ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

Date:

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು ಜಮ್ಮು-ಕಾಶ್ಮೀರ ವಿಧಾನಸಭೆ ಸೋಮವಾರ ಅಂಗೀಕರಿಸಿದೆ. ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಮಂಡಿಸಿದ ನಿರ್ಣಯದ ವೇಳೆ ಸದನದಲ್ಲಿ ಬಿಜೆಪಿ ಶಾಸಕರು ಗದ್ದಲ ಎಬ್ಬಿಸಿ ಸಭಾತ್ಯಾಗ ಮಾಡಿದರು.

- Advertisement -

ನಿರ್ಣಯದ ಕುರಿತು ಚರ್ಚೆ ನಡೆಯುವ ವೇಳೆ ಆಡಳಿತ ಪಕ್ಷ ಮತ್ತು ಪ್ರತಿಪಕ್ಷದ ಸದಸ್ಯರ ನಡುವೆ ತೀವ್ರ ಮಾತಿನ ಚಕಮಕಿ ನಡೆಯಿತು. 2019ರ ಆಗಸ್ಟ್ 5ಕ್ಕೂ ಮುನ್ನ ಜಮ್ಮು-ಕಾಶ್ಮೀರ ಹೊಂದಿದ್ದ ಸ್ಥಾನಮಾನವನ್ನು ನಿರ್ಣಯದಲ್ಲಿ ಉಲ್ಲೇಖಿಸಿರುವುದಕ್ಕೆ ಬಿಜೆಪಿ ಶಾಸಕರು ಆಕ್ಷೇಪ ವ್ಯಕ್ತಪಡಿಸಿದರು. ನಿರ್ಣಯದ ಮೇಲೆ ಒಟ್ಟು 10 ತಿದ್ದುಪಡಿಗಳನ್ನು ಶಾಸಕರು ಮಂಡಿಸಿದ್ದರು. ಈ ಪೈಕಿ 8 ತಿದ್ದುಪಡಿಗಳು, 2019ರ ಆಗಸ್ಟ್‌ಗೂ ಮುನ್ನ ಜಮ್ಮು-ಕಾಶ್ಮೀರ ಹೊಂದಿದ್ದ ವಿಶೇಷ ಸ್ಥಾನಮಾನವನ್ನೂ ಮರುಸ್ಥಾಪಿಸಬೇಕು ಎಂಬ ಅಂಶವನ್ನು ನಿರ್ಣಯದಲ್ಲಿ ಸೇರಿಸುವಂತೆ ಒತ್ತಾಯಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಸ್ಪೀಕರ್ ವಿರುದ್ಧ ಬಿಜೆಪಿ ಶಾಸಕರ ಪ್ರತಿಭಟನೆ

ವಿಧಾನಸಭೆಯಲ್ಲಿ ಬಿಜೆಪಿ ಶಾಸಕರು ‘ಭಾರತ್ ಮಾತಾ ಕಿ ಜೈ’ ಮತ್ತು ‘ಸ್ಪೀಕರ್ ಸಾಹೇಬ್, ಕುರ್ಚಿ ಛೋಡೋ’ ಎಂಬ ಘೋಷಣೆಗಳನ್ನು ಕೂಗಿದರು. ಬಳಿಕ ಸದನದ ಬಾವಿಗೆ ಇಳಿದು ಸ್ಪೀಕರ್ ಅಬ್ದುಲ್ ರಹೀಂ ರಾಥರ್ ಅವರು ಪೀಠದಿಂದ ಕೆಳಗಿಳಿಯಬೇಕು ಎಂದು ಒತ್ತಾಯಿಸಿದರು.

