ತೆಲಂಗಾಣ ಮುಖ್ಯಮಂತ್ರಿಯಾಗಿ ಎ ರೇವಂತ್ ರೆಡ್ಡಿ ಪ್ರಮಾಣ ವಚನ ಸ್ವೀಕಾರ

Date:

ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಎ ರೇವಂತ್ ರೆಡ್ಡಿ ಅವರು ತೆಲಂಗಾಣದ ಮೂರನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

- Advertisement -

ಹೈದರಾಬಾದ್‌ನ ಲಾಲ್‌ ಬಹುದ್ದೂರ್‌ ಕ್ರೀಡಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಮಧ್ಯಾಹ್ನ 1.21 ಗಂಟೆಗೆ ರಾಜ್ಯಪಾಲರಾದ ತಮಿಳಿಸೈ ಸೌಂದರರಾಜನ್ ಅವರು ರೇವಂತ್‌ ರೆಡ್ಡಿ ಅವರಿಗೆ ಪ್ರಮಾಣ ವಚನ ಬೋಧಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದೆಹಲಿಯ ಬಂಧನಗಳು ಮತ್ತು ಮಹಾತ್ಮ ಗಾಂಧಿ

ವ್ಯವಸ್ಥೆಗಳು ದುರ್ಬಲವಾಗುತ್ತಿರುವ ಇಂದಿನ ಕಾಲದಲ್ಲಿ, ಕೋಪಗೊಂಡ ಯುವಕರ ಬೀದಿ ಪ್ರತಿಭಟನೆಗಳೇ ಒಂದು ಹೊಸ ನಿಯಂತ್ರಣ ವ್ಯವಸ್ಥೆಯಾಗಿ ನಿಲ್ಲುತ್ತಿವೆ ಎಂದೆನಿಸುತ್ತದೆ. ಜನರಿಗೆ ಮತದಾನದ ಹಕ್ಕನ್ನು ಮತ್ತೆ ದೊರಕಿಸಿಕೊಡುವುದಕ್ಕೂ ಇಂತಹ ಹೋರಾಟಗಳತ್ತ ಮುಖ ಮಾಡಬೇಕಾಗಿದೆ. ಸಾರ್ವಜನಿಕರು...

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ರೇವಂತ್‌ ರೆಡ್ಡಿ ಅವರು ದೇವರ ಹೆಸರಿನಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ರೇವಂತ್‌ ರೆಡ್ಡಿ ಅವರೊಂದಿಗೆ ಭಟ್ಟಿ ವಿಕ್ರಮಾರ್ಕ, ಉತ್ತಮ್ ಕುಮಾರ್ ರೆಡ್ಡಿ, ಸೀತಕ್ಕ, ಶ್ರೀಧರ್ ಬಾಬು, ಪೊಂಗುಲೇಟಿ ಶ್ರೀನಿವಾಸ್ ರೆಡ್ಡಿ, ದಾಮೋದರ ರಾಜನರಸಿಂಹ, ಸುದರ್ಶನ ರೆಡ್ಡಿ, ಕೋಮಟಿ ರೆಡ್ಡಿ ವೆಂಕಟ ರೆಡ್ಡಿ, ಪೊನ್ನಂ ಪ್ರಭಾಕರ್, ತುಮ್ಮಲ ನಾಗೇಶ್ವರ ರಾವ್, ಕೊಂಡ ಸುರೇಖಾ, ಜೂಪಲ್ಲಿ ಕೃಷ್ಣರಾವ್ ಅವರು ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಸೇರಿದಂತೆ ಹಲವು ನಾಯಕರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ಈ ಸುದ್ದಿ ಓದಿದ್ದೀರಾ? ವಿಧಾನಸಭೆಗೆ ಆಯ್ಕೆಯಾಗಿದ್ದ ಇಬ್ಬರು ಕೇಂದ್ರ ಸಚಿವರು, 8 ಸಂಸದರ ರಾಜೀನಾಮೆ

ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ 119 ಕ್ಷೇತ್ರಗಳ ಪೈಕಿ ಕಾಂಗ್ರೆಸ್ 64 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಬಹುಮತ ಪಡೆದಿತ್ತು.

ರೇವಂತ್‌ ರಾಜಕೀಯ ಪಯಣ?

