ಬ್ರಾಹ್ಮಣನೊಬ್ಬ ತನ್ನ ಮಗಳನ್ನು ನನ್ಮ ಮಗನಿಗೆ ದಾನ ಮಾಡುವವರೆಗೆ ಮೀಸಲಾತಿ ಮುಂದುವರಿಯಲಿ: ವಿವಾದಕ್ಕೀಡಾದ ಐಎಎಸ್ ಅಧಿಕಾರಿ ಹೇಳಿಕೆ

Date:

”ಬ್ರಾಹ್ಮಣನೊಬ್ಬ ತನ್ನ ಮಗಳನ್ನು ನನ್ನ ಮಗನಿಗೆ ದಾನ ಮಾಡುವವರೆಗೆ ಅಥವಾ ಅವಳು ಅವನೊಂದಿಗೆ ಸಂಬಂಧ ಹೊಂದಲು ಅನುಮತಿಸುವವರೆಗೆ ಮೀಸಲಾತಿ ಮುಂದುವರಿಯುತ್ತದೆ” ಎಂದು ಐಎಎಸ್‌ ಅಧಿಕಾರಿಯೊಬ್ಬರು ನೀಡಿರುವ ಹೇಳಿಕೆ ಭಾರೀ ವಿವಾದ ಸೃಷ್ಟಿಸಿದೆ.

- Advertisement -

ಮಧ್ಯಪ್ರದೇಶದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ನೌಕರರ ಸಂಘ (ಎಜೆಎಕೆಎಸ್) ಪ್ರಾಂತೀಯ ಅಧ್ಯಕ್ಷ, ಹಿರಿಯ ಐಎಎಸ್ ಅಧಿಕಾರಿ ಸಂತೋಷ್ ವರ್ಮಾ ಅವರು ಈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಭೋಪಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ನೀಡಿದ ಹೇಳಿಕೆ ವಿವಾದಕ್ಕೆ ಸಿಲುಕಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ...

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ ಪ್ರಭಾವ ಬೀರುತ್ತಿದ್ದ ಭೂಗತ ಲೋಕ, ಈಗ ಗುಂಡಿನ ದಾಳಿ ಮತ್ತು ಜೀವಬೆದರಿಕೆಗಳ ಮೂಲಕ ಮತ್ತೊಮ್ಮೆ ತನ್ನ ಅಸ್ತಿತ್ವ ಪ್ರದರ್ಶಿಸುತ್ತಿದೆ. ದಾವೂದ್...

ಲೋಕಸಭೆಯ ಬಲ 850ಕ್ಕೆ ಏರಿಕೆ: ಕಲಾಪದ ಸಮಯ ಹೆಚ್ಚಳವಿಲ್ಲದಿದ್ದರೆ...

ಲೋಕಸಭೆಯ ಸದಸ್ಯರ ಬಲವನ್ನು 550ರಿಂದ 850ಕ್ಕೆ ಹೆಚ್ಚಿಸುವ ‘ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ–2026’ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ. ಜನಸಂಖ್ಯೆಗೆ ಅನುಗುಣವಾಗಿ ಸೀಟುಗಳ ಹೆಚ್ಚಳ ಅನಿವಾರ್ಯವಾದರೂ, ಸಂಸತ್ತಿನ ವಾರ್ಷಿಕ ಕಲಾಪದ ದಿನಗಳು ಮತ್ತು...

ಸೌದಿ ಅರೇಬಿಯಾದ ಕಂಠನಾಳಕ್ಕೇ ಕೈಹಾಕಿರುವ ಯೆಮನ್!

ಸೌದಿ ಅರೇಬಿಯಾದ ಜೀವನಾಡಿಗೇ ಕೈಹಾಕಿರುವ ಯೆಮನ್‌ನ ಈ ಪ್ರತಿರೋಧವು ಕೇವಲ ಒಂದು ಯುದ್ಧದ ಕಥೆಯಲ್ಲ; ಇದು ಮಧ್ಯಪ್ರಾಚ್ಯದ ರಾಜಕೀಯ ಇತಿಹಾಸವನ್ನೇ ಮರುಬರೆಯಬಹುದಾದ ಸಂಘರ್ಷವಾಗಿದೆ. ಅಲ್ಲಿಯವರೆಗೆ, ಯೆಮನ್ ಕೇವಲ ಅರಬ್ ಜಗತ್ತಿಗಷ್ಟೇ ಅಲ್ಲ, ಇಡೀ...

