ಋಷಿಕೇಶ್ ಆತ್ಮಹತ್ಯೆ ಪ್ರಕರಣ: ಐಐಟಿ ದೆಹಲಿಯಲ್ಲಿ ತೀವ್ರ ಪ್ರತಿಭಟನೆ; ವಿದ್ಯಾರ್ಥಿಗಳಿಗೆ ಶಿಸ್ತು ಕ್ರಮದ ಬೆದರಿಕೆ

Date:

ಐಐಟಿ ದೆಹಲಿಯ ಎಂಎಸ್‌ಸಿ ವಿದ್ಯಾರ್ಥಿ ಋಷಿಕೇಶ್ ಕುಮಾರ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆ ಐದನೇ ದಿನವೂ ಮುಂದುವರಿದಿದೆ. ಪ್ರತಿಭಟನೆ ಕಾವು ಪಡೆದುಕೊಂಡಿದ್ದು, ಐಐಟಿ ಆಡಳಿತ ಮತ್ತು ವಿದ್ಯಾರ್ಥಿಗಳ ನಡುವಿನ ಸಂಘರ್ಷ ತೀವ್ರಗೊಂಡಿದೆ. ಗುರುವಾರ ಮಧ್ಯರಾತ್ರಿ ನಡೆದ ಪ್ರತಿಭಟನೆಯ ವೇಳೆ ‘ಅಸಭ್ಯ, ಅವಮಾನಕಾರಿ ಮತ್ತು ಬೆದರಿಕೆಯ ಘೋಷಣೆ’ ಕೂಗಲಾಗಿದೆ ಎಂದು ಆರೋಪಿಸಿರುವ ಸಂಸ್ಥೆಯ ನಿರ್ದೇಶಕ ರಂಗನ್ ಬ್ಯಾನರ್ಜಿ, ಶಿಸ್ತು ಕ್ರಮ ಕೈಗೊಳ್ಳುವುದಾಗಿ ವಿದ್ಯಾರ್ಥಿಗಳಿಗೆ ಬೆದರಿಕೆ ಹಾಕಿದ್ದಾರೆ.

- Advertisement -

31 ವರ್ಷದ ಋಷಿಕೇಶ್ ಕುಮಾರ್ ಅವರ ಸಾವಿಗೆ ನ್ಯಾಯ ಒದಗಿಸಬೇಕು, ಆತ್ಮಹತ್ಯೆ ಪ್ರಕರಣವನ್ನು ಸ್ವತಂತ್ರ ತನಿಖೆ ನಡೆಸಬೇಕು, ಅವರ ಸಾವಿಗೆ ಕಾರಣರಾದ ಸಂಬಂಧಿತ ಅಧಿಕಾರಿಗಳು ರಾಜೀನಾಮೆ ನೀಡಬೇಕು ಹಾಗೂ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ವಿದ್ಯಾರ್ಥಿಗಳು ನಿರಂತರ ಪ್ರತಿಭಟನೆ ನಡೆಸುತ್ತಿದ್ದಾರೆ. ಗುರುವಾರ ರಾತ್ರಿ ಪ್ರತಿಭಟನಾಕಾರರು ಕ್ಯಾಂಪಸ್‌ನ ಮುಖ್ಯ ಗೇಟ್ ಕಡೆ ಮೆರವಣಿಗೆ ನಡೆಸಿದಾಗ, ಅವರನ್ನು ಭದ್ರತಾ ಸಿಬ್ಬಂದಿಗಳು ತಡೆದಿದ್ದರು. ಈ ವೇಳೆ, ವಿದ್ಯಾರ್ಥಿಗಳು ‘ನ್ಯಾಯ ಬೇಕು, ತನಿಖೆ ನಡೆಯಬೇಕು, ಪರಿಹಾರ ನೀಡಬೇಕು, ರಾಜೀನಾಮೆ ಕೊಡಬೇಕು’ ಎಂದು ಘೋಷಣೆಗಳನ್ನು ಕೂಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಈ ಬೆನ್ನಲ್ಲೇ, ನಿರ್ದೇಶಕ ರಂಗನ್ ಬ್ಯಾನರ್ಜಿ ಅವರು ವಿದ್ಯಾರ್ಥಿಗಳಿಗೆ ಶುಕ್ರವಾರ ನೋಟಿಸ್‌ ನೀಡಿದ್ದಾರೆ. “ವಿದ್ಯಾರ್ಥಿ ಪ್ರತಿನಿಧಿಗಳೊಂದಿಗೆ ನಡೆದ ಚರ್ಚೆಗಳ ಆಧಾರದ ಮೇಲೆ ಆಡಳಿತ ಹಲವು ಕ್ರಮಗಳನ್ನು ಕೈಗೊಂಡಿದ್ದರೂ, ಆಗಸ್ಟ್ 27ರ ರಾತ್ರಿ ಪರಿಸ್ಥಿತಿ ಗಂಭೀರವಾಗಿ ಉಲ್ಬಣಗೊಂಡಿತು” ಎಂದು ದೂರಿದ್ದಾರೆ.

