ಖ್ಯಾತ ಹಿರಿಯ ಕಲಾವಿದ ಕೆ.ಟಿ. ಶಿವಪ್ರಸಾದ್ ಇನ್ನಿಲ್ಲ

Date:

ಕಲೆ ಮತ್ತು ಸಮಾಜವಾದಿ ಚಿಂತನೆಗಳ ಅಪರೂಪದ ಸಂಗಮವಾಗಿದ್ದ, ಚಿತ್ರಕಲಾ ಲೋಕದ ದಿಗ್ಗಜ, ಅಂತಾರಾಷ್ಟ್ರೀಯ ಖ್ಯಾತಿಯ ಹಿರಿಯ ಚಿತ್ರಕಲಾವಿದ ಕೆ.ಟಿ. ಶಿವಪ್ರಸಾದ್ (79) ಅವರು ನಿಧನರಾಗಿದ್ದಾರೆ. ಹಾಸನದಲ್ಲಿ ವಾಸವಾಗಿದ್ದು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಅವರು, ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಹಾಸನ ಜಿಲ್ಲೆಯ ಕಾರ್ಲೆ ಎಂಬ ಊರಿನವರಾದ ಶಿವಪ್ರಸಾದ್, ಖ್ಯಾತ ಉದ್ಯಮಿ ಎಲ್. ಟಿ. ಕಾರ್ಲೆ ಅವರ ಪುತ್ರ. ಖ್ಯಾತ ಸಾಹಿತಿ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರ ಆಪ್ತ ಸ್ನೇಹಿತರಾಗಿದ್ದರು ಶಿವಪ್ರಸಾದ್.

- Advertisement -

ಶಿವಪ್ರಸಾದ್ ಅವರ ಕಲಾಕೃತಿಗಳಲ್ಲಿ ‘ಬಂಡಾಯ ಸಾಹಿತ್ಯ ಚಳವಳಿ’ಯ ಪ್ರಭಾವವಿತ್ತು. ಕಲೆ ಮತ್ತು ಸೌಂದರ್ಯಪ್ರಜ್ಞೆಯನ್ನು ಸಮಾಜವಾದಿ ಉದ್ದೇಶಗಳೊಂದಿಗೆ ಬೆಸೆಯುವ ಪ್ರಯತ್ನದಲ್ಲಿ ಅವರು ಯಶಸ್ವಿಯಾಗಿದ್ದರು. ಕಲಾಕೃತಿಗಳನ್ನು ದೃಶ್ಯಾನಂದಕ್ಕೆ ಮಾತ್ರ ಬಳಸದೆ, ಬದಲಾವಣೆಯ ದನಿಗಳಾಗಿ ಬಳಸಿದ ಕೆಲವೇ ಕಲಾವಿದರಲ್ಲಿ ಅವರು ಪ್ರಮುಖರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

1947ರಲ್ಲಿ ಜನಿಸಿದ ಶಿವಪ್ರಸಾದ್, ಬಾಲ್ಯದಿಂದಲೇ ಕಲೆಯತ್ತ ಒಲವು ಹೊಂದಿದ್ದರು. ಎಂಜಿನಿಯರಿಂಗ್ ವ್ಯಾಸಂಗವನ್ನು ಅರ್ಧಕ್ಕೆ ನಿಲ್ಲಿಸಿ ಮುಂಬೈನ ಪ್ರತಿಷ್ಠಿತ ‘ಸರ್ ಜೆ.ಜೆ. ಸ್ಕೂಲ್ ಆಫ್ ಆರ್ಟ್’ಗೆ ಸೇರಿದರು. 1973ರಲ್ಲಿ ಚಿತ್ರಕಲೆಯಲ್ಲಿ ಡಿಪ್ಲೊಮಾ ಪಡೆದ ಅವರು, ನಂತರದ ದಿನಗಳಲ್ಲಿ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡರು.

ಆರಂಭದಲ್ಲಿ ಯುರೋಪಿಯನ್ ಅಬ್ಸ್ಟ್ರಾಕ್ಟ್ ಎಕ್ಸ್‌ಪ್ರೆಷನಿಸಂನಿಂದ ಪ್ರಭಾವಿತರಾಗಿದ್ದರು. 1970ರ ದಶಕದ ಕೊನೆಯಲ್ಲಿ ಅವರು ರಚಿಸಿದ ಪುರುಷ ನಗ್ನಚಿತ್ರಗಳು (Male nudes) ಭಾರಿ ಚರ್ಚೆಗೆ ಗ್ರಾಸವಾಗಿದ್ದವು. ಆಂಡಿ ವಾರ್ಹೋಲ್ ಮತ್ತು 20ನೇ ಶತಮಾನದ ‘ಪಾಪ್ ಆರ್ಟ್’ ಚಳವಳಿಯಿಂದ ಸ್ಫೂರ್ತಿ ಪಡೆದ ಅವರು, ವಾಸ್ತವ ಮತ್ತು ಭ್ರಮೆಯ ನಡುವಿನ ಸಂಬಂಧವನ್ನು ತಮ್ಮ ಕುಂಚದ ಮೂಲಕ ಅನಾವರಣಗೊಳಿಸಿದರು. ನಂತರದ ದಿನಗಳಲ್ಲಿ ಗ್ರಾಮೀಣ ಜನರ ಚಿತ್ರಣಗಳನ್ನು ಸಹಜ ಪರಿಸರದಲ್ಲಿ ಸೆರೆಹಿಡಿದರು. ಲೂಸಿಯನ್ ಫ್ರಾಯ್ಡ್‌ರಂತಹ ಖ್ಯಾತ ಕಲಾವಿದರ ಶೈಲಿಗೆ ಇಂದಿಗೂ ಇವರ ಕೆಲಸಗಳನ್ನು ಹೋಲಿಸಲಾಗುತ್ತದೆ.

