ಮುಂಬೈ ಮೇಯರ್ ಚುನಾವಣೆ: ಬಿಜೆಪಿಯ ರಿತು ತಾವಡೆ, ಉಪಮೇಯರ್‌ ಆಗಿ ಶಿವಸೇನೆಯ ಸಂಜಯ್‌ ಘಾಡಿ ಕಣಕ್ಕೆ

Date:

ದೇಶದ ಅತ್ಯಂತ ಶ್ರೀಮಂತ ಸ್ಥಳೀಯ ಸಂಸ್ಥೆಯಾದ ಬೃಹನ್‌ಮುಂಬೈ ಮಹಾನಗರ ಪಾಲಿಕೆಯ (ಬಿಎಂಸಿ) ಮೇಯರ್ ಮತ್ತು ಉಪಮೇಯರ್ ಸ್ಥಾನಗಳಿಗೆ ಮಹಾಯುತಿ ಮೈತ್ರಿಕೂಟವು ಶನಿವಾರ ತನ್ನ ಅಭ್ಯರ್ಥಿಗಳನ್ನು ಅಧಿಕೃತವಾಗಿ ಪ್ರಕಟಿಸಿದೆ.

- Advertisement -

ಮೇಯರ್ ಸ್ಥಾನಕ್ಕೆ ಭಾರತೀಯ ಜನತಾ ಪಕ್ಷದ (ಬಿಜೆಪಿ) ಹಿರಿಯ ಕಾರ್ಪೊರೇಟರ್ ರಿತು ತಾವಡೆ ಅವರನ್ನು ಆಯ್ಕೆ ಮಾಡಲಾಗಿದ್ದು, ಉಪಮೇಯರ್ ಸ್ಥಾನಕ್ಕೆ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯ ಸಂಜಯ್ ಘಾಡಿ ಅವರನ್ನು ಕಣಕ್ಕಿಳಿಸಲಾಗಿದೆ. ಈ ಮೂಲಕ ಕಳೆದ 25 ವರ್ಷಗಳಿಂದ ಬಿಎಂಸಿಯಲ್ಲಿ ಅಧಿಕಾರ ಹೊಂದಿದ್ದ ಉದ್ಧವ್ ಠಾಕ್ರೆ ಬಣದ ಹಿಡಿತವನ್ನು ಮುರಿಯಲು ಮೈತ್ರಿಕೂಟ ಸಜ್ಜಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮಹಿಳೆ ಮಾಡುತ್ತಿರುವ ಬಿಟ್ಟಿ ಚಾಕರಿಗಳೇನೇನು? ಇದನ್ನೇಕೆ ಅರಿಯಲು ಮುಂದಾಗಿದೆ...

2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಸರ್ಕಾರದ ಗುರಿಗೆ ಒಂದು ದೊಡ್ಡ ಅಡ್ಡಿ ಎದುರಾಗಿದೆ. ಅದೇನೆಂದರೆ; ಸಾಕಷ್ಟು ಸಂಖ್ಯೆಯ ಮಹಿಳೆಯರನ್ನು ಉದ್ಯೋಗ ಕ್ಷೇತ್ರಕ್ಕೆ ತರುವುದು. ವಿಶ್ವಬ್ಯಾಂಕ್ ಪ್ರಕಾರ, 2047ರ ವೇಳೆಗೆ...

ಭದ್ರತೆಯ ಹೆಸರಿನಲ್ಲಿ ಮಾಂಸದಂಗಡಿಗಳಿಗೆ ಬೀಗ: ಸರ್ಕಾರದ ಈ ನಿರ್ಧಾರದ...

ಈ ಬೆಳವಣಿಗೆ ಕಾಂಗ್ರೆಸ್ ಸರ್ಕಾರದ ಆಡಳಿತಾತ್ಮಕ ಹೊಣೆಗಾರಿಕೆಯನ್ನೂ ಮುನ್ನೆಲೆಗೆ ತಂದಿದೆ. ಪ್ರಧಾನಿಯ ಭೇಟಿಯ ಹಿನ್ನೆಲೆಯಲ್ಲಿ ಹೆಲಿಕಾಪ್ಟರ್‌ಗಳ ಆಗಮನ ಮತ್ತು ನಿರ್ಗಮನದ ಭದ್ರತೆಯನ್ನು ನಿರ್ಬಂಧಕ್ಕೆ ಕಾರಣವೆಂದು ಸಮರ್ಥಿಸಲಾಗುತ್ತಿದ್ದರೆ, ಅದಕ್ಕೂ ಸಮಗ್ರ ವಿವರಣೆ ಬೇಕಾಗುತ್ತದೆ. ಪ್ರಧಾನಿ...

ನಿಜಕ್ಕೂ ಭಾರತದ ಬಡತನ 16%ಗೆ ಇಳಿದಿದೆಯೇ? ವಾಸ್ತವ ಹೇಳುವುದೇನು?

ವಿಶ್ವಬ್ಯಾಂಕ್ ವರದಿ ಪ್ರಕಾರ, ಭಾರತದಲ್ಲಿ ಬಡತನ 16.1%ಗೆ ಮತ್ತು ತೀವ್ರ ಬಡತನ 2.6%ಗೆ ಇಳಿದಿದೆ. ಇದೇ ಅಂಕಿಅಂಶವನ್ನು ಬಳಸಿಕೊಂಡು ತಮ್ಮ ಸಾಧನೆ ಎಂಬಂತೆ ಕೇಂದ್ರ ಸರ್ಕಾರ ಸಂಭ್ರಮಿಸುತ್ತಿದೆ. ಆದರೆ, ದೇಶದ ಸುಮಾರು 80...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಜನಪ್ರತಿನಿಧಿಗಳ ಘನತೆ ಇಲ್ಲದ ಮಾತಿಗೆ ಲಗಾಮು ಬೀಳಬೇಕು

​ಘಾಟ್‌ಕೋಪರ್ ಪ್ರದೇಶದ ವಾರ್ಡ್ ಸಂಖ್ಯೆ 132ರ ಕಾರ್ಪೊರೇಟರ್ ಆಗಿರುವ ರಿತು ತಾವಡೆ ಅವರು ಈ ಹಿಂದೆ ಬಿಎಂಸಿ ಶಿಕ್ಷಣ ಸಮಿತಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಇತ್ತ ಉಪಮೇಯರ್ ಸ್ಥಾನಕ್ಕೆ ಸ್ಪರ್ಧಿಸಲಿರುವ ಸಂಜಯ್ ಘಾಡಿ ಅವರು ವಾರ್ಡ್ ಸಂಖ್ಯೆ 5ರಿಂದ ಆಯ್ಕೆಯಾದ ಶಿವಸೇನಾ ಕಾರ್ಪೊರೇಟರ್ ಆಗಿದ್ದಾರೆ. ಮೇಯರ್ ಹುದ್ದೆಯು ಸಾಮಾನ್ಯ ವರ್ಗದ ಮಹಿಳಿಗೆ ಮೀಸಲಾಗಿದ್ದು, ಫೆಬ್ರವರಿ 11ರಂದು ಮೇಯರ್ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಮಹಾಯುತಿ ಒಕ್ಕೂಟವು ಪಾಲಿಕೆಯಲ್ಲಿ ಸ್ಪಷ್ಟ ಬಹುಮತ ಹೊಂದಿರುವುದರಿಂದ ಈ ಇಬ್ಬರೂ ಅಭ್ಯರ್ಥಿಗಳ ಆಯ್ಕೆ ಬಹುತೇಕ ಖಚಿತವಾಗಿದೆ.

ಇತ್ತೀಚೆಗೆ ನಡೆದ 227 ಸದಸ್ಯ ಬಲದ ಬಿಎಂಸಿ ಚುನಾವಣೆಯಲ್ಲಿ ಮಹಾಯುತಿ ಒಕ್ಕೂಟವು ಬಹುಮತ ಪಡೆದಿತ್ತು. ಬಿಜೆಪಿಯು 89 ಸ್ಥಾನಗಳನ್ನು ಗೆಲ್ಲುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದರೆ ಅದರ ಮೈತ್ರಿ ಪಕ್ಷವಾದ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯು 29 ಸ್ಥಾನಗಳಲ್ಲಿ ಜಯಗಳಿಸಿದೆ. ಈ ಮೂಲಕ ಮೈತ್ರಿಕೂಟದ ಒಟ್ಟು ಬಲ 121ಕ್ಕೆ ಏರಿಕೆಯಾಗಿ ಪಾಲಿಕೆಯ ಅಧಿಕಾರದ ಚುಕ್ಕಾಣಿ ಹಿಡಿಯಲು ಬೇಕಾದ ಮ್ಯಾಜಿಕ್ ಸಂಖ್ಯೆ 114 ಅನ್ನು ದಾಟಿತ್ತು.

​ಇನ್ನೊಂದೆಡೆ ವಿರೋಧ ಪಕ್ಷಗಳ ಸಾಲಿನಲ್ಲಿ, ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ (ಯುಬಿಟಿ) 65 ಸ್ಥಾನಗಳಿಗೆ ಸೀಮಿತಗೊಂಡರೆ, ಕಾಂಗ್ರೆಸ್ 24 ಸ್ಥಾನಗಳನ್ನು ಗೆದ್ದಿದೆ. ಉಳಿದಂತೆ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ 8 ಸ್ಥಾನಗಳನ್ನು, ರಾಜ್ ಠಾಕ್ರೆ ಅವರ ಎಂಎನ್‌ಎಸ್ 6 ಸ್ಥಾನಗಳನ್ನು ಮತ್ತು ಸಮಾಜವಾದಿ ಪಕ್ಷವು 2 ಸ್ಥಾನಗಳನ್ನು ಗೆದ್ದುಕೊಂಡಿವೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

₹227 ಕೋಟಿ ವನ್ಯಜೀವಿ ಶುಲ್ಕವನ್ನು ₹2.27 ಕೋಟಿಗೆ ಇಳಿಸಿದ್ದ ಅದಾನಿ ಯೋಜನೆಗೆ ಬ್ರೇಕ್!

ಅದಾನಿ ಗ್ರೀನ್ ಎನರ್ಜಿ ಲಿಮಿಟೆಡ್ ಸಂಸ್ಥೆಯ 'ತಾರಲಿ ಪಂಪ್ಡ್ ಸ್ಟೋರೇಜ್ ಜಲವಿದ್ಯುತ್...

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ: ಸುಪ್ರೀಂಗೆ ವರದಿ ನೀಡುವ ಹೊಸ ಎಸ್‌ಐಟಿ ತನಿಖೆಗೆ ಕಾಂಗ್ರೆಸ್ ಆಗ್ರಹ

ಅಯೋಧ್ಯೆಯ ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ತನಿಖೆಯ ಪಾರದರ್ಶಕತೆ...

ಇಂಧನ-ಆಹಾರ ದರ ಏರಿಕೆ: ಅಕ್ಟೋಬರ್ ಸಗಟು ಹಣದುಬ್ಬರ 12.29%ಗೆ ಜಿಗಿತ!

ದೇಶದ ಜನಸಾಮಾನ್ಯರು ಮತ್ತು ಉದ್ಯಮ ವಲಯಕ್ಕೆ ಬೆಲೆ ಏರಿಕೆಯ ಬಿಸಿ ಮತ್ತಷ್ಟು...