“ಗುರುವಾರ ರಾತ್ರಿ 10.30ರಿಂದ 12.30ರವರೆಗೆ ಪ್ರತಿಭಟನಾಕಾರರ ಒಂದು ಗುಂಪು ಕ್ಯಾಂಪಸ್‌ನ ವಸತಿ ಪ್ರದೇಶಗಳತ್ತ ತೆರಳಿ, ಅಧ್ಯಾಪಕರ ಮನೆಗಳ ಮುಂದೆ ಪ್ರತಿಭಟನೆ ನಡೆಸಿದೆ. ಈ ವೇಳೆ ಅವಮಾನಕಾರಿ ಮತ್ತು ಬೆದರಿಕೆ ಸ್ವರೂಪದ ಘೋಷಣೆಗಳನ್ನು ಕೂಗಲಾಗಿದೆ” ಎಂದು ಅವರು ಆರೋಪಿಸಿದ್ದಾರೆ.

“ಇಂತಹ ಪ್ರತಿಭಟನೆಗಳಿಂದ ಅಧ್ಯಾಪಕರು ಮತ್ತು ಅವರ ಕುಟುಂಬದ ಸದಸ್ಯರು, ವಿಶೇಷವಾಗಿ ಮಕ್ಕಳು ಮತ್ತು ವೃದ್ಧರ ಸುರಕ್ಷತೆ, ಖಾಸಗಿತನ ಹಾಗೂ ಶಾಂತಿಗೆ ಧಕ್ಕೆಯಾಗುತ್ತದೆ. ಕ್ಯಾಂಪಸ್‌ನ ಶಾಂತಿಯುತ ಕಾರ್ಯನಿರ್ವಹಣೆಗೆ ಅಡ್ಡಿಪಡಿಸುವವರು, ವಸತಿ ಪ್ರದೇಶಗಳು, ತರಗತಿಗಳು ಹಾಗೂ ಶೈಕ್ಷಣಿಕ ಚಟುವಟಿಕೆಳಿಗೆ ತೊಡಕು ಮಾಡುವವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು” ಎಂದು ಅವರು ಹೇಳಿದ್ದಾರೆ.

ಇದೇ ವೇಳೆ, ವಿದ್ಯಾರ್ಥಿಗಳ ಬೇಡಿಕೆಗಳ ಹಿನ್ನೆಲೆಯಲ್ಲಿ ಕೆಲವು ಆಡಳಿತಾತ್ಮಕ ಕ್ರಮಗಳು ಆರಂಭವಾಗಿವೆ ಎಂದು ಬ್ಯಾನರ್ಜಿ ತಿಳಿಸಿದ್ದಾರೆ. ಹೊರಗಿನ ಸದಸ್ಯರನ್ನೊಳಗೊಂಡ ತನಿಖಾ ಸಮಿತಿ ರಚಿಸಲಾಗಿದೆ. ಋಷಿಕೇಶ್ ಅವರ ಕುಟುಂಬಕ್ಕೆ ಸಂಸ್ಥೆಯ ತುರ್ತು ನೆರವು ನಿಧಿ ಮೂಲಕ ಪರಿಹಾರ ನೀಡಲು ಅನುಮೋದನೆ ನೀಡಲಾಗಿದೆ. ಅಲ್ಲದೆ, ಅಧ್ಯಾಪಕರು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಯಿಂದ ಸ್ವಯಂಪ್ರೇರಿತ ಕೊಡುಗೆ ಸಂಗ್ರಹಿಸಲು ಪ್ರತ್ಯೇಕ ನಿಧಿ ರಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಋಷಿಕೇಶ್ ಕುಮಾರ್ ಅವರು ಕಳೆದ ಶನಿವಾರ ಕ್ಯಾಂಪಸ್‌ನಲ್ಲಿರುವ ಕಟ್ಟಡವೊಂದರ ಆರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ದೆಹಲಿ ಪೊಲೀಸರು ಅಪರಿಚಿತ ವ್ಯಕ್ತಿಗಳ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಎಫ್‌ಐಆರ್ ದಾಖಲಿಸಿದ್ದಾರೆ.