ಅವರ ಹೇಳಿಕೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಅವರ ಹೇಳಿಕೆಯನ್ನು ಬ್ರಾಹ್ಮಣ ಸಂಘಟನೆಗಳು, ‘ಅಸಭ್ಯ, ಜಾತಿವಾದಿ ಹಾಗೂ ಬ್ರಾಹ್ಮಣ ಹೆಣ್ಣುಮಕ್ಕಳಿಗೆ ಅತ್ಯಂತ ಅವಮಾನಕರ’ ಎಂದು ಟೀಕಿಸಿವೆ. ಐಎಎಸ್‌ ಅಧಿಕಾರಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿವೆ.

”ಬ್ರಾಹ್ಮಣ ಹೆಣ್ಣುಮಕ್ಕಳ ಬಗ್ಗೆ ಅತ್ಯಂತ ಅಸಭ್ಯ ಹೇಳಿಕೆ ನೀಡಿರುವ ಅಧಿಕಾರಿಯ ವಿರುದ್ಧ ತಕ್ಷಣ ಎಫ್‌ಐಆರ್ ದಾಖಲಿಸಬೇಕು. ಎಫ್‌ಐಆರ್ ದಾಖಲಿಸದಿದ್ದರೆ, ಇಡೀ ಬ್ರಾಹ್ಮಣ ಸಮಾಜವು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದೆ” ಎಂದು ಅಖಿಲ ಭಾರತ ಬ್ರಾಹ್ಮಣ ಸಮಾಜದ ರಾಜ್ಯಾಧ್ಯಕ್ಷ ಪುಷ್ಪೇಂದ್ರ ಮಿಶ್ರಾ ಹೇಳಿದ್ದಾರೆ.

ಐಎಎಸ್ ಅಧಿಕಾರಿಯ ಹೇಳಿಕೆ ನಾಗರಿಕ ಸೇವಾ (ನಡತೆ) ನಿಯಮಗಳನ್ನು ಉಲ್ಲಂಘಿಸುತ್ತದೆ. ಈ ಕಾರಣಕ್ಕೆ ಅವರ ವಿರುದ್ಧ ಕಠಿಣ ಕ್ರಮ ಇನ್ನಷ್ಟು ಮುಖ್ಯವಾಗಿದೆ ಎಂದು ಮಿಶ್ರಾ ತಿಳಿಸಿದ್ದಾರೆ.

