ಮಾಂಸಾಹಾರದ ಬಗ್ಗೆ ‘ಕೊಳಕು’ ನಿಂದನೆ: ಮುಂಬೈನಲ್ಲಿ ಮರಾಠಿಗಳು – ಗುಜರಾತಿಗಳ ನಡುವೆ ಘರ್ಷಣೆ

Date:

ಮುಂಬೈನ ಘಾಟ್ಕೋಪರ್‌ನಲ್ಲಿರುವ ಅಪಾರ್ಟ್ಮೆಂಟ್ ಒಂದರಲ್ಲಿ ಮಾಂಸಾಹಾರ ಸೇವನೆಯ ಮರಾಠಿ ಸಮುದಾಯದವರು ಮತ್ತು ಸಸ್ಯಾಹಾರ ಸೇವನೆಯ ಗುಜರಾತಿ ಸಮುದಾಯಗಳ ನಡುವೆ ಘರ್ಷಣೆ ನಡೆದಿದೆ.

- Advertisement -

ಅಪಾರ್ಟ್ ಮೆಂಟ್‌ನಲ್ಲಿ ವಾಸಿಸುತ್ತಿರುವ ಕೆಲ ಗುಜರಾತಿ ನಿವಾಸಿಗಳು ಮಾಂಸಾಹಾರ ಸೇವನೆಯ ಮರಾಠಿಯವರನ್ನು ʼಕೊಳಕರುʼ ಎಂದು ನಿಂದಿಸಿದ ಪರಿಣಾಮ ಪ್ರಕ್ಷುಬ್ಧ ಪರಿಸ್ಥಿತಿ ನಿರ್ಮಾಣವಾಗಿದೆ. ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಪೊಲೀಸರು, ಘರ್ಷಣೆಯಲ್ಲಿ ತೊಡಗಿದ್ದ ಎರಡೂ ಸಮುದಾಯಗಳ ಜನರ ಜೊತೆ ಮಾತುಕತೆ ನಡೆಸಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಮರಾಠಿ ಭಾಷಿಕ ಜನರು ಮೀನು ಮತ್ತು ಮಾಂಸಾಹಾರ ಸೇವನೆ ಮಾಡುತ್ತಾರೆಂದು ಅದೇ ಅಪಾರ್ಟ್ಮೆಂಟ್‌ನಲ್ಲೇ ವಾಸಿಸುತ್ತಿರುವ ಕೆಲ ಗುಜರಾತಿಗರು ಕೀಳಾಗಿ ನೋಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕೆಲ ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಕಾರ್ಯಕರ್ತರು ಅಪಾರ್ಟ್ಮೆಂಟ್‌ನಲ್ಲಿ ವಾಸಿಸುತ್ತಿರುವ ಗುಜರಾತಿ ನಿವಾಸಿಗಳೊಂದಿಗೆ ವಾಗ್ವಾದ ನಡೆಸುತ್ತಾ, ಮರಾಠಿಗರ ಆಹಾರ ಆಯ್ಕೆಯನ್ನು ಸಮರ್ಥಿಸುತ್ತಿರುವುದು ವಿಡಿಯೊದಲ್ಲಿ ಸೆರೆಯಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದೇಶವನ್ನಾಳುವ ಪ್ರಧಾನಿ ಮೋದಿ ಬಡ ಮುಸ್ಲಿಮರ ಪರವೇ?

ಮರಾಠಿ ಕುಟುಂಬಗಳನ್ನು ಕೊಳಕರು ಎಂದು ನಿಂದಿಸಿದ ಮತ್ತು ಮಾಂಸ ಹಾಗೂ ಮೀನು ಅಡುಗೆ ತಯಾರಿಸದಂತೆ ನಿರ್ಬಂಧಿಸಿದ ಅಪಾರ್ಟ್ಮೆಂಟ್‌ನ ಕೆಲ ನಿವಾಸಿಗಳ ಮೇಲೆ ಮಹಾರಾಷ್ಟ್ರ ನವನಿರ್ಮಾಣ ಸೇನೆಯ ನಾಯಕರೊಬ್ಬರು ಆಕ್ರೋಶವನ್ನು ವ್ಯಕ್ತಪಡಿಸಿರುವುದು ವಿಡಿಯೊದಲ್ಲಿ ಸೆರೆಯಾಗಿದೆ.

ಗುಜರಾತಿ ನಿವಾಸಿಗಳ ಆಕ್ಷೇಪದ ಕಾರಣಕ್ಕೆ ಮರಾಠಿ ಭಾಷಿಕ ನಿವಾಸಿಗಳು ಹೊರಗಿನಿಂದ ಮಾಂಸಾಹಾರ ತರಿಸಿಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂಬ ಆರೋಪಗಳು ಕೇಳಿ ಬಂದಿವೆ.

ಅಪಾರ್ಟ್ಮೆಂಟ್ ಸಮುಚ್ಚಯದಲ್ಲಿನ ಕುಟುಂಬಗಳು ಯಾವ ಆಹಾರವನ್ನು ಸೇವಿಸಬೇಕು ಎಂಬ ಬಗ್ಗೆ ಯಾವುದೇ ನಿರ್ಬಂಧಗಳಿಲ್ಲ ಎಂದು ಅಪಾರ್ಟ್ಮೆಂಟ್‌ನ ನಿವಾಸಿಯೊಬ್ಬರು ಸ್ಪಷ್ಟನೆ ನೀಡಲು ಯತ್ನಿಸಿದರೂ, ಇನ್ನಿತರರ ಆಹಾರಾಭ್ಯಾಸದ ಬಗ್ಗೆ ಯಾರೂ ಕೂಡ ತಾಕೀತು ಮಾಡಲು ಸಾಧ್ಯವಿಲ್ಲ. ವಿಶೇಷವಾಗಿ, ಮುಂಬೈನಂತಹ ಮಹಾನಗರದಲ್ಲಿ ನಿರ್ಬಂಧ ಸಾಧ್ಯವಿಲ್ಲ ಎಂದು ನಿವಾಸಿಯೊಬ್ಬರು ಒತ್ತಿ ಹೇಳುತ್ತಿರುವುದು ಆ ವಿಡಿಯೊದಲ್ಲಿ ದಾಖಲಾಗಿದೆ.

ಅಪಾರ್ಟ್ಮೆಂಟ್‌ನಲ್ಲಿ ಪ್ರಕ್ಷುಬ್ಧತೆ ಬಗ್ಗೆ ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ಧಾವಿಸಿದರು. ಆದರೆ, ಈ ಸಂಬಂಧ ಇದುವರೆಗೆ ಯಾವುದೇ ಅಧಿಕೃತ ದೂರು ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಈ ವೇಳೆ, ಅಪಾರ್ಟ್ಮೆಂಟ್‌ನ ನಿವಾಸಿಗಳು ಪರಸ್ಪರ ಸೌಹಾರ್ದದಿಂದ ಜೀವಿಸಬೇಕು ಹಾಗೂ ಯಾರಿಗೂ ಕಿರುಕುಳ ನೀಡಬಾರದು ಎಂದು ಪೊಲೀಸರು ಅಲ್ಲಿನ ನಿವಾಸಿಗಳಿಗೆ ಕಿವಿಮಾತು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...

ಪಶ್ಚಿಮ ಬಂಗಾಳ ಉಪಚುನಾವಣೆ ವೇಳೆ ಅಕ್ರಮದ ಆರೋಪ; ಮರುಮತದಾನಕ್ಕೆ ವಿಪಕ್ಷಗಳ ಆಗ್ರಹ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ...