ವಿವಾದಕ್ಕೀಡಾಗಿ ಜೈಲು ಸೇರಿದ್ದ ನಿವೃತ್ತ ನ್ಯಾಯಮೂರ್ತಿ ಸಿ.ಎಸ್ ಕರ್ಣನ್ ನಿಧನ

Date:

ಕಲ್ಕತ್ತಾ ಹೈಕೋರ್ಟ್‌ ನ್ಯಾಯಮೂರ್ತಿಯಾಗಿದ್ದ ಸಂದರ್ಭದಲ್ಲಿ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಜೈಲು ಶಿಕ್ಷೆಗೊಳಗಾಗಿದ್ದ ನ್ಯಾಯಮೂರ್ತಿ (ನಿವೃತ್ತ) ಸಿ.ಎಸ್‌ ಕರ್ಣನ್‌ ಅವರು ಚೆನ್ನೈನಲ್ಲಿ ನಿಧನರಾಗಿದ್ದಾರೆ. ಅವರಿಗೆ 71 ವರ್ಷ ವಯಸ್ಸಾಗಿತ್ತು.

- Advertisement -

ತಮಿಳುನಾಡಿನ ಕಡಲೂರು ಜಿಲ್ಲೆಯ ಕರ್ಣತಂ ಗ್ರಾಮದವರಾದ ಕರ್ಣನ್‌ ಅವರು 1955 ಜೂನ್‌ 12ರಂದು ಜನಿಸಿದ್ದರು. 1984ರ ಏಪ್ರಿಲ್‌ 11 ರಂದು ತಮಿಳುನಾಡು ಮತ್ತು ಪುದುಚೇರಿ ವಕೀಲರ ಪರಿಷತ್ತಿನಲ್ಲಿ ವಕೀಲರಾಗಿ ನೋಂದಾಯಿಸಿಕೊಂಡರು. ಮದ್ರಾಸ್‌ ಹೈಕೋರ್ಟ್‌, ಸಿಟಿ ಸಿವಿಲ್‌ ನ್ಯಾಯಾಲಯಗಳು ಮತ್ತು ಕೌಟುಂಬಿಕ ನ್ಯಾಯಾಲಯಗಳಲ್ಲಿ ಸಿವಿಲ್‌, ಕ್ರಿಮಿನಲ್‌, ಸಾಂವಿಧಾನಿಕ ಹಾಗೂ ಸೇವಾ ಸಂಬಂಧಿತ ಪ್ರಕರಣಗಳಲ್ಲಿ ವಕೀಲರಾಗಿ ಕಾರ್ಯನಿರ್ವಹಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿತ್ತನೆ ಗುರಿ ಅರ್ಧದಷ್ಟೂ ಮುಟ್ಟದ ಕೃಷಿ ಚಟುವಟಿಕೆ; ಜೋಳದ...

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟದಿಂದ ಕಂಗೆಟ್ಟ ಅನ್ನದಾತರಿಗೆ ಹಿಂಗಾರು ಹಂಗಾಮಿನಲ್ಲಾದರೂ ಮಳೆ ಆಸರೆಯಾಗಬಹುದು ಎಂಬ ನಿರೀಕ್ಷೆಯಿತ್ತು. ಆದರೆ ರೈತರ ಆ ನಿರೀಕ್ಷೆಯೂ ಹುಸಿಯಾಗಿದೆ. ಮುಂಗಾರಿನ ಬೆನ್ನಲ್ಲೇ ಹಿಂಗಾರು ಹಂಗಾಮಿನಲ್ಲೂ ಮಳೆ ಕೈಕೊಟ್ಟಿರುವುದರಿಂದ...

ಧಾರವಾಡದ ‘ಲಲಿತಕಲಾ ಅಕಾಡೆಮಿ’ಗೆ ದುಸ್ಥಿತಿ: ಕಲಾವಿದರಿಂದಲೇ ದೂರವಾದ ಪ್ರಾದೇಶಿಕ...

ಕಲಾವಿದರ ಬಹುದಿನಗಳ ಬೇಡಿಕೆಯಂತೆ ಸ್ಥಾಪನೆಯಾದ ಕೇಂದ್ರಕ್ಕೆ ಮೂರೇ ವರ್ಷಗಳಲ್ಲಿ ದುಸ್ಥಿತಿ; ಸಂಚಾಲಕರ ಏಕಪಕ್ಷೀಯ ಧೋರಣೆ, ಕಲಾವಿದರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವುದು ಹಾಗೂ ಕಲಾ ಚಟುವಟಿಕೆಗಳ ಕೊರತೆಯ ವಿರುದ್ಧ ಹಿರಿಯ ಕಲಾವಿದರ ಆಕ್ರೋಶ. ಸಲಹಾ ಸಮಿತಿ...