Advertisements

23 ಬಿಜೆಪಿ ಶಾಸಕರು ಸ್ಪೀಕರ್ ವಿರುದ್ಧದ ನಿರ್ಣಯಕ್ಕೆ ಸಹಿ ಹಾಕಿದ್ದಾರೆ ಎಂದು ಬಿಜೆಪಿ ಹೇಳಿತು. ಮೊದಲು ಆ ನಿರ್ಣಯವನ್ನು ಸದನದಲ್ಲಿ ಚರ್ಚೆಗೆ ತೆಗೆದುಕೊಂಡು ಮತ ಹಾಕಬೇಕು ಎಂದು ಬಿಜೆಪಿ ಶಾಸಕರು ಒತ್ತಾಯಿಸಿದರು. ಆದರೆ ಈ ನಿರ್ಣಯವನ್ನು ತಾನು ಇನ್ನೂ ನೋಡಿಲ್ಲ ಎಂದು ಸ್ಪೀಕರ್ ರಾಥರ್ ಹೇಳಿದರು. ಅಲ್ಲದೆ ಸದನದ ನಿಯಮಾವಳಿಗಳನ್ನು ಉಲ್ಲೇಖಿಸಿದ ಅವರು, ಸ್ಪೀಕರ್ ವಿರುದ್ಧದ ನಿರ್ಣಯಕ್ಕೆ ಲಿಖಿತ ನೋಟಿಸ್ ನೀಡಿದರೂ, ನೋಟಿಸ್ ನೀಡಿದ ದಿನದಿಂದ ಕನಿಷ್ಠ 14 ದಿನಗಳ ನಂತರದ ದಿನಾಂಕದಲ್ಲಷ್ಟೇ ಅದನ್ನು ಸದನದ ಕಾರ್ಯಸೂಚಿಗೆ ಸೇರಿಸಬಹುದು ಎಂದು ತಿಳಿಸಿದರು.

ಒಮರ್ ಅಬ್ದುಲ್ಲಾ 5 ಮಸೂದೆ ಮಂಡನೆ

ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ವಿಧಾನಸಭೆಯಲ್ಲಿ ಒಟ್ಟು 5 ಮಸೂದೆಗಳನ್ನು ಮಂಡಿಸಿದರು. ಸಚಿವರು ಮತ್ತು ಶಾಸಕರ ವೇತನ ಹಾಗೂ ಭತ್ಯೆಗಳಿಗೆ ಸಂಬಂಧಿಸಿದ ಕಾಯ್ದೆಗಳಿಗೆ ತಿದ್ದುಪಡಿ ತರುವ ಮಸೂದೆಗಳು ಇದರಲ್ಲಿ ಸೇರಿವೆ. ಜಮ್ಮು-ಕಾಶ್ಮೀರದಲ್ಲಿ ಉದ್ಯಮ ನಡೆಸುವುದನ್ನು ಸುಲಭಗೊಳಿಸುವ ಉದ್ದೇಶದ ಕ್ರಮಗಳೂ ಇದರಲ್ಲಿವೆ.

ಮೂರು ಮಸೂದೆಗಳು 1956ರ ಜಮ್ಮು-ಕಾಶ್ಮೀರ ಸಚಿವರು ಮತ್ತು ರಾಜ್ಯ ಸಚಿವರ ವೇತನ ಕಾಯ್ದೆ, 1960ರ ಜಮ್ಮು-ಕಾಶ್ಮೀರ ರಾಜ್ಯ ವಿಧಾನಮಂಡಲ ಸದಸ್ಯರ ವೇತನ ಮತ್ತು ಭತ್ಯೆ ಕಾಯ್ದೆ ಹಾಗೂ 1984ರ ಜಮ್ಮು-ಕಾಶ್ಮೀರ ರಾಜ್ಯ ವಿಧಾನಮಂಡಲ ಸದಸ್ಯರ ಪಿಂಚಣಿ ಕಾಯ್ದೆಗಳಿಗೆ ತಿದ್ದುಪಡಿ ತರಲು ಉದ್ದೇಶಿಸಿವೆ.

