ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಖಿನ್ನತೆ, ಆತ್ಮಹತ್ಯೆಯ ಆಲೋಚನೆ: NTF ವರದಿ ಹೊರತಂದ ಆಘಾತಕಾರಿ ಸತ್ಯ!

Date:

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಕುರಿತು ಸುಪ್ರೀಂ ಕೋರ್ಟ್ ನೇಮಕ ಮಾಡಿರುವ ರಾಷ್ಟ್ರೀಯ ಟಾಸ್ಕ್ ಫೋರ್ಸ್ (NTF) ನಡೆಸಿದ ರಾಷ್ಟ್ರವ್ಯಾಪಿ ಸಮೀಕ್ಷೆಯಲ್ಲಿ ಹತ್ತರಲ್ಲಿ ಓರ್ವ ವಿದ್ಯಾರ್ಥಿ ಮಾನಸಿಕ ಖಿನ್ನತೆಯಿಂದ ಬಳಲುತ್ತಿರುವ ಕಳವಳಕಾರಿ ಸತ್ಯ ಹೊರಬಂದಿದೆ. 2.43 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ ಈ ಸಮೀಕ್ಷೆಯಲ್ಲಿ 9% ವಿದ್ಯಾರ್ಥಿಗಳು ಕಳೆದ ಒಂದು ವರ್ಷದಲ್ಲಿ ಆಗಾಗ ಅಥವಾ ಸತತ ಆತ್ಮಹತ್ಯೆಯ ಆಲೋಚನೆಗಳಿಗೆ ಒಳಗಾಗುತ್ತಿರುವ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ.

- Advertisement -

ಸುಮಾರು 15% ವಿದ್ಯಾರ್ಥಿಗಳು ಕಳೆದ ಆರು ತಿಂಗಳಲ್ಲಿ ಹಲವಾರು ವಾರಗಳ ಕಾಲ ತೀವ್ರ ಮಾನಸಿಕ ಒತ್ತಡ, ಕಳವಳ ಅಥವಾ ಮಾನಸಿಕ ವಿಚಲತೆಯನ್ನು ಅನುಭವಿಸಿದ್ದಾರೆ ಎಂದು ವರದಿ ಬಹಿರಂಗಗೊಳಿಸಿದೆ. ಇದಲ್ಲದೆ, 34% ವಿದ್ಯಾರ್ಥಿಗಳು ತಮ್ಮದೇ ಕ್ಯಾಂಪಸ್‌ನಲ್ಲಿ ಹೊರಗಿನವರಂತೆ (outsider) ಭಾವಿಸುತ್ತಾರೆ ಎಂದು ಸಮೀಕ್ಷೆ ವರದಿ ಮಾಡಿದೆ. ಸಮೀಕ್ಷೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಲ್ಲಿ 67% ಮಂದಿ SC, ST ಮತ್ತು OBC ವರ್ಗಗಳಿಗೆ ಸೇರಿದವರಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕನ್ನಡ ಬೌದ್ಧಿಕ ಲೋಕದ ‘ಪರಸ್ಪರ ಮೆಚ್ಚುಗೆ ಸಮಾಜ’ಕ್ಕೆ ಸವಾಲಾಗಿದ್ದ...

ರಾಜಕೀಯ, ಸಂಸ್ಕೃತಿ, ಜನಪದ, ಭಾಷೆ, ಕಾವ್ಯ, ಸಾಹಿತ್ಯ, ಸಿನಿಮಾ ಹೀಗೆ ಯಾವುದೇ ಆಗಿರಲಿ ಮೂಲಕ್ಕೆ ಇಳಿದು, ವಿಜ್ಞಾನಿಯ ತರಹ fundamental ಗಳನ್ನು ಚಿಂತಿಸುವ ಬಗೆಯನ್ನು- ಅದರ ಅಗತ್ಯವನ್ನು- ಕರ್ನಾಟಕ ಸಾಂಸ್ಕೃತಿಕ ಲೋಕದ ಜತೆಗೆ...

ವಿವಾದಾತ್ಮಕ ಮತಾಂತರ ನಿಷೇಧ ಕಾಯ್ದೆ ರದ್ದತಿಯತ್ತ ರಾಜ್ಯ ಸರ್ಕಾರದ...

