ಐಐಟಿ ಕ್ಯಾಂಪಸ್‌ಗಳಲ್ಲಿ ಆತ್ಮಹತ್ಯೆ ಹೆಚ್ಚಳ: 5 ವರ್ಷಗಳಲ್ಲಿ 45 ಸಾವು, ಶೇ.62ರಷ್ಟು ಎಸ್‌ಸಿ, ಎಸ್‌ಟಿ, ಒಬಿಸಿ ವಿದ್ಯಾರ್ಥಿಗಳು

Date:

ದೇಶದ ಪ್ರತಿಷ್ಠಿತ 23 ಭಾರತೀಯ ತಂತ್ರಜ್ಞಾನ ಸಂಸ್ಥೆಗಳಲ್ಲಿ (ಐಐಟಿ) ಕಳೆದ ಐದು ಶೈಕ್ಷಣಿಕ ವರ್ಷಗಳಲ್ಲಿ (2020-21 ರಿಂದ 2024-25) ಒಟ್ಟು 45 ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಆತಂಕಕಾರಿ ಅಧಿಕೃತ ಮಾಹಿತಿ ಹೊರಬಿದ್ದಿದೆ. ಈ ಪೈಕಿ 28 ವಿದ್ಯಾರ್ಥಿಗಳು ಅಂದರೆ ಶೇ. 62ಕ್ಕಿಂತಲೂ ಹೆಚ್ಚು ಭಾಗದಷ್ಟು ಸಂತ್ರಸ್ತರು ಪರಿಶಿಷ್ಟ ಜಾತಿ (ಎಸ್‌ಸಿ), ಪರಿಶಿಷ್ಟ ಪಂಗಡ (ಎಸ್‌ಟಿ) ಮತ್ತು ಇತರ ಹಿಂದುಳಿದ ವರ್ಗಗಳ (ಒಬಿಸಿ) ಸಮುದಾಯಕ್ಕೆ ಸೇರಿದವರಾಗಿದ್ದಾರೆ.

- Advertisement -

ಲೋಕಸಭೆಯ ಪ್ರಶ್ನೆಯೊಂದಕ್ಕೆ ಸಂಬಂಧಿಸಿದಂತೆ ಎಲ್ಲ ಐಐಟಿಗಳಿಂದ ಸಂಗ್ರಹಿಸಲಾದ ದತ್ತಾಂಶದ ವಿವರಗಳ ಪ್ರಕಾರ, ಆತ್ಮಹತ್ಯೆ ಮಾಡಿಕೊಂಡ 45 ವಿದ್ಯಾರ್ಥಿಗಳಲ್ಲಿ 12 ವಿದ್ಯಾರ್ಥಿಗಳು ಒಬಿಸಿ, 9 ವಿದ್ಯಾರ್ಥಿಗಳು ಎಸ್‌ಸಿ ಮತ್ತು 7 ವಿದ್ಯಾರ್ಥಿಗಳು ಎಸ್‌ಟಿ ಸಮುದಾಯದವರಾಗಿದ್ದಾರೆ. ಉಳಿದಂತೆ 16 ವಿದ್ಯಾರ್ಥಿಗಳು ಸಾಮಾನ್ಯ ವರ್ಗಕ್ಕೆ ಹಾಗೂ ಒಬ್ಬರು ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ (EWS) ಸೇರಿದವರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಾಗಲಕೋಟೆ | ಮುಂದುವರಿದ ಬಿಸಿಲ ಬೇಗೆ: ಮಳೆ ನಿರೀಕ್ಷೆಯಲ್ಲಿ...

ಮಳೆಗಾಲ ಮುಗಿಯುವ ಹಂತದಲ್ಲಿದ್ದರೂ ಬಾಗಲಕೋಟೆ ಜಿಲ್ಲೆಯಲ್ಲಿ ವಾತಾವರಣ ಮಾತ್ರ ಬೇಸಿಗೆಯ ಸ್ವರೂಪ ಪಡೆದುಕೊಂಡಿದೆ. ಮಳೆಗಾಗಿ ಎದುರು ನೋಡುತ್ತಿರುವ ರೈತರಿಗೆ ಬಿಸಿಲು ಮತ್ತಷ್ಟು ಆತಂಕ ಮೂಡಿಸಿದ್ದು, ಜಿಲ್ಲೆಯಲ್ಲಿ ಗರಿಷ್ಠ 35 ಡಿಗ್ರಿ ಸೆಲ್ಸಿಯಸ್ ತಾಪಮಾನ...

‘SIR ಪ್ರಕ್ರಿಯೆ ಕುರಿತು ನಮಗೆ ಏನನ್ನೂ ತಿಳಿಸದೇ ತೀರ್ಮಾನ’:...

ದೇಶದ ಅತ್ಯುನ್ನತ ಸಾಂವಿಧಾನಿಕ ಸಂಸ್ಥೆಯಾದ ಕೇಂದ್ರ ಚುನಾವಣಾ ಆಯೋಗದ (ECI) ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಇಂಥದ್ದೊಂದು ಗಂಭೀರ ಸ್ವರೂಪದ ಬಿರುಕು ಮೂಡಿದೆ. ಎಸ್‌ಐಆರ್ (Special Intensive Revision - SIR /...

ನಮ್ಮ ಜೀವನ ಪ್ರೇಮ, ಸ್ನೇಹ, ಸೌಂದರ್ಯ ಹರಡುವ ಹೂವಿನಂತಿರಲಿ:...

