ಬಿಜೆಪಿ ರಾಜ್ಯ ಕಾರ್ಯದರ್ಶಿಯಾಗಿ ನೇಮಕಗೊಂಡ ಕೆಲವೇ ಗಂಟೆಗಳಲ್ಲಿ ದರೋಡೆ; ರಮೇಶ್‌ ಯಾದವ್‌ ಕೈಕಾಲು ಕಟ್ಟಿ ₹50 ಲಕ್ಷ ಲೂಟಿ

Date:

ಬಿಜೆಪಿಯ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ ಕಾರ್ಯದರ್ಶಿಯಾಗಿ ನೇಮಕಗೊಂಡ ಸಂಭ್ರಮದಲ್ಲಿದ್ದ ರಮೇಶ್ ಯಾದವ್ ಅವರಿಗೆ ಅದೇ ದಿನ ರಾತ್ರಿ ಕೆಟ್ಟ ಅನುಭವವಾಗಿದೆ. ಸೋಮವಾರ ಲಖನೌನಲ್ಲಿ ಅಧಿಕಾರ ವಹಿಸಿಕೊಂಡು ಕಾನ್ಪುರಕ್ಕೆ ಮರಳಿದ್ದ ಅವರು, ತಮ್ಮ ಫಾರ್ಮ್‌ಹೌಸ್‌ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾಗ ಮಧ್ಯರಾತ್ರಿ ಮುಸುಕುಧಾರಿಗಳ ಗುಂಪೊಂದು ದಾಳಿ ನಡೆಸಿ, ಅವರ ಕೈಕಾಲು ಕಟ್ಟಿ ಹಾಕಿ ಸುಮಾರು ₹50 ಲಕ್ಷ ಮೌಲ್ಯದ ನಗದು ಮತ್ತು ಬೆಲೆಬಾಳುವ ವಸ್ತುಗಳನ್ನು ದೋಚಿ ಪರಾರಿಯಾಗಿದೆ.

- Advertisement -

ಕಾನ್ಪುರದ ಸೇನ್-ಪಶ್ಚಿಮ್ ಪಾರಾ ಪ್ರದೇಶದಲ್ಲಿರುವ ಫಾರ್ಮ್‌ಹೌಸ್‌ನಲ್ಲಿ ಈ ಘಟನೆ ನಡೆದಿದೆ. ದುಷ್ಕರ್ಮಿಗಳು ಮನೆಗೆ ನುಗ್ಗಿ ರಮೇಶ್ ಯಾದವ್ ಅವರನ್ನು ಒತ್ತೆಯಾಳಾಗಿ ಇರಿಸಿಕೊಂಡು ದರೋಡೆ ನಡೆಸಿದ್ದು, ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಂವಿಧಾನದಲ್ಲಿ ಇಂಪೀಚ್‌ಮೆಂಟ್‌ ಮೂಲಕ ಮುಖ್ಯ ಚುನಾವಣಾ ಆಯುಕ್ತರನ್ನು ಪದಚ್ಯುತಿಗೊಳಿಸಲು...

ಮುಖ್ಯ ಚುನಾವಣಾ ಆಯುಕ್ತರಾದ ಗ್ಯಾನೇಶ್ ಕುಮಾರ್ ಅವರಿಗೆ 2023ರ ಕಾಯ್ದೆಯ ಮೂಲಕ ಸರ್ಕಾರ ಕಾನೂನು ರಕ್ಷಣೆ ಕೊಟ್ಟಿರಬಹುದು, ಆದರೆ ಅವರಿಗೆ ಯಾವುದೇ ರೀತಿಯ ಸಾಂವಿಧಾನಿಕ ರಕ್ಷಣೆ ಇಲ್ಲ. ಹಾಗಾಗಿ ಅವರು ತಾವಾಗಿಯೇ ರಾಜೀನಾಮೆ...

ದಿಕ್ಕು ತೋಚದೆ ತಬ್ಬಿಬ್ಬಾಗಿರುವ ಚುನಾವಣಾ ಆಯೋಗ: ದಿನೇ ದಿನೆ...

