದ್ಯಂತ ಇಂತಹ ಹಲವು ಪ್ರಕರಣಗಳು ದಾಖಲಾಗಿವೆ” ಎಂದು ತಿಳಿಸಲಾಗಿದೆ.

“ಭಾರತೀಯ ಕಾನೂನು ಜಾರಿ ಸಂಸ್ಥೆಗಳ ನಿರ್ದೇಶನಗಳನ್ನು ಪಾಲಿಸಲು ವಿಫಲವಾದರೆ ಐಟಿ ಕಾಯ್ದೆ ಮತ್ತು ಮಧ್ಯವರ್ತಿ ಹೊಣೆಗಾರಿಕೆ ನಿಯಮಗಳ ನಿಬಂಧನೆಗಳ ಅಡಿಯಲ್ಲಿ ಕಾನೂನು ಕ್ರಮ ಎದುರಿಸಬೇಕಾಗುತ್ತದೆ” ಎಂದು ಆಪಲ್ ಮತ್ತು ಗೂಗಲ್ ಕಂಪನಿಗಳಿಗೆ ಸೈಬರ್ ಇಲಾಖೆ ಎಚ್ಚರಿಕೆಯನ್ನೂ ನೀಡಿದೆ.

“ರಾಜ್ಯ ಸರ್ಕಾರವು ಸೈಬರ್ ಇಲಾಖೆಯ ಮೂಲಕ ಈ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಮಹಾರಾಷ್ಟ್ರದಲ್ಲಿ ಬೈಕ್ ಟ್ಯಾಕ್ಸಿಗಳು ಕಾನೂನುಬಾಹಿರವಾಗಿ ಚಲಿಸುತ್ತಿದ್ದು, ಅದಕ್ಕೆ ತಕ್ಕಂತೆ ಕ್ರಮ ಕೈಗೊಳ್ಳಲಾಗುತ್ತಿದೆ” ಎಂದು ಸಚಿವ ಪ್ರತಾಪ್ ಸರ್ನಾಯಕ್ ಹೇಳಿರುವುದಾಗಿ ‘ದಿ ಇಂಡಿಯನ್ ಎಕ್ಸ್‌ಪ್ರೆಸ್‌’ ವರದಿ ಮಾಡಿದೆ.

ಈ ಲೇಖನ ಓದಿದ್ದೀರಾ?: ವಿಭಜನೆ, ಸಾಲು-ಸಾಲು ಸೋಲು, ಪಕ್ಷಾಂತರದ ಪೆಟ್ಟು; ಅಸ್ತಿತ್ವಕ್ಕಾಗಿ ಹೋರಾಟುತ್ತಿದೆ ಎಐಎಡಿಎಂಕೆ

ಈ ಬೆಳವಣಿಗೆಯು ಮಹಾರಾಷ್ಟ್ರ ಸರ್ಕಾರ ಮತ್ತು ಆ್ಯಪ್ ಆಧಾರಿತ ಬೈಕ್ ಟ್ಯಾಕ್ಸಿ ಸಂಸ್ಥೆಗಳ ನಡುವಿನ ಸುದೀರ್ಘ ಸಂಘರ್ಷದ ತೀವ್ರತೆಯನ್ನು ಹೆಚ್ಚಿಸಿದೆ. ಪ್ರಸ್ತುತ ನಿಯಂತ್ರಕ ಚೌಕಟ್ಟಿನ ಅಡಿಯಲ್ಲಿ ಮಹಾರಾಷ್ಟ್ರದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳಿಗೆ ಕಾನೂನುಬದ್ಧವಾಗಿ ಅವಕಾಶವಿಲ್ಲ ಎಂದು ರಾಜ್ಯ ಸಾರಿಗೆ ಇಲಾಖೆಯು ಕಳೆದ ಕೆಲವು ವಾರಗಳಿಂದ ಪದೇ ಪದೇ ಪ್ರತಿಪಾದಿಸುತ್ತಾ ಬಂದಿದೆ.

“ನಾವು ಬೈಕ್ ಟ್ಯಾಕ್ಸಿ ಪರಿಕಲ್ಪನೆಗೆ ವಿರೋಧಿಯಲ್ಲ. ಆದರೆ ಓಲಾ, ಉಬರ್ ಮತ್ತು ರ‍್ಯಾಪಿಡೊದಂತಹ ಸಂಸ್ಥೆಗಳು ಕಾರ್ಯಾಚರಣೆಯನ್ನು ಕ್ರಮಬದ್ಧಗೊಳಿಸಲು ಮತ್ತು ಅಗತ್ಯ ದಾಖಲೆಗಳನ್ನು ಸಲ್ಲಿಸಲು ತಾತ್ಕಾಲಿಕ ಅನುಮತಿ ನೀಡಿದ್ದರೂ ಮಹಾರಾಷ್ಟ್ರದ ಇವಿ ಬೈಕ್ ಟ್ಯಾಕ್ಸಿ ನೀತಿಯ ಚೌಕಟ್ಟನ್ನು ಪಾಲಿಸಲು ವಿಫಲವಾಗಿವೆ. ರಾಜ್ಯವು ಈಗಾಗಲೇ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳಿಗೆ ಅನುಮತಿ ನೀಡಿದ್ದು, ದಾಖಲಾತಿ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಸಂಸ್ಥೆಗಳಿಗೆ ಒಂದು ತಿಂಗಳ ತಾತ್ಕಾಲಿಕ ಅನುಮತಿ ನೀಡಿತ್ತು. ಆದರೆ, ಅವರು ಇದುವರೆಗೆ ಒಂದೇ ಒಂದು ದಾಖಲೆಯನ್ನು ಸಲ್ಲಿಸಿಲ್ಲ ಮತ್ತು ಇವಿ ಬೈಕ್ ಟ್ಯಾಕ್ಸಿಗಳಿಗೆ ಮಾತ್ರ ನೀತಿಯಲ್ಲಿ ಅವಕಾಶವಿದ್ದರೂ, ರಸ್ತೆಗಳಲ್ಲಿ ಸಾವಿರಾರು ಪೆಟ್ರೋಲ್ ಚಾಲಿತ ಅಕ್ರಮ ಬೈಕ್ ಟ್ಯಾಕ್ಸಿಗಳನ್ನು ಓಡಿಸುತ್ತಿದ್ದಾರೆ” ಎಂದು ಸಚಿವ ಸರ್ನಾಯಕ್ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಕರ್ನಾಟಕ SIR | ಅರ್ಹರ ಹೆಸರು ಡಿಲೀಟ್‌ ಮಾಡಲು ಬಿಜೆಪಿಗೆ ‘ಫಾರ್ಮ್‌-7’ ಟೂಲ್‌ಕಿಟ್; ಷಡ್ಯಂತ್ರ ಬಹಿರಂಗ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಿಜೆಪಿಗರು ‘ಫಾರ್ಮ್‌-7’ಅನ್ನು ದುರ್ಬಳಕೆ ಮಾಡಿಕೊಳ್ಳುತತಿದ್ದಾರೆ. ಈ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ ಆಶ್ರಮ’

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...