ಇದನ್ನೂ ಓದಿ: SIR | ಸರ್ಕಾರಿ  ಸವಲತ್ತು ಬೇಕಂದ್ರೆ ಮತದಾರರ ಪಟ್ಟಿಯಲ್ಲಿ ಹೆಸರು ಕಡ್ಡಾಯ: ಸಿಎಂ ಡಿ ಕೆ ಶಿವಕುಮಾರ್

ಶಿವಪ್ರಸಾದ್‌ ವಾಸ್ತುಶಿಲ್ಪ ಸಲಹೆಗಾರ ಹಾಗೂ ಉತ್ತಮ ಛಾಯಾಗ್ರಾಹಕರೂ ಹೌದು. ಅವರ ಕೃತಿಗಳು ಮುಂಬೈನ ಜಹಾಂಗೀರ್ ಆರ್ಟ್ ಗ್ಯಾಲರಿ, ದೆಹಲಿ, ಚೆನ್ನೈ, ಬೆಂಗಳೂರು ಮಾತ್ರವಲ್ಲದೆ ಹಾಂಗ್‌ಕಾಂಗ್‌ನ ಗ್ಯಾಲರಿಗಳಲ್ಲೂ ಪ್ರದರ್ಶನಗೊಂಡು ಅಂತಾರಾಷ್ಟ್ರೀಯ ಮನ್ನಣೆ ಗಳಿಸಿವೆ. ಶಿವ ಪ್ರಸಾದ್ ಅವರ ಕಲೆಯು ಒಂದೇ ವ್ಯಾಖ್ಯಾನಕ್ಕೆ ಸೀಮಿತವಾಗದೆ, ಅನೇಕ ಅರ್ಥವಿಸ್ತಾರಗಳಿಗೆ ಅವಕಾಶ ಕಲ್ಪಿಸುವ ಬಹುಮುಖ ಕಲಾನುಭವವಾಗಿ ರೂಪುಗೊಳ್ಳುವ ಹೊಳಹುಗಳನ್ನು ಹೊಂದಿದ್ದವು.

ಶಿವಪ್ರಸಾದ್ ರೈತರ, ದಲಿತರ ಧ್ವನಿಯಾಗಿ, ಎಲ್ಲಾ ಹಿಂದುಳಿದವರ ಪರವಾದ ಚಳವಳಿಗಳಲ್ಲಿ ಭಾಗಿಯಾಗುತ್ತಿದ್ದರು. ಕಲೆಗೆ ಅವರು ಸಲ್ಲಿಸಿದ ಅನನ್ಯ ಸೇವೆಯನ್ನು ಗುರುತಿಸಿ, 2001ರಲ್ಲಿ ಕರ್ನಾಟಕ ಸರ್ಕಾರ ಪ್ರತಿಷ್ಠಿತ ‘ರಾಜ್ಯೋತ್ಸವ ಪ್ರಶಸ್ತಿ’ ನೀಡಿ ಗೌರವಿಸಿತ್ತು. ಶಿವಪ್ರಸಾದ್ ಅವರ ನಿಧನಕ್ಕೆ ಕಲಾಕ್ಷೇತ್ರದ ಗಣ್ಯರು ಹಾಗೂ ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ. ಬಂಡಾಯ ಮತ್ತು ಸೃಜನಶೀಲತೆಯ ಸಮತೋಲನವನ್ನು ಕಾಪಾಡಿಕೊಂಡಿದ್ದ ಅವರ ಕಲಾ ಪಯಣ, ಮುಂದಿನ ಪೀಳಿಗೆಯ ಕಲಾವಿದರಿಗೆ ಸದಾ ಸ್ಫೂರ್ತಿಯಾಗಿ ಉಳಿಯಲಿದೆ.

ಶಿವಪ್ರಸಾದ್ ಅವರ ಪಾರ್ಥಿವ ಶರೀರವನ್ನು ಬುಧವಾರ ಬೆಂಗಳೂರಿನಿಂದ ಹಾಸನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಭವನಕ್ಕೆ ತರಲಾಗುವುದು. ಸಾರ್ವಜನಿಕರಿಗೆ ಬೆಳಗ್ಗೆ 9.30ರಿಂದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಿ ಮಧ್ಯಾಹ್ನ 2 ಗಂಟೆಗೆ ಬಿಟ್ಟಗೌಡನಹಳ್ಳಿ ಶಾಂತಿಧಾಮದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಗಾಂಧೀಜಿ ಹೆಸರು, ವಿಚಾರಧಾರೆ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್

"ಮಹಾತ್ಮ ಗಾಂಧೀಜಿ ಭಾರತದ ಆತ್ಮವಿದ್ದಂತೆ. ಅವರ ಹೆಸರು ಹಾಗೂ ವಿಚಾರಧಾರೆಯನ್ನು ಅಳಿಸಿಹಾಕಲು...

ಸಾಗರ | ಗೂಡ್ಸ್ ಆಟೋ ಢಿಕ್ಕಿ; ಚಿಕಿತ್ಸೆ ಫಲಿಸದೆ ಬಾಲಕ ಸಾವು

ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಗೂಡ್ಸ್ ಆಟೋ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ...

ಏಷ್ಯನ್ ಗೇಮ್ಸ್: 4 ದಶಕಗಳ ಬಳಿಕ ಮಹಿಳಾ ಹಾಕಿಯಲ್ಲಿ ಭಾರತಕ್ಕೆ ಒಲಿದ ಸುವರ್ಣ ಪದಕ

ಜಪಾನಿನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಮಹಿಳಾ ಹಾಕಿ...