ಸೆಪ್ಟೆಂಬರ್ 23ರ 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯ ವರದಿಯ ನಂತರ ಆಯೋಗ ಹಲವು ಸ್ಪಷ್ಟನೆಗಳನ್ನು ನೀಡಿದ್ದರೂ, ಒಂದು ಮುಖ್ಯ ಪ್ರಶ್ನೆಗೆ ಇನ್ನೂ ಉತ್ತರವಿಲ್ಲ: ಕಾನೂನುಬದ್ಧವಾಗಿ ಮತದಾರರ ಪಟ್ಟಿಯಲ್ಲಿದ್ದ 16 ಲಕ್ಷಕ್ಕೂ ಹೆಚ್ಚು ಜನರ...

ಸ್ಟಿಂಗ್ ಆಪರೇಷನ್ | ಭ್ರಷ್ಟಾಚಾರ ಬಯಲಿಗೆಳೆಯುವ ಸಾಧನವಾಗಬೇಕೇ ವಿನಾ...

ಆಡಳಿತ ಪಕ್ಷವನ್ನು ಪ್ರಶ್ನಿಸುವುದು ಪ್ರಜಾಪ್ರಭುತ್ವದ ಮೂಲಭೂತ ಕರ್ತವ್ಯ. ಆದರೆ, ವಿರೋಧ ಪಕ್ಷಗಳಿಗೂ ತಮ್ಮ ಆರೋಪಗಳನ್ನು ಸಮರ್ಥಿಸುವ ಹೊಣೆಗಾರಿಕೆ ಇದೆ. ರಾಜಕೀಯ ಲಾಭಕ್ಕಾಗಿ ಗಂಭೀರ ಆರೋಪಗಳನ್ನು ಮುಂದಿಡುವುದು ಮತ್ತು ಅವುಗಳ ಸತ್ಯಾಸತ್ಯತೆಯನ್ನು ಪರಿಶೀಲಿಸುವ ಪ್ರಕ್ರಿಯೆಯನ್ನು...

ಅಕ್ಟೋಬರ್ 1ರಂದು ರಮೇಶ್ ಯಾದವ್ ಅವರನ್ನು ಬಿಜೆಪಿಯ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿತ್ತು. ಅಕ್ಟೋಬರ್ 12ರಂದು ಲಖನೌನಲ್ಲಿ ಅಧಿಕಾರ ವಹಿಸಿಕೊಂಡ ಬಳಿಕ ಅವರು ತಡರಾತ್ರಿ ಕಾನ್ಪುರಕ್ಕೆ ಮರಳಿದ್ದರು. ನಗರದಿಂದ ಸುಮಾರು 15 ಕಿಲೋಮೀಟರ್ ದೂರದಲ್ಲಿರುವ ತಮ್ಮ ಫಾರ್ಮ್‌ಹೌಸ್‌ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾಗ ಈ ಘಟನೆ ನಡೆದಿದೆ.

ರಮೇಶ್ ಯಾದವ್ ಅವರು ಪೊಲೀಸರಿಗೆ ನೀಡಿರುವ ಮಾಹಿತಿಯ ಪ್ರಕಾರ, ದುಷ್ಕರ್ಮಿಗಳು ಮೊದಲಿಗೆ ಅವರನ್ನು ಹಿಡಿದು ಕೈಕಾಲುಗಳನ್ನು ಕಟ್ಟಿ ಹಾಕಿದ್ದಾರೆ. ಬಳಿಕ ಮನೆಯಲ್ಲಿದ್ದ ನಗದು ಮತ್ತು ಬೆಲೆಬಾಳುವ ವಸ್ತುಗಳನ್ನು ಹುಡುಕಾಡಿ, ಸುಮಾರು ₹50 ಲಕ್ಷ ಮೌಲ್ಯದ ವಸ್ತುಗಳನ್ನು ದೋಚಿಕೊಂಡು ಪರಾರಿಯಾಗಿದ್ದಾರೆ.

