ಕೇಂದ್ರ, ಸಶಸ್ತ್ರ ಪಡೆಗಳನ್ನು ಅಭಿನಂದಿಸಿದ ಆರ್‌ಎಸ್‌ಎಸ್‌ ಮುಖ್ಯಸ್ಥ

Date:

Advertisements

ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು ಪಾಕಿಸ್ತಾನದ ಉಗ್ರ ಸಂಘಟನೆಗಳನ್ನು ಗುರಿಯಾಗಿಸಿಕೊಂಡು ‘ಅಪರೇಷನ್ ಸಿಂಧೂರ’ ಕಾರ್ಯಾಚರಣೆಯನ್ನು ನಡೆಸಿದ್ದಕ್ಕಾಗಿ ಕೇಂದ್ರ ಸರ್ಕಾರ ಮತ್ತು ಸಶಸ್ತ್ರ ಪಡೆಗಳಿಗೆ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ಪಹಲ್ಗಾಮ್ ಹತ್ಯಾಕಾಂಡದಲ್ಲಿ ತಮ್ಮವರನ್ನು ಕಳೆದುಕೊಂಡ ಕುಟುಂಬಸ್ಥರಿಗೆ ಮತ್ತು ಇಡೀ ದೇಶಕ್ಕೆ ನ್ಯಾಯ ಒದಗಿಸಲು ತೆಗೆದುಕೊಳ್ಳಲಾದ ಈ ಕ್ರಮವು ಇಡೀ ದೇಶದ ಸ್ವಾಭಿಮಾನ ಮತ್ತು ಧೈರ್ಯವನ್ನು ಹೆಚ್ಚಿಸಿದೆ ಎಂದು ಭಾಗವತ್ ತಿಳಿಸಿದ್ದಾರೆ.

ಪಾಕಿಸ್ತಾನದ ಭಯೋತ್ಪಾದಕರ ವಿರುದ್ಧ ತೆಗೆದುಕೊಳ್ಳುತ್ತಿರುವ ಮಿಲಿಟರಿ ಕ್ರಮವು ದೇಶದ ಭದ್ರತೆಗೆ ಅಗತ್ಯ ಮತ್ತು ಅನಿವಾರ್ಯ ಹೆಜ್ಜೆಯಾಗಿದೆ. ರಾಷ್ಟ್ರೀಯ ಬಿಕ್ಕಟ್ಟಿನ ಈ ಸಮಯದಲ್ಲಿ ಇಡೀ ದೇಶವು ಸರ್ಕಾರ ಮತ್ತು ಸಶಸ್ತ್ರ ಪಡೆಗಳೊಂದಿಗೆ ಮುಕ್ತ ಮನಸ್ಸಿನಿಂದ ನಿಂತಿದೆ ಎಂದು ಭಾಗವತ್‌ ಹೇಳಿದ್ದಾರೆ.

Advertisements

ಇದನ್ನು ಓದಿದ್ದೀರಾ? ಶಾಸಕ ಸ್ಥಾನದಿಂದ ಬಿಜೆಪಿ ನಾಯಕ ಜನಾರ್ದನ ರೆಡ್ಡಿ ಅನರ್ಹ

ಭಾರತದ ಗಡಿಯಲ್ಲಿ ಧಾರ್ಮಿಕ ಸ್ಥಳಗಳು ಮತ್ತು ನಾಗರಿಕ ಮನೆಗಳ ಮೇಲೆ ಪಾಕ್ ಸೇನೆ ನಡೆಸಿದ ದಾಳಿಯನ್ನು ನಾವು ಖಂಡಿಸುತ್ತೇವೆ. ಈ ದಾಳಿಗೆ ಬಲಿಯಾದವರ ಕುಟುಂಬಗಳಿಗೆ ಸಂತಾಪವನ್ನು ವ್ಯಕ್ತಪಡಿಸುತ್ತೇವೆ ಎಂದು ಅವರು ಹೇಳಿದ್ದಾರೆ.

ಈ ಬಿಕ್ಕಟ್ಟಿನ ಸಮಯದಲ್ಲಿ ಸರ್ಕಾರ ಹೊರಡಿಸುವ ಆದೇಶಗಳನ್ನು ಸಂಪೂರ್ಣವಾಗಿ ಪಾಲಿಸಬೇಕು. ಎಲ್ಲ ನಾಗರಿಕರು ತಮ್ಮ ದೇಶಭಕ್ತಿಯನ್ನು ಪ್ರದರ್ಶಿಸಲು ಮತ್ತು ಅಗತ್ಯವಿರುವಲ್ಲಿ ಸೈನ್ಯ ಮತ್ತು ಆಡಳಿತದೊಂದಿಗೆ ಸಹಕರಿಸಲು ಸಿದ್ಧರಾಗಿರಬೇಕು ಎಂದು ಭಾಗವತ್ ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X