ನೀಟ್ ವಿವಾದ | ದೊಡ್ಡ ಪ್ರಮಾಣದಲ್ಲಿ ಅಕ್ರಮವಾಗಿದ್ದರೆ ಮಾತ್ರ ಮರು ಪರೀಕ್ಷೆ: ಸುಪ್ರೀಂ ಕೋರ್ಟ್

Date:

ನೀಟ್‌ – ಯುಜಿ 2024 ಪರೀಕ್ಷೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಅಕ್ರಮ ನಡೆದು ವೈದ್ಯಕೀಯ ಪ್ರವೇಶ ಪರೀಕ್ಷೆಯ ಪಾವಿತ್ರ್ಯತೆಗೆ ಧಕ್ಕೆಯಾಗಿದ್ದರೆ ಮಾತ್ರ ಮರುಪರೀಕ್ಷೆ ನಡೆಸಬಹುದು ಎಂದು ಸುಪ್ರೀಂ ಕೋರ್ಟ್ ಇಂದು ತಿಳಿಸಿದೆ.

- Advertisement -

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾದ ಡಿ ವೈ ಚಂದ್ರಚೂಡ್‌ ನೇತೃತ್ವದ ಪೀಠ ನೀಟ್‌ ಯುಜಿ ಪರೀಕ್ಷೆಯಲ್ಲಿ ಅಕ್ರಮ ಹಾಗೂ ಉತ್ತರ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ 40 ಅರ್ಜಿಗಳ ವಿಚಾರಣೆ ನಡೆಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸಂಪೂರ್ಣ ಪರೀಕ್ಷೆಯನ್ನು ರದ್ದುಪಡಿಸಬೇಕಾದರೆ ಪತ್ರಿಕೆ ಸೋರಿಕೆ ಪರಿಣಾಮಕಾರಿಯಾಗಿದೆ ಎಂದು ಪೂರಕ ಸಾಕ್ಷಾಧಾರಗಳೊಂದಿಗೆ ಸ್ಪಷ್ಟಪಡಿಸಬೇಕು ಎಂದು ಮುಖ್ಯ ನ್ಯಾಯಮೂರ್ತಿಗಳು ಹಿರಿಯ ವಕೀಲರಾದ ನರೇಂದ್ರ ಹೂಡ ಹಾಗೂ ಪ್ರತಿನಿಧಿಸಿದ್ದ ಅರ್ಜಿದಾರರಿಗೆ ಸೂಚನೆ ನೀಡಿದರು.

“23 ಲಕ್ಷದಲ್ಲಿ ಒಂದು ಲಕ್ಷ ಮಂದಿ ಮಾತ್ರ ಪ್ರವೇಶ ಪಡೆಯುತ್ತಾರೆ. ನಾವು ಮರು ಪರೀಕ್ಷೆ ನಡೆಸಲು ಸಾಧ್ಯವಿಲ್ಲ. ಸಂಪೂರ್ಣ ಪರೀಕ್ಷೆ ಪರಿಣಾಮಕಾರಿಯಾಗಿ ಅಕ್ರಮವಾಗಿದ್ದರೆ ಮಾತ್ರ ಮರು ಪರೀಕ್ಷೆ ನಡೆಸಬಹುದು” ಎಂದು ಮುಖ್ಯ ನ್ಯಾಯಮೂರ್ತಿಗಳಾದ ಡಿ ವೈ ಚಂದ್ರಚೂಡ್‌ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಗ್ಯಾರಂಟಿ ಯೋಜನೆಗಳಿಗೆ ಮೀಸಲು ನಿಧಿ ಬಳಕೆಯನ್ನು ತಕ್ಷಣ ತಡೆಯಬೇಕು 

ದೇಶಾದ್ಯಂತ ಸರ್ಕಾರ ಹಾಗೂ ಖಾಸಗಿ ವೈದ್ಯಕೀಯ ಕಾಲೇಜುಗಳ ಸೀಟುಗಳ ಸಂಖ್ಯೆಯ ಬಗ್ಗೆ ತಿಳಿಸುವಂತೆ ಮುಖ್ಯ ನ್ಯಾಯಮೂರ್ತಿಗಳು ಹೂಡ ಅವರನ್ನು ಪ್ರಶ್ನಿಸಿದರು.

