ಸ್ಥಳೀಯ ಸಂಸ್ಥೆಗಳ ಚುನಾವಣೆ ನಾಮಪತ್ರ ಸಲ್ಲಿಕೆ ಗಡುವು ಪರಿಶೀಲಿಸಿ; ಆಂಧ್ರ ಪ್ರದೇಶ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ!

Date:

ಆಂಧ್ರಪ್ರದೇಶದಲ್ಲಿ ಮುಂಬರಲಿರುವ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ನಾಮಪತ್ರ ಸಲ್ಲಿಕೆಗೆ ನಿಗದಿಯಾಗಿರುವ ಗಡುವನ್ನು ಪರಿಶೀಲಿಸುವಂತೆ ಮತ್ತು ಅಕ್ಟೋಬರ್‌ 22ರೊಳಗೆ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್‌ ನಿರ್ದೇಶನ ನೀಡಿದೆ.

- Advertisement -

ಆಂಧ್ರಪ್ರದೇಶದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಾಗಿ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ನಡೆಯುತ್ತಿದೆ. ಆದರೆ, ರಾಜ್ಯದಲ್ಲಿ ವ್ಯಾಪಕ ಹಿಂಸಾಚಾರ ಮತ್ತು ಅಶಾಂತಿ ನೆಲೆಸಿರುವುದರಿಂದ, ತಮ್ಮ ಪಕ್ಷದ ಅಭ್ಯರ್ಥಿಗಳಿಗೆ ನಾಮಪತ್ರ ಸಲ್ಲಿಸಲು ಬಿಡದೆ ತಡೆಯಲಾಗಿದೆ ಎಂದು ವೈಎಸ್‌ಆರ್‌ಸಿಪಿ ಗಂಭೀರವಾಗಿ ಆರೋಪಿಸಿದೆ. ನಾಮಪತ್ರ ಸಲ್ಲಿಕೆ ಸಾಧ್ಯವಾಗದ ಹಿನ್ನೆಲೆಯಲ್ಲಿ ಕಾಲಾವಕಾಶವನ್ನು ಮತ್ತೊಂದು ದಿನ ವಿಸ್ತರಿಸಬೇಕೆಂದು ಕೋರಿ ಪಕ್ಷವು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

ಇಂಟರ್ನೆಟ್‌ನಿಂದ AIವರೆಗೆ.. ದಶಕಗಳ ಹಿಂದೆಯೇ ಜಗತ್ತಿನ ಭವಿಷ್ಯ ಕಂಡಿದ್ದ...

ತಂತ್ರಜ್ಞಾನ ನಮ್ಮ ಕೈಸೇರುವ, ದೈನಂದಿನ ಬದುಕಿನ ಅವಿಭಾಜ್ಯ ಅಂಗವಾಗುವ ದಶಕಗಳ ಹಿಂದೆಯೇ, ಅಂದಿನ ಕಾಲದ ಕಲಾವಿದರು ತಮ್ಮ ಗೀತೆಗಳ ಸಾಲುಗಳ ಮೂಲಕ ಮುಂದಿನ ಜಗತ್ತು ಹೀಗೇ ಇದ್ದೀತೆಂದು ಖಚಿತವಾಗಿ ಹೇಳಿದ್ದರು. ಮಾನವಕುಲವು ಮುಂದೆ...

ಕೊಪ್ಪಳ | ದಸರಾ ಪುರಾಣ ಪ್ರವಚನಕ್ಕೆ ಮುಸ್ಲಿಂ ಕಲಾವಿದನ...

ಧರ್ಮಗಳು ಬೇರೆ ಬೇರೆಯಾದರೂ ಕಲೆ, ಸಂಸ್ಕೃತಿ ಮತ್ತು ಮಾನವೀಯತೆಯ ಮುಂದೆ ಧರ್ಮದ ಗಡಿಗಳು ಅಡ್ಡಿಯಾಗುವುದಿಲ್ಲ ಎಂಬುದಕ್ಕೆ ಕೊಪ್ಪಳ ತಾಲೂಕಿನ ಅಳವಂಡಿ ಗ್ರಾಮ ಸಾಕ್ಷಿ. ಇಲ್ಲಿನ ಕಂಪ್ಲಿ ಪ್ರದೇಶದ ಬನಶಂಕರಿ ದೇವಸ್ಥಾನದಲ್ಲಿ ನಡೆಯುವ ದಸರಾ...

ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ ಜಾಯ್‌ಮಲ್ಯ ಬಾಗ್ಚಿ ಮತ್ತು ವಿ. ಮೋಹನಾ ಅವರನ್ನೊಳಗೊಂಡ ವಿಶೇಷ ಪೀಠವು, “ಚುನಾವಣಾ ಪ್ರಕ್ರಿಯೆಯಲ್ಲಿ ಮುಕ್ತ ಮತ್ತು ನ್ಯಾಯಸಮ್ಮತ ವಾತಾವರಣ ಕಾಪಾಡುವುದು ಸಂವಿಧಾನದ ಮೂಲ ರಚನೆಯ ಭಾಗವಾಗಿದೆ” ಎಂದು ಹೇಳಿದೆ.

“ನಾಮಪತ್ರ ಸಲ್ಲಿಸುವ ಹಕ್ಕು ಚುನಾವಣಾ ಪ್ರಕ್ರಿಯೆಯ ಅತ್ಯಂತ ಪ್ರಮುಖ ಅಂಗವಾಗಿದೆ. ಪ್ರಜಾಸತ್ತಾತ್ಮಕ ಮೌಲ್ಯಗಳು ಮತ್ತು ಚುನಾವಣಾ ನ್ಯಾಯಸಮ್ಮತತೆಗೆ ಧಕ್ಕೆ ಉಂಟಾದಾಗ ಸಾವಿಂಧಾನಿಕ ನ್ಯಾಯಾಲಯಗಳು ಮೂಕಪ್ರೇಕ್ಷಕವಾಗಿರಲು ಸಾಧ್ಯವಿಲ್ಲ. ಚುನಾವಣಾ ವಿಷಯಗಳಲ್ಲೂ ನ್ಯಾಯಾಂಗ ಪರಾಮರ್ಶೆಯ ಅಧಿಕಾರ ಅಬಾಧಿತವಾಗಿರುತ್ತದೆ” ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಅರ್ಜಿದಾರರ ಪರವಾಗಿ ಹಾಜರಿದ್ದ ಹಿರಿಯ ವಕೀಲ ಮರಿಂದರ್ ಸಿಂಗ್, “ಆಂಧ್ರಪ್ರದೇಶದಲ್ಲಿ ನಾಮಪತ್ರ ಸಲ್ಲಿಕೆಯ ಮೊದಲ ದಿನವಾದ ಅಕ್ಟೋಬರ್ 16ರಂದು ಪುಂಗನೂರು, ರಾಯಚೋಟಿ, ಕಡಪ ಹಾಗೂ ತಿರುಪತಿ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ವ್ಯಾಪಕ ಹಿಂಸಾಚಾರ ನಡೆದಿದೆ. ಸುಮಾರು 63%ರಷ್ಟು ಅಭ್ಯರ್ಥಿಗಳಿಗೆ ನಾಮಪತ್ರ ಸಲ್ಲಿಸಲು ಅವಕಾಶ ನೀಡದಂತೆ ತಡೆಯಲಾಗಿದೆ” ಎಂದು ವಾದಿಸಿದರು.

“ಕಡಪದಲ್ಲಿ ಅಭ್ಯರ್ಥಿಯ ನಾಮಪತ್ರಗಳನ್ನು ಹರಿದುಹಾಕಲಾಗಿದೆ. ತಿರುಪತಿಯಲ್ಲಿ ಅಭ್ಯರ್ಥಿಗಳ ಮೇಲೆ ಹಲ್ಲೆ ನಡೆಸಿ ನಾಮಪತ್ರ ಕೇಂದ್ರಗಳಿಗೆ ತೆರಳದಂತೆ ತಡೆಯಲಾಗಿದೆ” ಎಂದು ಆರೋಪಿಸಿದ ಅವರು, ಇದಕ್ಕೆ ಸಂಬಂಧಿಸಿದ ದೃಶ್ಯಾವಳಿ ಮತ್ತು ಅಫಿಡವಿಟ್‌ಗಳನ್ನು ಕೋರ್ಟ್‌ಗೆ ಸಲ್ಲಿಸಿದರು.

ರಾಜ್ಯ ಸರ್ಕಾರದ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲರಾದ ಸಿದ್ಧಾರ್ಥ್ ಲೂಥ್ರಾ ಮತ್ತು ಮುಕುಲ್ ರೋಹಟಗಿ, “ಅರ್ಜಿದಾರ ಪಕ್ಷವೇ ಸ್ವತಃ ಹಿಂಸಾಚಾರವನ್ನು ಪ್ರಚೋದಿಸಿದೆ” ಎಂದು ವಾದಿಸಿದರು.