ಇದಲ್ಲದೆ, ಈಗಿರುವ ವಿವಿಧ ಕಾಯ್ದೆಗಳನ್ನು ಒಟ್ಟುಗೂಡಿಸಿ ತಿದ್ದುಪಡಿ ಮಾಡುವ ಮತ್ತೊಂದು ಮಸೂದೆಯನ್ನು ಒಮರ್ ಅಬ್ದುಲ್ಲಾ ಮಂಡಿಸಿದರು. ಅನುಮತಿ ಆಧಾರಿತ ನಿಯಂತ್ರಣ ವ್ಯವಸ್ಥೆಯಿಂದ ನಿಯಮ ಆಧಾರಿತ ಆಡಳಿತ ವ್ಯವಸ್ಥೆಗೆ ಬದಲಾವಣೆ ತರುವುದು ಇದರ ಉದ್ದೇಶವಾಗಿದೆ. ಈ ಮಸೂದೆಯಿಂದ ನಾಗರಿಕರು ಮತ್ತು ಉದ್ಯಮಗಳಿಗೆ ಹೆಚ್ಚಿನ ಸ್ಪಷ್ಟತೆ ಸಿಗಲಿದೆ. ಜಮ್ಮು-ಕಾಶ್ಮೀರದಲ್ಲಿ ಉದ್ಯಮ ನಡೆಸುವುದು ಹಾಗೂ ಜೀವನ ನಡೆಸುವುದನ್ನು ಸುಲಭಗೊಳಿಸುವುದು, ಹೂಡಿಕೆ ಆಕರ್ಷಿಸುವುದು, ಉದ್ಯೋಗ ಸೃಷ್ಟಿಸುವುದು ಮತ್ತು ದೀರ್ಘಕಾಲೀನ ಆರ್ಥಿಕ ಬೆಳವಣಿಗೆಗೆ ನೆರವಾಗುವುದು ಇದರ ಉದ್ದೇಶವಾಗಿದೆ. ಜೊತೆಗೆ 2017ರ ಜಮ್ಮು-ಕಾಶ್ಮೀರ ಸರಕು ಮತ್ತು ಸೇವಾ ತೆರಿಗೆ (GST) ಕಾಯ್ದೆಗೆ ತಿದ್ದುಪಡಿ ತರಲು ಮತ್ತೊಂದು ಮಸೂದೆಯನ್ನು ಮುಖ್ಯಮಂತ್ರಿ ಮಂಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಆನೆ ದಾಳಿಗೆ ವಾಕಿಂಗ್ ತೆರಳಿದ್ದ ವ್ಯಕ್ತಿ ಬಲಿ

ಇಂದು ಮುಂಜಾನೆ ವಾಕಿಂಗ್ ತೆರಳಿದ್ದ ವ್ಯಕ್ತಿಯೊಬ್ಬರು ಆನೆ ದಾಳಿಗೆ ಮೃತಪಟ್ಟಿರುವ ಘಟನೆ...

ಅಮೆರಿಕದಲ್ಲಿ ಡೀಸೆಲ್ ರಫ್ತು ನಿಷೇಧದ ಚರ್ಚೆ; ಭಾರತದ ಮೇಲಾಗುವ ಪರಿಣಾಮವೇನು?

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ರಷ್ಯಾ-ಉಕ್ರೇನ್ ನಡುವಿನ ಸಂಘರ್ಷದಿಂದಾಗಿ ಜಾಗತಿಕ...

4 ವರ್ಷದಲ್ಲಿ BJP, NPFಗೆ ಹಾರಿದ 111 ಜನಪ್ರತಿನಿಧಿಗಳು; ಎಡಿಆರ್‌ ವರದಿ

2022ರಿಂದ 2026ರ ಅವಧಿಯಲ್ಲಿ ಚುನಾವಣೆ ಗೆದ್ದ ಬಳಿಕ ಒಟ್ಟು 111 ಹಾಲಿ...

ನಕಲಿ ಔಷಧ ಜಾಲ ಭೇದಿಸಿದ ಎಸ್‌ಐಟಿ: ಅಜರ್‌ಬೈಜಾನ್‌ಗೆ ಪರಾರಿಯಾಗಿದ್ದ ಕಿಂಗ್‌ಪಿನ್‌ ಪ್ರಶಾಂತ್‌ ಸೆರೆ

ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ನಕಲಿ ಔಷಧ...