ರೇವಂತ್ ರೆಡ್ಡಿ 1969 ರಲ್ಲಿ ಅವಿಭಜಿತ ಆಂಧ್ರಪ್ರದೇಶದ ಮಹಬೂಬ್ ನಗರದಲ್ಲಿ ಜನಿಸಿದರು. ರೆಡ್ಡಿಯವರು ತಮ್ಮ ವಿದ್ಯಾರ್ಥಿಯಾಗಿದ್ದಾಗ ಎಬಿವಿಪಿಯಿಂದ ರಾಜಕಾರಣವನ್ನು ಆರಂಭಿಸಿದ್ದರು. 2007ರಲ್ಲಿ ಮೆಹಬೂಬ ನಗರ ಜಿಲ್ಲೆಯಲ್ಲಿ ನಡೆದಿದ್ದ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದು ಅಂದಿನ ಬಲಿಷ್ಠ ಟಿಡಿಪಿ, ಟಿಆರ್‌ಎಸ್ ಹಾಗೂ ಬಿಜೆಪಿಯಂತಹ ಪಕ್ಷಗಳ ಅಭ್ಯರ್ಥಿಗಳನ್ನೇ ಮಣಿಸಿ ನಂತರ ಚಂದ್ರಬಾಬು ನಾಯ್ಡು ಅವರ ತೆಲುಗು ದೇಶಂ ಪಕ್ಷ ಸೇರಿದರು. 2009 ರಲ್ಲಿ, ಅವರು ತೆಲುಗು ದೇಶಂ ಪಕ್ಷದ ಪರವಾಗಿ ಆಂಧ್ರಪ್ರದೇಶದ ಕೊಡಂಗಲ್ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾದರು.

2014 ರಲ್ಲಿ ಅವರು ತೆಲಂಗಾಣ ವಿಧಾನಸಭೆಯಲ್ಲಿ ತೆಲುಗು ದೇಶಂ ಪಕ್ಷದ ಅಧ್ಯಕ್ಷರಾಗಿ ಆಯ್ಕೆಯಾದರು. ರೇವಂತ್ ರೆಡ್ಡಿ 2017 ರಲ್ಲಿ ಕಾಂಗ್ರೆಸ್ ಸೇರಿದ್ದರು, ಆದರೆ 2018ರ ವಿಧಾನಸಭಾ ಚುನಾವಣೆಯಲ್ಲಿ ಕೊಡಂಗಲ್‌ನಿಂದ ಸ್ಪರ್ಧಿಸಿ ಸೋಲುತ್ತಾರೆ. ನಂತರ ಮೂರು ತಿಂಗಳಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಮಲ್ಕಾಜ್‌ಗಿರಿಯಿಂದ ಸಂಸದರಾಗಿ ಆಯ್ಕೆಯಾಗುತ್ತಾರೆ. ಪುನಃ 2019ರ ಲೋಕಸಭೆ ಚುನಾವಣೆಯಲ್ಲಿ  ಮಲ್ಕಾಜ್‌ಗಿರಿಯಿಂದ ಸ್ಪರ್ಧಿಸಿ ಗೆದ್ದಿದ್ದರು. 2021ರಲ್ಲಿ ಕಾಂಗ್ರೆಸ್ ಅವರಿಗೆ ದೊಡ್ಡ ಜವಾಬ್ದಾರಿ ನೀಡಿ ರಾಜ್ಯಾಧ್ಯಕ್ಷರನ್ನಾಗಿ ಮಾಡಿತು. ಈಗ ಪಕ್ಷವನ್ನು ಅಧಿಕಾರಕ್ಕೆ ತಂದು ಮುಖ್ಯಮಂತ್ರಿಯಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸುಪ್ರೀಂ ಆದೇಶ ಉಲ್ಲಂಘನೆ: ಕಾನೂನುಬಾಹಿರ ವಶಕ್ಕೆ ತಡೆ ಇದ್ದರೂ 100ಕ್ಕೂ ಹೆಚ್ಚು ಪ್ರತಿಭಟನಾಕಾರರ ಬಂಧನ!

ರಾಜಧಾನಿ ದೆಹಲಿಯಲ್ಲಿ ಕನ್ಹಾಟ್ ಪ್ಲೇಸ್ ಹಾಗೂ ಜಂತರ್ ಮಂತರ್ ಸುತ್ತಮುತ್ತ ನಡೆಯುತ್ತಿರುವ...

ಗ್ಯಾನೂ ವಿರುದ್ಧ ಪ್ರತಿಭಟನೆ: ವಿದ್ಯಾರ್ಥಿ ನಾಯಕಿ ನೇಹಾ ಬೋರಾ ಬಂಧನ

ದೆಹಲಿಯಲ್ಲಿ ಚುನಾವಣಾ ಆಯೋಗ ಮತ್ತು ಕೇಂದ್ರ ಸರ್ಕಾರದ ವಿರುದ್ಧದ ಪ್ರತಿಭಟನೆಗಳು ಭಾನುವಾರವೂ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿ, ಯುವತಿಯರ ಮೇಲೆ ಹಲ್ಲೆ; ನಾಲ್ವರು RSS ಗೂಂಡಾಗಳ ಬಂಧನ

ದೆಹಲಿಯಲ್ಲಿ ನಡೆದ 'ಕಾಕ್ರೋಚ್ ಜನತಾ ಪಾರ್ಟಿ' (CJP) ಪ್ರತಿಭಟನೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳು...