6ನೇ ತರಗತಿಯಿಂದ ಮೂರು ಭಾಷಾ ನೀತಿ ಅನುಷ್ಠಾನ ಪರಿಶೀಲಿಸಿ: ಸಿಬಿಎಸ್‌ಇಗೆ ಸುಪ್ರೀಂ ಕೋರ್ಟ್‌ ಸೂಚನೆ

Date:

ಸಿಬಿಎಸ್‌ಇ ಶಾಲೆಗಳಲ್ಲಿ ಮೂರು ಭಾಷಾ ನೀತಿಯನ್ನು ಜಾರಿಗೆ ತರುವ ವಿಷಯಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಮಹತ್ವದ ಸಲಹೆಯನ್ನು ನೀಡಿದೆ. ಪ್ರಸ್ತುತ ಶೈಕ್ಷಣಿಕ ಸಾಲಿನಲ್ಲಿ ಏಕಾಏಕಿ ಹೊಸ ಭಾಷಾ ನೀತಿಯನ್ನು ಹೇರಿ ವಿದ್ಯಾರ್ಥಿಗಳಿಗೆ ಆತಂಕ ತರಬಾರದು; ಬದಲಾಗಿ, 6ನೇ ತರಗತಿಯ ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ (ಮುಂದಿನ ಶೈಕ್ಷಣಿಕ ಸಾಲಿನಿಂದ) ಈ ನೀತಿಯನ್ನು ಅನುಷ್ಠಾನಗೊಳಿಸುವ ಬಗ್ಗೆ ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ ಸಿಬಿಎಸ್‌ಇ ಮಂಡಳಿಗೆ ಸೂಚಿಸಿದೆ.

- Advertisement -

ರಾಷ್ಟ್ರೀಯ ಶಿಕ್ಷಣ ನೀತಿ (NEP 2020) ಹಾಗೂ ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟಿನ (NCF-SE) ಭಾಗವಾಗಿ ಸಿಬಿಎಸ್‌ಇ ಶಿಕ್ಷಣ ಮಂಡಳಿಯು ಮೂರು ಭಾಷೆಗಳನ್ನು (ಇದರಲ್ಲಿ ಕನಿಷ್ಠ ಎರಡು ಭಾರತೀಯ ಭಾಷೆಗಳು) ಕಡ್ಡಾಯಗೊಳಿಸುವ ನಿರ್ಧಾರ ಕೈಗೊಂಡಿತ್ತು. ಆದರೆ, ಈ ನೀತಿಯನ್ನು ಮಧ್ಯಂತರದಲ್ಲಿ ಅಥವಾ ತರಾತುರಿಯಲ್ಲಿ ಜಾರಿಗೆ ತರುವುದರಿಂದ ವಿದ್ಯಾರ್ಥಿಗಳ ಮೇಲೆ ಅನಗತ್ಯ ಶೈಕ್ಷಣಿಕ ಒತ್ತಡ ಬೀಳುತ್ತದೆ ಎಂದು ಹಲವು ಪೋಷಕರು ಮತ್ತು ಅರ್ಜಿದಾರರು ನ್ಯಾಯಾಲಯದ ಬಾಗಿಲು ತಟ್ಟಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಬಾಗಲಕೋಟೆ | ಆಲಮಟ್ಟಿ ಒಳಹರಿವು ಶೂನ್ಯ: ಬಾಗಿನ ಅರ್ಪಣೆಗೆ...

ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿ ಆಲಮಟ್ಟಿ ಜಲಾಶಯದ ಒಳಹರಿವು ಶೂನ್ಯಕ್ಕೆ ತಲುಪಿದೆ. ಜಲಾಶಯ ಭರ್ತಿಯಾಗಿ ಈಗ ನೀರಿನ ಮಟ್ಟ ಇಳಿಕೆಯಾಗುತ್ತಿದ್ದರೂ, ಇದುವರೆಗೆ ಕೃಷ್ಣಾ ನದಿಗೆ ಬಾಗಿನ ಅರ್ಪಿಸದಿರುವುದು ಬಾಗಲಕೋಟೆ ಜಿಲ್ಲೆಯ...

ದೇವರು, ಪುರಾಣ, ಕರ್ಮಕಾಂಡಗಳು ಮನುಷ್ಯನನ್ನು ಗುಲಾಮನನ್ನಾಗಿ ಮಾಡುತ್ತವೆಂದು ಹೇಳಿದ...

ಪೆರಿಯಾರ್ ದೇವರನ್ನು ವಿರೋಧಿಸಿದ್ದು ದೇವರ ಮೇಲಿನ ದ್ವೇಷಕ್ಕಲ್ಲ; ಬದಲಿಗೆ ದೇವರ ಹೆಸರಿನಲ್ಲಿ ನಡೆಯುವ ಮೋಸ, ಶೋಷಣೆಯ ವಿರುದ್ಧ. ಅವರು ಮುಖ್ಯಮಂತ್ರಿ ಸ್ಥಾನವನ್ನು ತಿರಸ್ಕರಿಸಿದರು. ಜೀವನಪೂರ್ತಿ ಯಾವುದೇ ಅಧಿಕಾರದ ಕುರ್ಚಿಯನ್ನೂ ಏರಲಿಲ್ಲ. ಪ್ರತಿಯೊಬ್ಬ ಮನುಷ್ಯನಿಗೂ...

