ತೆಲಂಗಾಣದಲ್ಲಿ ಮುಂದುವರೆದ ಸಿಎಂ ಆಯ್ಕೆ ಕಗ್ಗಂಟು: ಕರ್ನಾಟಕ ಮಾದರಿ ಆಯ್ಕೆ ಸಾಧ್ಯತೆ

Date:

Advertisements

ತೆಲಂಗಾಣ ರಾಜ್ಯದಲ್ಲಿ ನೂತನವಾಗಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಪಕ್ಷಕ್ಕೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿ ಪರಿಣಮಿಸಿದೆ. ಈ ಹಿನ್ನೆಲೆಯಲ್ಲಿ ಸಿಎಂ ಪ್ರಮಾಣ ವಚನ ಸ್ವೀಕಾರ ಸಮಾರಂಭ ಮತ್ತಷ್ಟು ವಿಳಂಬವಾಗುವ ಸಾಧ್ಯತೆಯಿದೆ.

ಮುಖ್ಯಮಂತ್ರಿ ಆಯ್ಕೆಗೆ ಸಂಬಂಧಿಸಿದಂತೆ ಪಕ್ಷದ 64 ಶಾಸಕರಲ್ಲಿ ಒಮ್ಮತ ಮೂಡಿಲ್ಲ. ಆರಂಭದಲ್ಲಿ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಎ ರೇವಂತ್ ರೆಡ್ಡಿ, ಮುಖ್ಯಮಂತ್ರಿಯಾಗಿ ಹಾಗೂ ಕೆಲ ಸಚಿವರು ಪ್ರಮಾಣ ವಚನ ಸ್ವೀಕರಿಸಲು ರಾಜಭವನದಲ್ಲಿ ವ್ಯವಸ್ಥೆ ಮಾಡಲಾಗಿತ್ತು.

ಆದರೆ, ಹಿರಿಯ ನಾಯಕರ ನಡುವೆ ಭಿನ್ನಾಭಿಪ್ರಾಯ ಕಾಣಿಸಿಕೊಂಡಿದ್ದು, ಪಕ್ಷವು ಕಾರ್ಯಕ್ರಮವನ್ನು ಮುಂದೂಡಲು ಯೋಜಿಸಿದೆ. ಮಲ್ಲು ಭಟ್ಟಿ ವಿಕ್ರಮಾರ್ಕ, ಉತ್ತಮ್ ಕುಮಾರ್ ರೆಡ್ಡಿ, ಶ್ರೀಧರ್ ಬಾಬು, ಮತ್ತು ಕೋಮಟಿರೆಡ್ಡಿ ಸಹೋದರರು ರೇವಂತ್ ಸಿಎಂ ಆಗುವುದನ್ನು ವಿರೋಧಿಸಿದರು ಎಂದು ಕಾಂಗ್ರೆಸ್‌ನ  ಮುಖಂಡರೊಬ್ಬರು ಗೌಪ್ಯವಾಗಿ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

Advertisements

ವಿಶೇಷ ವೀಕ್ಷಕರೊಂದಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸರ್ಕಾರ ರಚನೆಯ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳುತ್ತಾರೆ. ದೆಹಲಿಯಲ್ಲಿ ಚರ್ಚೆ ನಡೆಸಿ ಇಂದು (ಡಿ.5) ಸಂಜೆಯೊಳಗೆ ನಿರ್ಧಾರ ಪ್ರಕಟಿಸುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.

ಈ ಸುದ್ದಿ ಓದಿದ್ದೀರಾ? 4 ರಾಜ್ಯಗಳಲ್ಲಿ ಬಿಜೆಪಿಗಿಂತ ಕಾಂಗ್ರೆಸ್‌ಗೆ ಹೆಚ್ಚು ಮತ: ‘ಕೈ’ ಪಕ್ಷದ ಮೇಲೆ ಜನರಿಗೆ ಹೆಚ್ಚು ನಂಬಿಕೆ

ಕರ್ನಾಟಕದ ಡಿಸಿಎಂ ಡಿಕೆ ಶಿವಕುಮಾರ್ ಮತ್ತು ತೆಲಂಗಾಣದ ಎಐಸಿಸಿ ಉಸ್ತುವಾರಿ ಮಾಣಿಕ್ರಾವ್ ಠಾಕ್ರೆ ಸೇರಿದಂತೆ ಎಐಸಿಸಿ ವೀಕ್ಷಕರು ಪಕ್ಷದ ಹೈಕಮಾಂಡ್‌ನೊಂದಿಗೆ ಹೆಚ್ಚಿನ ಚರ್ಚೆ ನಡೆಸಲು ದೆಹಲಿಗೆ ತೆರಳಿದ್ದಾರೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಸಿ ಸುಸೂತ್ರವಾಗಿ ಸರ್ಕಾರ ರಚನೆ ಮಾಡಲು ವೀಕ್ಷಕರನ್ನು ನಿಯೋಜಿಸಲಾಗಿತ್ತು.

