ಮಣಿಪುರಕ್ಕೆ ನಾಳೆ ಆರ್‌ಎಸ್ಎಸ್‌ ಮುಖ್ಯಸ್ಥ: 2023ರಲ್ಲಿ ಹಿಂಸಾಚಾರ ಭುಗಿಲೆದ್ದ ನಂತರ ಮೊದಲ ಭೇಟಿ

Date:

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಮುಖ್ಯಸ್ಥ ಮೋಹನ್‌ ಭಾಗವತ್‌ ಅವರು ನಾಳೆ (ನವೆಂಬರ್ 20) ಮಣಿಪುರಕ್ಕೆ ಭೇಟಿ ನೀಡಲಿದ್ದಾರೆ ಎಂದು ಸಂಘಟನೆಯ ಪದಾಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.

- Advertisement -

ಭಾಗವತ್‌ ಅವರು ಮೂರು ದಿನಗಳ ಭೇಟಿ ವೇಳೆ ನಾಗರಿಕರು, ಉದ್ಯಮಿಗಳು ಹಾಗೂ ಬುಡಕಟ್ಟು ಸಮುದಾಯಗಳ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಲಿದ್ದಾರೆ ಎಂದು ಆರ್‌ಎಸ್‌ಎಸ್‌ ರಾಜ್ಯ ಕಾರ್ಯದರ್ಶಿ ತರುಣ್‌ ಕುಮಾರ್‌ ಶರ್ಮಾ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಈ ದಿನ ಕವಿತೆ | ಏನೂ ಇಲ್ಲ- ನಾಸೆರ್...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಇರಾನಿನ ಕವಿ ನಾಸೆರ್ ಫಯ್ಜ್ ಅವರ ಕವನವೊಂದನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ ಹಿರಿಯ ಅನುವಾದಕಿ ಸಿ ಹೆಚ್‌ ಭಾಗ್ಯ ಅಳುವ ಮಗವೊಂದನು ಸುಟ್ಟು ಬೂದಿ ಮಾಡಿದರು. ಅವನು ಏನೂ ಇಲ್ಲವೆಂದ. ತನ್ನೆಲ್ಲಾ...

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ...

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ ಸಂಚು ನಡೆದಿದೆ. ಕೇಂದ್ರ ಸರ್ಕಾರ (ಮೋದಿ-ಶಾ ಜೋಡಿ) ಮತ್ತು ಚುನಾವಣಾ ಆಯೋಗ (ಗ್ಯಾನೇಶ್‌ ಕುಮಾರ್‌) ಜಂಟಿಯಾಗಿ ಎಸ್‌ಐಆರ್‌ ಹೆಸರಿನಲ್ಲಿ ಅರ್ಹ...

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು...

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ ಮಹಿಳಾ ಕ್ರೀಡಾಪಟುಗಳ ಐತಿಹಾಸಿಕ ಸಾಧನೆಗೆ ಸಾಕ್ಷಿಯಾಗಿದೆ. ಬಡತನ, ಗಾಯದ ನೋವು ಹಾಗೂ ಸಮಾಜದ ಕಟ್ಟುಪಾಡುಗಳನ್ನು ಮೆಟ್ಟಿ ನಿಂತು 14 ಚಿನ್ನದ...

‘ನಮ್ಮ ಸರಸಂಘಚಾಲಕರು ಆರ್‌ಎಸ್‌ಎಸ್‌ನ ಶತಮಾನೋತ್ಸವ ಸಂಭ್ರಮಾಚರಣೆಗೆ ಸಂಬಂಧಿಸಿದಂತೆ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಗುವಾಹಟಿಯಿಂದ ನವೆಂಬರ್‌ 20ರಂದು ಬರಲಿರುವ ಅವರು, ನವೆಂಬರ್‌ 22ಕ್ಕೆ ವಾಪಸ್‌ ಆಗಲಿದ್ದಾರೆ’ ಎಂದು ಮಾಹಿತಿ ನೀಡಿದ್ದಾರೆ.

ಎರಡು ವರ್ಷಗಳ ಹಿಂದೆ ಜನಾಂಗೀಯ ಹಿಂಸಾಚಾರ ಭುಗಿಲೆದ್ದ ನಂತರ ಭಾಗವತ್‌ ಅವರು ಮಣಿಪುರಕ್ಕೆ ನೀಡುತ್ತಿರುವ ಮೊದಲ ಭೇಟಿ ಇದಾಗಿದೆ. ಅವರು 2022ರಲ್ಲಿ ಕೊನೆಯದಾಗಿ ಇಲ್ಲಿಗೆ ಬಂದಿದ್ದರು ಎಂದು ಆರ್‌ಎಸ್‌ಎಸ್‌ನ ಮತ್ತೊಬ್ಬರು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಹಾರ ಫಲಿತಾಂಶ ಕರ್ನಾಟಕದ ಕಾಂಗ್ರೆಸ್ಸಿಗರಿಗೆ ಪಾಠವಾಗಲಿದೆಯೇ?

ಮೈತೇಯಿ ಹಾಗೂ ಕುಕಿ ಸಮುದಾಯಗಳ ನಡುವೆ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಹಿಂಸಾಚಾರದ ವೇಳೆ 260 ಮಂದಿ ಮೃತಪಟ್ಟು, ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ.

ಮುಖ್ಯಮಂತ್ರಿಯಾಗಿದ್ದ ಎನ್‌. ಬಿರೇನ್‌ ಸಿಂಗ್‌ ಅವರು ಇದೇ ವರ್ಷ ಫೆಬ್ರುವರಿಯಲ್ಲಿ ರಾಜೀನಾಮೆ ಸಲ್ಲಿಸಿದ ನಂತರ, ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅನ್ಯಾಯದ ವಿರುದ್ಧ ಹೋರಾಟಕ್ಕೆ ಹೊಸ ರೂಪು: ‘ಸತ್ಯಾಗ್ರಹ’ ಪೋರ್ಟಲ್ ಪರಿಚಯಿಸಿದ ರಾಹುಲ್ ಗಾಂಧಿ

ದೇಶಾದ್ಯಂತ ನಡೆಯುತ್ತಿರುವ ವಿವಿಧ ಜನಪರ ಪ್ರತಿಭಟನೆಗಳು ಹಾಗೂ ಹೋರಾಟಗಳನ್ನು ಒಂದೇ ಸೂರಿನಡಿ...

ಫಾರ್ಮ್‌-6 ಮೂಲಕ ಮರುನೋಂದಣಿ ಸಾಧ್ಯವಿದ್ದರೆ SIR ಏಕೆ? ಚುನಾವಣಾ ಆಯೋಗಕ್ಕೆ ಚಿದಂಬರಂ ಪ್ರಶ್ನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಕೈಬಿಡಲಾದ ಮತದಾರರು...

ದೆಹಲಿ ಸಿಜೆಪಿ ಪ್ರತಿಭಟನೆ ಬೆನ್ನಲ್ಲೇ ಹೋರಾಟಗಾರರ ವಿರುದ್ಧ ಮೂರು ಎಫ್‌ಐಆರ್ ದಾಖಲು

ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಯಲ್ಲಿ (SIR) ಅಕ್ರಮ ನಡೆದಿದೆ ಎಂದು ಆರೋಪಿಸಿ,...