ಬಟ್ಟೆ ಇಸ್ತ್ರಿ ಮಾಡುವ ವ್ಯಕ್ತಿಗೆ 598 ಕೋಟಿ ರೂ. ಐಟಿ ನೋಟಿಸ್!

Date:

ದಿನವಿಡೀ ಬಟ್ಟೆ ಇಸ್ತ್ರಿ ಮಾಡಿ 500 ರೂ.ನಿಂದ 700 ರೂ.ಗಳಿಸುವ ವ್ಯಕ್ತಿಗೆ ಕೋಟ್ಯಂತರ ರೂಪಾಯಿ ತೆರಿಗೆ ಪಾವತಿಸುವಂತೆ ಆದಾಯ ತೆರಿಗೆ ಇಲಾಖೆ (IT) ನೋಟಿಸ್ ನೀಡಿರುವ ಘಟನೆ ರಾಜಸ್ಥಾನದ ಅಜ್ಮೀರ್‌ನಲ್ಲಿ ಬೆಳಕಿಗೆ ಬಂದಿದೆ. ಅಜ್ಮೀರ್‌ನ ರಾಮನಗರ ನಿವಾಸಿ ಜಿತೇಂದ್ರ ಕುಮಾರ್ ಬರೋಲಿಯಾ ಎಂಬುವವರು ಈ ನೋಟಿಸ್‌ ಪಡೆದಿದ್ದು, ಆಘಾತಕ್ಕೊಳಗಾಗಿದ್ದಾರೆ.

- Advertisement -

ಅಜ್ಮೀರ್‌ನ ಬೀದಿ ಬದಿಯಲ್ಲಿ ಸಣ್ಣದೊಂದು ಅಂಗಡಿ ಇಟ್ಟುಕೊಂಡು ಬಟ್ಟೆ ಇಸ್ತ್ರಿ ಕೆಲಸ ಮಾಡುವ ಜಿತೇಂದ್ರ ಅವರಿಗೆ ಏಪ್ರಿಲ್ 1ರಂದು ಆದಾಯ ತೆರಿಗೆ ಇಲಾಖೆಯಿಂದ ನೋಟಿಸ್ ಬಂದಿದೆ. ಅದರಲ್ಲಿ ಜಿತೇಂದ್ರ ಅವರು 598,50,27,726 ರೂಪಾಯಿ ತೆರಿಗೆ ಬಾಕಿ ಉಳಿಸಿಕೊಂಡಿದ್ದೀರಿ. ಅದನ್ನು ತಕ್ಷಣವೇ ಪಾವತಿ ಮಾಡಬೇಕು ಎಂದು ಸೂಚಿಸಲಾಗಿದೆ. ಈ ಬೃಹತ್ ಮೊತ್ತದ ತೆರಿಗೆ ನೋಟಿಸ್‌ ಕಂಡು ಜಿತೇಂದ್ರ ಮತ್ತು ಅವರ ಕುಟುಂಬಸ್ಥರು ಆತಂಕಗೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ನೋಟಿಸ್‌ನಿಂದ ಕಂಗಾಲಾದ ಜಿತೇಂದ್ರ ಅವರು ವಕೀಲ ರಾಕೇಶ್ ಥಾಡಾ ಅವರನ್ನು ಸಂಪರ್ಕಿಸಿದ್ದಾರೆ. ಬಳಿಕ, ನಡೆದ ತನಿಖೆಯಲ್ಲಿ, ಜಿತೇಂದ್ರ ಅವರ ಪಾನ್‌ ಕಾರ್ಡ್‌ ದುರುಪಯೋಗವಾಗಿದೆ ಎಂಬುದು ತಿಳಿದುಬಂದಿದೆ.

“ಜಿತೇಂದ್ರ ಅವರು ಕೆಲವು ವರ್ಷಗಳ ಹಿಂದೆ ತಮ್ಮ ಪ್ಯಾನ್ ಕಾರ್ಡ್ ಕಳೆದುಕೊಂಡಿದ್ದರು. ಇದನ್ನು ಬಳಸಿಕೊಂಡ ಪಾಲಿ ಮೂಲದ ಉದ್ಯಮಿ ಶತ್ರುಘ್ನ ಸಿಂಗ್ ಎಂಬಾತ ಜಿತೇಂದ್ರ ಹೆಸರಿನಲ್ಲಿ ಜಿಎಸ್‌ಟಿ ಸಂಖ್ಯೆ ಪಡೆದು ಅಕ್ರಮವಾಗಿ ಬ್ಯಾಂಕ್ ಖಾತೆ ತೆರೆದಿದ್ದರು. ಈ ಖಾತೆಯ ಮೂಲಕ ಕೇವಲ ಮೂರು ತಿಂಗಳ ಅವಧಿಯಲ್ಲಿ (2020ರ ಡಿಸೆಂಬರ್ 9ರಿಂದ 2021ರ ಫೆಬ್ರವರಿ 9) ಸುಮಾರು 468 ಕೋಟಿ ರೂ. ಮೌಲ್ಯದ ವಹಿವಾಟು ನಡೆಸಲಾಗಿದೆ. ಜಿತೇಂದ್ರ ಅವರ ಪಾನ್ ಕಾರ್ಡ್‌ ದುರುಪಯೋಗವಾಗಿದೆ ಎಂಬುದು ತನಿಖೆಯಲ್ಲಿ ತಿಳಿದುಬಂದಿದೆ” ಎಂದು ವಕೀಲ ಥಾಡಾ ವಿವರಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ಶಿಲಾಯುಗ’ದಿಂದ ‘ಸುವರ್ಣಯುಗ’; ಇರಾನ್ ಮೇಲಿನ ಯುದ್ಧದಲ್ಲಿ ಬದಲಾದ ಟ್ರಂಪ್ ವರಸೆ

ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಜಿತೇಂದ್ರ, “ನಾನು ಬಟ್ಟೆ ಇಸ್ತ್ರಿ ಮಾಡುವ ಕೆಲಸದ ಮೂಲಕ ಜೀವನ ಸಾಗಿಸುತ್ತಿದ್ದೇನೆ. ಪ್ರತಿದಿನ 500-700 ರೂ. ಗಳಿಸುವುದೇ ಕಷ್ಟ. ಹೀಗಿರುವಾಗ, ಇಷ್ಟೊಂದು ದೊಡ್ಡ ಮೊತ್ತದ ವ್ಯವಹಾರ ಮಾಡಲು ಹೇಗೆ ಸಾಧ್ಯ? ನನ್ನ ಪ್ಯಾನ್ ಕಾರ್ಡ್ ದುರುಪಯೋಗಪಡಿಸಿಕೊಂಡು ನನ್ನನ್ನು ಸಂಕಷ್ಟಕ್ಕೆ ಸಿಲುಕಿಸಲಾಗಿದೆ” ಎಂದು ಅಳಲು ತೋಡಿಕೊಡಿದ್ದಾರೆ.

ಜಿತೇಂದ್ರ ಅವರು ಗಂಜ್ ಪೊಲೀಸ್ ಠಾಣೆಯಲ್ಲಿ ಉದ್ಯಮಿ ಶತ್ರುಘ್ನ ಸಿಂಗ್ ವಿರುದ್ಧ ದೂರು ದಾಖಲಿಸಿದ್ದಾರೆ. ಪ್ರಕರಣದ ಗಂಭೀರತೆ ಪರಿಗಣಿಸಿ ತನಿಖೆಯನ್ನು ಅನಾ ಸಾಗರ್ ಪೊಲೀಸ್ ಠಾಣೆಯ ಉಸ್ತುವಾರಿ ರಾಜೇಂದ್ರ ಅವರಿಗೆ ವಹಿಸಲಾಗಿದೆ.

“ಜಿತೇಂದ್ರ ಅವರ ದೂರಿನ ಆಧಾರದ ಮೇಲೆ ತನಿಖೆ ನಡೆಸಲಾಗುತ್ತಿದೆ. ಸಂಬಂಧಪಟ್ಟ ಬ್ಯಾಂಕ್‌ಗಳಿಗೆ ನೋಟಿಸ್ ಕಳುಹಿಸಲಾಗುವುದು” ಎಂದು ಎಎಸ್‌ಐ ರಾಜೇಂದ್ರ ಪ್ರಸಾದ್ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹವಾಮಾನ ವರದಿ | ಮುಂದಿನ 3 ದಿನ ಗುಡುಗು ಸಹಿತ ಭಾರೀ ಮಳೆ

ಮನ್ನಾರ್ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ಮೇಲ್ಮೈ ಸುಳಿಗಾಳಿಯ ಪ್ರಭಾವದಿಂದ...

ಬೀದರ್‌ | ವಿದ್ಯಾರ್ಥಿಗಳು ಸಮಯ ಪ್ರಜ್ಞೆ, ಶಿಸ್ತು ಮೈಗೂಡಿಸಿಕೊಳ್ಳಿ : ಜಯಕುಮಾರ ಶಿಂಧೆ

ಸಮಯ ಪ್ರಜ್ಞೆ ಹಾಗೂ ಶಿಸ್ತು ಮೈಗೂಡಿಸಿಕೊಳ್ಳುವುದರಿಂದ ಜೀವನದಲ್ಲಿ ಯಶಸ್ಸು ಗಳಿಸಬಹುದು ಎಂದು...

ಮುದ್ದೇಬಿಹಾಳದಲ್ಲಿ ತೀವ್ರ ಬರ; ಕಾಲುವೆಗಳಿಗೆ ನೀರು ಹರಿಸಲು ಶಾಸಕ ನಾಡಗೌಡ ಮನವಿ

ಬರದ ಬಿಸಿಲಿಗೆ ಮುದ್ದೇಬಿಹಾಳ ಮತ್ತು ತಾಳಿಕೋಟೆ ತಾಲೂಕುಗಳ ಗ್ರಾಮೀಣ ಬದುಕು ತತ್ತರಿಸುತ್ತಿರುವ...

ಈ ದಿನ ಸಂಪಾದಕೀಯ | ಪ್ರಧಾನಿಗೂ ಸಿಗದ ʼಬಾರಾಖೂನ್ ಮಾಫಿʼ ಗ್ಯಾನೇಶ್ ಕುಮಾರ್‌ಗೆ ಯಾಕೆ? ಕೊಡಿಸಿದವರು ಯಾರು?

ಚುನಾವಣೆಯ ಕಾವಲುಗಾರನಿಗೆ ಕಾನೂನಿನ ಕವಚ ಕುಂಡಲಗಳನ್ನು ನೀಡಿ, ಕಾನೂನಿನ ಕೈಗಳು ಮುಟ್ಟದಂತೆ,...