ಮಾಲಿನ್ಯ ನಿಯಂತ್ರಣ ಕ್ರಮಗಳಿಂದ ಕೆಲಸ ಕಳೆದುಕೊಂಡ ಕಾರ್ಮಿಕರಿಗೆ 10,000 ರೂ. ಪರಿಹಾರ: ದೆಹಲಿ ಸರ್ಕಾರ

Date:

ದೆಹಲಿಯಲ್ಲಿ ಮಾಲಿನ್ಯ ನಿಯಂತ್ರಣಕ್ಕಾಗಿ ಜಾರಿಗೊಳಿಸಲಾಗಿರುವ GRAP III ಮತ್ತು GRAP IV ಕ್ರಮಗಳಿಂದಾಗಿ ಕೆಲಸ ಕಳೆದುಕೊಂಡ ನಿರುದ್ಯೋಗಿಗಳಾದ) ನಿರ್ಮಾಣ ಕಾರ್ಮಿಕರಿಗೆ 10,000 ರೂ. ಪರಿಹಾರ ನೀಡುವುದಾಗಿ ದೆಹಲಿ ಕಾರ್ಮಿಕ ಸಚಿವ ಕಪಿಲ್ ಮಿಶ್ರಾ ಘೋಷಿಸಿದ್ದಾರೆ.

- Advertisement -

GRAP III ಮತ್ತು GRAP IV ನಿಯಮಗಳ ಅಡಿಯಲ್ಲಿ ದೆಹಲಿಯ ಎಲ್ಲ ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳು ತಮ್ಮ 50% ಸಿಬ್ಬಂದಿಗಳಿಗೆ ಗುರುವಾರದಿಂದ ಮನೆಯಿಂದಲೇ ಕೆಲಸ ಮಾಡುವಂತೆ ಸೂಚಿಸುವುದು ಕಡ್ಡಾಯ. ಇಲ್ಲದಿದ್ದರೆ ಕ್ರಮ ಎದುರಿಸಬೇಕಾಗುತ್ತದೆ ಎಂದು ದೆಹಲಿ ಸರ್ಕಾರ ಎಚ್ಚರಿಕೆ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಪಿಲ್ ಮಿಶ್ರಾ, “ಈಗಾಗಲೇ ಕಳೆದ 16 ದಿನಗಳಿಂದ GRAP III ಜಾರಿಯಲ್ಲಿದೆ. ಈ ಅವಧಿಯಲ್ಲಿ ನಿರ್ಬಂಧಿತ ಚಟುವಟಿಕೆಯಿಂದ ಕೆಲಸ ಕಳೆದುಕೊಂಡಿರುವ ನಿರ್ಮಾಣ ಕಾರ್ಮಿಕರಿಗೆ 10,000 ರೂ. ಪರಿಹಾರ ನೀಡಲಾಗುವುದು” ಎಂದು ಹೇಳಿದ್ದಾರೆ.

“ಅದೇ ರೀತಿ, GRAP IV ಜಾರಿಯಲ್ಲಿರುವ ದಿನಗಳವರೆಗೆ ಕಾರ್ಮಿಕರಿಗೆ ಪರಿಹಾರವನ್ನು ನೀಡಲಾಗುತ್ತದೆ. ಈ ಪ್ರಯೋಜನಗಳಿಗಾಗಿ ಕಾರ್ಮಿಕರು ನೋಂದಾಯಿಸಿಕೊಳ್ಳಬೇಕು. ನೋಂದಣಿ ಪ್ರಕ್ರಿಯೆ ನಡೆಯುತ್ತಿದೆ” ಎಂದು ತಿಳಿಸಿದ್ದಾರೆ.

GRAP III ಮತ್ತು GRAP IV ಅಡಿಯಲ್ಲಿನ ನಿರ್ಬಂಧಗಳು ಆಸ್ಪತ್ರೆಗಳು ಮತ್ತು ವಾಯು ಮಾಲಿನ್ಯದ ವಿರುದ್ಧದ ಹೋರಾಟದಲ್ಲಿ ತೊಡಗಿರುವ ಇಲಾಖೆಗಳು, ಅಗ್ನಿಶಾಮಕ ಇಲಾಖೆ ಹಾಗೂ ಇತರ ಅಗತ್ಯ ಸೇವೆಗಳ ಕಾರ್ಮಿಕರಿಗೆ ಅನ್ವಯಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...