ಕಳಪೆ ಕಾಮಗಾರಿ; ಕುಸಿತದ ಭೀತಿಯಲ್ಲಿ ಬಿಹಾರದ 64 ಕೋಟಿ ವೆಚ್ಚದ ಸೇತುವೆ

Date:

ಇತ್ತೀಚೆಗಷ್ಟೇ ಭಾಗಲ್‌ಪುರದ ವಿಕ್ರಮಶಿಲಾ ಸೇತುವೆಯ ಒಂದು ಭಾಗ ಕುಸಿದುಬಿದ್ದ ಬೆನ್ನಲ್ಲೇ, ಬಿಹಾರದಲ್ಲಿ ಕಳಪೆ ಕಾಮಗಾರಿಯ ಮತ್ತೊಂದು ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ. ಗಯಾ ಜಿಲ್ಲೆಯಲ್ಲಿ ರೂ. 64 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ‘ಕೇನಿ ಸೇತುವೆ’ಯ ಪಿಲ್ಲರ್‌ಗಳಿಗೆ ಹಾನಿಯಾಗಿದ್ದು, ಕಾಂಕ್ರೀಟ್ ಕಿತ್ತು ಬಂದು ಕಬ್ಬಿಣದ ಸರಳುಗಳು ಹೊರಬಂದಿವೆ. ಯಾವುದೇ ಕ್ಷಣದಲ್ಲಿ ಸೇತುವೆ ಕುಸಿಯುವ ಭೀತಿ ಎದುರಾಗಿದ್ದು, ಸ್ಥಳೀಯರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ.

- Advertisement -

ಫಲ್ಗು ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಈ ಸೇತುವೆಯು ಗಯಾ ನಗರವನ್ನು ರಾಜಗೀರ್ ಮತ್ತು ನವಾಡಾ ಸೇರಿದಂತೆ ಪೂರ್ವದ ಪ್ರಮುಖ ಭಾಗಗಳಿಗೆ ಬೆಸೆಯುವ ಮುಖ್ಯ ಸಂಪರ್ಕ ಕೊಂಡಿಯಾಗಿದೆ. ಆದರೆ, ಪ್ರಸ್ತುತ ಸೇತುವೆಯ ಕಾಂಕ್ರೀಟ್ ಸ್ಲ್ಯಾಬ್‌ಗಳ ನಡುವೆ ಆಳವಾದ ಬಿರುಕುಗಳು ಕಾಣಿಸಿಕೊಂಡಿದ್ದು, ತುಕ್ಕು ಹಿಡಿದ ಕಬ್ಬಿಣದ ಕಂಬಿಗಳು ಅಪಾಯಕಾರಿಯಾಗಿ ಹೊರಚಾಚಿಕೊಂಡಿವೆ. ಸೇತುವೆಯ ಹಲವು ಭಾಗಗಳು ಮತ್ತು ಮೂಲೆಗಳು ಒಡೆದುಹೋಗಿದ್ದು, ಕಳಪೆ ಗುಣಮಟ್ಟದ ನಿರ್ಮಾಣ ಕಾರ್ಯವನ್ನು ಬಟಾಬಯಲು ಮಾಡಿವೆ. ಸೇತುವೆಯ ದುಸ್ಥಿತಿಯ ಚಿತ್ರಗಳು ಮತ್ತು ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಸಾರ್ವಜನಿಕರ ಆಕ್ರೋಶ ಮತ್ತು ಆತಂಕದ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಗಯಾ ಶಾಸಕ ಪ್ರೇಮ್ ಕುಮಾರ್, ಈ ಗಂಭೀರ ವಿಚಾರವನ್ನು ರಸ್ತೆ ನಿರ್ಮಾಣ ಇಲಾಖೆಯ ಗಮನಕ್ಕೆ ತರಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನು ಓದಿದ್ದೀರಾ? ಕೊಹ್ಲಿ-ರೋಹಿತ್ 2027ರ ವಿಶ್ವಕಪ್ ಆಡ್ತಾರಾ; ಬಿಸಿಸಿಐ ಮುಂದಿದೆ ದೊಡ್ಡ ಸವಾಲು