ರಮೇಶ್ ಯಾದವ್ ಸ್ಥಳೀಯ ರಾಜಕೀಯದಲ್ಲಿ ಪರಿಚಿತ ಮುಖ. ಅವರು ಮೂರು ಬಾರಿ ಬ್ಲಾಕ್ ಉಸ್ತುವಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಅವರ ಪತ್ನಿ ಶಶಿ ಯಾದವ್ ಕೂಡ ಇದೇ ಹುದ್ದೆಯನ್ನು ನಿರ್ವಹಿಸಿದ್ದಾರೆ. 2022ರ ವಿಧಾನಸಭಾ ಚುನಾವಣೆಯಲ್ಲಿ ಅವರು ಬಹುಜನ ಸಮಾಜವಾದಿ ಪಕ್ಷದ (ಬಿಎಸ್‌ಪಿ) ಅಭ್ಯರ್ಥಿಯಾಗಿ ಬಿಥೂರ್ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಇತ್ತೀಚೆಗೆ ಬಿಜೆಪಿಗೆ ಸೇರ್ಪಡೆಯಾಗಿದ್ದ ಅವರಿಗೆ ಪಕ್ಷವು ರಾಜ್ಯ ಕಾರ್ಯದರ್ಶಿಯ ಜವಾಬ್ದಾರಿ ನೀಡಿತ್ತು.

ಇದನ್ನೂ ಓದಿ: ತುಮಕೂರು | ಬೆಲೆ ಏರಿಕೆ ದಂಧೆಯಲ್ಲಿ ಕೇಂದ್ರದ ಬಿಜೆಪಿ ಸರ್ಕಾರ : ಸೈಯದ್ ಮುಜೀಬ್

ಸದ್ಯ ಸುದ್ದಿ ತಿಳಿಯುತ್ತಿದ್ದಂತೆಯೇ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಜಂಟಿ ಪೊಲೀಸ್ ಆಯುಕ್ತ ಡಾ. ವಿಪಿನ್ ಟಾಡಾ, ದಕ್ಷಿಣ ವಲಯದ ಡಿಸಿಪಿ ದೀಪೇಂದ್ರ ನಾಥ್ ಚೌಧರಿ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ.

ದರೋಡೆಕೋರರನ್ನು ಪತ್ತೆಹಚ್ಚಲು ಪೊಲೀಸರು ಫಾರ್ಮ್‌ಹೌಸ್ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಭದ್ರತಾ ಸಿಬ್ಬಂದಿ, ನಾಲ್ವರು ಗನ್‌ಮನ್‌ಗಳು ಹಾಗೂ ಓರ್ವ ಚಾಲಕ ಸೇರಿದಂತೆ ಸುಮಾರು 14 ಮಂದಿಯನ್ನು ವಿಚಾರಣೆಗಾಗಿ ವಶಕ್ಕೆ ಪಡೆದು ಪ್ರಶ್ನಿಸಲಾಗುತ್ತಿದೆ ಎಂದು ವರದಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸ್ಟಿಂಗ್ ಆಪರೇಷನ್ | ಭ್ರಷ್ಟಾಚಾರ ಬಯಲಿಗೆಳೆಯುವ ಸಾಧನವಾಗಬೇಕೇ ವಿನಾ ರಾಜಕೀಯ ಒತ್ತಡ, ಬ್ಲ್ಯಾಕ್‌ಮೇಲ್‌ನ ಆಯುಧವಾಗಬಾರದು

ಆಡಳಿತ ಪಕ್ಷವನ್ನು ಪ್ರಶ್ನಿಸುವುದು ಪ್ರಜಾಪ್ರಭುತ್ವದ ಮೂಲಭೂತ ಕರ್ತವ್ಯ. ಆದರೆ, ವಿರೋಧ ಪಕ್ಷಗಳಿಗೂ...

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಅಪಪ್ರಚಾರ ವಿಡಿಯೋ: ಇಬ್ಬರು ಪೊಲೀಸ್ ವಶಕ್ಕೆ

ಕಾಂಗ್ರೆಸ್ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತೇಜೋವಧೆ ಮಾಡುವ ಉದ್ದೇಶದಿಂದ...

ಫಾರ್ಮ್‌ 6 ಸುಳ್ಳು ಘೋಷಣೆಗೆ ಒತ್ತು ನೀಡುತ್ತಿದೆ: ಚುನಾವಣಾ ಆಯೋಗದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ವೇಳೆ ಮತದಾರರ...