ಪ್ರಸಿದ್ಧ ಚಿತ್ರಕಲಾವಿದೆ, ಪದ್ಮಭೂಷಣ ಪುರಸ್ಕೃತೆ ಅರ್ಪಿತಾ ಸಿಂಗ್ ನಿಧನ

Date:

ಭಾರತೀಯ ಆಧುನಿಕ ಕಲಾ ಕ್ಷೇತ್ರಕ್ಕೆ ವಿಶಿಷ್ಟ ಕೊಡುಗೆ ನೀಡಿದ್ದ ಪ್ರಖ್ಯಾತ ಸಮಕಾಲೀನ ಕಲಾವಿದೆ ಅರ್ಪಿತಾ ಸಿಂಗ್ (89) ಅವರು ಸೋಮವಾರ ಬೆಳಿಗ್ಗೆ ನವದೆಹಲಿಯಲ್ಲಿ ನಿಧನರಾದರು.

- Advertisement -

ವಯೋಸಹಜ ಆರೋಗ್ಯ ಸಮಸ್ಯೆಗಳು ಮತ್ತು ಹೃದಯ, ಶ್ವಾಸಕೋಶದ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿದ್ದ ಅವರು, ನವದೆಹಲಿಯ ಫೋರ್ಟಿಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಅವರ ಪತಿ, ಹಿರಿಯ ಕಲಾವಿದ ಪರಮ್‌ಜಿತ್ ಸಿಂಗ್ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಗಲಕೋಟೆ | ಉತ್ಪಾದನೆ ಕುಸಿತ, ಭರ್ಜರಿ ಬೇಡಿಕೆ: ದಾಖಲೆ...

ಮುಂಗಾರು ಮಳೆಯ ಕೊರತೆ, ಭೀಕರ ಬರದ ಪರಿಣಾಮ ಹೊಲಗಳಲ್ಲಿ ಮೆಕ್ಕೆಜೋಳದ ಇಳುವರಿ ಕುಸಿದಿದೆ. ಆದರೆ, ಮಾರುಕಟ್ಟೆಯಲ್ಲಿ ಮಾತ್ರ ಮೆಕ್ಕೆಜೋಳಕ್ಕೆ ಚಿನ್ನದ ಬೆಲೆ ಬಂದಿದೆ! ಕಡಿಮೆ ಬೆಲೆಯಿಂದ ವರ್ಷಗಟ್ಟಲೆ ನಷ್ಟ ಅನುಭವಿಸಿದ್ದ ಬೆಳೆಗಾರರಿಗೆ ಈ...

ಏಳು ಕೊಲೆಗಳು ಮತ್ತು ಮನುಷ್ಯ ಮೃಗ!: ಕ್ರೋಧ, ಕ್ರೌರ್ಯ,...

ಮನುಷ್ಯತ್ವದ ಮುಖವಾಡ ಕಳಚಿದಾಗಒಳಗಿನ ಮೃಗ ಎಚ್ಚರಗೊಳ್ಳುತ್ತದೆ…ವಿವೇಕದ ಬೆಳಕು ಆರಿದಾಗಕ್ರೋಧವೇ ದಾರಿದೀಪವಾಗುತ್ತದೆ… ಬುದ್ಧಿಯೇ ಅದರ ಆಯುಧವಾದಾಗಸೇಡಿನ ಯೋಚನೆ ಸಂಚಾಗುತ್ತದೆ…ಪರರ ನೋವಿನಲ್ಲಿ ಸುಖ ಕಾಣುವ ಮನಸ್ಸುಕ್ರೌರ್ಯದ ಪರಮಾವಧಿ ತಲುಪುತ್ತದೆ… ಸುತ್ತಲಿನವರ ಮೌನ, ನಿರ್ಲಕ್ಷ್ಯಕೆಲವೊಮ್ಮೆ ಅಪಾಯಕ್ಕೆ ಆಹ್ವಾನವಾಗುತ್ತದೆ…ಕಾಲ ಮಿಂಚುವ ಮುನ್ನ...

ಮೀಸಲಾತಿ ಬಗ್ಗೆ ಮಾತನಾಡುವ ಮೊದಲು ತಮ್ಮ ಕುಟುಂಬದ ರಾಜಕೀಯ...

ಮೂರು ತಲೆಮಾರುಗಳಿಂದ ರಾಜಕೀಯ ಅಧಿಕಾರ ಅನುಭವಿಸುತ್ತಿರುವ ದೇವೇಗೌಡರ ಕುಟುಂಬಕ್ಕೆ ಇತರರ ಮೀಸಲಾತಿಯ ಬಗ್ಗೆ ಮಾತನಾಡುವ ನೈತಿಕ ಅರ್ಹತೆ ಇದೆಯೇ? “ಮೀಸಲು ಅನುಕೂಲ ಪಡೆದವರೇ ಮತ್ತೆ ಮತ್ತೆ ಪಡೆಯುತ್ತಿದ್ದಾರೆ, ನನ್ನ ಜನ ಅನಾಥರಾಗಿದ್ದಾರೆ” ಎಂಬ ಕೇಂದ್ರ...

