ಮೀಸಲಾತಿ | NDAಯಲ್ಲಿ ಒಳಜಗಳ; ಸಹೋದ್ಯೋಗಿ ಸಚಿವ ಜಿತನ್ ಮಾಂಝಿ ರಾಜೀನಾಮೆಗೆ ಚಿರಾಗ್ ಪಾಸ್ವಾನ್ ಆಗ್ರಹ

Date:

ಮೀಸಲಾತಿ ನೀತಿಯ ಮರುಪರಿಶೀಲನೆ ಮತ್ತು ಒಳಮೀಸಲಾತಿ ಕುರಿತ ಕೇಂದ್ರ ಸರ್ಕಾರದ ಭಾಗವಾಗಿರುವವರು ನೀಡುತ್ತಿರುವ ಹೇಳಿಕೆಗಳು ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟದಲ್ಲಿ ಒಳಜಗಳ ಸೃಷ್ಟಿಸಿದೆ. ಕೇಂದ್ರ ಸಂಪುಟದಲ್ಲಿ ಸಚಿವಾರಾಗಿರುವ ಇಬ್ಬರು ಹಿರಿಯ ನಾಯಕರ ನಡುವೆ ಬಹಿರಂಗ ಸಂಘರ್ಷ ತೀವ್ರಗೊಂಡಿದೆ. ಕೇಂದ್ರ ಸಚಿವ, ಲೋಕ ಜನಶಕ್ತಿ ಪಕ್ಷದ (ರಾಮ್ ವಿಲಾಸ್) ನಾಯಕ ಚಿರಾಗ್ ಪಾಸ್ವಾನ್ ಅವರು ತಮ್ಮ ಸಹೋದ್ಯೋಗಿ ಕೇಂದ್ರ ಸಚಿವ, ‘ಹಿಂದೂಸ್ತಾನಿ ಅವಾಮ್ ಮೋರ್ಚಾ’ (ಸೆಕ್ಯುಲರ್) ಮುಖ್ಯಸ್ಥ ಜಿತನ್ ರಾಮ್ ಮಾಂಝಿ ಅವರ ರಾಜೀನಾಮೆಗೆ ಪಟ್ಟು ಹಿಡಿದಿದ್ದಾರೆ.

- Advertisement -

ಪ್ರಸ್ತುತ ಇರುವ ಮೀಸಲಾತಿ ವ್ಯವಸ್ಥೆಯೊಳಗೆ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡಗಳಿಗೆ (ST) ಒಳಮೀಸಲಾತಿ ಕಲ್ಪಿಸುವುದನ್ನು ಮಾಂಝಿ ಅವರ HAM(S) ಪಕ್ಷ ಬೆಂಬಲಿಸಿದೆ. “ಮೀಸಲಾತಿಯ ನೈಜ ಲಾಭಗಳು ಐತಿಹಾಸಿಕವಾಗಿ ವಂಚಿತರಾದ ಅತ್ಯಂತ ಹಿಂದುಳಿದ ದಲಿತ ಸಮುದಾಯಗಳಿಗೆ ತಲುಪುತ್ತಿವೆಯೇ ಎಂಬುದನ್ನು ಪರಿಶೀಲಿಸಲು ಮೀಸಲಾತಿ ನೀತಿಯನ್ನು ಮರುಪರಿಶೀಲಿಸಬೇಕು. SC/ST ಸಮುದಾಯಗಳೊಳಗೆ ಒಳಮೀಸಲಾತಿ ತರಬೇಕು” ಎಂದು ಮಾಂಝಿ ಅವರ ಪುತ್ರ, ಬಿಹಾರ ಸರ್ಕಾರದ ಸಚಿವ ಸಂತೋಷ್ ಕುಮಾರ್ ಸುಮನ್ ವಾದಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಈ ನಿಲುವಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಚಿರಾಗ್ ಪಾಸ್ವಾನ್, “ಮೀಸಲಾತಿ ನೀತಿಯನ್ನೇ ಮರುಪರಿಶೀಲಿಸುವಂತೆ ಮಾತನಾಡುವುದು ಸಾಮಾಜಿಕ ನ್ಯಾಯದ ಮೂಲಭೂತ ತತ್ವಗಳಿಗೆ ಎಸಗುವ ದ್ರೋಹ. ಇಂತಹ ಅಪಾಯಕಾರಿ ಅಭಿಪ್ರಾಯ ಹೊಂದಿರುವ ಜಿತನ್ ರಾಮ್ ಮಾಂಝಿ ಕೇಂದ್ರ ಸಚಿವ ಸಂಪುಟದಲ್ಲಿ ಮುಂದುವರಿಯುವ ಅರ್ಹತೆ ಕಳೆದುಕೊಂಡಿದ್ದಾರೆ” ಎಂದು ಹೇಳಿದ್ದಾರೆ.

