370 ರೂ. ಬಿರಿಯಾನಿ ಬದಲು ಏನೋ ಬಯಸಿದ್ದೆ: ಪ್ರಣೀತ್‌ಗೆ ಮಹಿಳಾ ಆಯೋಗದ ನೋಟಿಸ್‌

Date:

ಸ್ಟ್ಯಾಂಡ್-ಅಪ್ ಕಾಮಿಡಿಯನ್ ಪ್ರಣೀತ್ ಮೋರ್ ಕಾಮೆಡಿ ಶೋನಲ್ಲಿ ನಡೆದ ‘370 ರೂ. ಬಿರಿಯಾನಿ’ ಎಂಬ ಹೇಳಿಕೆಯು ಸದ್ಯ ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಸಂಬಂಧ ಪ್ರಣೀತ್ ಮೋರ್‌ಗೆ ರಾಷ್ಟ್ರೀಯ ಮಹಿಳಾ ಆಯೋಗ (NCW) ನೋಟಿಸ್ ನೀಡಿದೆ. ಜತೆಗೆ ಮುಂಬೈನಲ್ಲಿ ಎಫ್‌ಐಆರ್ ಕೂಡ ದಾಖಲಾಗಿದೆ.

- Advertisement -

ಗುರುಗ್ರಾಮದಲ್ಲಿ ನಡೆದ ಪ್ರಣೀತ್ ಮೋರ್‌ನ ಲೈವ್ ಶೋನಲ್ಲಿ ಪ್ರೇಕ್ಷಕರ ಗ್ಯಾಲರಿಯಲ್ಲಿದ್ದ ವೆಬ್ ಡೆವಲಪರ್ ಆಗಿ ಕಾರ್ಯನಿರ್ವಹಿಸುತ್ತಿರುವ ಹಿಮಾಂಶು ಜಂಗ್ರಾ ಎಂಬ ಯುವಕ ತನ್ನ ಡೇಟಿಂಗ್ ಕತೆಯನ್ನು ಹಂಚಿಕೊಂಡಿದ್ದ. ಈ ವೇಳೆ ಯುವತಿಗೆ ತಾನು ಬಿರಿಯಾನಿ ಕೊಡಿಸಿದ್ದರಿಂದ ಅದನ್ನು ಆಕೆಯೊಂದಿಗೆ ಲೈಂಗಿಕ ಸುಖ ಪಡೆದು ವಸೂಲಿ ಮಾಡಬೇಕು ಎಂಬಂತೆ ಮಾತನಾಡಿದ್ದ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಇದನ್ನು ಓದಿದ್ದೀರಾ? “ನಾಯಕರ ಕೋಣೆಗೆ ಹೋಗದೆ ಮಹಿಳೆಯರಿಗೆ ರಾಜಕೀಯ ಪ್ರವೇಶ ಅಸಾಧ್ಯ”: ಸಂಸದ ಪಪ್ಪು ಯಾದವ್‌ ಹೇಳಿಕೆಗೆ ಮಹಿಳಾ ಆಯೋಗ ನೋಟಿಸ್

“ಡೇಟಿಂಗ್ ಹೋದಾಗ ಯುವತಿಯೊಬ್ಬಳಿಗೆ ಚಿಕನ್ ಬಿರಿಯಾನಿ ಕೊಡಿಸಲು ನಾನು 370 ರೂಪಾಯಿ ಖರ್ಚು ಮಾಡಿದ್ದೆ. ಆಕೆ ಊಟದ ಬಳಿಕ ತನ್ನನ್ನು ಮನೆಗೆ ಬಿಡಲು ಹೇಳಿದಾಗ ‘ನಾನು 370 ರೂ. ಖರ್ಚು ಮಾಡಿದ್ದೇನೆ, ಆ ಹಣವನ್ನು ಹೇಗಾದರೂ ವಸೂಲಿ ಮಾಡಬೇಕಲ್ಲವೇ’ ಎಂದು ಅಂದುಕೊಂಡೆ” ಎಂದು ಹಿಮಾಂಶು ಹೇಳಿದ್ದ. ಅಂದರೆ 370 ರೂಪಾಯಿ ಬಿರಿಯಾನಿ ಕೊಡಿಸಿದ್ದಕ್ಕೆ ಆಕೆ ದೈಹಿಕವಾಗಿ ಸಹಕರಿಸಬಹುದು ಎಂದು ಹೇಳಿದ್ದ.