ಗದಗ | ವರದಕ್ಷಿಣೆ ಮುಟ್ಟದ, ಒಗ್ಗಟ್ಟು ಬಿಡದ ತುಂಬು...

ಆಧುನಿಕತೆ ಬೆಳೆದಂತೆಲ್ಲ ಸಮಾಜದಲ್ಲಿ ಅವಿಭಕ್ತ ಕುಟುಂಬಗಳು ಕಣ್ಮರೆಯಾಗಿ ವಿಭಕ್ತ ಕುಟುಂಬಗಳ ಸಂಖ್ಯೆಗಳು ಹೆಚ್ಚಾಗುತ್ತಿವೆ. ನಾವು ನಮ್ಮವರು ಎನ್ನುವ ಭಾವನೆಗಳು ಮರೆಯಾಗುತ್ತಿರುವ ಹೊತ್ತಿನಲ್ಲಿ ನಂಬಿಕೆ, ವಿಶ್ವಾಸ, ಪ್ರೀತಿಯ ತಳಗಹದಿಯ ಮೇಲೆ ಇಂದಿಗೂ ಜಾಲವಾಡಗಿ ಅವಿಭಕ್ತ...

ವಿವಾದದ ಸುಳಿಯಲ್ಲಿ ಮಾಜಿ ನ್ಯಾಯಮೂರ್ತಿ ಕರ್ಣನ್‌

ಮದ್ರಾಸ್‌ ಹೈಕೋರ್ಟ್‌ನಲ್ಲಿ ನ್ಯಾಯಮೂರ್ತಿಯಾಗಿದ್ದ ಅವಧಿಯಲ್ಲಿ, ತಾವು ಪರಿಶಿಷ್ಟ ಜಾತಿಗೆ ಸೇರಿದವರು ಎಂಬ ಕಾರಣಕ್ಕೆ ಇತರ ನ್ಯಾಯಮೂರ್ತಿಗಳು ತಮ್ಮನ್ನು ಕೆಟ್ಟದಾಗಿ ನಡೆಸಿಕೊಳ್ಳುತ್ತಿದ್ದಾರೆ ಎಂದು ಕರ್ಣನ್‌ ಆರೋಪಿಸಿದ್ದರು. ಈ ವಿಚಾರವಾಗಿ ಬಹಿರಂಗವಾಗಿ ನ್ಯಾಯಾಲಯದಲ್ಲಿಯೇ ಹಲವು ಬಾರಿ ವಾಗ್ವಾದ ನಡೆಸಿದ್ದರು. 2016ರಲ್ಲಿ ಕರ್ಣನ್‌ ಅವರನ್ನು ಕಲ್ಕತ್ತಾ ಹೈಕೋರ್ಟ್‌ಗೆ ವರ್ಗಾವಣೆ ಮಾಡಲಾಯಿತು.

2017ರಲ್ಲಿ ಅಂದಿನ ಭಾರತದ ಮುಖ್ಯ ನ್ಯಾಯಮೂರ್ತಿ ಜೆ.ಎಸ್‌. ಖೇಹರ್‌ ಸೇರಿದಂತೆ ಇತರೆ ಸುಪ್ರೀಂ ಕೋರ್ಟ್‌ನ ಏಳು ನ್ಯಾಯಮೂರ್ತಿಗಳ ವಿರುದ್ಧ ಆಧಾರರಹಿತ ಆರೋಪಗಳನ್ನು ಮಾಡಿದ ಹಿನ್ನೆಲೆ ಕರ್ಣನ್‌ ವಿರುದ್ಧ ಸ್ವಯಂಪ್ರೇರಿತವಾಗಿ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿಕೊಂಡಿತು. ಅಲ್ಲದೆ, ಹೈಕೋರ್ಟ್‌ ನ್ಯಾಯಮೂರ್ತಿಯಾಗಿ ಅವರು ನ್ಯಾಯಾಂಗ ಮತ್ತು ಆಡಳಿತಾತ್ಮಕ ಕಾರ್ಯಗಳನ್ನು ನಿರ್ವಹಿಸದಂತೆ ನಿರ್ಬಂಧ ವಿಧಿಸಿತು.

