ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಋತಂಭರಗೆ ಪದ್ಮಭೂಷಣ ಪ್ರಶಸ್ತಿ

Date:

ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ, ದುರ್ಗಾ ವಾಹಿನಿ ಸಂಸ್ಥಾಪಕಿ, ಹಿಂದುತ್ವವಾಗಿ ನಾಯಕಿ ಋತಂಭರಗೆ ಪದ್ಮಭೂಷಣ ಪ್ರಶಸ್ತಿ ನೀಡಲಾಗಿದೆ. ಇದು ಮಾತ್ರವಲ್ಲದೆ ರಾಮಮಂದಿರ ನಿರ್ಮಾಣದಲ್ಲಿ ಭಾಗಿಯಾದರಿಗೂ ಪದ್ಮ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ.

- Advertisement -

ರಾಮಮಂದಿರ ನಿರ್ಮಾಣದಲ್ಲಿ ಭಾಗಿಯಾದ ವಾಸ್ತುಶಿಲ್ಪಿ ಚಂದ್ರಕಾಂತ್ ಸೋಂಪುರ ಮತ್ತು ವೇದ ವಿದ್ವಾಂಸ ಗಣೇಶ್ವರ ಶಾಸ್ತ್ರಿ ದ್ರಾವಿಡ್‌ ಅವರಿಗೆ ಪದ್ಮಶ್ರೀ ಪ್ರಶಸ್ತಿ ಘೋಷಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದನ್ನು ಓದಿದ್ದೀರಾ? ಪದ್ಮ ಪ್ರಶಸ್ತಿ 2025 | ಪುರಸ್ಕೃತರ ಪಟ್ಟಿ ಪ್ರಕಟ; ರಾಜ್ಯದ ವೆಂಕಪ್ಪ ಅಂಬಾಜಿಗೆ ಪದ್ಮಶ್ರೀ

ಈ ಬಾರಿ ಪದ್ಮ ಪ್ರಶಸ್ತಿಯಲ್ಲಿ ರಾಮಮಂದಿರ ನಿರ್ಮಾಣದಲ್ಲಿ ಭಾಗಿಯಾದ ಮತ್ತು ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದವರಿಗೂ ನೀಡಲಾಗಿದೆ. ಸಮಾಜ ಸೇವೆ ವಿಭಾಗದಲ್ಲಿ ಪದ್ಮಭೂಷಣ ಪ್ರಶಸ್ತಿಯನ್ನು ವಿಶ್ವ ಹಿಂದೂ ಪರಿಷತ್ತಿನ ಮಹಿಳಾ ಘಟಕ ದುರ್ಗಾ ವಾಹಿನಿಯ ಸಂಸ್ಥಾಪಕಿ ಋತಂಭರ ಅವರಿಗೆ ಘೋಷಿಸಲಾಗಿದೆ.

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸಬೇಕು ಎಂಬ ಅಭಿಯಾನವನ್ನು ಮಾಡುತ್ತಿದ್ದ 1980-1990ರ ದಶಕದಲ್ಲಿ ದೇಶಾದ್ಯಂತ ಹಲವು ಕಡೆಗಳಲ್ಲಿ ಋರಂಭರ ಉದ್ರೇಕಕಾರಿ ಭಾಷಣಗಳನ್ನು ಮಾಡಿದ್ದರು. ಇದಾದ ಬಳಿಕ 1992ರ ಡಿಸೆಂಬರ್ 6ರಂದು ದುಷ್ಕರ್ಮಿಗಳು ಬಾಬರಿ ಮಸೀದಿಯನ್ನು ನಾಶ ಮಾಡಿದ್ದರು. ಬಾಬರಿ ಮಸೀದಿ ಧ್ವಂಸದ ವೇಳೆ ಸ್ಥಳದಲ್ಲಿದ್ದ ಹಿಂದುತ್ವ ನಾಯಕರಲ್ಲಿ ಋತಂಭರ ಕೂಡಾ ಸೇರಿದ್ದರು.

ಇದನ್ನು ಓದಿದ್ದೀರಾ? ಪದ್ಮ ಪ್ರಶಸ್ತಿ 2025 | ಕರ್ನಾಟಕದ ವೆಂಕಪ್ಪ, ಭೀಮವ್ವ, ಡಾ. ವಿಜಯಲಕ್ಷ್ಮಿ ಸೇರಿ 30 ಮಂದಿಗೆ ಪದ್ಮಶ್ರೀ ಘೋಷಣೆ

ಇದಾದ ಬಳಿಕ ದೇಶಾದಾದ್ಯಂತ ಕೋಮುಗಲಭೆ ಎದ್ದಿತ್ತು. ಈ ನಡುವೆ ಮಸೀದಿ ಧ್ವಂಸವಾದ ಮೂರು ದಿನದಲ್ಲೇ ಋತಂಭರ ಬಂಧನವಾಗಿತ್ತು. ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಸಿಬಿಐನ 32 ಆರೋಪಿಗಳಲ್ಲಿ ಋತಂಭರ ಕೂಡ ಒಬ್ಬರಾಗಿದ್ದರು. 2020ರ ಸೆಪ್ಟೆಂಬರ್‌ನಲ್ಲಿ ಈ ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಲಾಗಿದೆ.

ಪ್ರತಿ ವರ್ಷ ಗಣರಾಜ್ಯೋತ್ಸವದ ಮುನ್ನಾ ದಿನ ಪದ್ಮ ಪ್ರಶಸ್ತಿಗಳನ್ನು ಘೋಷಿಸಲಾಗುತ್ತದೆ. ಮಾರ್ಚ್‌ ಅಥವಾ ಏಪ್ರಿಲ್‌ನಲ್ಲಿ ಪದ್ಮ ಪ್ರಶಸ್ತಿಯನ್ನು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ಪ್ರದಾನ ಮಾಡಲಿದ್ದಾರೆ. ದೇಶದ ಅತ್ಯುನ್ನತ ಪ್ರಶಸ್ತಿಗಳಲ್ಲಿ ಒಂದಾದ ಪದ್ಮ ಪ್ರಶಸ್ತಿಗಳನ್ನು ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ಎಂಬ ಮೂರು ವಿಭಾಗಗಳಲ್ಲಿ ನೀಡಲಾಗುತ್ತದೆ.

ದೇಶದ ಅತೀ ಗೌರವಯುತ ಪ್ರಶಸ್ತಿಯಾದ ಪದ್ಮವನ್ನು ದ್ವೇಷ ಭಾಷಣ, ಉದ್ರೇಕಕಾರಿ ಭಾಷಣ ಮಾಡಿ ಸಮಾಜದಲ್ಲಿ ಗದ್ದಲ ಸೃಷ್ಟಿಸಿದ, ಬಾಬರಿ ಮಸೀದಿ ಧ್ವಂಸಕ್ಕೆ ಕಾರಣವಾದವರಿಗೆ ಘೋಷಿಸಿರುವುದು ವಿಪರ್ಯಾಸ. ಇದು ಸಮಾಜ ಕಟ್ಟುವಲ್ಲಿ ಕೊಡುಗೆ ನೀಡಿದ, ಸಾಧನೆ ಮಾಡಿದವರಿಗೆ ನೀಡಬೇಕಾದ ಪ್ರಶಸ್ತಿಯೇ ಹೊರತು ಧರ್ಮದ ಹೆಸರಲ್ಲಿ ಸಮಾಜ ಒಡೆದವರಿಗೆ ನೀಡುವ ಪ್ರಶಸ್ತಿಯಲ್ಲ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...