ಒಂದು ಲಕ್ಷಕ್ಕೂ ಹೆಚ್ಚು ಸೀಟುಗಳಿದ್ದು, ಒಂದು ವೇಳೆ ಮರು ಪರೀಕ್ಷೆ ನಡೆಸಿದರೆ ಒಟ್ಟು 23 ಲಕ್ಷ ಅಭ್ಯರ್ಥಿಗಳಲ್ಲಿ ಈಗ ಅಕ್ರಮವಾಗಿ ಪ್ರವೇಶ ಪಡೆದಿರುವ ಹಲವು ಮಂದಿಗೆ ಸೀಟು ಲಭಿಸುವುದಿಲ್ಲ. ಹಲವು ಪ್ರಮಾಣಿಕ ಅಭ್ಯರ್ಥಿಗಳು ಪ್ರವೇಶ ಪಡೆಯಲಿದ್ದಾರೆ ಎಂದು ಅರ್ಜಿದಾರರ ಪರ ವಕೀಲರು ಪೀಠಕ್ಕೆ ಮನವರಿಕೆ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯ ನ್ಯಾಯಮೂರ್ತಿಗಳು, ನಾವು ಮರು ಪರೀಕ್ಷೆಗೆ ಆದೇಶಿಸಲು ಸಾಧ್ಯವಿಲ್ಲ. ಸಂಪೂರ್ಣ ಪರೀಕ್ಷೆಯನ್ನು ರದ್ದುಪಡಿಸಬೇಕಾದರೆ ಪತ್ರಿಕೆ ಸೋರಿಕೆ ಪರಿಣಾಮಕಾರಿಯಾಗಿದೆ ಎಂದು ಪೂರಕ ಸಾಕ್ಷಾಧಾರಗಳೊಂದಿಗೆ ಸ್ಪಷ್ಟಪಡಿಸಬೇಕು ಎಂದು ಸ್ಪಷ್ಟಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ ಪ್ರತಿಭಟನೆ ವೇಳೆ ಪೊಲೀಸರಿಂದ ಲೈಂಗಿಕ ಕಿರುಕುಳ: ಮೂವರು ಪತ್ರಕರ್ತೆಯರ ಆರೋಪ

ದೇಶದ ರಾಜಧಾನಿ ದೆಹಲಿಯ ಜಂತರ್ ಮಂತರ್ ಬಳಿ ನಡೆದ ಪ್ರತಿಭಟನೆಯ ವರದಿಗಾರಿಕೆಯಲ್ಲಿ...

ಹಳೆಯ ಪ್ರಕರಣ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ವಿಜಿಲೆನ್ಸ್ ತನಿಖೆಗೆ ಕೇರಳ ಸರ್ಕಾರ ಆದೇಶ

20೦6ರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹಾಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್...

ಗಣೇಶ ವಿಸರ್ಜನೆ ಮುಗಿಯಿತು, ಇನ್ನು ಸಿಇಸಿ ಗ್ಯಾನೇಶ್ ಕುಮಾರ್ ವಿಸರ್ಜನೆ ಬಾಕಿ: ನಟ ಪ್ರಕಾಶ್ ರಾಜ್

ದೇಶಾದ್ಯಂತ ಗಣೇಶ ವಿಸರ್ಜನೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತ...

ಜಿಎಸ್‌ಟಿ ದಸ್ತಗಿರಿ ಅಧಿಕಾರ ಹಿಂಪಡೆಯುವ ಪ್ರಸ್ತಾಪ: ಆಡಂಬರದ ಜಾರಿಯೂ ಇಂದಿನ ಭ್ರಮನಿರಸನವೂ….

2017ರ ಜೂನ್ 30ರ ಮಧ್ಯರಾತ್ರಿ ಭಾರತದ ಸಂಸತ್ತಿನಲ್ಲಿ ವಿಶೇಷ ಅಧಿವೇಶನ ಕರೆಯಾಗಿತ್ತು....