ಸಂಭಾವ್ಯ ಸಿಎಂ ಅಭ್ಯರ್ಥಿ ರೇವಂತ್ ರೆಡ್ಡಿ ಕೆಲವು ಹಿರಿಯ ನಾಯಕರಿಂದ ವಿರೋಧ ಎದುರಿಸಿದ್ದು, ಆಯ್ಕೆ ಪ್ರಕ್ರಿಯೆಯನ್ನು ದೆಹಲಿಗೆ ಸ್ಥಳಾಂತರಿಸುವಂತೆ ಒತ್ತಾಯಿಸಿದ್ದಾರೆ. ಸಿಎಲ್‌ಪಿ ಸಭೆಯಲ್ಲಿ ಸರ್ವಾನುಮತದ ನಿರ್ಣಯದ ನಂತರ, ಸಿಎಂ ಆಯ್ಕೆಗೆ ಖರ್ಗೆಯವರಿಗೆ ಅಧಿಕಾರ ನೀಡಿ, 64 ಶಾಸಕರ ವೈಯಕ್ತಿಕ ಅಭಿಪ್ರಾಯಗಳನ್ನು ಹೈದರಾಬಾದಿನ ಉಪನಗರವಾದ ಗಚಿಬೌಲಿಯಲ್ಲಿರುವ ಖಾಸಗಿ ಹೋಟೆಲ್‌ನಲ್ಲಿ ಸಂಗ್ರಹಿಸಲಾಯಿತು.

ಕೆಲವು ಶಾಸಕರು ಭಟ್ಟಿ ವಿಕ್ರಮಾರ್ಕ, ಉತ್ತಮ್ ಕುಮಾರ್ ರೆಡ್ಡಿ ಮತ್ತು ಶ್ರೀಧರ್ ಬಾಬು ಅವರನ್ನು ಸಂಭಾವ್ಯ ಸಿಎಂ ಎಂದು ಸೂಚಿಸಿದರೆ, ಬಹುತೇಕರು ರೇವಂತ್ ಅವರನ್ನು ಬೆಂಬಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಎಐಸಿಸಿ ರೇವಂತ್ ರೆಡ್ಡಿ ಅವರನ್ನು ಸಿಎಂ ಆಗಿ ಅಂತಿಮಗೊಳಿಸಿದೆ ಎಂಬ ಆರಂಭಿಕ ಊಹಾಪೋಹವನ್ನು ಬಹುತೇಕ ಹಿರಿಯ ನಾಯಕರು ನಿರಾಕರಿಸಿದ್ದಾರೆ. ಕಾಂಗ್ರೆಸ್‌ನ ದಲಿತ ಸಿಎಂ ಮುಖ ಎಂದು ಹೇಳಲಾಗುತ್ತಿರುವ ಭಟ್ಟಿ ವಿಕ್ರಮಾರ್ಕ, ಡಿಸಿಎಂ ಹುದ್ದೆ ಹೊಂದುವುದಕ್ಕೆ ನಿರಾಕರಿಸಿದ್ದಾರೆ ಎಂದು ವರದಿಯಾಗಿದೆ. ಒಂದು ವೇಳೆ ಆ ಖಾತೆ ನೀಡಿದರೆ ಪ್ರಮುಖ ಖಾತೆಯೊಂದಿಗೆ ಏಕೈಕ ಉಪ ಮುಖ್ಯಮಂತ್ರಿಯಾಗಲು ಒಲವು ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಸ್ಪೀಕರ್, ಉಪಸಭಾಪತಿ ಮತ್ತು ತೆಲಂಗಾಣ ಪಿಸಿಸಿ ಅಧ್ಯಕ್ಷರ ಬಗ್ಗೆಯೂ ಒಮ್ಮತಕ್ಕೆ ಬಂದಿಲ್ಲ. ರೇವಂತ್ ಸಿಎಲ್‌ಪಿ ನಾಯಕರಾಗಿ ಆಯ್ಕೆಯಾದರೆ ಪಿಸಿಸಿ ಅಧ್ಯಕ್ಷ ಸ್ಥಾನವನ್ನು ಹಿರಿಯ ನಾಯಕರಿಗೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X