ಸಲಿಂಗಿಗಳ ‘ಲಿವ್-ಇನ್’ ಸಂಬಂಧಕ್ಕೆ ಕಾನೂನಿನ ಅಡ್ಡಿಯಿಲ್ಲ: ದೆಹಲಿ ಹೈಕೋರ್ಟ್

Date:

ಪುರುಷ ಮತ್ತು ಮಹಿಳೆಯ ನಡುವಿನ ‘ಲಿವ್-ಇನ್’ (ಸಹಜೀವನ) ಸಂಬಂಧವನ್ನು ಕಾನೂನು ಮಾನ್ಯ ಮಾಡುತ್ತದೆ ಎಂದಾದರೆ, ಸಲಿಂಗಿಗಳ ಲಿವ್-ಇನ್ ಸಂಬಂಧಕ್ಕೆ ಏಕೆ ಅವಕಾಶ ನೀಡಬಾರದು ಎಂದು ದೆಹಲಿ ಹೈಕೋರ್ಟ್ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದೆ. ಸಲಿಂಗಿ ಪಾಲುದಾರರಿಗೆ ವೈದ್ಯಕೀಯ ಚಿಕಿತ್ಸೆಯ ಸಮಯದಲ್ಲಿ ಒಪ್ಪಿಗೆ ನೀಡುವ ಹಕ್ಕನ್ನು ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ವೇಳೆ ನ್ಯಾಯಾಲಯ ಈ ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿದೆ.

- Advertisement -

​ಎಲ್‌ಜಿಬಿಟಿಕ್ಯೂ ಸಮುದಾಯದ ಅರ್ಷಿಯಾ ಟಕ್ಕರ್ ಈ ಅರ್ಜಿಯನ್ನು ಸಲ್ಲಿಸಿದ್ದಾರೆ. 2002ರ ಭಾರತೀಯ ವೈದ್ಯಕೀಯ ಮಂಡಳಿಯ ನಿಯಮಗಳ ಪ್ರಕಾರ, ರೋಗಿಯ ಪತಿ, ಪತ್ನಿ ಅಥವಾ ಪೋಷಕರು ಮಾತ್ರ ವೈದ್ಯಕೀಯ ಚಿಕಿತ್ಸೆಗೆ ಒಪ್ಪಿಗೆ ನೀಡಲು ಕಾನೂನುಬದ್ಧ ಪ್ರತಿನಿಧಿಗಳಾಗಿರುತ್ತಾರೆ. ಈ ನಿಯಮವು ಸಲಿಂಗಿ ಸಂಗಾತಿಗಳನ್ನು ಹೊರಗಿಡಲಿದ್ದು, ತಮ್ಮ ಸಂಗಾತಿಗೂ ಈ ಹಕ್ಕನ್ನು ನೀಡಬೇಕು ಹಾಗೂ ಇದಕ್ಕಾಗಿ ಪ್ರತ್ಯೇಕ ಮಾರ್ಗಸೂಚಿಗಳನ್ನು ರೂಪಿಸಬೇಕು ಎಂದು ಅವರು ಕೋರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

​ಅರ್ಜಿದಾರರ ಪರ ವಾದಿಸಿದ ಹಿರಿಯ ವಕೀಲ ಸೌರಭ್ ಕೃಪಾಲ್, ಈ ತಾರತಮ್ಯವು ಸಂವಿಧಾನದ 15ನೇ ವಿಧಿಯ ನೇರ ಉಲ್ಲಂಘನೆಯಾಗಿದೆ. ಸಲಿಂಗಿ ಜೋಡಿಗಳಿಗೂ ಗೌರವಯುತವಾಗಿ ಬದುಕುವ 21ನೇ ವಿಧಿಯ ಹಕ್ಕಿದೆ ಎಂದು ಸುಪ್ರೀಂ ಕೋರ್ಟ್ ತೀರ್ಪುಗಳನ್ನು ಉಲ್ಲೇಖಿಸಿದರು. ಒಟ್ಟಿಗೆ ಜೀವಿಸಲು ಅವಕಾಶ ನೀಡಿ, ಕಷ್ಟದ ಸಮಯದಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳುವ ಹಕ್ಕನ್ನು ನಿರಾಕರಿಸುವುದು ಮೂಲಭೂತ ಹಕ್ಕುಗಳ ಆಶಯಕ್ಕೆ ವಿರುದ್ಧವಾಗಿದೆ ಎಂದರು.

​ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸ್ವರ್ಣ ಕಾಂತಾ ಶರ್ಮಾ ಅರ್ಜಿದಾರರ ಕಳವಳವನ್ನು ಒಪ್ಪಿಕೊಂಡರು. ಸಲಿಂಗಿಗಳು ಎದುರಿಸುತ್ತಿರುವ ಸಾಮಾಜಿಕ ಕಳಂಕವನ್ನು ಪ್ರಸ್ತಾಪಿಸಿದ ಅವರು, ಬಹುಸಂಖ್ಯಾತರು ಒಪ್ಪದ ಭಿನ್ನವಾದ ಹಾದಿಯನ್ನು ಆಯ್ಕೆ ಮಾಡಿದಾಗ ಅಂತಹವರನ್ನು ಗುರಿಯಾಗಿಸಲಾಗುತ್ತದೆ ಅಥವಾ ಕೀಳಾಗಿ ಕಾಣಲಾಗುತ್ತದೆ. ಅನೇಕ ಪ್ರಕರಣಗಳಲ್ಲಿ ಸ್ವಂತ ಕುಟುಂಬಗಳೇ ಅವರನ್ನು ಕೈಬಿಡುವ ಮತ್ತು ಸಂಬಂಧವನ್ನು ಒಪ್ಪಿಕೊಳ್ಳದ ಉದಾಹರಣೆಗಳಿವೆ ಎಂದು ನ್ಯಾಯಮೂರ್ತಿಗಳು ಬೇಸರ ವ್ಯಕ್ತಪಡಿಸಿದರು.

​ಈ ಮಹತ್ವದ ಅರ್ಜಿಯ ಕುರಿತು ಪ್ರತಿಕ್ರಿಯಿಸಲು ಕೇಂದ್ರ ಸರ್ಕಾರವು ಕಳೆದ ಒಂದು ವರ್ಷದಿಂದಲೂ ಅಫಿಡವಿಟ್ ಸಲ್ಲಿಸದಿರುವ ಬಗ್ಗೆ ನ್ಯಾಯಾಲಯ ತೀವ್ರ ಅಸಮಾಧಾನ ವ್ಯಕ್ತಪಡಿಸಿತು. ವಿಚಾರಣೆ ವೇಳೆ ಸರ್ಕಾರದ ವಕೀಲರು ಹೆಚ್ಚಿನ ಕಾಲಾವಕಾಶ ಕೋರಿದಾಗ, ಕೇವಲ ವೈದ್ಯಕೀಯ ಉದ್ದೇಶಗಳಿಗಾಗಿ ನಿಯಮಗಳಲ್ಲಿ ಸಣ್ಣ ಬದಲಾವಣೆ ತರಲು ವಿಳಂಬವೇಕೆ ಎಂದು ಪ್ರಶ್ನಿಸಿದ ನ್ಯಾಯಾಲಯ, ಅಫಿಡವಿಟ್ ಸಲ್ಲಿಸಲು ಸರ್ಕಾರಕ್ಕೆ ಒಂದು ವಾರದ ಗಡುವು ನೀಡಿದೆ.

​ವೈದ್ಯಕೀಯ ಕಾರಣಗಳಿಗಾಗಿ ರೋಗಿಯ ಸಲಿಂಗಿ ಸಂಗಾತಿಗೆ ಒಪ್ಪಿಗೆ ನೀಡುವ ಅಧಿಕಾರ ನೀಡುವ ಕುರಿತು ಸಂಬಂಧಪಟ್ಟ ಇಲಾಖೆಗಳೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಸರ್ಕಾರಿ ವಕೀಲರಿಗೆ ನ್ಯಾಯಮೂರ್ತಿಗಳು ಸೂಚಿಸಿದರು. ಈ ಪ್ರಕರಣವನ್ನು ಸೆಪ್ಟೆಂಬರ್ ತಿಂಗಳೊಳಗೆ ಇತ್ಯರ್ಥಪಡಿಸುವ ಉದ್ದೇಶ ಹೊಂದಿರುವ ಹೈಕೋರ್ಟ್, ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 17ಕ್ಕೆ ಮುಂದೂಡಿದೆ. ವಕೀಲರಾದ ಸೌರಭ್ ಕೃಪಾಲ್ ಮತ್ತು ಶೈಲ್ ತ್ರೇಹನ್ ಅರ್ಜಿದಾರರ ಪರ ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಅ.7ರಂದು ಆಣದೂರ ಆರೋಗ್ಯ ಕೇಂದ್ರದಲ್ಲಿ ಸಾಮೂಹಿಕ ರಕ್ತದಾನ ಶಿಬಿರ

ಬೀದರ್‌ ತಾಲೂಕಿನ ಆಣದೂರ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಅ.7ರಂದು ಬೆಳಿಗ್ಗೆ...

ಧಾರವಾಡ | ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ

ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ...

ಧಾರವಾಡ | ಸಂವಿಧಾನ, ಪ್ರಜಾಪ್ರಭುತ್ವದ ರಕ್ಷಣೆಗೆ ಒಗ್ಗೂಡಿದ ಪ್ರಗತಿಪರ ಧ್ವನಿಗಳು

ಸಂವಿಧಾನ, ಪ್ರಜಾಪ್ರಭುತ್ವ, ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಸಾಮಾಜಿಕ ಸೌಹಾರ್ದತೆಯ ರಕ್ಷಣೆಗಾಗಿ ಧಾರವಾಡದಲ್ಲಿ...

ರಾಜ್ಯಸಭಾ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ, ಇಬ್ಬರು ಕೇಂದ್ರ ಸಚಿವರಿಗೆ ಕೊಕ್

ಉತ್ತರ ಪ್ರದೇಶದಿಂದ ತೆರವಾಗಲಿರುವ ಎಂಟು ರಾಜ್ಯಸಭಾ ಸ್ಥಾನಗಳಿಗೆ ಬಿಜೆಪಿ ಸೋಮವಾರ (ಅ....