ಬಿಹಾರ ರಾಜಕೀಯದಲ್ಲಿ ದಲಿತ ಮತ್ತು ಮಹಾದಲಿತ (ಅತೀ ಹಿಂದುಳಿತ ದಲಿತ) ಮತಬ್ಯಾಂಕ್‌ಗಳ ಮೇಲೆ ಭಾರಿ ಪ್ರಭಾವ ಹೊಂದಿರುವ ಈ ಇಬ್ಬರೂ ನಾಯಕರ ಕಾದಾಟವು ಎನ್‌ಡಿಎ ಮೈತ್ರಿಕೂಟಕ್ಕೆ ಹೊಸ ತಲೆನೋವಾಗಿ ಪರಿಣಮಿಸಿದೆ. ಒಳಮೀಸಲಾತಿ ಮೂಲಕ ಅತ್ಯಂತ ಹಿಂದುಳಿದವರಿಗೆ ನ್ಯಾಯ ಸಿಗಲಿ ಎಂಬುದು ಮಾಂಝಿ ವಾದವಾದರೆ, ಇದು ಮೂಲ ಮೀಸಲಾತಿ ವ್ಯವಸ್ಥೆಯನ್ನೇ ದುರ್ಬಲಗೊಳಿಸುವ ಪ್ರಯತ್ನ ಎಂದು ಪಾಸ್ವಾನ್ ವಾದಿಸಿದ್ದಾರೆ. ಲೋಕಸಭೆ ಮತ್ತು ಬಿಹಾರದ ಮುಂದಿನ ಚುನಾವಣಾ ಸಮೀಕರಣಗಳ ಮೇಲೂ ಈ ಸೈದ್ಧಾಂತಿಕ ಸಂಘರ್ಷ ದೊಡ್ಡ ಮಟ್ಟದ ಪರಿಣಾಮ ಬೀರುವ ಮುನ್ಸೂಚನೆ ನೀಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಡಿಬಿಐ ಬ್ಯಾಂಕ್ ಮಾರಾಟಕ್ಕೆ ಕೇಂದ್ರ ಸಂಪುಟ ಅಸ್ತು: ₹52,878 ಕೋಟಿಗೆ ಫೇರ್‌ಫ್ಯಾಕ್ಸ್ ತೆಕ್ಕೆಗೆ

ಐಡಿಬಿಐ (IDBI) ಬ್ಯಾಂಕ್‌ನ ‘ಕಾರ್ಯತಂತ್ರದ ಪುನರ್‌ರಚನೆ’ಗೆ (Strategic Restructuring) ಕೇಂದ್ರ ಸಚಿವ...

ಬೀದರ್‌ | ಜಿಪಂ, ತಾಪಂ ಚುನಾವಣೆ: ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿಗಳ ಪ್ರಚಾರ ಜೋರು!

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್‌...

ಸಿಜೆಪಿ ನಾಯಕರ ಬಂಧನಕ್ಕೆ ತೀವ್ರ ಖಂಡನೆ: ತಕ್ಷಣ ರಾಂಕಾ, ಸೌರವ್ ಬಿಡುಗಡೆಗೆ ವಿಪಕ್ಷಗಳ ಆಗ್ರಹ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

ಪತಿಯನ್ನು ಕೊಂದು ಕಾಂಕ್ರೀಟ್ ಡ್ರಮ್‌ನಲ್ಲಿ ಹೂತಿಟ್ಟ ಪ್ರಕರಣ: ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ

ಮರ್ಚೆಂಟ್ ನೇವಿ ಅಧಿಕಾರಿ ಸೌರಭ್ ರಜಪೂತ್ ಅವರನ್ನು ಬರ್ಬರವಾಗಿ ಹತ್ಯೆಗೈದು, ಮೃತದೇಹವನ್ನು...