ತೆಲಂಗಾಣ ಶಾಸಕಾಂಗ ಪಕ್ಷದ ನಾಯಕನಾಗಿ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಎ ರೇವಂತ್ ರೆಡ್ಡಿ ಆಯ್ಕೆಯಾಗಿದ್ದು, ಡಿಸೆಂಬರ್ 7 ರಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್, ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ತೆಲಂಗಾಣ ಶಾಸಕಾಂಗ ಪಕ್ಷದ ನಾಯಕನನ್ನಾಗಿ ಎ ರೇವಂತ್ ರೆಡ್ಡಿ ಅವರನ್ನು ನೇಮಕ ಮಾಡಿದ್ದಾರೆ. ಅವರು ಡಿಸೆಂಬರ್ 7 ರಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಡಿ.6 ರಂದು ನಡೆಯಲಿರುವ ‘ಇಂಡಿಯಾ’ ಸಭೆ ಮುಂದೂಡಿಕೆ
ರೇವಂತ್ ರೆಡ್ಡಿ ಅವರು ಅನುಭವಿಯಾಗಿದ್ದು, ಎಲ್ಲರೊಂದಿಗೆ ಕೆಲಸ ಮಾಡುತ್ತಾರೆ. ಈಗಾಗಲೇ ತೆಲಂಗಾಣ ಜನರಿಗೆ ತಾವು ನೀಡಿರುವ ಭರವಸೆ ಈಡೇರಿಸಲಿದ್ದಾರೆ ಎಂದು ವೇಣುಗೋಪಾಲ್ ಹೇಳಿದರು.
ಹಿರಿಯ ಕಾಂಗ್ರೆಸ್ ನಾಯಕರಾದ ಉತ್ತಮ್ ಕುಮಾರ್ ರೆಡ್ಡಿ ಮತ್ತು ಭಟ್ಟಿ ವಿಕ್ರಮಾರ್ಕ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬಹುದು ಅಥವಾ ಉತ್ತಮ ಖಾತೆಗೆ ಅವಕಾಶ ಕಲ್ಪಿಸಬಹುದು. ರಾಜ್ಯದಲ್ಲಿ ಸರದಿ ಮುಖ್ಯಮಂತ್ರಿ ಸೂತ್ರ ಇರುವುದಿಲ್ಲ ಎಂದು ಮೂಲಗಳು ತಿಳಿಸಿವೆ.