“ಇಲಾಖೆಯು ಈಗಾಗಲೇ ತನಿಖೆ ಆರಂಭಿಸಿದೆ. ಕೇವಲ ಕೇನಿ ಸೇತುವೆ ಮಾತ್ರವಲ್ಲದೆ, ರಾಜ್ಯದಾದ್ಯಂತ ಇರುವ ಎಲ್ಲಾ ಹಳೆಯ ಮತ್ತು ಹೊಸ ಸೇತುವೆಗಳ ಸುರಕ್ಷತಾ ಆಡಿಟ್ ಮತ್ತು ಪರಿಶೀಲನೆ ನಡೆಸಲಾಗುತ್ತಿದೆ. ಸೇತುವೆಗಳ ಪ್ರಸ್ತುತ ಸ್ಥಿತಿ ಮತ್ತು ಅವುಗಳ ರಚನಾತ್ಮಕ ಜೀವಿತಾವಧಿಯನ್ನು ತಜ್ಞರ ಮೂಲಕ ಮೌಲ್ಯಮಾಪನ ಮಾಡಲಾಗುತ್ತಿದೆ,” ಎಂದು ಶಾಸಕರು ಮಾಹಿತಿ ನೀಡಿದ್ದಾರೆ.

ರಾಜ್ಯದ ವಿವಿಧ ಜಿಲ್ಲೆಗಳಿಂದಲೂ ಸೇತುವೆಗಳ ಸುರಕ್ಷತೆ ಕುರಿತು ದೂರುಗಳು ಬರುತ್ತಿವೆ ಎಂದು ಶಾಸಕರು ತಿಳಿಸಿದ್ದಾರೆ. ಶಿಲಾವೊ ಎಂಬಲ್ಲಿ ಸೇತುವೆಯೊಂದರ ಪಾಯದ ಪಿಲ್ಲರ್ ಬೇರ್ಪಟ್ಟಿರುವ ಕುರಿತು ವರದಿಯಾಗಿದೆ.

ಬಿಹಾರದಲ್ಲಿ ಇತ್ತೀಚಿನ ದಿನಗಳಲ್ಲಿ ಪದೇ ಪದೇ ಸೇತುವೆಗಳು ಕುಸಿಯುತ್ತಿರುವ ಮತ್ತು ಬಿರುಕು ಬಿಡುತ್ತಿರುವ ಘಟನೆಗಳು ಮರುಕಳಿಸುತ್ತಿದ್ದು, ರಾಜ್ಯದ ಮೂಲಸೌಕರ್ಯ ಯೋಜನೆಗಳ ಗುಣಮಟ್ಟ ಹಾಗೂ ನಿರ್ವಹಣಾ ವ್ಯವಸ್ಥೆಯ ಕುರಿತು ಸಾರ್ವಜನಿಕ ವಲಯದಲ್ಲಿ ದೊಡ್ಡ ಮಟ್ಟದ ಪ್ರಶ್ನೆಗಳನ್ನು ಹುಟ್ಟುಹಾಕಿವೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR: ಪಶ್ಚಿಮ ಬಂಗಾಳದ ಅವಾಂತರಗಳು

ಮುಖ್ಯ ಚುನಾವಣಾ ಆಯುಕ್ತರು ಏಕಪಕ್ಷೀಯವಾಗಿ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ ಎಂಬ ದೂರಿನ ಮೇರೆಗೆ...

ಗ್ಯಾನೇಶ್ ಕುಮಾರ್ ರಾಜೀನಾಮೆ ನೀಡಿದರೂ CEC ವಿರುದ್ಧ ಪ್ರತಿಭಟನೆ ಮುಂದುವರೆಯುತ್ತದೆ: CJP

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧದ ಪ್ರತಿಭಟನೆ ರಾಜೀನಾಮೆಯಿಂದ ಅಂತ್ಯಗೊಳ್ಳುವುದಿಲ್ಲ....