ಜೆಕೆ ಸಿಮೆಂಟ್ ಫ್ಯಾಕ್ಟರಿಯ ಮೇಲ್ಛಾವಣಿ ಕುಸಿತಗೊಂಡು ಮೂವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಪನ್ನಾ ಪ್ರದೇಶದಲ್ಲಿ ನಡೆದಿದೆ ಎಂದು ವರದಿಯಾಗಿದೆ. ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಕುಸಿದಿದ್ದು ಸುಮಾರು 10ರಿಂದ 15 ಕಾರ್ಮಿಕರು ಸಿಲುಕಿರಬಹುದು ಎಂದು ಹೇಳಲಾಗಿದೆ.
ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ಪನ್ನಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಾಯಿ ಕೃಷ್ಣ ತೋಟ, “ಕುಸಿದ ಕಟ್ಟಡದ ಅಡಿಯಲ್ಲಿ ಸುಮಾರು 10-15 ಕಾರ್ಮಿಕರು ಸಿಲುಕಿರುವ ಸಾಧ್ಯತೆಯಿದೆ” ಎಂದು ಹೇಳಿದ್ದಾರೆ. ಆದರೆ ಸ್ಥಳೀಯರು ಸ್ಥಳೀಯರು 50ಕ್ಕೂ ಅಧಿಕ ಕಾರ್ಮಿಕರು ಸಿಲುಕಿರುವ ಸಾಧ್ಯತೆಯಿದೆ ಎಂದು ಹೇಳಿಕೊಂಡಿದ್ದಾರೆ.
ಇದನ್ನು ಓದಿದ್ದೀರಾ? ಮಧ್ಯಪ್ರದೇಶ | ಕಂಬಕ್ಕೆ ಕಟ್ಟಿ ಮಹಿಳೆಗೆ ಥಳಿತ; ನಾಲ್ವರ ಬಂಧನ
ಅಧಿಕೃತ ಮಾಹಿತಿ ಪ್ರಕಾರ ಈವರೆಗೆ ಮೂವರು ಕಾರ್ಮಿಕರ ಮೃತದೇಹ ಲಭಿಸಿದೆ. ಆದರೆ ಹಲವು ಕಾರ್ಮಿಕರು ಇನ್ನೂ ಕೂಡಾ ಕಟ್ಟಡದ ಅವಶೇಷದಡಿ ಸಿಲುಕಿರುವ ಕಾರಣ ಸಾವಿನ ಸಂಖ್ಯೆ ಅಧಿಕವಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
ಸದ್ಯ ಸ್ಥಳಕ್ಕೆ ರಾಜ್ಯ ವಿಪತ್ತು ತುರ್ತು ಮೀಸಲು ಪಡೆ (ಎಸ್‌ಡಿಇಆರ್‌ಎಫ್) ಸ್ಥಳಕ್ಕೆ ಧಾವಿಸಿದ್ದು ಕಾರ್ಮಿಕರ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.
