ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಎ ರೇವಂತ್ ರೆಡ್ಡಿ ಅವರು ತೆಲಂಗಾಣದ ಮೂರನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಹೈದರಾಬಾದ್‌ನ ಲಾಲ್ ಬಹುದ್ದೂರ್ ಕ್ರೀಡಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಮಧ್ಯಾಹ್ನ 1.21 ಗಂಟೆಗೆ ರಾಜ್ಯಪಾಲರಾದ ತಮಿಳಿಸೈ ಸೌಂದರರಾಜನ್ ಅವರು ರೇವಂತ್ ರೆಡ್ಡಿ ಅವರಿಗೆ ಪ್ರಮಾಣ ವಚನ ಬೋಧಿಸಿದರು.
ರೇವಂತ್ ರೆಡ್ಡಿ ಅವರು ದೇವರ ಹೆಸರಿನಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
The “రేవంత్ రెడ్డి అనే నేను” Moment
Revanth Reddy is the Second Chief Minister of Telangana now
Wishing him all the best#RevanthReddy pic.twitter.com/qsmuwxSPz9
— M9.NEWS (@M9Breaking) December 7, 2023
ರೇವಂತ್ ರೆಡ್ಡಿ ಅವರೊಂದಿಗೆ ಭಟ್ಟಿ ವಿಕ್ರಮಾರ್ಕ, ಉತ್ತಮ್ ಕುಮಾರ್ ರೆಡ್ಡಿ, ಸೀತಕ್ಕ, ಶ್ರೀಧರ್ ಬಾಬು, ಪೊಂಗುಲೇಟಿ ಶ್ರೀನಿವಾಸ್ ರೆಡ್ಡಿ, ದಾಮೋದರ ರಾಜನರಸಿಂಹ, ಸುದರ್ಶನ ರೆಡ್ಡಿ, ಕೋಮಟಿ ರೆಡ್ಡಿ ವೆಂಕಟ ರೆಡ್ಡಿ, ಪೊನ್ನಂ ಪ್ರಭಾಕರ್, ತುಮ್ಮಲ ನಾಗೇಶ್ವರ ರಾವ್, ಕೊಂಡ ಸುರೇಖಾ, ಜೂಪಲ್ಲಿ ಕೃಷ್ಣರಾವ್ ಅವರು ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಸೇರಿದಂತೆ ಹಲವು ನಾಯಕರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.
ಈ ಸುದ್ದಿ ಓದಿದ್ದೀರಾ? ವಿಧಾನಸಭೆಗೆ ಆಯ್ಕೆಯಾಗಿದ್ದ ಇಬ್ಬರು ಕೇಂದ್ರ ಸಚಿವರು, 8 ಸಂಸದರ ರಾಜೀನಾಮೆ
ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ 119 ಕ್ಷೇತ್ರಗಳ ಪೈಕಿ ಕಾಂಗ್ರೆಸ್ 64 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಬಹುಮತ ಪಡೆದಿತ್ತು.
ರೇವಂತ್ ರಾಜಕೀಯ ಪಯಣ?
ರೇವಂತ್ ರೆಡ್ಡಿ 1969 ರಲ್ಲಿ ಅವಿಭಜಿತ ಆಂಧ್ರಪ್ರದೇಶದ ಮಹಬೂಬ್ ನಗರದಲ್ಲಿ ಜನಿಸಿದರು. ರೆಡ್ಡಿಯವರು ತಮ್ಮ ವಿದ್ಯಾರ್ಥಿಯಾಗಿದ್ದಾಗ ಎಬಿವಿಪಿಯಿಂದ ರಾಜಕಾರಣವನ್ನು ಆರಂಭಿಸಿದ್ದರು. 2007ರಲ್ಲಿ ಮೆಹಬೂಬ ನಗರ ಜಿಲ್ಲೆಯಲ್ಲಿ ನಡೆದಿದ್ದ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದು ಅಂದಿನ ಬಲಿಷ್ಠ ಟಿಡಿಪಿ, ಟಿಆರ್‌ಎಸ್ ಹಾಗೂ ಬಿಜೆಪಿಯಂತಹ ಪಕ್ಷಗಳ ಅಭ್ಯರ್ಥಿಗಳನ್ನೇ ಮಣಿಸಿ ನಂತರ ಚಂದ್ರಬಾಬು ನಾಯ್ಡು ಅವರ ತೆಲುಗು ದೇಶಂ ಪಕ್ಷ ಸೇರಿದರು. 2009 ರಲ್ಲಿ, ಅವರು ತೆಲುಗು ದೇಶಂ ಪಕ್ಷದ ಪರವಾಗಿ ಆಂಧ್ರಪ್ರದೇಶದ ಕೊಡಂಗಲ್ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾದರು.
2014 ರಲ್ಲಿ ಅವರು ತೆಲಂಗಾಣ ವಿಧಾನಸಭೆಯಲ್ಲಿ ತೆಲುಗು ದೇಶಂ ಪಕ್ಷದ ಅಧ್ಯಕ್ಷರಾಗಿ ಆಯ್ಕೆಯಾದರು. ರೇವಂತ್ ರೆಡ್ಡಿ 2017 ರಲ್ಲಿ ಕಾಂಗ್ರೆಸ್ ಸೇರಿದ್ದರು, ಆದರೆ 2018ರ ವಿಧಾನಸಭಾ ಚುನಾವಣೆಯಲ್ಲಿ ಕೊಡಂಗಲ್‌ನಿಂದ ಸ್ಪರ್ಧಿಸಿ ಸೋಲುತ್ತಾರೆ. ನಂತರ ಮೂರು ತಿಂಗಳಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಮಲ್ಕಾಜ್‌ಗಿರಿಯಿಂದ ಸಂಸದರಾಗಿ ಆಯ್ಕೆಯಾಗುತ್ತಾರೆ. ಪುನಃ 2019ರ ಲೋಕಸಭೆ ಚುನಾವಣೆಯಲ್ಲಿ ಮಲ್ಕಾಜ್‌ಗಿರಿಯಿಂದ ಸ್ಪರ್ಧಿಸಿ ಗೆದ್ದಿದ್ದರು. 2021ರಲ್ಲಿ ಕಾಂಗ್ರೆಸ್ ಅವರಿಗೆ ದೊಡ್ಡ ಜವಾಬ್ದಾರಿ ನೀಡಿ ರಾಜ್ಯಾಧ್ಯಕ್ಷರನ್ನಾಗಿ ಮಾಡಿತು. ಈಗ ಪಕ್ಷವನ್ನು ಅಧಿಕಾರಕ್ಕೆ ತಂದು ಮುಖ್ಯಮಂತ್ರಿಯಾಗಿದ್ದಾರೆ.