ನೋಟು ಹಿಂಪಡೆದು ಎರಡು ವರ್ಷವಾದರೂ 6,000 ಕೋಟಿ ರೂ.ಗಳಿಗೂ ಹೆಚ್ಚು 2,000 ರೂ. ನೋಟುಗಳು ಚಲಾವಣೆಯಲ್ಲಿ: ಆರ್‌ಬಿಐ

Date:

ಎರಡು ಸಾವಿರ ರೂಪಾಯಿ ನೋಟುಗಳ ಹಿಂಪಡೆದು ಎರಡು ವರ್ಷಗಳಾದರೂ 6,266 ಕೋಟಿ ರೂಪಾಯಿಗಳ ಹೆಚ್ಚಿನ ಮೌಲ್ಯದ 2000 ರೂಪಾಯಿ ನೋಟುಗಳು ಚಲಾವಣೆಯಲ್ಲಿವೆ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಹೇಳಿದೆ.

- Advertisement -

2023ರ ಮೇ 19ರಂದು ಆರ್‌ಬಿಐ 2000 ರೂಪಾಯಿ ಮುಖಬೆಲೆಯ ನೋಟುಗಳನ್ನು ಹಿಂತೆಗೆದುಕೊಂಡಿದೆ. ಆದರೆ 2000 ರೂಪಾಯಿ ನೋಟುಗಳು ಇನ್ನೂ ಕಾನೂನುಬದ್ಧವಾಗಿರುತ್ತದೆ ಎಂದು ಘೋಷಿಸಿದೆ. ಆದರೆ ಇಂದಿಗೂ ಸಾವಿರಾರು ಕೋಟ್ಯಾಂತರ ರೂಪಾಯಿ ಮೌಲ್ಯದ ಎರಡು ಸಾವಿರ ರೂಪಾಯಿ ನೋಟುಗಳು ಚಲಾವಣೆಯಲ್ಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದನ್ನು ಓದಿದ್ದೀರಾ? ₹2 ಸಾವಿರ ನೋಟುಗಳನ್ನು ಹಿಂಪಡೆಯಲು ನಿರ್ಧರಿಸಿದ ಆರ್‌ಬಿಐ; ಸೆ.30 ಕೊನೆ ದಿನ!

ಈ ಬಗ್ಗೆ ಆರ್‌ಬಿಐ ಶುಕ್ರವಾರ ಹೇಳಿಕೆಯನ್ನು ನೀಡಿದೆ. “2023ರ ಮೇ 19ರಂದು 2000 ರೂಪಾಯಿ ನೋಟುಗಳನ್ನು ಹಿಂಪಡೆದುಕೊಂಡಾಗ 3.56 ಲಕ್ಷ ಕೋಟಿ ರೂ.ಗಳಷ್ಟು ನೋಟುಗಳು ಚಲಾವಣೆಯಲ್ಲಿತ್ತು. ಆದರೆ 2025ರ ಏಪ್ರಿಲ್ 30ರ ಮುಕ್ತಾಯದ ಸಂದರ್ಭದಲ್ಲಿ 6,266 ಕೋಟಿ ರೂ.ಗಳಿಗೆ ಇಳಿದಿದೆ” ಎಂದು ಆರ್‌ಬಿಐ ತಿಳಿಸಿದೆ.

2023ರ ಮೇ 19ರಂದು ಚಲಾವಣೆಯಲ್ಲಿರುವ ರೂ. 2000 ನೋಟುಗಳಲ್ಲಿ ಶೇ. 98.24ರಷ್ಟು ಹಿಂತಿರುಗಿಸಲಾಗಿದೆ. 2023ರ ಅಕ್ಟೋಬರ್ 7ರವರೆಗೆ ಎಲ್ಲಾ ಬ್ಯಾಂಕ್ ಶಾಖೆಗಳಲ್ಲಿ ಅಂತಹ ನೋಟುಗಳ ಠೇವಣಿ ಅಥವಾ ವಿನಿಮಯದ ಸೌಲಭ್ಯ ಲಭ್ಯವಿತ್ತು. ಆದರೂ 19 ಆರ್‌ಬಿಐ ಕಚೇರಿಗಳಲ್ಲಿ ಇನ್ನೂ ಕೂಡಾ ನೋಟುಗಳನ್ನು ಬದಲಾವಣೆ ಮಾಡಿಕೊಳ್ಳಬಹುದಾಗಿದೆ.

2023ರ ಅಕ್ಟೋಬರ್ 9ರಿಂದ ಆರ್‌ಬಿಐ ವಿತರಣಾ ಕಚೇರಿಗಳು ವ್ಯಕ್ತಿಗಳು ಮತ್ತು ಸಂಸ್ಥೆಗಳಿಂದ 2000 ರೂಪಾಯಿ ನೋಟುಗಳನ್ನು ತಮ್ಮ ಬ್ಯಾಂಕ್ ಖಾತೆಗಳಿಗೆ ಠೇವಣಿ ಇಡಲು ಸ್ವೀಕರಿಸುತ್ತಿವೆ. ಇದಲ್ಲದೆ ಜನರು ತಮ್ಮ ಅಂಚೆ ಕಚೇರಿ ಖಾತೆಗಳಿಗೆ 2000 ರೂಪಾಯಿ ನೋಟುಗಳನ್ನು ಜಮೆ ಮಾಡಬಹುದಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...