ಇದನ್ನೂ ಓದಿ: ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ನಿಧನ

1937ರಲ್ಲಿ (ಇಂದಿನ ಬಾಂಗ್ಲಾದೇಶ) ಜನಿಸಿದ ಅರ್ಪಿತಾ ಸಿಂಗ್ ಅವರು ದೆಹಲಿ ಪಾಲಿಟೆಕ್ನಿಕ್‌ನಲ್ಲಿ ಕಲಾ ಶಿಕ್ಷಣ ಪಡೆದರು. ತಮ್ಮ ವಿವರಣಾತ್ಮಕ ಮತ್ತು ಬಣ್ಣಗಳಿಂದ ಕೂಡಿದ ಕಲಾಕೃತಿಗಳ ಮೂಲಕ ಜಾಗತಿಕ ಮಟ್ಟದಲ್ಲಿ ಹೆಸರುವಾಸಿಯಾಗಿದ್ದರು.

ವಿಶೇಷವಾಗಿ ಮಹಿಳೆಯರ ಜೀವನ, ಅವರ ದೈನಂದಿನ ಸಂವೇದನೆಗಳು, ಸಾಮಾಜಿಕ ಪರಿಸರ ಮತ್ತು ಭಾವನಾತ್ಮಕ ಅಂಶಗಳನ್ನು ತಮ್ಮ ಕ್ಯಾನ್ವಾಸ್‌ನಲ್ಲಿ ಅದ್ಭುತವಾಗಿ ಚಿತ್ರಿಸುತ್ತಿದ್ದರು.

ಅವರ ಕಲಾ ಸೇವೆಯನ್ನು ಗುರುತಿಸಿ ಭಾರತ ಸರ್ಕಾರವು 2011ರಲ್ಲಿ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿತ್ತು. ಅರ್ಪಿತಾ ಸಿಂಗ್ ಅವರ ಅಗಲಿಕೆಗೆ ದೇಶದ ಸಾಂಸ್ಕೃತಿಕ ಮತ್ತು ಕಲಾ ಕ್ಷೇತ್ರದ ಗಣ್ಯರು ತೀವ್ರ ಕಂಬನಿ ಮಿಡಿದಿದ್ದಾರೆ.

ಅರ್ಪಿತಾ ಸಿಂಗ್ ಅವರು ಪತಿ ಪರಮ್‌ಜಿತ್ ಸಿಂಗ್ ಅವರನ್ನು ಅಗಲಿದ್ದಾರೆ. ಅವರ ಪುತ್ರಿ ಮತ್ತು ಪ್ರಸಿದ್ಧ ಕಲಾವಿದೆಯಾಗಿದ್ದ ಅಂಜುಮ್ ಸಿಂಗ್ ಅವರು 2020ರಲ್ಲಿ ನಿಧನರಾಗಿದ್ದರು. ಸುಮಾರು 6 ವರ್ಷಗಳ ಕಾಲ ಕ್ಯಾನ್ಸರ್ ಕಾಯಿಲೆಯೊಂದಿಗೆ ಧೈರ್ಯದಿಂದ ಹೋರಾಡಿದ ಅವರು, ತಮ್ಮ 53ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಪಾವಳಿ ಸಂಭ್ರಮದ ಬೆನ್ನಲ್ಲೇ ದೆಹಲಿಯಲ್ಲಿ ‘ವಿಷಗಾಳಿ’: ಉಸಿರುಕಟ್ಟಿಸುವ ವಾತಾವರಣ, 1,331ಕ್ಕೆ ತಲುಪಿದ AQI!

ದೀಪಾವಳಿ ಹಬ್ಬದ ಸಂಭ್ರಮದ ಬೆನ್ನಲ್ಲೇ ದೇಶದ ರಾಜಧಾನಿ ನವದೆಹಲಿಯಲ್ಲಿ ವಾಯುಮಾಲಿನ್ಯದ ಮಟ್ಟವು...

ಬೆಂಗಳೂರಿನಲ್ಲಿ ಭವಿಷ್ಯದ ಕನಸು; ಶಾಲೆ ತೊರೆದು ಬರುತ್ತಿದ್ದಾರೆ ಬಂಗಾಳದ ಸುಂದರ್‌ಬನ್‌ ಬಾಲಕರು

ಪಶ್ಚಿಮ ಬಂಗಾಳದ ಜಾಗತಿಕ ಪ್ರಸಿದ್ಧ ಮ್ಯಾಂಗ್ರೋವ್ ಅರಣ್ಯ ಪ್ರದೇಶ ಸುಂದರ್‌ಬನ್‌ನಲ್ಲಿ ಭೀಕರ...

ಚೀನಾದ ಶಂಕಿತ ಗೂಢಚಾರಿಣಿ ಜೊತೆಗಿನ ಸಂಬಂಧ ಒಪ್ಪಿಕೊಂಡ ಟೆಕ್ ದಿಗ್ಗಜ ಸಂಸ್ಥೆ Nvidia ಸಿಇಒ

ಅಮೆರಿಕದ ಗುಪ್ತಚರ ಸಂಸ್ಥೆಗಳಿಂದ ಚೀನಾದ ಗೂಢಚಾರಿಣಿ ಎಂದು ಶಂಕಿಸಲಾಗಿರುವ ಮಹಿಳೆಯೊಬ್ಬಳೊಂದಿಗಿನ ರಹಸ್ಯ...

ಪಟಾಕಿ ಸಿಡಿಸುವುದರಿಂದ ಹಲವು ರೋಗಗಳು ಗುಣಮುಖ: ಬಿಜೆಪಿ ಶಾಸಕಿ ಪಪಿಯಾ ಅಧಿಕಾರಿ

ದೀಪಾವಳಿ ಹಾಗೂ ಕಾಳಿ ಪೂಜೆ ಆಚರಣೆಗಳ ಸಂದರ್ಭದಲ್ಲಿ ಪಟಾಕಿಗಳನ್ನು ಸಿಡಿಸುವುದರಿಂದ ಮನುಷ್ಯನ...