ಬಿಷ್ಣೋಯ್ ಎನ್‌ಕೌಂಟರ್‌ಗೆ 1,11,11,111 ರೂ. ಬಹುಮಾನ: ಕರ್ಣಿ ಸೇನೆ

Date:

ಎನ್‌ಸಿಪಿ ನಾಯಕ ಬಾಬಾ ಸಿದ್ದಿಕಿ ಹತ್ಯೆಯ ರುವಾರಿ ಬಂಧಿತ ಗ್ಯಾಂಗ್‌ಸ್ಟರ್ ಲಾರೆನ್ಸ್‌ ಬಿಷ್ಣೋಯ್‌ನನ್ನು ಎನ್‌ಕೌಂಟರ್ ಮಾಡಿದರೆ, ಆ ಪೊಲೀಸ್‌ ಅಧಿಕಾರಿಗೆ 1,11,11,111 ರೂ. ಬಹುಮಾನ ನೀಡುವುದಾಗಿ ರಾಜಸ್ಥಾನದ ಪ್ರಾದೇಶಿಕ ಪಕ್ಷ ಕ್ಷತ್ರಿಯ ಕರ್ಣಿ ಸೇನೆ ಘೋಷಿಸಿದೆ.

- Advertisement -

ಕರ್ಣಿ ಸೇನೆಯ ರಾಷ್ಟ್ರೀಯ ಅಧ್ಯಕ್ಷ ರಾಜ್ ಶೇಖಾವತ್ ಅವರು ಖಾಸಗಿ ಸುದ್ದಿ ವಾಹಿನಿ ಜೊತೆಗೆ ಮಾತನಾಡಿದ್ದು, ಲಾರೆನ್ಸ್‌ನನ್ನು ಎನ್‌ಕೌಂಟರ್ ಮಾಡುವ ಅಧಿಕಾರಿಗೆ ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ. ತಮ್ಮ ನಾಯಕ ಸುಖದೇವ್ ಸಿಂಗ್ ಗೊಗಮೆಡಿ ಹತ್ಯೆಗೆ ಪ್ರತೀಕಾರವಾಗಿ ಬಹುಮಾನ ಘೋಷಿಸಿರುವುದಾಗಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಬಹುಮಾನ ನೀಡುವ ಬಗ್ಗೆ ಮಾತನಾಡಿರುವ ವಿಡಿಯೋವನ್ನು ಶೇಖಾವತ್ ‘ಎಕ್ಸ್‌‘ನಲ್ಲಿ ಹಂಚಿಕೊಂಡಿದ್ದಾರೆ. “ನಮ್ಮ ನಾಯಕ ಗೊಗಮೆಡಿ ಹತ್ಯೆಗೆ ಲಾರೆನ್ಸ್‌ ಬಿಷ್ಣೋಯಿಯೇ ಕಾರಣ. ಆತನನ್ನು ಪೊಲೀಸರು ಎನ್‌ಕೌಂಟರ್‌ ಮಾಡಿದರೆ, ಆ ಪೊಲೀಸ್ ಅಧಿಕಾರಿಗೆ 1,11,11,111 ರೂ. ಬಹುಮಾನ ನೀಡುತ್ತೇವೆ” ಎಂದು ವಿಡಿಯೋದಲ್ಲಿ ಹೇಳಿದ್ದಾರೆ.

2023ರ ಡಿಸೆಂಬರ್‌ನಲ್ಲಿ ಗೊಗಮೆಡಿ ಅವರನ್ನು ಹತ್ಯೆ ಮಾಡಲಾಗಿತ್ತು. ಆ ಹತ್ಯೆಯನ್ನು ತಾನೇ ಮಾಡಿರುವುದಾಗಿ ಲಾರೆನ್ಸ್‌ ಗ್ಯಾಂಗ್‌ನಲ್ಲಿದ್ದ ರೋಹಿತ್ ಗೋಡಾರಾ ಹೇಳಿಕೊಂಡಿದ್ದಾನೆ. ಆತ ಭಾರತ ಬಿಟ್ಟು ಪರಾರಿಯಾಗಿದ್ದು, ಕೆನಡಾದಲ್ಲಿ ತಲೆಮರೆಸಿಕೊಂಡಿದ್ದಾನೆ ಎಂದು ಹೇಳಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2 ರೂ.ಗಾಗಿ ಆಸೆಪಟ್ಟ ಹೋಟೆಲ್‌ಗೆ 1 ಲಕ್ಷ ರೂ. ದಂಡ!

ಮುದ್ರಿತ ‘ಗರಿಷ್ಠ ಚಿಲ್ಲರೆ ಬೆಲೆ’ಗಿಂತ (MRP) 2 ರೂಪಾಯಿ ಹೆಚ್ಚುವರಿ ವಸೂಲಿ...

ಸಂವಿಧಾನವೆಂಬ ನಮ್ಮೆಲ್ಲರ ಆಸ್ತಿಗಾಗಿ ಸತ್ಯಾಗ್ರಹ

ಇವತ್ತು ಬೀದಿಗೆ ಇಳಿದಿರೋ ಜನ ಸಾಮಾನ್ಯರಲ್ಲ. ಬದುಕಿನ ಹಕ್ಕನ್ನು ಈ ದೇಶದ...

ಸಮಯೋಚಿತ ಕ್ರಮದಿಂದ ದೊಡ್ಡ ಮಟ್ಟದ ಅಶಾಂತಿ ತಪ್ಪಿತು: ಸುಪ್ರೀಂಗೆ ದೆಹಲಿ ಪೊಲೀಸ್ ಆಯುಕ್ತರ ಹೇಳಿಕೆ

ರಾಷ್ಟ್ರ ರಾಜಧಾನಿಯಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆಗಳ ವೇಳೆ ಪೊಲೀಸರು ಕೈಗೊಂಡ ಸಮಯೋಚಿತ,...