ಮಧ್ಯಪ್ರದೇಶ ಸಚಿವಾಲಯ ಸೇವಾ ಅಧಿಕಾರಿಗಳು-ನೌಕರರ ಸಂಘದ ನಾಯಕ, ಸುಧೀರ್ ನಾಯಕ್ ಅವರು ಐಎಎಸ್ ಅಧಿಕಾರಿಯ ಹೇಳಿಕೆಯನ್ನು ಖಂಡಿಸಿದ್ದಾರೆ. ‘ಸಾಮಾನ್ಯ ವರ್ಗದ ಜನರಿಗೆ ಅತ್ಯಂತ ಆಕ್ಷೇಪಾರ್ಹ ಮತ್ತು ಅವಮಾನಕರ’ ಎಂದು ಕರೆದಿದ್ದು, ನಾಗರಿಕ ಸೇವಾ (ನಡತೆ) ನಿಯಮಗಳ ಅಡಿಯಲ್ಲಿ ವರ್ಮಾ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಮೂಲತಃ ವರ್ಮಾ ಅವರು ಮಧ್ಯಪ್ರದೇಶ ಸರ್ಕಾರದ ಒಬ್ಬ ಅಧಿಕಾರಿ. ಅವರಿಗೆ ವಿವಾದಗಳು ಹೊಸತಲ್ಲ. 2021-22ರಲ್ಲಿ ವರ್ಮಾ ವಿರುದ್ದ ಮಹಿಳೆಯೊಬ್ಬರಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಕ್ರಿಮಿನಲ್ ಕೇಸ್ ದಾಖಲಾಗಿತ್ತು. ಆ ಕೇಸ್‌ನಿಂದ ತಪ್ಪಿಸಿಕೊಳ್ಳಲು ವರ್ಮಾ ನಕಲಿ ನ್ಯಾಯಾಲಯದ ಆದೇಶಗಳನ್ನು ರಚಿಸಿದ್ದರು. ಅದಕ್ಕೆ ನ್ಯಾಯಾಧೀಶರ ಹೆಸರಿನಲ್ಲಿ ನಕಲಿ ಸಹಿ ಹಾಕಿ ಕೇಸ್ ಗೆದ್ದಂತೆ ಬಿಂಬಿಸಿದ್ದರು. ಯಾವ ನ್ಯಾಯಾಧೀಶರ ಹೆಸರಿನಲ್ಲಿ ಸಹಿ ಹಾಕಲಾಗಿತ್ತೋ, ಆ ನ್ಯಾಯಾಧೀಶರೇ ಗಮನಿಸಿ, ”ಇದು ನನ್ನ ಸಹಿ ಅಲ್ಲ, ನಾನು ಇಂಥ ಆದೇಶ ಕೊಟ್ಟಿಲ್ಲ” ಎಂದು ಪೊಲೀಸ್ ದೂರು ದಾಖಲಿಸಿದ್ದರು. ಅಂತಿಮವಾಗಿ ಪೊಲೀಸರು ವರ್ಮಾ ಅವರನ್ನು ಬಂಧಿಸಿದ್ದರು.

ಪ್ರಸ್ತುತ ಐಎಎಸ್ ಅಧಿಕಾರಿಯಾಗಿರುವ ವರ್ಮಾ, ರಾಜ್ಯ ಆಡಳಿತ ಕೇಡರ್‌ನಿಂದ ಭಾರತೀಯ ಆಡಳಿತ ಸೇವೆ(ಐಎಎಸ್)ಗೆ ಬಡ್ತಿ ಪಡೆಯಲು ನಕಲಿ ದಾಖಲೆಗಳನ್ನು ಬಳಸಿದ್ದಾರೆ ಎಂದೂ ಹೇಳಲಾಗ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಂತಿ ಮುಚ್ಚಳಿಕೆ ನೋಟಿಸ್‌ಗೆ ಆಕ್ಷೇಪ: ದೆಹಲಿ ಹೈಕೋರ್ಟ್‌ ಮೆಟ್ಟಿಲೇರಿದ ವಿದ್ಯಾರ್ಥಿ ನಾಯಕಿ ನೇಹಾ ಬೋರಾ

ಶಾಂತಿ ಸುವ್ಯವಸ್ಥೆ ಕಾಪಾಡುವ ನೆಪದಲ್ಲಿ ₹10,000 ಮೊತ್ತದ 'ಶಾಂತಿ ಮುಚ್ಚಳಿಕೆ' (Peace...

ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವ ಆಸೆ: ಕೊಲೆ ಅಪರಾಧಿಯ ಶಿಕ್ಷೆಗೆ ಅಲಹಾಬಾದ್ ಹೈಕೋರ್ಟ್ ತಡೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಅಥವಾ ಸಾಧ್ಯವಾದರೆ...

ಮುಂಬೈ | ಸಾಹಿಲ್ ವಾಕೋಡೆ ಸಾವು: ಮಗನ ತಿಥಿಯಂದೇ ಪೋಷಕರು, ವಿದ್ಯಾರ್ಥಿಗಳ ಬಂಧನ

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಾಕೋಡೆ ಅವರ ನಿಧನವಾಗಿ ಒಂದು ತಿಂಗಳ...