ಈ ಲೇಖನ ಓದಿದ್ದೀರಾ?: ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ ನಡುವೆ ಟ್ರಂಪ್‌ಗೆ ಅಗ್ನಿಪರೀಕ್ಷೆ!

ಎರಡೂ ಕಡೆಯ ವಾದ-ಪ್ರತಿವಾದಗಳನ್ನು ಆಲಿಸಿದ ಸುಪ್ರೀಂ ಕೋರ್ಟ್, ಅರ್ಜಿದಾರರ ಅರ್ಜಿಯಲ್ಲಿ ಹುರುಳಿದೆ (ಸತ್ಯ) ಎಂದು ಅಭಿಪ್ರಾಯಪಟ್ಟಿದೆ. ಅಕ್ಟೋಬರ್ 21 ರಂದು ಪ್ರಕಟಗೊಳ್ಳಬೇಕಿದ್ದ ಅಂತಿಮ ಅಭ್ಯರ್ಥಿಗಳ ಪಟ್ಟಿಯನ್ನು ಅಕ್ಟೋಬರ್ 25ರವರೆಗೆ ಪ್ರಕಟಿಸದಂತೆ ತಡೆ ನೀಡಿದೆ.

ಮಾತ್ರವಲ್ಲದೆ, ನಾಮಪತ್ರ ಸಲ್ಲಿಕೆ ವೇಳೆ ನಡೆದಿದೆ ಎನ್ನಲಾದ ಹಿಂಸಾಚಾರ, ಅಡ್ಡಿಪಡಿಸುವಿಕೆ ಹಾಗೂ ಡಿಜಿಟಲ್ ಸಾಕ್ಷ್ಯಗಳ ಕುರಿತಾದ ದೂರುಗಳನ್ನು ಆಯೋಗವು ಅಕ್ಟೋಬರ್ 22ರೊಳಗೆ ಪರಿಶೀಲಿಸಿ, ಗಡುವು ವಿಸ್ತರಿಸುವ ನಿರ್ಧಾರ ಕೈಗೊಳ್ಳಬೇಕು. ಅಕ್ಟೋಬರ್ 22ರ ನಂತರ ಅಭ್ಯರ್ಥಿಗಳಿಗೆ ನಾಮಪತ್ರ ಸಲ್ಲಿಸಲು ಕನಿಷ್ಠ 48 ಗಂಟೆಗಳ ಕಾಲಾವಕಾಶ ನೀಡಬೇಕು ಎಂದು ಆದೇಶಿಸಿದೆ.

ಜೊತೆಗೆ, ಅಭ್ಯರ್ಥಿಗಳಿಗೆ ಸೂಕ್ತ ಪೊಲೀಸ್ ಭದ್ರತೆ ಕಲ್ಪಿಸಲು ಮತ್ತು ನಾಮಪತ್ರ ಕೇಂದ್ರಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಕವರೇಜ್ ಒದಗಿಸುವಂತೆ ರಾಜ್ಯದ ಪೊಲೀಸ್ ಮಹಾನಿರ್ದೇಶಕರಿಗೆ (DGP) ನಿರ್ದೇಶಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

RSSಗೆ ಮಹಿಳೆಯರು ಎಂದರೆ ಪುರುಷರ ಸ್ವತ್ತು: ಸಂಘಪರಿವಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಎಂದರೆ ಮಹಿಳಾ ವಿರೋಧಿ, ಸಂವಿಧಾನ ವಿರೋಧಿ...

ದೇವಾ: ಸಂಗೀತ ಲೋಕದ ‘ತೇನಿಸೈ ತೆಂಡ್ರಲ್’

ಅಪಾರ ಶ್ರಮ, ನಿರಂತರ ಅಧ್ಯಯನ ಹಾಗೂ ಸತತ ಪ್ರಯತ್ನಗಳಿಂದ ಸಂಗೀತ ಕ್ಷೇತ್ರಕ್ಕೆ...

ಜಿರಳೆ ಪ್ರತಿಕೃತಿ ದಹನದ ನೆಪದಲ್ಲಿ ಯುವ ದನಿಯನ್ನು ಹತ್ತಿಕ್ಕುವ ಮೋದಿ ಸರ್ಕಾರದ ದಮನಕಾರಿ ನೀತಿ

ದೆಹಲಿಯ ಪೀತಾಂಪುರದಲ್ಲಿ ಮಂಗಳವಾರ ನಡೆದ ದಸರಾ ಆಚರಣೆಯು ಈ ಬಾರಿ ಧಾರ್ಮಿಕ...