ಅಷ್ಟು ಮಾತ್ರವಲ್ಲದೆ ಆತ ಮಹಿಳೆಯ ಒಪ್ಪಿಗೆಯಿಲ್ಲದೆ ಬಲವಂತವಾಗಿ ಚುಂಬಿಸಿದಾಗಿಯೂ ಹೇಳಿದ್ದ. ಈ ವೇಳೆ ಅಲ್ಲಿ ನೆರೆದಿದ್ದ ಪ್ರೇಕ್ಷಕರು ಮತ್ತು ಕಾಮೆಡಿಯನ್ ಪ್ರಣೀತ್ ಮೋರ್ ಅದನ್ನು ತಡೆಯುವ ಬದಲು ಜೋರಾಗಿ ನಕ್ಕು, ಚಪ್ಪಾಳೆ ತಟ್ಟಿದ್ದರು. ಬಳಿಕ ಈ ವಿಡಿಯೋ ಕ್ಲಿಪ್ ಅನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್‌ಲೋಡ್ ಮಾಡಲಾಗಿತ್ತು. ಇದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ರಾಷ್ಟ್ರೀಯ ಮಹಿಳಾ ಆಯೋಗ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದೆ. ಮಹಿಳೆಯರ ಘನತೆಗೆ ಧಕ್ಕೆ ತರುವ ಮತ್ತು ಲೈಂಗಿಕ ದೌರ್ಜನ್ಯವನ್ನು ತಮಾಷೆಯಾಗಿ ಬಿಂಬಿಸುವ ಇಂತಹ ಪ್ರವೃತ್ತಿಯನ್ನು ಆಯೋಗ ಖಂಡಿಸಿದೆ. ಕಾಮೆಡಿಯನ್ ಪ್ರಣೀತ್ ಮೋರ್ ಮತ್ತು ಹೇಳಿಕೆ ನೀಡಿದ ಹಿಮಾಂಶು ಜಂಗ್ರಾಗೆ ಜೂನ್ 22ರಂದು ಆಯೋಗದ ಮುಂದೆ ಹಾಜರಾಗಲು ಸಮನ್ಸ್ ಜಾರಿ ಮಾಡಿದೆ.

ಇನ್ನು ಹರಿಯಾಣ ಪೊಲೀಸ್ ಮಹಾನಿರ್ದೇಶಕರಿಗೆ (DGP) ಪತ್ರ ಬರೆದಿರುವ ಆಯೋಗದ ಅಧ್ಯಕ್ಷೆ ವಿಜಯಾ ರಾಹಟ್ಕರ್, ತಕ್ಷಣವೇ ಕಠಿಣ ಕ್ರಮ ಕೈಗೊಂಡು 7 ದಿನಗಳಲ್ಲಿ ವರದಿ ನೀಡುವಂತೆ ಆದೇಶಿಸಿದ್ದಾರೆ.

ಇನ್ನೊಂದೆಡೆ ಮಹಾರಾಷ್ಟ್ರ ಸೈಬರ್ ಪೊಲೀಸ್ ಇಲಾಖೆಯ ನೋಡಲ್ ಪೊಲೀಸ್ ಠಾಣೆಯಲ್ಲಿ ಪ್ರಣೀತ್ ಮೋರ್, ಹಿಮಾಂಶು ಜಂಗ್ರಾ ಹಾಗೂ ಮತ್ತೊಂದು ವಿವಾದಿತ ವಿಡಿಯೋದಲ್ಲಿದ್ದ ಡಾ. ಸೇಜಲ್ ಪವಾರ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ವಿವಾದಾತ್ಮಕ ಹೇಳಿಕೆ ನೀಡಿದ ಹಿಮಾಂಶು ಜಂಗ್ರಾ ಕೆಲಸ ಮಾಡುತ್ತಿದ್ದ ಗುರುಗ್ರಾಮದ ‘ಸ್ಟಾರ್ವಿಕ್ ಡಿಸೈನ್’ ಕಂಪನಿಯು ಆತನನ್ನು ತಕ್ಷಣವೇ ಕೆಲಸದಿಂದ ವಜಾಗೊಳಿಸಿದೆ. ವಿವಾದ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಪ್ರಣೀತ್ ಮೋರ್ ಮತ್ತು ಹಿಮಾಂಶು ಇಬ್ಬರೂ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ. ಸದ್ಯ ಪ್ರಣೀತ್ ಮೋರ್ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ದಾರೆ.

ಮುಂಬೈ ಪೊಲೀಸರು ಕೂಡ ತಮ್ಮ ಅಧಿಕೃತ ಖಾತೆಯಲ್ಲಿ ಈ ಬಗ್ಗೆ ಜಾಗೃತಿ ಪೋಸ್ಟ್ ಹಂಚಿಕೊಂಡಿದ್ದು, “370 ರೂಪಾಯಿಗೆ ಬಿರಿಯಾನಿ ಸಿಗುತ್ತದೆಯೇ ಹೊರತು ಮಹಿಳೆಯ ಒಪ್ಪಿಗೆಯಲ್ಲ” (#BiryaniIsNotConsent) ಎಂದು ಖಡಕ್ ಸಂದೇಶ ನೀಡಿದ್ದಾರೆ.