2017ರ ಮೇ 8ರಂದು ಕರ್ಣನ್‌ ಅವರು ಅಂದಿನ ಮುಖ್ಯ ನ್ಯಾಯಮೂರ್ತಿ ಸೇರಿದಂತೆ ಎಂಟು ನ್ಯಾಯಮೂರ್ತಿಗಳಿಗೆ ಐದು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸುವುದಾಗಿ ತಮ್ಮದೇ ಆದ ಆದೇಶ ಹೊರಡಿಸಿದರು. ಅಲ್ಲದೆ, 1989ರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳು ಕಾಯ್ದೆಯಡಿ ಪ್ರತಿಯೊಬ್ಬರಿಗೂ ತಲಾ ಒಂದು ಲಕ್ಷ ರೂಪಾಯಿ ದಂಡ ವಿಧಿಸಿದರು. ತಮ್ಮ ಆದೇಶವನ್ನು ಜಾರಿಗೊಳಿಸುವಂತೆ ನವದೆಹಲಿಯ ಪೊಲೀಸ್‌ ಆಯುಕ್ತರಿಗೆ ಸೂಚಿಸಿದ್ದರು.

ಇದಾದ ಮರುದಿನವೇ ಸುಪ್ರೀಂ ಕೋರ್ಟ್‌ನ ಏಳು ನ್ಯಾಯಮೂರ್ತಿಗಳ ಪೀಠವು ಕರ್ಣನ್‌ ಅವರನ್ನು ಕ್ರಿಮಿನಲ್‌ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಘೋಷಿಸಿ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿತು. ಜೈಲು ಶಿಕ್ಷೆ ಅನುಭವಿಸಿದ ಬಳಿಕವೂ ಕರ್ಣನ್‌ ಅವರು ಹಲವು ನ್ಯಾಯಮೂರ್ತಿಗಳ ವಿರುದ್ಧ ಭ್ರಷ್ಟಾಚಾರ ಮತ್ತು ಜಾತಿ ಆಧಾರಿತ ತಾರತಮ್ಯದ ಆರೋಪಗಳನ್ನು ಬಹಿರಂಗವಾಗಿ ಮಾಡುತ್ತಲೇ ಇದ್ದರು.

ನಿವೃತ್ತಿಯ ಬಳಿಕ 2018ರಲ್ಲಿ ಕರ್ಣನ್‌ ಅವರು ʼAnti Corruption Dynamic Party ಎಂಬ ರಾಜಕೀಯ ಪಕ್ಷವನ್ನು ಸ್ಥಾಪಿಸಿದ್ದರು.

+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಸ್ಸಾಂನ ಕಾಜಿರಂಗದಲ್ಲಿ ಭೀಕರ ರಸ್ತೆ ಅಪಘಾತ: 23 ಮಂದಿ ಸಾವು

ಕಂಟೇನರ್ ಟ್ರಕ್ ಮತ್ತು ಮಿನಿ ಬಸ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ...

ವಿಜಯಪುರ | ನ.15ರಂದು ಕೆಪಿಎಸ್‌ಸಿ ಪರೀಕ್ಷೆ; ಪಾರದರ್ಶಕತೆಗೆ ಆದ್ಯತೆ: ಡಿಸಿ ಆನಂದ್‌ ಕೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್‌ ಎ ಮತ್ತು...

ಪ್ರಧಾನಿ ಮೋದಿ ‘ದಿಮಾಗಿ ನಕ್ಸಲ್’ ರಾಹುಲ್ ಗಾಂಧಿಯವರೊಂದಿಗೆ ಚರ್ಚೆಗೆ ಏಕೆ ಹಿಂದೇಟು ಹಾಕುತ್ತಿದ್ದಾರೆ?

ಪ್ರಧಾನಿ ನರೇಂದ್ರ ಮೋದಿಯವರು ಮತ್ತೊಮ್ಮೆ "ದಿಮಾಗಿ ನಕ್ಸಲ್" (ಬೌದ್ಧಿಕ ನಕ್ಸಲರು ಅಥವಾ...

ಕನ್ನಡ ಬೌದ್ಧಿಕ ಲೋಕದ ‘ಪರಸ್ಪರ ಮೆಚ್ಚುಗೆ ಸಮಾಜ’ಕ್ಕೆ ಸವಾಲಾಗಿದ್ದ ಕೆವಿಎನ್

ರಾಜಕೀಯ, ಸಂಸ್ಕೃತಿ, ಜನಪದ, ಭಾಷೆ, ಕಾವ್ಯ, ಸಾಹಿತ್ಯ, ಸಿನಿಮಾ ಹೀಗೆ ಯಾವುದೇ...