ಶ್ರೀರಂಗಪಟ್ಟಣ ಪುರಸಭೆ ಚಾಮನ್ ಬಯಲನ್ನು ʼಹೂವಿನ ಗ್ರಾಮʼ ಎಂದು ಘೋಷಿಸಿ, ಅಲ್ಲಿ ಗುಲಾಬಿ ಎಣ್ಣೆ ತಯಾರಿಕಾ ಘಟಕ, ಪ್ರವಾಸಿ ತಾಣ ಮಾಡಬೇಕು. ಟಿಪ್ಪು ಕಾಲದ ಚಾಮನ್ ಎಂಬ ಹೆಸರನ್ನು ಉಳಿಸಬೇಕು. ಗುಲಾಬಿ ಕೇವಲ ಒಂದು...

ಇದನ್ನೂ ಓದಿ: ಪರೀಕ್ಷೆಯಲ್ಲಿ ‘ChatGPT’ ಬಳಕೆ: ಸಿಕ್ಕಿಬಿದ್ದ ಐಐಟಿ ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ

ಅದರಲ್ಲೂ ಕಳೆದ ಕೆಲವು ವರ್ಷಗಳಲ್ಲಿ ಈ ಸಂಖ್ಯೆಯಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದೆ. 2022-23 ರಲ್ಲಿ 6 ಆತ್ಮಹತ್ಯೆ ಪ್ರಕರಣಗಳು ವರದಿಯಾಗಿದ್ದರೆ, 2023-24 ನೇ ಸಾಲಿನಲ್ಲಿ ಈ ಸಂಖ್ಯೆ ದಿಢೀರನೆ 16ಕ್ಕೆ ಏರಿಕೆಯಾಗಿತ್ತು. 2024-25 ನೇ ಸಾಲಿನಲ್ಲಿ 13 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ 45 ಆತ್ಮಹತ್ಯೆಗಳ ಹೊರತಾಗಿ, ಕಳೆದ ಐದು ವರ್ಷಗಳಲ್ಲಿ ಹೆಚ್ಚುವರಿಯಾಗಿ 8 ಅಸ್ವಾಭಾವಿಕ ಸಾವುಗಳು ಸಹ ದಾಖಲಾಗಿವೆ.

ಐಐಟಿ ಹೈದರಾಬಾದ್‌ನಲ್ಲಿ ಅತಿ ಹೆಚ್ಚು ಅಂದರೆ 7 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಐಐಟಿ ಖರಗ್‌ಪುರ, ಐಐಟಿ ದೆಹಲಿ ಮತ್ತು ಐಐಟಿ ಕಾನ್ಪುರಗಳಲ್ಲಿ ತಲಾ 6 ಪ್ರಕರಣಗಳು, ಐಐಟಿ ಮದ್ರಾಸ್‌ನಲ್ಲಿ 5 ಹಾಗೂ ಐಐಟಿ (BHU) ವಾರಣಾಸಿಯಲ್ಲಿ 4 ಆತ್ಮಹತ್ಯೆ ಪ್ರಕರಣಗಳು ದಾಖಲಾಗಿವೆ.

ಇತ್ತೀಚೆಗೆ ಐಐಟಿ ಬಾಂಬೆಯಲ್ಲಿ ದಲಿತ ಸಮುದಾಯದ ವಿದ್ಯಾರ್ಥಿ ಸಾಹಿಲ್ ವಾಕೋಡೆ ಅವರ ಆತ್ಮಹತ್ಯೆಯ ನಂತರ, ಕ್ಯಾಂಪಸ್‌ಗಳಲ್ಲಿ ನಡೆಯುತ್ತಿರುವ ಜಾತಿ ತಾರತಮ್ಯ ಹಾಗೂ ತೀವ್ರ ಮಾನಸಿಕ ಒತ್ತಡಗಳ ಕುರಿತು ದೇಶಾದ್ಯಂತ ದೊಡ್ಡ ಮಟ್ಟದ ಚರ್ಚೆ ಮತ್ತು ಆಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಈ ಅಧಿಕೃತ ದತ್ತಾಂಶಗಳು ಹೊರಬಂದಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಸ್ಕೀಟ್ ಶೂಟಿಂಗ್, ಸಾಫ್ಟ್ ಟೆನಿಸ್‌ನಲ್ಲಿ ಭಾರತಕ್ಕೆ ಕಂಚು; ಪದಕದತ್ತ ಮೀರಾಬಾಯಿ ದಾಪುಗಾಲು

ಜಪಾನ್‌ನ ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನ ನಾಲ್ಕನೇ ದಿನವಾದ ಬುಧವಾರ...

ಇನ್ಸ್‌ಪೆಕ್ಟರ್‌ಗೆ ಜಾತಿ ನಿಂದನೆ: ಪ್ರತಾಪ್ ಸಿಂಹ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲು

ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ಅವರ ವಿರುದ್ಧ ಜಾತಿ ನಿಂದನೆ ಮಾಡಿದ...

ಸೌಜನ್ಯ ಪ್ರಕರಣ: ಮರುತನಿಖೆ ಆದೇಶಕ್ಕೆ ‘ಕೊಂದವರು ಯಾರು?’ ಆಂದೋಲನ ಸ್ವಾಗತ, ದಕ್ಷ ಎಸ್‌ಐಟಿ ರಚನೆಗೆ ಆಗ್ರಹ

ಧರ್ಮಸ್ಥಳದಲ್ಲಿ 2012ರಲ್ಲಿ ನಡೆದಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಸೌಜನ್ಯಳ ಭೀಕರ ಅತ್ಯಾಚಾರ ಮತ್ತು...

ಆಲಮಟ್ಟಿ 3ನೇ ಹಂತದ ಯೋಜನೆ ಜಾರಿಗೆ ಹೋರಾಟ ತೀವ್ರ

ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯದ ನೀರಿನ ಮಟ್ಟವನ್ನು 519.60 ಮೀಟರ್‌ನಿಂದ 524.256...