ಆದರೆ, 2023ರಿಂದ ಇದುವರೆಗೆ ಐಐಟಿ ದೆಹಲಿ ಕ್ಯಾಂಪಸ್‌ನಲ್ಲಿ ಇದು ಎಂಟನೇ ಆತ್ಮಹತ್ಯೆ ಪ್ರಕರಣ ಎಂದು ವಿದ್ಯಾರ್ಥಿಗಳು ಹೇಳುತ್ತಿದ್ದಾರೆ. ವಿದ್ಯಾರ್ಥಿಗಳು ಘಟನೆಯ ಕುರಿತು ಸ್ವತಂತ್ರ ತನಿಖೆ ನಡೆಸಬೇಕು ಎಂದು ಪಟ್ಟು ಹಿಡಿದಿದ್ದಾರೆ. ಜೊತೆಗೆ ಡೀನ್, ಅಸೋಸಿಯೇಟ್ ಡೀನ್ (ಸ್ಟುಡೆಂಟ್ ವೆಲ್ಫೇರ್), ಅಸೋಸಿಯೇಟ್ ಡೀನ್ (ಹಾಸ್ಟೆಲ್ ಮ್ಯಾನೇಜ್ಮೆಂಟ್) ಹಾಗೂ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಋಷಿಕೇಶ್ ಅವರ ಕುಟುಂಬಕ್ಕೆ ಕನಿಷ್ಠ 1 ಕೋಟಿ ರೂ. ಪರಿಹಾರ ನೀಡಬೇಕು ಎಂದೂ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.

ಆದಾಗ್ಯೂ, ಆಡಳಿತವು ಅಧಿಕಾರಿಗಳ ರಾಜೀನಾಮೆ ಮತ್ತು ನಿರ್ದಿಷ್ಟ ಪರಿಹಾರ ಮೊತ್ತದ ಬೇಡಿಕೆಯನ್ನು ಇನ್ನೂ ಒಪ್ಪಿಕೊಂಡಿಲ್ಲ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಡಿಬಿಐ ಬ್ಯಾಂಕ್ ಮಾರಾಟಕ್ಕೆ ಕೇಂದ್ರ ಸಂಪುಟ ಅಸ್ತು: ₹52,878 ಕೋಟಿಗೆ ಫೇರ್‌ಫ್ಯಾಕ್ಸ್ ತೆಕ್ಕೆಗೆ

ಐಡಿಬಿಐ (IDBI) ಬ್ಯಾಂಕ್‌ನ ‘ಕಾರ್ಯತಂತ್ರದ ಪುನರ್‌ರಚನೆ’ಗೆ (Strategic Restructuring) ಕೇಂದ್ರ ಸಚಿವ...

ಬೀದರ್‌ | ಜಿಪಂ, ತಾಪಂ ಚುನಾವಣೆ: ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿಗಳ ಪ್ರಚಾರ ಜೋರು!

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್‌...

ಸಿಜೆಪಿ ನಾಯಕರ ಬಂಧನಕ್ಕೆ ತೀವ್ರ ಖಂಡನೆ: ತಕ್ಷಣ ರಾಂಕಾ, ಸೌರವ್ ಬಿಡುಗಡೆಗೆ ವಿಪಕ್ಷಗಳ ಆಗ್ರಹ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

ಪತಿಯನ್ನು ಕೊಂದು ಕಾಂಕ್ರೀಟ್ ಡ್ರಮ್‌ನಲ್ಲಿ ಹೂತಿಟ್ಟ ಪ್ರಕರಣ: ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ

ಮರ್ಚೆಂಟ್ ನೇವಿ ಅಧಿಕಾರಿ ಸೌರಭ್ ರಜಪೂತ್ ಅವರನ್ನು ಬರ್ಬರವಾಗಿ ಹತ್ಯೆಗೈದು, ಮೃತದೇಹವನ್ನು...