ಈ ಕಾಯ್ದೆಯ ರಚನಾ ಪ್ರಕ್ರಿಯೆಯಲ್ಲಿಯೇ ಹಲವು ಲೋಪಗಳಿದ್ದವು ಎಂಬುದು ಹಳೆಯ ಸರ್ಕಾರಿ ದಾಖಲೆಗಳಿಂದಲೇ ಸಾಬೀತಾಗಿದೆ. 2022ರಲ್ಲಿ ಸುಗ್ರೀವಾಜ್ಞೆ ಹಾಗೂ ಮಸೂದೆಗೆ ಸಂಪುಟದ ಅನುಮೋದನೆ ಪಡೆಯುವ ಮುನ್ನವೇ ರಾಜ್ಯ ಕಾನೂನು ಇಲಾಖೆಯು ಇದರ ಹಲವು...

ಶಿವಮೊಗ್ಗ | ವಿಮಾನ ಹಾರಾಟ ಸ್ಥಗಿತಕ್ಕೆ ಕಾರಣ ಯಾರು?

ಮಲೆನಾಡಿನ ಬಹುದಿನಗಳ ಕನಸಾಗಿದ್ದ ಶಿವಮೊಗ್ಗ ವಿಮಾನ ನಿಲ್ದಾಣ, ಈಗ ಚರ್ಚೆಯ ಕೇಂದ್ರವಾಗಿದೆ. ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡ ವಿಮಾನ ನಿಲ್ದಾಣದಲ್ಲಿ ವಾಣಿಜ್ಯ ವಿಮಾನ ಸೇವೆಗಳು ನಿರಂತರವಾಗಿ ಮುಂದುವರಿಯಬೇಕೆಂಬುದು ಮಲೆನಾಡಿನ ಜನರ ನಿರೀಕ್ಷೆ. ಆದರೆ,...

ಸಮೀಕ್ಷೆಯ ಇತರ ಪ್ರಮುಖ ಅಂಶಗಳು:

  • 56% ವಿದ್ಯಾರ್ಥಿಗಳು ಗಂಭೀರ ಸಮಸ್ಯೆಗಳನ್ನು ನ್ಯಾಯಯುತವಾಗಿ ನಿಭಾಯಿಸುವಲ್ಲಿ ಆಡಳಿತದ ಮೇಲೆ ನಂಬಿಕೆ ಇದೆ ಎಂದು ಹೇಳಿದ್ದಾರೆ.
  • ಸುಮಾರು 32% ವಿದ್ಯಾರ್ಥಿಗಳು ತಮ್ಮ ಸಂಸ್ಥೆಯಲ್ಲಿ ಕೌನ್ಸೆಲಿಂಗ್ ಸೇವೆಗಳು ಲಭ್ಯವಿಲ್ಲ ಎಂದು ತಿಳಿಸಿದ್ದಾರೆ.

ಸುಪ್ರೀಂ ಕೋರ್ಟ್ ಮಾರ್ಚ್ 2025ರಲ್ಲಿ ವಿದ್ಯಾರ್ಥಿ ಆತ್ಮಹತ್ಯೆಗಳು ಮತ್ತು ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ಪರಿಶೀಲಿಸಲು ಮಾಜಿ ನ್ಯಾಯಮೂರ್ತಿ ಎಸ್. ರವೀಂದ್ರ ಭಟ್ ನೇತೃತ್ವದಲ್ಲಿ ಈ ಟಾಸ್ಕ್ ಫೋರ್ಸ್ ಅನ್ನು ರಚಿಸಿತ್ತು. ಟಾಸ್ಕ್ ಫೋರ್ಸ್‌ನ ಅಂತಿಮ ವರದಿಯನ್ನು ಅಕ್ಟೋಬರ್ 31ರೊಳಗೆ ಸಲ್ಲಿಸುವ ನಿರೀಕ್ಷೆಯಿದೆ.