ಡಾ. ಸೇಜಲ್ ಪವಾರ್ ವಿರುದ್ಧವೂ ಆಕ್ರೋಶ

ಇದೇ ಕಾರ್ಯಕ್ರಮದಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಡಾ. ಸೇಜಲ್ ಪವಾರ್ ಅವರು ಮಾನವ ಶವಗಳ ಬಗ್ಗೆ ನೀಡಿದ್ದ ವಿವಾದಾತ್ಮಕ ಹೇಳಿಕೆ ತೀವ್ರ ವಿವಾದಕ್ಕೆ ಕಾರಣವಾಗಿದೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಸೇಜಲ್ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ.

ಮುಂಬೈನ ಕೆಇಎಂ ಆಸ್ಪತ್ರೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಡಾ. ಸೇಜಲ್ ಪವಾರ್ ಈ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ವೈದ್ಯಕೀಯ ಶಿಕ್ಷಣಕ್ಕಾಗಿ ದಾನ ಪಡೆದ ಪುರುಷರ ಶವಗಳ ಖಾಸಗಿ ಅಂಗಗಳ ಗಾತ್ರದ ಬಗ್ಗೆ ತಾವು ಮತ್ತು ತಮ್ಮ ಸಹೋದ್ಯೋಗಿಗಳು ಹಾಸ್ಯ ಮಾಡುವುದಾಗಿ, ಇತರ ದೇಹಗಳ ಗುಪ್ತಾಂಗದ ಜತೆ ಹೋಲಿಕೆ ಮಾಡುವುದಾಗಿ ಹೇಳಿಕೆ ನೀಡಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

“ಮಹಿಳೆಯರ ಬಗ್ಗೆ ಅವಹೇಳನಕಾರಿ ಅಥವಾ ಅವರನ್ನು ವಸ್ತುಗಳಂತೆ ನೋಡುವುದು ತಪ್ಪು ಆಗಿರುವಾಗ ಗಂಡಸರ ದೇಹ, ಖಾಸಗಿತನವನ್ನು ಅವಮಾನಿಸುವುದು ಕೂಡ ದೊಡ್ಡ ತಪ್ಪಲ್ಲವೇ” ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ. ಸೇಜಲ್ ವಿರುದ್ಧವೂ ಎಫ್‌ಐಆರ್ ದಾಖಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ SIR:​’ಹಳೆಯ’ ಮತದಾರರಿಗೆ ‘ಹೊಸ’ ಫಾರ್ಮ್ ಏಕೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ತರಾಟೆ

ದೆಹಲಿಯಲ್ಲಿ ನಡೆಯುತ್ತಿರುವ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಹಿಂದಿನ ಮತದಾರರ...

ಡಯಾಜಿಯೊ ಇಂಡಿಯಾದ ನೂತನ ಜನರಲ್ ಕೌನ್ಸೆಲ್ ಆಗಿ ಸಮೀರ್ ಚುಘ್ ನೇಮಕ

ಪ್ರಮುಖ ಮದ್ಯ ಉತ್ಪಾದನಾ ಕಂಪನಿಯಾದ ಡಯಾಜಿಯೊ ಇಂಡಿಯಾ (Diageo India) ಸಂಸ್ಥೆಯ...

ಬೀದರ್‌ | ಶೈಕ್ಷಣಿಕ ಜ್ಞಾನದೊಂದಿಗೆ ಮಾನವೀಯ ಮೌಲ್ಯ ಬೆಳೆಸಿಕೊಳ್ಳಿ : ಜ್ಯೋತಿರ್ಮಯಾನಂದ ಸ್ವಾಮೀಜಿ

ವಿದ್ಯಾರ್ಥಿಗಳು ಶಿಸ್ತು, ಸಂಯಮ, ಪರಿಶ್ರಮ ಹಾಗೂ ಉತ್ತಮ ಮೌಲ್ಯಗಳನ್ನು ನಿತ್ಯ ಜೀವನದಲ್ಲಿ...

ಈ ದಿನ ಸಂಪಾದಕೀಯ | ಎಸ್‌ಐಆರ್‌ ಮುಗೀತು; ಉತ್ತರ ಸಿಗದ ಪ್ರಶ್ನೆಗಳಿನ್ನೂ ಬಾಕಿ ಇವೆ!

ಎಸ್‌ಐಆರ್‌ ಮುಗಿದಿದೆ, ಅಂತಿಮ ಮತದಾರರ ಪಟ್ಟಿಯೂ ಪ್ರಕಟವಾಗಿದೆ. ಆದರೆ ಉತ್ತರ...