ಮುಚ್ಚಿಡಲು ನನ್ನಲ್ಲಿ ಏನೂ ಇಲ್ಲ: ಜಾಮೀನಿನ ಬಳಿಕ ಇಡಿ ವಿರುದ್ಧ ರಾಬರ್ಟ್ ವಾದ್ರಾ ವಾಗ್ದಾಳಿ

Date:

ಶಿಕೋಹ್‌ಪುರ ಭೂ ವ್ಯವಹಾರಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ರೌಸ್ ಅವೆನ್ಯೂ ನ್ಯಾಯಾಲಯದಿಂದ ಜಾಮೀನು ಪಡೆದ ಉದ್ಯಮಿ ರಾಬರ್ಟ್ ವಾದ್ರಾ ಜಾರಿ ನಿರ್ದೇಶನಾಲಯ (ಇಡಿ) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ಮುಚ್ಚಿಡಲು ನನ್ನಲ್ಲಿ ಏನೂ ಇಲ್ಲ” ಎಂದಿರುವ ವಾದ್ರಾ, “ಸರ್ಕಾರದ ಆಜ್ಞೆಯ ಮೇರೆಗೆ ಇಡಿ ಕಾರ್ಯನಿರ್ವಹಿಸುತ್ತಿದೆ” ಎಂದು ಆರೋಪಿಸಿದ್ದಾರೆ.

- Advertisement -

ಶಿಕೋಹ್‌ಪುರ ಭೂ ಒಪ್ಪಂದ ಪಿಎಂಎಲ್‌ಎ ಪ್ರಕರಣದಲ್ಲಿ ಸಮನ್ಸ್‌ ಹಿನ್ನೆಲೆ ವಾದ್ರಾ ರೂಸ್ ಅವೆನ್ಯೂ ನ್ಯಾಯಾಲಯದ ಮುಂದೆ ಹಾಜರಾಗಿದ್ದರು. ಕೋರ್ಟ್‌ನಲ್ಲಿ ರಾರ್ಬಟ್ ವಾದ್ರಾ ಪರವಾಗಿ ಹಿರಿಯ ವಕೀಲ ದೇವದತ್ ಕಾಮತ್, ವಕೀಲರಾದ ಪ್ರತೀಕ್ ಚಡ್ಡಾ ಮತ್ತು ಅಕ್ಷತ್ ಗುಪ್ತಾ ವಾದಿಸಿದರು. ಜಾಮೀನು ಲಭಿಸಿದ ಬಳಿಕ ನ್ಯಾಯಾಲಯದ ಹೊರಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ವಾದ್ರಾ, ಇಡಿಯನ್ನು ಟೀಕಿಸುತ್ತಲೇ ನ್ಯಾಯಾಂಗದ ಮೇಲಿನ ತಮ್ಮ ನಂಬಿಕೆಯನ್ನು ಪುನರುಚ್ಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಇದನ್ನು ಓದಿದ್ದೀರಾ? ಸುದ್ದಿ ನೋಟ | ರಾಬರ್ಟ್ ವಾದ್ರಾ ಕ್ಲೀನ್‌ಚಿಟ್‌; ವ್ಯರ್ಥ ವಿಚಾರಣೆಯಿಂದ ಬಿಜೆಪಿ ಚುನಾವಣಾ ಲಾಭ ಪಡೆಯಿತೆ?

“ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿ ನನಗೆ ನಂಬಿಕೆ ಇದೆ. ಇಡಿಯನ್ನು ಸರ್ಕಾರ ನಿರ್ವಹಿಸುತ್ತಿದೆ ಎಂದು ನನಗೆ ತಿಳಿದಿದೆ. ಇಡಿ ಸರ್ಕಾರದ ಸೂಚನೆಗಳ ಮೇರೆಗೆ ಮುಂದುವರಿಯುತ್ತದೆ. ನನ್ನಲ್ಲಿ ಮುಚ್ಚಿಡುವಂತದ್ದು ಏನೂ ಇಲ್ಲ. ನಾನು ಯಾವಾಗಲೂ ಇಲ್ಲೇ ಇರುತ್ತೇನೆ ಮತ್ತು ಎಲ್ಲ ಪ್ರಶ್ನೆಗಳಿಗೆ ಉತ್ತರಿಸುತ್ತೇನೆ” ಎಂದು ವಾದ್ರಾ ಹೇಳಿದರು.

ರಾಬರ್ಟ್ ವಾದ್ರಾ ಒಡೆತನದ ‘ಸ್ಕೈಲೈಟ್ ಹಾಸ್ಪಿಟಾಲಿಟಿ’ ಸಂಸ್ಥೆಯು ಶಿಖೋಪುರದಲ್ಲಿ 2008ರಲ್ಲಿ ಕೇವಲ 7.5 ಕೋಟಿ ರೂ.ಗೆ ಭೂಮಿಯನ್ನು ಖರೀದಿಸಿತು. ನಂತರ ಯಾವುದೇ ಅಭಿವೃದ್ಧಿ ಮಾಡದೆ ಅದೇ ಭೂಮಿಯನ್ನು ಡಿಎಲ್‌ಎಫ್ ಕಂಪನಿಗೆ 58 ಕೋಟಿ ರೂ.ಗೆ ಮಾರಾಟ ಮಾಡಿ ಭಾರೀ ಲಾಭ ಗಳಿಸಿದೆ. ಈ ವ್ಯವಹಾರದಲ್ಲಿ ಅಕ್ರಮ ಹಣ ವರ್ಗಾವಣೆ, ಕ್ರಿಮಿನಲ್ ಪಿತೂರಿ, ವಂಚನೆ ಮತ್ತು ನಕಲಿ ದಾಖಲೆಗಳನ್ನು ಬಳಸಲಾಗಿದೆ ಎಂಬುದು ಆರೋಪವಾಗಿದೆ. ಆದರೆ ಇದು ರಾಜಕೀಯ ದುರುದ್ದೇಶದಿಂದ ನಡೆಸುತ್ತಿರುವ ವಿಚಾರಣೆಯಾಗಿದೆ ಎಂದು ವಾದ್ರಾ ಮತ್ತು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ | ಡಿಕೆಶಿ ಪ್ರತಿರೋಧಕ್ಕೆ ಮಣಿದ ಚುನಾವಣಾ ಆಯೋಗ; ಈವರೆಗಿನ ಅಕ್ರಮಗಳಿಗೆ ಹೊಣೆ ಯಾರು?

ಕರ್ನಾಟಕದಲ್ಲಿ ಎಸ್‌ಐಆರ್‌ ಆರಂಭವಾಗುವ ಮೊದಲೇ ನಾಗರಿಕ ಸಂಘಟನೆಗಳು ಕಾಂಗ್ರೆಸ್‌ ಗೆ ಎಸ್‌ಐಆರ್‌...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ ಪ್ರತಿಮೆ ತಲುಪಿದ ರೋಚಕ ಇತಿಹಾಸ!

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ...

ಅ.4ರಿಂದ ವಿಜಯಪುರ – ತಿರುಪತಿ ದಸರಾ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭ

ದಸರಾ ಹಬ್ಬದ ಹಿನ್ನೆಲೆಯಲ್ಲಿ ತಿರುಪತಿ–ವಿಜಯಪುರ ನಡುವೆ ಪ್ರಯಾಣಿಕರ ಅನುಕೂಲಕ್ಕಾಗಿ ಸಾಪ್ತಾಹಿಕ ವಿಶೇಷ...