ವಿದ್ಯಾರ್ಥಿ ಆತ್ಮಹತ್ಯೆಗಳು ಕೇವಲ ಮಾನಸಿಕ ಆರೋಗ್ಯ ಸಮಸ್ಯೆಯಲ್ಲ ಎಂದು ಟಾಸ್ಕ್ ಫೋರ್ಸ್ ಹಿಂದಿನ ವರದಿಗಳಲ್ಲಿ ಸೂಚಿಸಿದೆ. ಶೈಕ್ಷಣಿಕ ಒತ್ತಡ, ತಾರತಮ್ಯ, ಆರ್ಥಿಕ ಒತ್ತಡ, ಸಾಮಾಜಿಕ ಪ್ರತ್ಯೇಕತೆ ಮತ್ತು ಸಾಂಸ್ಥಿಕ ಬೆಂಬಲದ ಕೊರತೆ ಮುಂತಾದ ಅಂಶಗಳು ಪ್ರಮುಖ ಕಾರಣಗಳಾಗಿ ಗುರುತಿಸಲ್ಪಟ್ಟಿವೆ. ಹಲವಾರು ಸಂಸ್ಥೆಗಳಲ್ಲಿ ಪೂರ್ಣಕಾಲಿಕ ಮಾನಸಿಕ ಆರೋಗ್ಯ ವೃತ್ತಿಪರರು ಇಲ್ಲದಿರುವುದು ಮತ್ತು ಆತ್ಮಹತ್ಯೆ ಅಪಾಯ ನಿರ್ವಹಣಾ ಪ್ರೋಟೋಕಾಲ್‌ಗಳ ಕೊರತೆ ಕೂಡ ಗಮನಕ್ಕೆ ಬಂದಿದೆ.

ಈ ಸಮೀಕ್ಷೆಯ ಫಲಿತಾಂಶಗಳು ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿ ಕಲ್ಯಾಣ ಮತ್ತು ಮಾನಸಿಕ ಆರೋಗ್ಯ ಸುಧಾರಿಸುವ ವ್ಯವಸ್ಥೆಗಳನ್ನು ಬಲಪಡಿಸುವ ಅನಿವಾರ್ಯವನ್ನು ಮತ್ತೊಮ್ಮೆ ನೆನಪಿಸಿದೆ.

ಆತ್ಮಹತ್ಯೆ ಪರಿಹಾರವಲ್ಲ 5 4



eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿವಾದಾತ್ಮಕ ಮತಾಂತರ ನಿಷೇಧ ಕಾಯ್ದೆ ರದ್ದತಿಯತ್ತ ರಾಜ್ಯ ಸರ್ಕಾರದ ಹೆಜ್ಜೆ

ಈ ಕಾಯ್ದೆಯ ರಚನಾ ಪ್ರಕ್ರಿಯೆಯಲ್ಲಿಯೇ ಹಲವು ಲೋಪಗಳಿದ್ದವು ಎಂಬುದು ಹಳೆಯ ಸರ್ಕಾರಿ...

ಆಫೀಸ್, ಔಟ್‌ಲುಕ್, ಟೀಮ್ಸ್ ಸ್ಥಗಿತಕ್ಕೆ ಸೈಬರ್ ದಾಳಿ ಕಾರಣವೇ; ಅಸಲಿ ಸತ್ಯ ಬಿಚ್ಚಿಟ್ಟ ಮೈಕ್ರೋಸಾಫ್ಟ್

ಜಗತ್ತಿನಾದ್ಯಂತ ಮೈಕ್ರೋಸಾಫ್ಟ್ 365 ಸೇವೆಗಳಲ್ಲಿ ಭಾರಿ ವ್ಯತ್ಯಯ ಉಂಟಾಗಿದ್ದು, ಲಕ್ಷಾಂತರ ಬಳಕೆದಾರರು...

ಶಿವಮೊಗ್ಗ | ವಿಮಾನ ಹಾರಾಟ ಸ್ಥಗಿತಕ್ಕೆ ಕಾರಣ ಯಾರು?

ಮಲೆನಾಡಿನ ಬಹುದಿನಗಳ ಕನಸಾಗಿದ್ದ ಶಿವಮೊಗ್ಗ ವಿಮಾನ ನಿಲ್ದಾಣ, ಈಗ ಚರ್ಚೆಯ ಕೇಂದ್ರವಾಗಿದೆ....

ಬಡತನದ ಮಾಪನ ಮತ್ತು ವಾಸ್ತವ ಚಿತ್ರಣ: ಆಳ ಅಗಲ

ವಿಶ್ವಬ್ಯಾಂಕ್‌ನ ಬಡತನ ಮತ್ತು ಸಮಾನತೆಯ ಇತ್ತೀಚಿನ ವರದಿಯ ಪ್ರಕಾರ 2011ರಿಂದ 2023ರ...