ಇದನ್ನೂ ಓದಿ: ಕೇವಲ 5 ದಿನಗಳಲ್ಲಿ 1 ಕೋಟಿ ಇನ್‌ಸ್ಟಾ ಫಾಲೋವರ್ಸ್: ‘ಕಾಕ್ರೋಚ್ ಜನತಾ ಪಾರ್ಟಿ’ ಮುಂದೆ ಮಂಡಿಯೂರಿದ ಬಿಜೆಪಿ!

ಪ್ರಕರಣದ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರನ್ನೊಳಗೊಂಡ ಪೀಠವು, “ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ ಕಲ್ಪಿಸಿ, ಯಾವುದೇ ರೀತಿಯ ಆಶ್ಚರ್ಯ ಅಥವಾ ದಿಢೀರ್ ಬದಲಾವಣೆಗಳನ್ನು ಅವರ ಮೇಲೆ ಹೇರಬೇಡಿ” ಎಂದು ಕೇಂದ್ರ ಸರ್ಕಾರ ಮತ್ತು ಸಿಬಿಎಸ್‌ಇಗೆ ಸೂಚಿಸಿತು.

9ನೇ ತರಗತಿಯ ಹಂತದಲ್ಲಿ ಹೊಸ ಭಾಷೆಯನ್ನು ಕಲಿಯಲು ಪ್ರಾರಂಭಿಸುವುದು ವಿದ್ಯಾರ್ಥಿಗಳಿಗೆ ಕಷ್ಟಕರವಾಗಬಹುದು. ಹೀಗಾಗಿ, ಆರಂಭಿಕ ಹಂತವಾದ 6ನೇ ತರಗತಿಯಿಂದಲೇ ಹೊಸ ಭಾಷಾ ಕಲಿಕೆಯನ್ನು ಪರಿಚಯಿಸುವುದು ಸೂಕ್ತ, ಮತ್ತು ಈ ವರ್ಷದ 6ನೇ ತರಗತಿ ವಿದ್ಯಾರ್ಥಿಗಳಿಗೆ ಇದರಿಂದ ವಿನಾಯಿತಿ ನೀಡಿ ಮುಂದಿನ ವರ್ಷದಿಂದ ಕಡ್ಡಾಯಗೊಳಿಸುವ ಬಗ್ಗೆ ಪರಿಶೀಲಿಸಿ ಎಂದು ಕೋರ್ಟ್ ಪ್ರಸ್ತಾಪಿಸಿದೆ.

ಇದಕ್ಕೆ ಸ್ಪಂದಿಸಿರುವ ಕೇಂದ್ರ ಸರ್ಕಾರದ ಪರ ವಕೀಲರು, ಈ ವಿಷಯದಲ್ಲಿ ನ್ಯಾಯಾಲಯ ನೀಡಿರುವ ಸಲಹೆಗಳನ್ನು ಆಡಳಿತ ಮಂಡಳಿಯೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ತಳೆಯುವುದಾಗಿ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ʼಕ್ಯಾಷ್‌ಲೆಸ್‌ ಎಕಾನಮಿʼ ಹೆಸರಲ್ಲಿ ಸುಲಿಗೆ; ನೋಟು ಬ್ಯಾನ್‌ನಿಂದ UPI ವರೆಗೆ ಮೋದಿ ಸರ್ಕಾರದ ಎಡವಟ್ಟುಗಳು

ಈ ಅಸಮರ್ಪಕ ಆರ್ಥಿಕ ಹೊಡೆತದ ವಿರುದ್ಧ ‘ಭಾರತೀಯ ಚಿಲ್ಲರೆ ವ್ಯಾಪಾರಿಗಳ ಸಂಘ’...

ದವಡೆ ಜಜ್ಜಿಸಿಕೊಂಡ ಆಪರೇಷನ್ ಎಪಿಕ್ ಫ್ಯೂರಿ: ಇರಾನ್ ಕಾಳಗದಲ್ಲಿ ಅಮೆರಿಕಕ್ಕೆ ಆದ ನಷ್ಟಗಳೇನೇನು?

ಬೃಹತ್ ಮೊತ್ತದ ಬಜೆಟ್, ದುಬಾರಿ ಬೆಲೆಯ ಯುದ್ಧ ವಿಮಾನಗಳು ಮತ್ತು ಅತ್ಯಾಧುನಿಕ...

ಅಪೌಷ್ಟಿಕತೆಯ ನೆರಳಲ್ಲಿ ಕಲ್ಯಾಣ ಕರ್ನಾಟಕ; ರಾಯಚೂರಿನ ಶೇ. 49.5 ಮಕ್ಕಳಲ್ಲಿ ಪೋಷಕಾಂಶದ ಕೊರತೆ

ಇತ್ತೀಚಿನ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ (NFHS 2023–24) ಕಲ್ಯಾಣ ಕರ್ನಾಟಕ...

ಬೆಂಗಳೂರು | ಪತ್ನಿ ಮೇಲೆ ಆಸಿಡ್ ಸುರಿದು, ಮಚ್ಚಿನಿಂದ ಹಲ್ಲೆಗೈದ ವಿಕೃತ ಪತಿ

ನಡುರಸ್ತೆಯಲ್ಲೇ ಪತಿಯೊಬ್ಬ ತನ್ನ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಹೃದಯವಿದ್ರಾವಕ...